Kodagu
ಅಕ್ರಮ ಗಾಂಜಾ ಮಾರಾಟ-ಬಲಮುರಿಯಲ್ಲಿ ಮೂವರ ಬಂಧನ
ನಾಪೋಕ್ಲು :ಕೊಡಗು ಜಿಲ್ಲಾಪೊಲೀಸ್ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಬಲಮುರಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಾಲು ಸಹಿತ ನಾಪೋಕ್ಲು ಪೊಲೀಸರು ಬಂಧಿಸಿದ್ದಾರೆ.
ಬಲಮುರಿ ಗ್ರಾಮದ ನಿವಾಸಿ ಎಸ್.ಎ.ಇರ್ಫಾನ್ (29)ಹೊದ್ದೂರು ವಾಟೆಕಾಡು ಗ್ರಾಮದ ನಿವಾಸಿ ಬಿ. ಎಂ.ಮುಜೀಬ್ ರಹ್ಮಾನ್ (28)ಹಾಗೂ ಬಲಮುರಿ ಗ್ರಾಮದ ಕೆ.ಎಂ.ಅಮೀರ್ (29) ಬಂಧಿತ ಆರೋಪಿಗಳಾಗಿದ್ದಾರೆ.
ಬಲಮುರಿ ಗ್ರಾಮದ ಸೇತುವೆ ಬಳಿಯ ಹೊಳೆಮುಡಿ ಮೈದಾನದ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 275 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಒಂದು ಆಟೋರಿಕ್ಷಾ,ಒಂದುಸ್ಕೂಟರ್ ಹಾಗೂ ಮೂರು ಮೊಬೈಲ್ ಗಳನ್ನು ವಶಕ್ಕೆಪಡೆದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ವರದಿ :ಝಕರಿಯ ನಾಪೋಕ್ಲು
Kodagu
ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ – ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ
ಮಡಿಕೇರಿ : ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆಯು ಸಚಿವ ಕೆ.ವೆಂಕಟೇಶ್ ಅವರ ಉಪಸ್ಥಿತಿಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಬೆಂಗಳೂರಿನಲ್ಲಿ ನಡೆಯಿತು.
ಹುಣಸೂರು, ಕೆ.ಆರ್.ನಗರ, ಕ್ಷೇತ್ರದ ಶಾಸಕರು, ಸಲಹಾ ಸಮಿತಿ ಸದಸ್ಯರು, ನೀರಾವರಿ ಇಲಾಖೆಯ ಹಿರಿಯ ಎಂಜಿನಿಯರ್ ಗಳು ಇತರರು ಪಾಲ್ಗೊಂಡಿದ್ದರು.
ಜುಲೈ 28 ರಿಂದ ಕಾಲುವೆಗಳಿಗೆ ನೀರು ಹರಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಾರಂಗಿ ನೀರಾವರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ತಿಳಿಸಿದ್ದಾರೆ.
Kodagu
ಕಾಡಾನೆಗಳ ಅಟ್ಟಹಾಸ – ಮಡಿ ಸಸಿ ನಾಶ
ವಿರಾಜಪೇಟೆ: ನಾಟಿಗೆ ಅಣಿಯಾಗಿದ್ದ ಭತ್ತದ ಗದ್ದೆಯಲ್ಲಿ ಮಡಿ ಸಸಿಗಳ ಮೇಲೆ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವ ಘಟನೆ ವಿರಾಜಪೇಟೆ ಐಮಂಗಲ ಗ್ರಾಮದಲ್ಲಿ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಐಮಂಗಲ ಗ್ರಾಮದ ಕುಂಡ್ರಂಡ ಮತ್ತು ಬೊಳ್ಳಚಂಡ ಕುಟುಂಬಕ್ಕೆ ಸೇರಿದ ಗದ್ದೆ ಮತ್ತು ತೋಟಗಳಲ್ಲಿ ಕಾಡಾನೆಗಳು ದಾಂದಲೆ ನಡೆಸಿ ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ. ಎರಡು ಕಾಡಾನೆ ಮತ್ತು ಒಂದು ಮರಿ ಆನೆಗಳು ಹಲವು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟು, ಇದೀಗ ಗದ್ದೆಯ ಪೈರು ಸೇರಿದಂತೆ ಮಡಿ ಮಾಡಿದ ಸಸಿಗಳನ್ನು ನಾಶ ಮಾಡಿದೆ.
ಗ್ರಾಮಸ್ಥರಾದ ಕುಂಡ್ರಂಡ ಮುದ್ದಯ್ಯ ಅವರು ಗ್ರಾಮದಲ್ಲಿ ಕಾಡಾನೆಗಳ ನಿರಂತರ ಉಪಟಳದಿಂದಾಗಿ ಭತ್ತದ ಮಡಿ ಸಸಿ ( ಪೈರು) ಕಾಡಾನೆಗಳ ದಾಳಿಯಿಂದ ನಾಶವಾಗಿದೆ. ಭತ್ತದ ಗದ್ದೆಗಳನ್ನು ನಂಬಿಕೊಂಡು ಜೀವನ ಸಾಗಿಸುವ ರೈತರು ಕಾಡಾನೆಗಳ ದಾಳಿಯಿಂದಾಗಿ ಈ ಭಾಗದಲ್ಲಿ ಗದ್ದೆಗಳನ್ನು ಮಾಡದೆ ಬಂಜರು ( ಪಡು) ಬಿಟ್ಟಿದ್ದಾರೆ. ಬೆರಳೆಣಿಕೆಯಷ್ಟು ಮಂದಿ ಮಾತ್ರ ಗದ್ದೆಗಳನ್ನು ನಡೆಸುತಿದ್ದಾರೆ. ಮುಂದು ಒಂದು ದಿನ ಗದ್ದೆಗಳು ಇಲ್ಲದೆ ಬಯಲು ಸೀಮೆ ಪ್ರದೇಶಗಳಾಗಿ ಪರಿವರ್ತಿತವಾಗುವುದರಲ್ಲಿ ಸಂದೇಹವಿಲ್ಲ ಎಂದು ನೊಂದು ನುಡಿದರು.ಕಾಡಾನೆಗಳನ್ನು ನಿಯಂತ್ರಣ ಮಾಡುವಲ್ಲಿ ಅರಣ್ಯ ಇಲಾಖೆಯು ವಿಫಲವಾಗಿದೆ.ಸರ್ಕಾರವು ರೈತರು ಕಾಡಾನೆಗಳಿಂದ ಅನುಭವಿಸುತ್ತಿರುವ ವೇದನೆ ಯನ್ನು ಕಂಡು ಕಾಣದ ರೀತಿಯಲ್ಲಿ ವರ್ತಿಸುತ್ತಿದೆ. ಎಂದು ಗ್ರಾಮಸ್ಥರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಕಾಡಾನೆಗಳ ದಾಳಿಗೆ ಒಳಗಾದ ಪ್ರದೇಶಗಳಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ
Kodagu
ಅಧ್ಯಕ್ಷ ಸ್ಥಾನದಿಂದ ಮನುಸೋಮಯ್ಯ ವಜಾ
ಮಡಿಕೇರಿ : ರಾಜ್ಯ ರೈತ ಸಂಘ ವಿರೋಧಿ ಚಟುವಟಿಕೆ ಹಿನ್ನೆಲೆ ಸಂಘದ ಮೈಸೂರು ವಿಭಾಗೀಯ ಉಪಾಧ್ಯಕ್ಷರು ಹಾಗೂ ಕೊಡಗು ಜಿಲ್ಲಾಧ್ಯಕ್ಷ ಮನುಸೋಮಯ್ಯ ಮತ್ತು ಜಿಲ್ಲೆಯ ಇತರೆ ಪದಾಧಿಕಾರಿಗಳನ್ನು ಪದಾಧಿಕಾರತ್ವದಿಂದ ತೆಗೆದು ಹಾಕಲಾಗಿದೆ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಸೈಧಾಂತಿಕ ಹಿನ್ನೆಲೆ, ವೈಚಾರಿಕೆ ದೃಷ್ಠಿಕೋನ ಮತ್ತು ರಾಜಕೀಯ ಸ್ಪಷ್ಟತೆಯಿಂದ ಕಳೆದ ೪೫ ವರ್ಷದಿಂದ ಕೆಲಸ ಮಾಡುತ್ತಿದೆ. ಆದರೆ, ಮನುಸೋಮಯ್ಯ ಮತ್ತು ಜಿಲ್ಲೆಯ ಕೆಲವು ಪದಾಧಿಕಾರಿಗಳು ಸಂಘದ ನೀತಿ ನಿಯಮಗಳಿಗೆ ಚ್ಯುತಿ ತಂದಿದ್ದಾರೆ. ಈ ಆರೋಪದ ಹಿನ್ನೆಲೆ ತನಿಖೆಗಾಗಿ ಸಮಿತಿ ರಚಿಸಲಾಗಿತ್ತು. ತನಿಖೆ ನಡೆಸಲು ಶಿಸ್ತು ಸಮಿತಿಗೆ ಕಾಡ್ಯಮಾಡ ಮನುಸೋಮಯ್ಯ ಸಹಕರಿಸದೆ ಉಡಾಫೆಯಾಗಿ ವರ್ತಿಸಿದ್ದಾರೆ. ಸಮಿತಿ ತೀರ್ಮಾನವನ್ನೇ ಧಿಕ್ಕರಿಸಿದ್ದಾರೆ. ಈ ವರ್ತನೆಗೆ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆಟ್ಟುಮಾಡ ಸುಜನ್ ಬೋಪಯ್ಯ, ಸಂಚಾಲಕರಾದ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ಖಜಾಂಚಿ ಇಟ್ಟೀರ ಸಭಿತ ಭೀಮಯ್ಯ ಕೂಡ ಸಹಕರಿಸಿ ನೀತಿ ನಿಯಮ ಉಲ್ಲಂಘಿಸಿದ್ದಾರೆ. ಪರಿಣಾಮ ಪದಾಧಿಕಾರತ್ವದಿಂದ ತೆಗೆದು ಹಾಕಲಾಗಿದೆ ಎಂದು ಮಾಹಿತಿ ನೀಡಿದರು.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.