ಸ್ಥಳೀಯ ಸುದ್ದಿಗಳು

ರಾಜ್ಯ ಸುದ್ದಿ

ತಾಜಾ ಸುದ್ದಿಗಳು

ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳು

 • ಜನತಾ ಪರಿವಾರದಿಂದ ಬಂದವರೇ ಹೆಚ್ಚು ಜನ ಮುಖ್ಯಮಂತ್ರಿಯಾಗಿರೋದು: ರೇವಣ್ಣ
  ಜನತಾ ಪರಿವಾರದಿಂದ ಬಂದವರೇ ಹೆಚ್ಚು ಜನ ಮುಖ್ಯಮಂತ್ರಿಯಾಗಿರೋದು: ರೇವಣ್ಣ

  ಹಾಸನ: ಜನತಾ ಪರಿವಾರದಿಂದ ಬಂದವರೇ ಹೆಚ್ಚು ಜನ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮಾಜಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಯುವ ಮುಖಂಡ ಮುಖ್ಯಮಂತ್ರಿ ಆಗಿರುವುದು ಸಂತೋಷ. ಅವರು ಭ್ರಷ್ಟಾಚಾರ ತೆಗೆಯೋದು ನಮ್ಮಗುರಿ ಅಂದಿದ್ದಾರೆ. ಆ ನಿಟ್ಟಿನಲ್ಲಿ ಕೆಲಸ ಮಾಡಲಿ ಎಂದು ನೂತನ ಮುಖ್ಯಮಂತ್ರಿಗೆ ರೇವಣ್ಣ ಸಲಹೆ ನೀಡಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ ಉದಯಪುರದಲ್ಲಿ ಕೃಷಿ ಯಂತ್ರಧಾರೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾಧ್ಯನದವರೊಂದಿಗೆ ಮಾತನಾಡಿದ ಅವರು, ಹಿಂದಿನ ಎರಡು ವರ್ಷ ಸುಲಿಗೆ ನಡೆಯುತ್ತಿತ್ತು. ಈಗಿನ ಮುಖ್ಯಮಂತ್ರಿ ಒಳ್ಳೆ ಕೆಲಸ ಮಾಡಿ ಜನರ

  READ MORE
 • ಅಂತರ್ ಜಿಲ್ಲಾ ಖದೀಮರ ಬಂಧನ- 1 ಕೋಟಿಗೂ ಅಧಿಕ ಮೌಲ್ಯದ ವಾಹನಗಳು ವಶಕ್ಕೆ

  ಹಾಸನ: ಜಿಲ್ಲೆಯ ಹಳೇಬೀಡು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರು ಮಂದಿ ಅಂತರ್ ಜಿಲ್ಲಾ ವಾಹನ ಖದೀಮರನ್ನು ಬಂಧಿಸಿದ್ದಾರೆ. ಸುಮಾರು 1.50 ಕೋಟಿ ರೂ. ಮೌಲ್ಯದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ ಗೌಡ ತಿಳಿಸಿದರು. ಬಂಧಿತರೆಲ್ಲ 20-25ರ ವಯಸ್ಸಿನ ನಡುವಿನ ಯುವಕರಾಗಿದ್ದು, ಎಲ್ಲರೂ ಶಿವಮೊಗ್ಗ ಜಿಲ್ಲೆಯ ಸೊರಬ, ಮಂಗಳೂರು, ಗುಲ್ಬರ್ಗ ಜಿಲ್ಲೆಯರಾಗಿದ್ದಾರೆ. ಈ ಹಿಂದೆ ಎಲ್ಲರೂ ಸಣ್ಣಪುಟ್ಟ ಕಳ್ಳತನ ನಡೆಸಿದ್ದರು. ಕೃತ್ಯ ಸಂಬಂಧ ಶಾಹಿದ್, ಹಿದಾಯತ್, ಬಾಸ್ಕರ್ ಪೂಜಾರಿ, ಅಬ್ದುಲ್ ಕಲಾಂ,

  READ MORE
 • ಹೆಸರಿಗೆ ಮಾತ್ರ ಪಕ್ಷೇತರ ಅಭ್ಯರ್ಥಿ, ಮೇ 23ರ ನಂತ್ರ ನಿಮಗೆ ಉತ್ತರಿಸ್ತೇನೆ: ಸಿಎಂ
  ಹೆಸರಿಗೆ ಮಾತ್ರ ಪಕ್ಷೇತರ ಅಭ್ಯರ್ಥಿ, ಮೇ 23ರ ನಂತ್ರ ನಿಮಗೆ ಉತ್ತರಿಸ್ತೇನೆ: ಸಿಎಂ

  ಚಿಕ್ಕಮಗಳೂರು: ದೇಶದಲ್ಲಿ ಮಂಡ್ಯ ಬಿಟ್ಟು ಬೇರೆ ಕಡೆ ಚುನಾವಣೆ ನಡೆಯುತ್ತಿಲ್ವಾ ಎಂದು ಪ್ರಶ್ನೆಸಿ ಇದಕ್ಕೆಲ್ಲಾ ನಾನು ಮೇ 23ರ ನಂತರ ನಿಮಗೆ ಉತ್ತರಿಸುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ಮಂಡ್ಯದಲ್ಲಿ ಕೈ ಮೀರಿ ಹೋಗಿರುವ ಘಟನೆಗಳು ನಡೆದಿವೆ. ಇವತ್ತು ಬಿಜೆಪಿ ಪಕ್ಷೇತರ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸುತ್ತಿದೆ. ಮಂಡ್ಯದಲ್ಲಿ ಹೆಸರಿಗೆ ಮಾತ್ರ ಪಕ್ಷೇತರ ಅಭ್ಯರ್ಥಿಯಷ್ಟೇ. ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತ ಸಂಘದ ಬೆಂಬಲವಿದೆ. ಇಷ್ಟೆಲ್ಲ ಸೇರಿ ಜೆಡಿಎಸ್

 • ಹೆಡ್‍ಲೈಟ್ ಇಲ್ಲದೆ ಅಂಬುಲೆನ್ಸ್ 190 ಕಿ.ಮೀ ಪ್ರಯಾಣ – ಸಹಾಯಕ್ಕೆ ಯಾರೂ ಬರಲಿಲ್ಲ
  ಹೆಡ್‍ಲೈಟ್ ಇಲ್ಲದೆ ಅಂಬುಲೆನ್ಸ್ 190 ಕಿ.ಮೀ ಪ್ರಯಾಣ – ಸಹಾಯಕ್ಕೆ ಯಾರೂ ಬರಲಿಲ್ಲ

  ಚಿಕ್ಕಮಗಳೂರು: ಅಂಬುಲೆನ್ಸಿನ ಹೆಡ್‍ಲೈಟ್ ಹಾಳಾದರೂ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಪ್ರಾಣ ಉಳಿಸಲು ಚಾಲಕ 190 ಕಿ.ಮೀ ಸಂಚರಿಸಿ ಅವರನ್ನು ಬೆಂಗಳೂರಿನ ನಿಮ್ಹಾನ್ಸ್‌ಗೆ ಕರೆದುಕೊಂಡು ಹೋಗಿದ್ದಾರೆ. ನಗರದ ಟಿಪ್ಪು ನಗರದಲ್ಲಿ ವೃದ್ಧರೊಬ್ಬರು ಮಂಗಳವಾರ ರಾತ್ರಿ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದರು. ಅವರನ್ನು ನಗರದ ಇಸ್ಲಾಮಿಕ್ ಬೈತುಲ್‍ಮಾಲ್‍ನ ಅಂಬುಲೆನ್ಸ್ ಚಾಲಕ ಜೀಷಾನ್ ಬೆಂಗಳೂರಿನ ನಿಮ್ಹಾನ್ಸ್‌ಗೆ ಕರೆದುಕೊಂಡು ಹೋಗುತ್ತಿದ್ದರು. ಹಾಸನದ ಮೊದಲ ಟೋಲ್ ದಾಟುತ್ತಿದ್ದಂತೆ ಅಂಬುಲೆನ್ಸಿನ ಹೆಡ್‍ಲೈಟ್‍ಗಳು ಕೆಟ್ಟು ಆನ್ ಆಗಲಿಲ್ಲ. ತಕ್ಷಣ ಜೀಷಾನ್ ಪೊಲೀಸ್ ತುರ್ತು ದೂರವಾಣಿ

 • ನೀರಾವರಿ ಇಲಾಖೆಗೆ 12 ಸಾವಿರ ಕೋಟಿ ನೀಡಿರುವುದು ದುಡ್ಡು ಲೂಟಿ ಮಾಡೋಕೆ: ಹೆಚ್‍ಡಿಕೆ
  ನೀರಾವರಿ ಇಲಾಖೆಗೆ 12 ಸಾವಿರ ಕೋಟಿ ನೀಡಿರುವುದು ದುಡ್ಡು ಲೂಟಿ ಮಾಡೋಕೆ: ಹೆಚ್‍ಡಿಕೆ

  ಮಂಡ್ಯ: ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುತ್ತಾರೆ, ಹೀಗಿರುವಾಗ ತರಾತುರಿಯಲ್ಲಿ ನೀರಾವರಿ ಇಲಾಖೆಯ ನಾಲ್ಕು ನಿಗಮಗಳಿಗೆ 12 ಸಾವಿರ ಕೋಟಿ ಯೋಜನೆಗೆ ಅನುಮತಿ ನೀಡುತ್ತಿರುವುದು ದುಡ್ಡು ಹೊಡೆಯುವುದಕ್ಕಾಗಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಬಿಎಸ್‍ವೈ ವಿರುದ್ಧ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಯಡಿಯೂರಪ್ಪ ಅವರು ಕೆಲವೇ ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಹೇಳುತ್ತಿದ್ದಾರೆ. ಹೀಗಿರುವ ಸಮಯಲ್ಲಿ ಇದ್ದಕ್ಕಿದ್ದ ಹಾಗೆ ದಿಢೀರನೆ ನೀರಾವರಿ ಇಲಾಖೆಗೆ

 • ಇಬ್ಬರನ್ನ ಜಗಳಕ್ಕೆ ಬಿಟ್ಟು ಸೇಫ್ ಆದಂತಿದೆ: ಸುಮಲತಾ, ಹೆಚ್‍ಡಿಕೆ ಸಮರಕ್ಕೆ ಚಲುವರಾಯಸ್ವಾಮಿ ಪ್ರತಿಕ್ರಿಯೆ
  ಇಬ್ಬರನ್ನ ಜಗಳಕ್ಕೆ ಬಿಟ್ಟು ಸೇಫ್ ಆದಂತಿದೆ: ಸುಮಲತಾ, ಹೆಚ್‍ಡಿಕೆ ಸಮರಕ್ಕೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

  ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಂಸದೆ ಸುಮಾಲತಾ ನಡುವಿನ ಗಲಾಟೆ ಬಗ್ಗೆ ಮಾಜಿ ಸಚಿವ ಚಲುವರಾಯಸ್ವಾಮಿ ಬೇಸರ ಹೊರಹಾಕಿದ್ದು, ಸರ್ಕಾರದಿಂದ ಮಾಡಬೇಕಾದ ಕೆಲಸವನ್ನು ರಸ್ತೆಯಲ್ಲಿ ಬೀದಿಜಗಳ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಮಂಡ್ಯ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಚರ್ಚಿಸಿದ ನಂತರ ಮಾತನಾಡಿದ ಅವರು, ಸುಮಲತಾ ಮತ್ತು ಕುಮಾರಸ್ವಾಮಿ ಟಾಕ್‍ಫೈಟ್ ಬಗ್ಗೆ ಮಾತನಾಡಬಾರದು ಎಂದು ತೀರ್ಮಾನಿದ್ದೇನೆ. ಒಂದು ಕಡೆ ಮಾಜಿ ಮುಖ್ಯಮಂತ್ರಿ ಟೀಂ. ಮತ್ತೊಂದು ಕಡೆ ಸಂಸದರು. ಯಾವ ಉದ್ದೇಶದಿಂದ ಇವರು ಫೈಟ್ ಮಾಡುತ್ತಿದ್ದಾರೆ

 • ಮೈಸೂರಿನಲ್ಲಿ ಸಿಮ್ ಬಾಕ್ಸ್ ವಂಚನೆ ಜಾಲ, ಕೇರಳ ವ್ಯಕ್ತಿ ಬಂಧನ
  ಮೈಸೂರಿನಲ್ಲಿ ಸಿಮ್ ಬಾಕ್ಸ್ ವಂಚನೆ ಜಾಲ, ಕೇರಳ ವ್ಯಕ್ತಿ ಬಂಧನ

  ಮೈಸೂರು: ಮೈಸೂರಿನ ಬಾಡಿಗೆ ಮನೆಯಲ್ಲಿ ಅಕ್ರಮ ಟೆಲಿಫೋನ್ ಎಕ್ಸ್‌ಚೇಂಜ್ ಮೂಲಕ ಐಎಸ್ ಡಿ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ ದೂರಸಂಪರ್ಕ ಇಲಾಖೆಗೆ ವಂಚಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರ ಪೊಲೀಸರ ಪ್ರಕಾರ, ಆರೋಪಿ ಶಮೀಮ್ ಸಿಮ್ ಬಾಕ್ಸ್ ಮತ್ತು ವಾಯ್ಸ್ ಓವರ್ ಇಂಟರ್ನೆಟ್ ಪ್ರೊಟೊಕಾಲ್(VoIP) ತಂತ್ರಜ್ಞಾನವನ್ನು ಬಳಸಿಕೊಂಡು ಅಕ್ರಮವಾಗಿ ಟೆಲಿಫೋನ್ ಎಕ್ಸ್‌ಚೇಂಜ್ ನಡೆಸುತ್ತಿದ್ದನು. ಇದು ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಲು ಸಹಾಯ ಮಾಡುತ್ತಿತ್ತು. ಈ ವಂಚನೆ ಜಾಲದ ಬಗ್ಗೆ ಸಿಕ್ಕಿ ಖಚಿತ

 • ಭರ್ತಿಯತ್ತ ಕೆಆರ್’ಎಸ್’ ಡ್ಯಾಂ: ಸೋಮವಾರದಿಂದ ವಿಸಿ ನಾಲೆಗೆ ನೀರು
  ಭರ್ತಿಯತ್ತ ಕೆಆರ್’ಎಸ್’ ಡ್ಯಾಂ: ಸೋಮವಾರದಿಂದ ವಿಸಿ ನಾಲೆಗೆ ನೀರು

  ಮೈಸೂರು: ಕಾವೇರಿ ಕಣಿವೆ ಸುತ್ತ ಸಾಕಷ್ಟು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಜಲಾಶಯ ಭರ್ತಿಯಾಗುತ್ತಿದೆ. ಈಗಾಗಲೇ 106 ಅಡಿಗೂ ಹೆಚ್ಚು ನೀರು ಜಲಾಶಯಕ್ಕೆ ಹರಿದು ಬಂದಿದೆ. ಹೀಗಾಗಿ ಕೃಷಿ ಚಟುವಟಿಕೆಗೆ ಅನುಕೂಲವಾಗುವಂತೆ ನಾಲೆಗಳಿಗೆ ನೀರು ಹರಿಸುವಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾವೇರಿ ನೀರನ್ನು ಅವಲಂಬಿಸಿ ಕೃಷಿ ಚಟುವಟಿಕೆ ನಡೆಸುವ ರೈತರಿಗೆ ಸಂತಸದ ಸುದ್ದಿ ಇದು. ಕೆಆರ್‍ಎಸ್ ಅಣೆಕಟ್ಟಿನ 124 ಅಡಿಗಳ ಪೈಕಿ 106 ಅಡಿ ನೀರು ತುಂಬಿದೆ. 35 ಸಾವಿರ ಕ್ಯುಸೆಕ್ಸ್

 • ಚಾಮರಾಜನಗರ: ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ ಆರ್ಥಿಕ ನೆರವು; ಸಂಪುಟ ರಚನೆಯಲ್ಲಿ ಹಸ್ತಕ್ಷೇಪವಿಲ್ಲ ಎಂದ ಮಾಜಿ ಸಿಎಂ
  ಚಾಮರಾಜನಗರ: ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ ಆರ್ಥಿಕ ನೆರವು; ಸಂಪುಟ ರಚನೆಯಲ್ಲಿ ಹಸ್ತಕ್ಷೇಪವಿಲ್ಲ ಎಂದ ಮಾಜಿ ಸಿಎಂ

  ಚಾಮರಾಜನಗರ: ಬಿ ಎಸ್ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ನೊಂದು ಆತ್ಮಹತ್ಯೆ ಮಾಡಿಕೊಂಡ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಬೊಮ್ಮಲಾಪುರದ ಯುವಕ ಅಭಿಮಾನಿ ರವಿ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಾಂತ್ವನ ಹೇಳಿದ್ದಾರೆ. ಕುಟುಂಬಕ್ಕೆ ಆರ್ಥಿಕ ನೆರವು: ಆತ್ಮಹತ್ಯೆ ಮಾಡಿಕೊಂಡ ರವಿಯವರ ತಾಯಿಯನ್ನು ಭೇಟಿ ಮಾಡಿ ಅವರ ಕಾಲಿಗೆರಗಿ ಸಾಂತ್ವನ ಹೇಳಿದ ಯಡಿಯೂರಪ್ಪನವರು ಸ್ಥಳದಲ್ಲಿ 5 ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿ ಇನ್ನೂ 5 ಲಕ್ಷ ರೂಪಾಯಿ

 • ಚಾಮರಾಜನಗರ: ಬಿಆರ್ ಟಿ ಹುಲಿ ರಕ್ಷಿತಾರಣ್ಯದಲ್ಲಿ ಐವರು ಕಳ್ಳ ಬೇಟೆಗಾರರ ಬಂಧನ
  ಚಾಮರಾಜನಗರ: ಬಿಆರ್ ಟಿ ಹುಲಿ ರಕ್ಷಿತಾರಣ್ಯದಲ್ಲಿ ಐವರು ಕಳ್ಳ ಬೇಟೆಗಾರರ ಬಂಧನ

  ಚಾಮರಾಜನಗರ: ಬಿಳಿಗಿರಿ ರಂಗನಾಥ ದೇವಾಲಯ ಹುಲಿ ರಕ್ಷಿತಾರಣ್ಯದಲ್ಲಿ ಗುರುವಾರ ಅರಣ್ಯ ಇಲಾಖೆ ಅಧಿಕಾರಿಗಳು ಐವರನ್ನು ಬಂಧಿಸಿ, ಬೇಟೆಗೆ ಬಳಿಸಿದ್ದ ಬಂದೂಕು ಮತ್ತು ಇತರ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಗೋವಿಂದರಾಜು(29) ಮತ್ತು ಬೆಂಗಳೂರಿನ ಮಲ್ಲೇಶ್ವರಂನ ಪ್ರಮೋದ್ (27) ಎಂದು ಗುರುತಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರಲ್ಲಿ ಮೂವರು ಕೊಡಗು ಜಿಲ್ಲೆಯ ಸೋಮವಾರ ಪೇಟೆ ಮೂಲದವರಾಗಿದ್ದರೆ, ಒಬ್ಬರು ಚಾಮರಾಜನಗರ ತಾಲ್ಲೂಕಿನ ಬಡಗಲಪುರ ಮತ್ತು ಇಬ್ಬರು ಬೆಂಗಳೂರಿನ ಮಲ್ಲೇಶ್ವರಂ ಮೂಲದವರಾಗಿದ್ದಾರೆ. ಬಂಧಿತರಿಂದ ಎರಡು ಬಂದೂಕುಗಳು(ಈ ಪೈಕಿ ಒಂದಕ್ಕೆ ಪರವಾನಿಗೆ

 • ಬೆಂಗಳೂರಿನಲ್ಲಿ ಮತ್ತೆ ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಫ್ಯೂ…?
  ಬೆಂಗಳೂರಿನಲ್ಲಿ ಮತ್ತೆ ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಫ್ಯೂ…?

  ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ. ಕೆಲ ದಿನಗಳ ಹಿಂದಷ್ಟೆ ಎಲ್ಲ ನಿಯಮಗಳನ್ನು ಸಡಿಲಗೊಳಿಸಿ, ಸುಸೂತ್ರ ಓಡಾಟಕ್ಕೆ ಅನುವು ಮಾಡಿಕೊಡಲಾಗಿತ್ತು.ಇದೀಗ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನಲ್ಲಿ ಸೋಂಕಿತರ ಗಡಿ 500 ದಾಟಿದ ಬೆನ್ನಲ್ಲೇ ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಸರ್ಕಾರ ಹಂತದಲ್ಲಿ ಚರ್ಚೆ ನಡೆಯುತ್ತಿದ್ದು, ಕರ್ಫ್ಯೂ ಜಾರಿಯಾಗುವ ಸಾಧ್ಯತೆ ದಟ್ಟವಾಗಿದೆ.

 • ನೆರೆ ರಾಜ್ಯ ಕೇರಳದಲ್ಲಿ ಹೆಚ್ಚಿದ ಕೊರೋನಾ ಸೋಂಕು: ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ
  ನೆರೆ ರಾಜ್ಯ ಕೇರಳದಲ್ಲಿ ಹೆಚ್ಚಿದ ಕೊರೋನಾ ಸೋಂಕು: ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ

  ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಸೂಚನೆ ನೀಡಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಮುಖ್ಯಮಂತ್ರಿಗಳು, ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಂತೆಯೇ ಕೋವಿಡ್-19 ಪರಿಸ್ಥಿತಿ ಕುರಿತು ಗಡಿ ಜಿಲ್ಲೆಯ ಜಿಲ್ಲಾಧಿಕಾರಿ, ಮುಖ್ಯ

 • ಹಲ್ಲೆ ಪ್ರಕರಣ; ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ
  ಹಲ್ಲೆ ಪ್ರಕರಣ; ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ

  ಮಡಿಕೇರಿ: ಬೋಯಿಕೇರಿ ಸಮೀಪದ ಯೋಧ ಅಶೋಕ್ ಕುಮಾರ್ ಹಾಗೂ ಕುಟುಂಬದ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಸರ್ಕಾರ ಗಂಬೀರವಾಗಿ ಪರಗಣಿಸಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಗಾಳಿಬೀಡಿನಲ್ಲಿರುವ ಯೋಧ ಅಶೋಕ್ ಕುಮಾರ್ ಅವರ ಮನೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ ಸಂಸದರು ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಕುಟುಂಬದ ರಕ್ಷಣೆ ಬಗ್ಗೆ ಹಾಗೂ ವಯೋ ವೃದ್ಧ ಪೋಷಕರ ಬಗ್ಗೆ ಆತಂಕ ಇರುವ ಸಲುವಾಗಿ ಇಂದು ಭೇಟಿ ನೀಡಿ ಧೈರ್ಯತುಂಬಲಾಗಿದೆ. ಮುಂದೆ ಕುಟುಂಬ್ಕಕೆ

 • ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಟ್ಟ ಕುಸಿತಕ್ಕೆ ಉಬ್ಬುತ್ತಿರುವ ಹೆದ್ದಾರಿಗಳು – ರಸ್ತೆ ಕುಸಿಯುವ ಅತಂಕ
  ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಟ್ಟ ಕುಸಿತಕ್ಕೆ ಉಬ್ಬುತ್ತಿರುವ ಹೆದ್ದಾರಿಗಳು – ರಸ್ತೆ ಕುಸಿಯುವ ಅತಂಕ

  ರಸ್ತೆಯ ಮೇಲ್ಭಾಗದಲ್ಲಿಯೇ ಹರಿಯಲಾರಂಭಿಸಿದ ನೀರು – ಬೆಟ್ಟ ಕುಸಿತಕ್ಕೆ ಉಬ್ಬುತ್ತಿರುವ ಹೆದ್ದಾರಿಗಳು – ಮನೆ ಮೇಲೆ ಉರುಳಿದ ಬಂಡೆಗಳು ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿದ ಮಹಾಮಳೆಗೆ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಕುಸಿದು ಬಂದ್ ಆಗುವ ಆತಂಕ ಎದುರಾಗಿದೆ. ಅಷ್ಟೇ ಅಲ್ಲದೇ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ಹೆದ್ದಾರಿಗಳ ಮೇಲೆಯೇ ಇದೀಘ ಜಲಾದ ಮೂಲಗಳು ಹೆಚ್ಚಾಗಿದ್ದು, ರಸ್ತೆಯ ಮೇಲ್ಭಾಗದಲ್ಲಿ ನೀರು ಹರಿಯಲು ಅರಂಭಿಸಿದೆ. ಬೆಟ್ಟ ಕುಸಿತಕ್ಕೆ ಉಬ್ಬುತ್ತಿರುವ ಹೆದ್ದಾರಿಗಳು:

ಮನರಂಜನೆ / ಚಲನಚಿತ್ರ

ವೈವಿಧ್ಯ ಅಂಕಣಗಳು, ಪುರವಣಿಗಳು, ಪ್ರವಾಸೋದ್ಯಮ