Connect with us

State

ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?- ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಗ್ಯಾರಂಟಿ ಯೋಜನೆಗಳ ಹೊರತಾದ ಅಭಿವೃದ್ಧಿಯ ವಿವರಗಳನ್ನು ಅಂಕಿ ಅಂಶಗಳ ಸಮೇತ ಬಿಚ್ಚಿಡುತ್ತಿರುವ ಸಿಎಂ

ಬೆಂಗಳೂರು, ಫೆಬ್ರುವರಿ 29- : ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ವಿಧಾನಸಭೆಯಲ್ಲಿ ಆಯವ್ಯಯ ಭಾಷಣ ಕುರಿತ ಚರ್ಚೆಗೆ ಉತ್ತರ ನೀಡಿದರು. ಬಸವರಾಜ ಬೊಮ್ಮಾಯಿ ಅವರು 2023 ರ ಫೆಬ್ರುವರಿಯಲ್ಲಿ 3.09 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದರು. 2024-25ನೇ ಸಾಲಿಗೆ ನಾನು ಮಂಡಿಸಿದ ಆಯವ್ಯಯದ ಗಾತ್ರ 3,71,343 ಕೋಟಿ ರೂ. ನಷ್ಟಿದ್ದು, ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ಗಿಂತ 62,200 ಕೋಟಿ ರೂ. ನಷ್ಟು ಗಾತ್ರ ಹೆಚ್ಚಳವಾಗಿದೆ. ನಾನು ಜುಲೈ 2023 ರಲ್ಲಿ ಮಂಡಿಸಿದ ಬಜೆಟ್‌ಗಿಂತ ಇದು 43,601 ಕೋಟಿ ರೂ. ಹೆಚ್ಚಳವಾಗಿದೆ.

ಅಂತೆಯೇ ರಾಜ್ಯದ ಜಿಡಿಪಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂರೆ 2,41,723 ಕೋಟಿ ರೂ. ಹೆಚ್ಚು. ಅಭಿವೃದ್ಧಿ ಇಲ್ಲದೆ ಆಯವ್ಯಯ ಗಾತ್ರ ಹಾಗೂ ಜಿಡಿಪಿ ಹೆಚ್ಚಳವಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳ ಉತ್ತರದ ಇತರ ಮುಖ್ಯಾಂಶಗಳು:

ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿ ಬಜೆಟ್‌ ಓದುವಾಗ ವಿರೋಧ ಪಕ್ಷದವರು ಗೈರು ಹಾಜರಾದದ್ದು.

ಇವರಿಗೆ ರಾಜ್ಯದ ಆರ್ಥಿಕತೆ ಬಗ್ಗೆ ಕಾಳಜಿ ಇಲ್ಲ.

ಕಾಂಗ್ರೆಸ್‌ ನವರು 9 ಜನ , ಬಿಜೆಪಿ 13 ಜನ ಹಾಗೂ ಜೆಡಿಎಸ್‌ 3 ಜನ ಭಾಗವಹಿಸಿದ್ದಾರೆ. ಇಷ್ಟೂ ಸದಸ್ಯರು ಬಜೆಟ್‌ ಬಗ್ಗೆ ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಬಜೆಟ್‌ನ್ನು ಟೀಕಿಸಿದ್ದಾರೆ. ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇದೆಲ್ಲವನ್ನೂ ಸ್ವಾಗತ ಮಾಡುತ್ತೇನೆ. ಅವರ ಸಲಹೆ- ಸೂಚನೆಗಳನ್ನು ಸರ್ಕಾರ ಮುಂದಿನ ವರ್ಷದಲ್ಲಿ ಆರ್ಥಿಕ ವರ್ಷದಲ್ಲಿ ಏನೇನು ಮಾಡಬೇಕು ಅದೆಲ್ಲವನ್ನೂ ಮಾಡುತ್ತೇವೆಂದು ಹೇಳಬಯಸುತ್ತೇನೆ.

2024-25ನೇ ಆಯವ್ಯಯದಲ್ಲಿ ಒಟ್ಟು ಬಜೆಟ್‌ ಗಾತ್ರ 3,71,343 ಕೋಟಿ ರೂ. ಗಳಾಗಿದ್ದು, ಇದರಲ್ಲಿ ರಾಜಸ್ವ ವೆಚ್ಚ 2,90,531 ಕೋಟಿ, ಬಂಡವಾಳ ವೆಚ್ಚ __ ಕೋಟಿ ರೂ. ಗಳಾಗಿದ್ದು, ನಾವು ಅಭಿವೃದ್ಧಿಗೂ ಆದ್ಯತೆ ನೀಡಿರುವುದಕ್ಕೆ ಇದು ಸಾಕ್ಷಿ.

ವಿರೋಧ ಪಕ್ಷದವರು ಅಭಿವೃದ್ಧಿ ಶೂನ್ಯ ಎಂದಿದ್ದಾರೆ. ಒಟ್ಟು ಅಭಿವೃದ್ಧಿ ಕಾರ್ಯಕ್ರಮಗಳಿಗೆ 1,20,000 ಕೋಟಿ ರೂ. ವೆಚ್ಚದ ಹಂಚಿಕೆ ಮಾಡಿದ್ದೇವೆ. 52,009 ಕೋಟಿ ರೂ. ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿರಿಸಿದ್ದು, ಉಳಿದ ಮೊತ್ತ ಅಭಿವೃದ್ಧಿ ಕಾರ್ಯಗಳಿಗೆ ಹಂಚಿಕೆ ಮಾಡಲಾಗಿದೆ. ವಿರೋಧ ಪಕ್ಷದವರು ಮಾಡಿರುವ ಆಪಾದನೆ ಸತ್ಯಕ್ಕೆ ದೂರವಾದದ್ದು.

ಮತದಾರರು ಬಿಜೆಪಿಯವರನ್ನು ತಿರಸ್ಕಾರ ಮಾಡಿದರು. ನಮಗೆ 136 ಸೀಟು ಕೊಟ್ಟರು ಹಾಗೂ 43% ಮತ ನೀಡಿದರು. ಇವರು ಭ್ರಷ್ಟಾಚಾರ ಮಾಡಿದ್ದರಿಂದ ಕೇವಲ 66 ಜನ ಗೆಲ್ಲಲು ಸಾಧ್ಯವಾಯಿತು. ಇವರು ಜನರ ಸಂಪೂರ್ಣ ಆಶೀರ್ವಾದದೊಂದಿಗೆ ಅಧಿಕಾರ ಮಾಡಲಿಲ್ಲ. ಇವರು ಆಪರೇಷನ್‌ ಕಮಲದ ಮೂಲಕ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರು. ಇದಕ್ಕೆ ಕಾರಣ ಮಿ. ಯಡಿಯೂರಪ್ಪ ಮತ್ತು ಇತರರು. ಇವರು ಯಾವತ್ತೂ ಮುಂಬಾಗಿಲಿನಿಂದ ಅಧಿಕಾರಕ್ಕೆ ಬರಲಿಲ್ಲ.

ಜಿಡಿಪಿ- 2023- 24 ರಲ್ಲಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂರೆ 2,41,723 ಕೋಟಿ ರೂ. ಹೆಚ್ಚು.

ಆದ್ದರಿಂದ ಜಿಡಿಪಿಯೂ ಹೆಚ್ಚಾಗಿದೆ, ಬಜೆಟ್‌ ಗಾತ್ರವೂ ಹೆಚ್ಚಾಗಿದೆ. ಇದರಿಂದ ರಾಜ್ಯದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ ಎಂದು ವಿರೋಧ ಪಕ್ಷದವರು ಮಾಡಿರುವ ಆಪಾದನೆಯಲ್ಲಿ ಯಾವುದೇ ತಿರುಳಿಲ್ಲ ಎಂಬುದು ಸಾಬೀತಾಗುತ್ತದೆ.

ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ 36,000 ಕೋಟಿ ರೂ. ವೆಚ್ಚ ಮಾಡಿದ್ದೇವೆ. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ – ಈ ಕಾರ್ಯಕ್ರಮಗಳಿಗೆ 36,000 ಕೋಟಿ ರೂ. ಬಳಸಲಾಗಿದೆ. ಮುಂದಿನ ಬಜೆಟ್‌ ನಲ್ಲಿ 52,009 ಕೋಟಿ ಒದಗಿಸಿದ್ದು, ಇದರೊಂದಿಗೆ ಶಿಕ್ಷಣ, ಆರೋಗ್ಯ, ರಸ್ತೆಗಳು, ಶಾಂತಿ ಸುವ್ಯವಸ್ಥೆ ಎಲ್ಲದಕ್ಕೂ ಆದ್ಯತೆ ನೀಡಲಾಗಿದೆ.

ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧೀಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ.

ಬಿಜೆಪಿಯವರಿಗೆ ಜನರ ಆಶೀರ್ವಾದ ಪಡೆಯುವ ಯೋಗ್ಯತೆ ಇಲ್ಲ. ಇವರು ನಮಗೆ ದೇಶಭಕ್ತಿ ಪಾಠ ಹೇಳಿ ಕೊಡಲು ಬರುತ್ತಾರೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್.‌ ಹಿಂಬಾಗಿಲಿನಿಂದ ಅಧಿಕಾರ ಅನುಭವಿಸಲು ಬಂದವರು ಇವರು.

ಆರ್. ಎಸ್.‌ ಎಸ್‌ 1925ರಲ್ಲೇ ಅಸ್ತಿತ್ವಕ್ಕೆ ಬಂತು. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ.

ಅನಂತಕುಮಾರ್‌ ಹೆಗಡೆ ಕೇಂದ್ರ ಸಚಿವರಾಗಿದ್ದಾಗ, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಿಸಲು ಎಂದು ಹೇಳಿಕೆ ನೀಡಿದರು. ಇದರ ಬಗ್ಗೆ ಮೋದಿ ಅವರಾಗಲಿ, ಪಕ್ಷದ ಹಿರಿಯರಾಗಲಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ.

Continue Reading
Click to comment

Leave a Reply

Your email address will not be published. Required fields are marked *

State

ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ 4 ಸಾವಿರ ರೂ. ಹಣ ಈ ದಿನ ಜಮವಾಗಲಿದೆ : ಸ್ಟೇಟಸ್ ಚೆಕ್ ಮಾಡುವುದು ಹೇಗೆ?

Published

on

Gruhalakshmi Scheme Pending Amount Credit Date – ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು ಜಮವಾಗುವ 2000ರೂ. ಹಣವು ಕಳೆದ ಎರಡು ತಿಂಗಳಿನಿಂದ ಪಲಾನುಭವಿಗಳ ಖಾತೆಗೆ ವಿವಿಧ ಕಾರಣಕ್ಕಾಗಿ ಜಮವಾಗಿಲ್ಲ.

ಇದರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮದ ಮುಕಾಂತರ ಪಲಾನುಭವಿಗಳಿಗೆ ಬಾಕಿ ಇರುವ ಎರಡು ಕಂತುಗಳ 4 ಸಾವಿರ ರೂಪಾಯಿ ಹಣವನ್ನು ಶೀಘ್ರದಲ್ಲಿಯೇ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಯಾವಾಗ ಜಮಾವಾಗಲಿದೆ? ಜಮಾವಾದ ಹಣವನ್ನು ಪರಿಶೀಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ..

ಯಾವ ದಿನಾಂಕದಂದು ಜಮವಾಗಲಿದೆ?

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ತಿಳಿಸಿದ ಪ್ರಕಾರ ಬಾಕಿ ಇರುವ ಎರಡು ಕಂತುಗಳ 4,000ರೂ. ಹಣವನ್ನು ಶೀಘ್ರದಲ್ಲಿಯೆ ಅಂದರೆ ಮಾರ್ಚ್ 31 ರನಂತರ ಖಚಿತವಾಗಿ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜಮವಾದ ಹಣದ ಸ್ಟೇಟಸ್ ಪರಿಶೀಲಿಸುವುದು ಹೇಗೆ?

ಗೃಹಲಕ್ಷ್ಮಿ ಯೋಜನೆಯ ಬಾಕಿ ಮೊತ್ತ ಜಮವಾದ ಹಣದ ಸ್ಟೇಟಸ್ ನೀವು ನಿಮ್ಮ ಮೊಬೈಲ್ ಮುಕಾಂತರ ಸುಲಭವಾಗಿ DBT ಅಪ್ ಮುಕಾಂತರ ಪರಿಶೀಲಿಕೊಳ್ಳಬಹುದು. ಗೂಗಲ್ ಪ್ಲೇ ಸ್ಟೋರ್ ನಲ್ಲಿ DBT ಆಪ್ ಡೌನ್ಲೋಡ್ ಮಾಡಿ, ನೋಂದಣಿಯಾಗಿ ನಿಮ್ಮ ಆಧಾರ್ ಕಾರ್ಡ್ ಮುಕಾಂತರ ನಿಮ್ಮ ಖಾತೆಗೆ ಜಮವಾಗುವುದರ ಕುರಿತು ಪರಿಶೀಲಿಕೊಳ್ಳಿ. DBT ಆಪ್ ನ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್ ಕೆಳಗಡೆ ನೀಡಲಾಗಿದೆ.

DBT ಆಪ್ ಲಿಂಕ್ – https://play.google.com/store/apps/details?id=com.dbtkarnataka

Continue Reading

State

ಮುನಿರತ್ನನನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು: ಕೆ.ಎನ್‌ ರಾಜಣ್ಣ

Published

on

ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಹನಿಟ್ರ್ಯಾಪ್‌ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರು ಡಿಸಿಎಂ ಡಿಕೆಶಿ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.

ಇದಕ್ಕೆಲ್ಲಾ ಡಿ.ಕೆ.ಶಿವಕುಮಾರ್‌ ಕಾರಣವೇ ಹೊರತು ಬೇರೆ ಯಾರೂ ಅಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಆರೋಪದ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ ಅವರು, ಮುನಿರತ್ನನನ್ನೇ ಮೊದಲು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಯಾಕೆಂದರೆ ಮುನಿರತ್ನ ಮೊದಲೆಲ್ಲಾ ಡಿಕೆಶಿ ಜೊತೆಯಲ್ಲೇ ಇದ್ದರು. ಆದ್ದರಿಂದ ಅವರನ್ನು ಮಂಪರು ಪರೀಕ್ಷೆ ಮಾಡಿಸಿ ಎಂದರು.

Continue Reading

State

ಫೋನ್‌ ಕದ್ದಾಲಿಕೆ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಿಷ್ಟು?

Published

on

ಬೆಂಗಳೂರು: ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ನಿಜ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಹಕಾರ ಸಚಿವ ಕೆ.ಎನ್.ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ರಾಜೇಂದ್ರ ಅವರ ಫೋನ್ ಕದ್ದಾಲಿಕೆಯಾಗಿದೆ. ಇದೇ ರೀತಿ ಹಲವು ಶಾಸಕರ ಫೋನ್ ಕದ್ದಾಲಿಕೆಯಾಗಿದೆ. ರಾಜಣ್ಣ ಮತ್ತು ರಾಜೇಂದ್ರ ಅವರನ್ನು ಟ್ರ್ಯಾಪ್ ಮಾಡಲು ಕದ್ದಾಲಿಕೆ ಮಾಡಿಸಿದ್ದಾರೆ. ಈ ಬಗ್ಗೆ ನಾನು ಮತ್ತು ಕುಮಾರಸ್ವಾಮಿ ಮೊದಲಿನಿಂದಲೂ ಹೇಳುತ್ತಿದ್ದೇವೆ. ಸುಮಾರು 2 ವರ್ಷಗಳಿಂದಲೂ ಫೋನ್ ಕದ್ದಾಲಿಕೆಯಾಗುತ್ತಿದೆ ಎಂದು ಆರೋಪಿಸಿದರು.

ಇನ್ನು ನಾವು ಧರ್ಮಾಧಾರಿತ ಮೀಸಲಾತಿ ವಿಚಾರಕ್ಕೆ ಹೋರಾಟ ಮಾಡುತ್ತಿದ್ದೇವೆ. ಮೀಸಲಾತಿ ಭೂತವನ್ನು ರಾಜ್ಯದ ಹಿಂದೂಗಳ ಮೇಲೆ ಹೇರುತ್ತಿದ್ದಾರೆ. ಕಾಮಗಾರಿಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲು ಮುಂದಾಗಿದ್ದಾರೆ. ಮಂಗಳೂರಿನಲ್ಲಿ ಈಗಾಗಲೇ ಶೇ.5ರಷ್ಟು ಮುಸ್ಲಿಮರು ಗುತ್ತಿಗೆದಾರರಾಗಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಧರ್ಮಾಧಾರಿತ ಮೀಸಲಾತಿ ಬೇಡ ಎಂದಿದ್ದಾರೆ. ಹೀಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.

Continue Reading

Trending

error: Content is protected !!