Mysore
ಅಂಬಿಕಾಪತಿ ಮನೆಯಲ್ಲಿ ಸಿಕ್ಕ ಹಣ SST ಕಲೆಕ್ಷನ್, ಸಂತೋಷ್ ಮನೆಯಲ್ಲಿ ಸಿಕ್ಕಿದ್ದು YST ಕಲೆಕ್ಷನ್ – ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
ಮೈಸೂರು: ರಾಜ್ಯದಲ್ಲಿ YST ಆಯ್ತು ಈಗ SST ಟ್ಯಾಕ್ಸ್ ಕಲೆಕ್ಷನ್ ಆರಂಭವಾಗಿದೆ ಐಟಿ ರೇಡ್ ನಲ್ಲಿ ಸಿಕ್ಕ ಹಣ SST ಟ್ಯಾಕ್ಸ್ ಗೆ ಸೇರಿದ್ದು ಎಂದು ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಅಂಬಿಕಾಪತಿ ಮನೆಯಲ್ಲಿ ಸಿಕ್ಕ ಹಣ SST ಕಲೆಕ್ಷನ್, ಸಂತೋಷ್ ಮನೆಯಲ್ಲಿ ಸಿಕ್ಕಿದ್ದು YST ಕಲೆಕ್ಷನ್.
ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.ಸಿಎಂ ಈ ಬಗ್ಗೆ ತನಿಖೆ ಮಾಡಿ ಪ್ರಾಮಾಣಿಕತೆ ತೋರಬೇಕು.ಭ್ರಷ್ಟಾಚಾರ ಮಾಡಿ ದೇವರ ಮುಂದೆ ಬಂದು ಪ್ರಾರ್ಥಿಸಿದರೆ ದೇವಿ ಕ್ಷಮಿಸೋದಿಲ್ಲ.
ಲೂಟಿ ಮಾಡುವವರು ತಿಹಾರ್ ಜೈಲಿಗೆ ಹೋಗುವುದು ತಪ್ಪುವುದಿಲ್ಲ.ರಾಜ್ಯದಲ್ಲಿ ಭ್ರಷ್ಟಾಚಾರ ಮಾಡಲು ಇಲಾಖೆಗಳು ಪೈಪೋಟಿಗೆ ಬಿದ್ದಿವೆ.
ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ಹಣ ಪತ್ತೆಗಿಂತ ಸಾಕ್ಷಿಬೇಕೇ ಎಂದು ಪ್ರಶ್ನೆ ಮಾಡಿದರು
Mysore
ಹುಲಿ ದಾಳಿಗೆ ಹಸು ಬಲಿ : ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರಿಂದ ಪ್ರತಿಭಟನೆ
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಚಿಲ್ಕುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಂಗಲ ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿದ್ದು, ಹುಲಿ ಸೆರೆ ಹಿಡಿಯುವಂತೆ ಮುತ್ತುರಾಯನ ಹೊಸಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಗ್ರಾಮಸ್ಥರು, ಎಲ್ಲಿಯ ತನಕ ಹೋರಾಟ ಹುಲಿ ಹಿಡಿಯುವ ತನಕ ಹೋರಾಟ ಬೇಕೇ ಬೇಕು ನ್ಯಾಯ ಬೇಕು ಎಂದು ಘೋಷಣೆಗಳನ್ನು ಕೂಗಿದ್ದಾರೆ. ಅಲ್ಲದೇ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಸೆರೆ ಹಿಡಿಯುವಂತೆ ಗ್ರಾಮದ ಮುಖ್ಯರಸ್ತೆಯಲ್ಲಿ ವಾಹನ ತಡೆದು, ಟೈರಿಗೆ ಬೆಂಕಿ ಹಚ್ಚಿ ಧರಣಿ ಮಾಡಿದ್ದಾರೆ.

ಈ ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶಿವರಾಜ್, ಜಗದೀಶ್, ಪ್ರಸನ್ನ, ರಾಜಶೇಖರ, ರಾಜನಾಯಕ, ಶ್ರಿನಿವಾಸ, ಕುಮಾರ, ವಿಶ್ವನಾಥ್, ವೇಣು ಸೇರಿದಂತೆ ಹಲವರು ಉಪಸ್ಥಿತರಿದ್ದರು.
Mysore
ಗ್ರಾ.ಪಂ.ಸಾರ್ವಜನಿಕರ ಮೊದಲ ಸಂಪರ್ಕ ಕೇಂದ್ರವಾಗಿದೆ: ಡಾ.ಮಲ್ಲಿಕಾರ್ಜುನಸ್ವಾಮಿ
ತಿ.ನರಸೀಪುರ: ತಾಲೂಕಿನ ಟಿ.ದೊಡ್ಡಪುರ ಗ್ರಾಮ ಪಂಚಾಯಿತಿಯಲ್ಲಿ 2024-25ನೇ ಸಾಲಿನ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಸಾಮಾಜಿಕ ಲೆಕ್ಕ ಪರಿಶೋಧನೆಯನ್ನು ನಡೆಸಲಾಯಿತು.
ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಪುಟ್ಟಸ್ವಾಮಿ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ಲೆಕ್ಕ ಪರಿಶೋಧಕ ರಂಗರಾಜು 2024-25ನೇ ಸಾಲಿನಲ್ಲಿ 15ನೇ ಹಣಕಾಸು ಯೋಜನೆಯ 34,94,332 ರೂ.ಗಳ ವೆಚ್ಚದಲ್ಲಿ ನಡೆಸಿದ 12 ಕಾಮಗಾರಿಗಳು ಮತ್ತು ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ 1,27,10,624 ರೂ.ಗಳ ವೆಚ್ಚದಲ್ಲಿ ಕೈಗೊಂಡ 116 ಕಾಮಗಾರಿಗಳ ಲೆಕ್ಕವನ್ನು ಸಭೆಯಲ್ಲಿ ಮಂಡಿಸಿದರು.

ಸಭೆಯನ್ನು ಉದ್ದೇಶಿಸಿ ನೋಡಲ್ ಅಧಿಕಾರಿ ಡಾ.ಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ಗ್ರಾಮ ಪಂಚಾಯಿತಿಯು ಸ್ಥಳೀಯ ಆಡಳಿತ ಸಂಸ್ಥೆಯಾಗಿದ್ದು, ಇದು ಸಾರ್ವಜನಿಕರ ಮೊದಲ ಸಂಪರ್ಕ ಕೇಂದ್ರವಾಗಿದೆ. ಸಾರ್ವಜನಿಕರು ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳ ಮಾಹಿತಿ ಪಡೆಯುವುದರ ಜೊತೆ-ಜೊತೆಗೆ ಸೌಲಭ್ಯ ಪಡೆದುಕೊಂಡು ಆರ್ಥಿಕವಾಗಿ ಸಬಲೀಕರಣಗೊಳ್ಳಬೇಕು ಎಂದರು.
ಸಭೆಯಲ್ಲಿ ಉಪಾಧ್ಯಕ್ಷೆ ಮಂಜುಳಾ, ಸದಸ್ಯರಾದ ಆರ್.ಮಾದೇಶ್, ಜಯಬಸವಣ್ಣ,ರಾಜೇಶ್, ಮಹದೇವಮ್ಮ,ಚಿಕ್ಕತಾಯಮ್ಮ, ಬಸಮ್ಮಣ್ಣಿ,ಆರ್.ಭಾರತಿ,ರಾಜಮ್ಮ, ಸುಕನ್ಯಾ ಮಹೇಶ್,ಪಿಡಿಓ ದಯಾನಂದ,ಕೃಷಿ ಇಲಾಖೆಯ ವಿಶಾಲು,ಕಾರ್ಯದರ್ಶಿ ಪುರುಷೋತ್ತಮ್,ರೇಷ್ಮೆ ಇಲಾಖೆ ಈಶ್ವರ್,ಬಿಲ್ ಕಲೆಕ್ಟರ್ ಸಂಕೇಶ್, ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.
Mysore
ಸಿಸಿಬಿ ಪೊಲೀಸರ ಕಾರ್ಯಾಚರಣೆ: 17 ಲಕ್ಷ ರೂ. ಮೌಲ್ಯದ ಗಾಂಜಾ ವಶ, 2 ಆರೋಪಿ ಅರೆಸ್ಟ್
ಮೈಸೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 17 ಲಕ್ಷ ರೂ. ಮೌಲ್ಯದ ಹೈಡ್ರೋ ಗಾಂಜಾವನ್ನು ವಶ ಪಡೆದು, ಇಬ್ಬರು ಆರೊಪಿಗಳನ್ನು ಬಂಧಿಸಿದ್ದಾರೆ.
ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯ ನಾಯ್ಡುನಗರದಲ್ಲಿ ಸಿಸಿಬಿ ಪೊಲೀಸರು ದಿಢೀರ್ ದಾಳಿ ಮಾಡಿ ಸುಮಾರು 17 ಲಕ್ಷ ರೂ. ಮೌಲ್ಯದ 176 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಹೈಡ್ರೋ ಗಾಂಜಾ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ ಅಫ್ತಾಬ್ ಅಲಿ ಬೇಗ್ ಮತ್ತು ಪ್ರತಾಪ್ ಕುಮಾರ್ ಎಂಬುವರ ಬಂಧನವಾಗಿದೆ.
ಇನ್ನೂ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಎನ್. ಆರ್. ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ 1989ರ ಅಡಿಯಲ್ಲಿ FIR ದಾಖಲಾಗಿದೆ.
-
Hassan9 hours agoಸರ್ಕಾರಿ ಆದೇಶ ಉಲ್ಲಂಘಿಸಿ ಕ್ರಿಸ್ಮಸ್ ರಜೆ ದುರುಪಯೋಗ : ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ
-
Hassan7 hours agoಡಿ.14 ರಿಂದ ಜ.4 ರವರೆಗೂ ಬಾಳ್ಳುಪೇಟೆಯಲ್ಲಿ ಯೋಗ, ಧ್ಯಾನ ಶಿಬಿರ
-
Kodagu8 hours agoಏ.24 ರಿಂದ 28ರ ವರೆಗೆ ಮೇಕೇರಿ ಮಸೀದಿಯ ಮಖಾಂ ಉರೂಸ್
-
Hassan5 hours agoಡಿ. 16ಕ್ಕೆ ಖಾಸಗಿ ವಿದ್ಯಾಸಂಸ್ಥೆ ವಿರುದ್ಧ ಪ್ರತಿಭಟನೆ : ಎಂ.ಡಿ.ಬಾಲರಾಜು ಆಗ್ರಹ
-
Chamarajanagar6 hours agoರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾವಳಿಗೆ ವಿದ್ಯುಕ್ತ ಚಾಲನೆ
-
Mysore8 hours agoಗ್ರಾ.ಪಂ.ಸಾರ್ವಜನಿಕರ ಮೊದಲ ಸಂಪರ್ಕ ಕೇಂದ್ರವಾಗಿದೆ: ಡಾ.ಮಲ್ಲಿಕಾರ್ಜುನಸ್ವಾಮಿ
-
Mandya9 hours agoಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ: ಎಸಿ ಚೇತನಾ ಯಾದವ್ ಕರೆ
-
Hassan7 hours agoನೂತನ ದೇವಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ನೇರವೇರಿಸಿದ ಸಿಮೆಂಟ್ ಮಂಜು
