Mysore
ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಿ.ಎಂ ಸಿದ್ದರಾಮಯ್ಯ ಚಾಲನೆ
ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಶುಕ್ರವಾರ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ- 2023 ಕಾರ್ಯಕ್ರಮವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಸಂತಸ ವ್ಯಕ್ತ ಪಡಿಸಿದರು.
ಕಳೆದ ಬಾರಿಯಂತೆ ಈ ವರ್ಷವೂ ಕೂಡ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ ದೇವಾಲಯ, ಸಿರಿ ಧಾನ್ಯದಿಂದ ನಿರ್ಮಿಸಿದ ಮಲೆ ಮಹದೇಶ್ವರ ಪ್ರತಿಮೆ, ಹಂಪಿಯ ಕಲ್ಲಿನ ರಥ, ವಿರೂಪಾಕ್ಷ ವಿಗ್ರಹ, ಬ್ರಾಂಡ್ ಮೈಸೂರು ಲೋಗೋ, 8 ಬಾರಿ ಅಂಬಾರಿ ಹೊತ್ತ ಅರ್ಜುನ ಅನೆ ಆಕೃತಿ, ನಾಲ್ವಡಿ ಕೃಷ್ಣ ರಾಜ ಒಡೆಯರ್, ಕೆಂಪ ನಂಜಮ್ಮಣಿ, ಶ್ರಿ ಕಂತ ದತ್ತ ಒಡೆಯರ್, ಮೈಸೂರು ಅರಮನೆ ಮಂಡಳಿ, ಹಾಗೂ ವಿವಿಧ ರೀತಿಯ ಪ್ರಾಣಿಗಳ ಪ್ರತಿಮೆಗಳು ಕಂಡುಬಂದವು.
ಹಣ್ಣುಗಳಿಂದ ಚಿತ್ರಿಸಿದ ಕಲಾಕೃತಿಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ, ನಾಲ್ವಡಿ ಕೃಷ್ಣರಾಜ ಒಡೆಯರ್, ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ .ಸಿ ಮಹದೇವಪ್ಪ ಆಕೃತಿಗಳು ಜನರ ಮನ ಸೆಳೆದವು.
ವಿವಿಧ ರೀತಿಯ ಕಲಾಕೃತಿಗಳು, ಸ್ಪೈಡರ್ ಮ್ಯಾನ್, ಬ್ಯಾಟ್ ಮ್ಯಾನ್, ಸೂಪರ್ ಮ್ಯಾನ್ ಹೀಗೆ ಮಕ್ಕಳಿಗೆ ಪ್ರಿಯವಾಗಿರುವ ಹೂಗಳಿಂದ ಅಲಂಕೃತಗೊಂಡ ವಿವಿಧ ಕಲಾಕೃತಿಗಳು, ಸೆಲ್ಫಿ ಪಾಯಿಂಟ್, ರಾಜ್ ಕುಮಾರ್, ಕ್ರಿಸ್ ಮಸ್ ಟ್ರೀ ಗಳು ಜನರನ್ನು ಆಕರ್ಷಿಸಿದವು.
ಮೈಸೂರು ಅರಮನೆ ಮಂಡಳಿ ವತಿಯಿಂದ ರಾಜ ಮನೆತನಕ್ಕೆ ಸೇರಿದ ಆಯ್ದ ಹಳೆಯ ಹಾಗೂ ಅಮೂಲ್ಯ ಛಾಯಾ ಚಿತ್ರಗಳು, ನವರಾತ್ರಿ ಸಂದರ್ಭದಲ್ಲಿ ಮನೆಗಳಲ್ಲಿ ಪ್ರದರ್ಶಿಸಿದ ಬೊಂಬೆಗಳು, ನಾಲ್ವಡಿ ಕೃಷ್ಣ ರಾಜ ಒಡೆಯರು ಮತ್ತು ಮೈಸೂರು ಅರಮನೆ ಕುರಿತು ವಿಡಿಯೋ ಪ್ರದರ್ಶನವನ್ನು ಆಯೋಜಿಸಲಾಗಿತ್ತು.
ಬಾಕ್ಸ್ :- *ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಸರ್ವರೂ ಸಮಾನರು ಎಂಬ ಸಂದೇಶವನ್ನು ಸಾರುವ ಸಂವಿಧಾನ ಪೀಠಿಕೆ, ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಸಮಾನತೆ, ಏಕತೆ ಮತ್ತು ಸಮಗ್ರತೆಯನ್ನು ಮೂಡಿಸುವಲ್ಲಿ ಸಂವಿಧಾನದ ಪಾತ್ರ ಮುಖ್ಯ ಎಂಬುದರ ವಿಷಯವನ್ನು ಪ್ರತಿಯೊಬ್ಬ ಸಾರ್ವಜನಿಕರಿಗೂ ತಿಳಿಸಲು ಭಾರತ ಸಂವಿಧಾನದ ಪ್ರಸ್ತಾವನೆಯನ್ನು ನಿರ್ಮಿಸಲಾಗಿತ್ತು
ಅರಮನೆ ಅನೆಗಳಿಂದ ನಾಲ್ವಡಿ ಕೃಷ್ಣ ರಾಜ ಒಡೆಯರು, ಕೆಂಪ ನಂಜಮ್ಮಣಿ, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿಸಲಾಯಿತು.
ಕಾರ್ಯಕ್ರಮದಲ್ಲಿ ಸಚಿವ ಡಾ. ಎಚ್ .ಸಿ. ಮಹದೇವಪ್ಪ. ಶಾಸಕ ಡಾ. ಡಿ. ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ, ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
Mysore
ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
ನಂಜನಗೂಡು : ಇಂದು ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುವ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದ ಕಟ್ಟಡ ಕಾಮಗಾರಿಗೆ 15 ಲಕ್ಷ ರೂ ವೆಚ್ಚದಲ್ಲಿ ನಂಜನಗೂಡು ಕ್ಷೇತ್ರದ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಶಾಸಕರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಸಮುದಾಯ ಭವನಗಳ ಅವಶ್ಯಕತೆ ಇರುವ ಉದ್ದೇಶದಿಂದ ಕ್ಷೇತ್ರದ ಗ್ರಾಮೀಣ ಭಾಗದಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.
ನನ್ನ ತಂದೆ ದಿ.ಆರ್ ಧ್ರುವನಾರಾಯಣ್ ಅವರ ಆಡಳಿತ ಅವಧಿಯಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಿಗೂ ಸರ್ವ ಜನಾಂಗದ ಎಲ್ಲ ವರ್ಗದವರಿಗೂ ಸಮುದಾಯ ಭವನ ನಿರ್ಮಿಸಲಾಗಿದೆ ಅವರ ಹಾದಿಯಲ್ಲೇ ನಾನು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದೆನೆ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣವಾಗುತ್ತಿದ್ದು ಇದನ್ನು ಕೆಟ್ಟ ಚಟಗಳಿಗೆ ಬಳಸದೆ ಒಳ್ಳೆಯ ಕೆಲಸಕ್ಕೆ ಉಪಯೋಗಿಸುವ ನಿಟ್ಟಿನಲ್ಲಿ ಕಾಮಗಾರಿಯನ್ನು ಗುಣಮಟ್ಟದವಾಗಿ ಮಾಡಲು ಎಲ್ಲರೂ ಸಹಕಾರ ನೀಡಬೇಕು.
ನಾನು ಶಾಸಕನಾಗಿ ಕ್ಷೇತ್ರವನ್ನು ಪ್ರವಾಸ ಕೈಗೊಂಡ ಸಂದರ್ಭದಲ್ಲಿ ನೀಡಿದ ವೇಳೆ ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪಟ್ಟಿ ಮಾಡಲಾಗಿದೆ ಹೀಗಾಗಿ ಆದ್ಯತೆ ಮೇರೆಗೆ ಅನುದಾನ ತಂದು ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಾ ಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್,ಗ್ಯಾರಂಟಿ ಯೋಜನೆಯ ತಾಲ್ಲೂಕು ಅದ್ಯಕ್ಷ ಕೆ ಮಾರುತಿ, ಹುಲ್ಲಹಳ್ಳಿ ಬ್ಲಾಕ್ ಅದ್ಯಕ್ಷ ಶ್ರೀಕಂಠನಾಯಕ, ಗ್ರಾ ಪಂ ಅದ್ಯಕ್ಷೆ ದೇವಮ್ಮ,ಗ್ರಾ ಪಂ ಸದಸ್ಯ ಪಾಪ,ಶಿವಕುಮಾರ್,ಎಇ ಶರಣ್, ಇಂಜಿನೀಯರ್ ಕಾವ್ಯ,ಪುರುಷೋತ್ತಮ್, ಮುಖಂಡರುಗಳಾದ ಮಹದೇವಯ್ಯ,ಚೆಲುವಯ್ಯ,ದುಂಡಯ್ಯ,ವೆಂಕಟರಾಜು,ಸೇರಿದಂತೆ ಪ್ರಮುಖರು ಹಾಜರಿದ್ದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್.
Hassan
ಚನ್ನಪಟ್ಟಣ – ರಾಮನಗರ ನಡುವೆ ಕೈಗಾರಿಕೆ : ಸ್ಥಳೀಯರಿಗೆ ಉದ್ಯೋಗಕ್ಕೆ ಒತ್ತು: ಹೆಚ್ ಡಿ ಕೆ ಭರವಸೆ
ಚನ್ನಪಟ್ಟಣ ಕ್ಷೇತ್ರದಲ್ಲಿ ಕೇಂದ್ರ ಸಚಿವರ ಪ್ರಚಾರ
ನಿಖಿಲ್ ಒಳ್ಳೆಯ ನಾಯಕರಾಗುತ್ತಾರೆ, ಅದಕ್ಕೆ ಚನ್ನಪಟ್ಟಣ ಜನರೇ ನಾಂದಿ ಹಾಡಲಿ ಎಂದ ಯದುವೀರ್ ಅವರು
ಚನ್ನಪಟ್ಟಣ/ರಾಮನಗರ: ಕಾಂಗ್ರೆಸ್ ನಾಯಕರು ನನ್ನನ್ನು ನಿಂದನೆ ಮಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ನಾನು ಅಭಿವೃದ್ದಿ ವಿಚಾರ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದೇನೆ. ಅವರಿಗೂ ನನಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಕೇಂದ್ರ ಸಚಿವರಾದ HD ಕುಮಾರಸ್ವಾಮಿ ಅವರು ಹೇಳಿದರು.
ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಚನ್ನಪಟ್ಟಣ – ರಾಮನಗರ ನಡುವೆ ಬೃಹತ್ ಕೈಗಾರಿಕೆ ಒಂದನ್ನು ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಭರವಸೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲೆ ನಂಬಿಕೆ ಇರಿಸಿ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆಗಳನ್ನು ನೀಡಿದ್ದಾರೆ. ಎರಡೂ ಮಹತ್ವದ ಖಾತೆಗಳಾಗಿದ್ದು, ದೇವರ ಅನುಗ್ರಹ ಜನರ ಆಶೀರ್ವಾದದಿಂದ ಸಿಕ್ಕಿರುವ ಈ ಅವಕಾಶದಿಂದ ರಾಮನಗರ ಜಿಲ್ಲೆಯ ಜನರಿಗೆ ಏನಾದರೂ ಒಳ್ಳೆಯದು ಮಾಡುತ್ತೇನೆ ಎಂದು ಅವರು ಒತ್ತಿ ಹೇಳಿದರು.
ನಾವು ಟಿಕೆಟ್ ಕೊಡುತ್ತೇವೆ ಎಂದೆವು. ಬಿಜೆಪಿ ಕೂಡ ಟಿಕೆಟ್ ಕೊಡಲು ಮುಂದಾಗಿತ್ತು. ಬಿಜೆಪಿ ವರಿಷ್ಠ ನಾಯಕರ ಮಾತಿಗೆ ತಲೆಬಾಗಿ ನಾವು ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧಾರ ಮಾಡಿದ್ದೆವು. ಆದರೆ, ಎಲ್ಲರ ಮಾತನ್ನು ಧಿಕ್ಕರಿಸಿ, ಕಾಲಿನಲ್ಲಿ ಒದ್ದು ಅವರು ಕಾಂಗ್ರೆಸ್ ಸೇರಿಕೊಂಡರು. ಈಗ ನೋಡಿದರೆ ಹಾದಿಬೀದಿಯಲ್ಲಿ ಸುಳ್ಳು ಪ್ರಚಾರ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ದೂರಿದರು.
ನನ್ನ ಬಗ್ಗೆ, ನನ್ನ ತಂದೆಯ ಬಗ್ಗೆ ಬಹಳ ಕೀಳುಮಟ್ಟದ ಭಾಷೆ ಬಳಕೆ ಮಾಡಿಕೊಂಡು ಟೀಕೆ ಮಾಡುತ್ತಿದ್ದಾರೆ. ಅವರ ಪದ ಬಳಕೆಯ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಚನ್ನಪಟ್ಟಣ ಜನರೇ ತೀರ್ಪು ಕೊಡುತ್ತಾರೆ ಎಂದು ಅವರು ಹೇಳಿದರು.
ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣದಲ್ಲಿ ಎಷ್ಟು ಕೆರೆಗಳು ಇವೆ ಎಂಬುದೇ ಗೊತ್ತಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಹೇಳಿದ್ದಾರೆ. ಆದರೆ, ನಾನು ಏನು ಮಾಡಿದ್ದೇನೆ ಎಂಬುದು ಹಳ್ಳಿಗಳಿಗೆ ಹೋಗಿ ನೋಡಿದರೆ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದರು ಕುಮಾರಸ್ವಾಮಿ ಅವರು.
ನಿವೇಶನಗಳನ್ನು ಮಾಡಿಕೊಳ್ಳಬೇಡಿ
ಕೂಡ್ಲೂರು ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ನಿಮಗೆ ನೀಡಲಾಗಿರುವ ನಿವೇಶನಗಳನ್ನು ಹಾಗೆಯೇ ಇಟ್ಟುಕೊಳ್ಳಿ. ಉಳಿದ ಗ್ರಾಮಸ್ಥರಿಗೂ ಹಕ್ಕುಪತ್ರ ಕೊಡಿಸಲಾಗುವುದು. ಮನೆಗಳನ್ನು ಕಟ್ಟಿಕೊಳ್ಳಲು ಸರ್ಕಾರದಿಂದ ನೆರವು ಕೊಡಿಸಲಾಗುವುದು ಎಂದು ಕೇಂದ್ರ ಸಚಿವರು ಭರವಸೆ ನೀಡಿದರು.
ಕೇಂದ್ರ ಸಚಿವರ ಜತೆ ಯದುವೀರ್
ಚನ್ನಪಟ್ಟಣದಲ್ಲಿ ನಡೆದ ಪ್ರಚಾರದಲ್ಲಿ ಮೈಸೂರು ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್ ಅವರು ಸಾಥ್ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ವೇಗವಾಗಿ ಅಭಿವೃದ್ದಿ ಹೊಂದುತ್ತಿದೆ. ಅವರ ಸಂಪುಟದಲ್ಲಿ ಕುಮಾರಸ್ವಾಮಿ ಅವರು ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಅಧಿಕಾರಕ್ಕೆ ಬಂದಾಗಿನಿಂದ ಹಗರಣಗಳಲ್ಲಿಯೇ ಮುಳುಗಿದೆ. ಅದರಲ್ಲಿ ಮೂಡಾ ಹಗರಣದ ವಿರುದ್ಧ ಬೆಂಗಳೂರಿನಿಂದ ಮೈಸೂರುವರೆಗೂ ನಡೆದ ಪಾದಯಾತ್ರೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರೂ ಪ್ರಮುಖ ಪಾತ್ರ ವಹಿಸಿದ್ದರು. ಅವರಿಗೆ ಮುಂದೆ ಒಳ್ಳೆಯ ನಾಯಕನಾಗಿ ಬೆಳೆಯುವ ಎಲ್ಲಾ ಅವಕಾಶಗಳು ಇವೆ. ಅಂತಹ ಅವಕಾಶಕ್ಕೆ ಚನ್ನಪಟ್ಟಣದ ಜನರೇ ನಾಂದಿ ಹಾಡಬೇಕು ಎಂದು ಒಡೆಯರ್ ಅವರು ಹೇಳಿದರು.
ಇದಕ್ಕೂ ಮೊದಲು ಕೇಂದ್ರ ಸಚಿವರು ಯದುವೀರ್ ಅವರೊಂದಿಗೆ ಪಕ್ಷದ ಹಿರಿಯ ಮುಖಂಡ ಟಿ.ಪಿ.ಪುಟ್ಟಸಿದ್ದೇಗೌಡ ಅವರ ಮನೆಗೆ ಭೇಟಿ ನೀಡಿದ್ದರು
Mysore
ಸಾಮಾನ್ಯ ಸಭೆ, ಸದಸ್ಯರಿಂದ ದೂರಿನ ಸುರಿಮಳೆ
ಸಾಲಿಗ್ರಾಮ : ಸ್ಥಾಯಿ ಸಮಿತಿ ಸಭೆ ಕರೆಯದ ಅಧ್ಯಕ್ಷರು ಹತ್ತು ಸಾವಿರಕ್ಕೂ ಹೆಚ್ಚು ವೆಚ್ಚ ಮಾಡಲು ಸಭೆಯ ಅನುಮತಿ ಪಡೆಯದ ಅಧಿಕಾರಿಗಳು, ರಾಜಕಾಲುವೆ ಮೇಲೆ ರಸ್ತೆ ನಿರ್ಮಾಣ ಮಾಡಿ ಖಾಸಗಿ ಬಡಾವಣೆ ನಿರ್ಮಾಣ ಮಾಡಿರುವ ಬಗ್ಗೆ ಸಿಇಒ ಅವರಿಂದ ತನಿಖೆಗೆ ಆಗ್ರಹಿಸಿದ ಗ್ರಾಂ ಪಂ ಸದಸ್ಯರುಗಳು. ಸಾಲಿಗ್ರಾಮ ಗ್ರಾಂ ಪಂ ಅಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗ್ರಾಂ ಪಂ ಸದಸ್ಯರುಗಳು ದೂರಿನ ಸುರಿಮಳೆಯನ್ನೇ ಸುರಿಸಿದರು.
ಗ್ರಾಂ ಪಂ ಅಧ್ಯಕ್ಷೆ ಫಾತಿಮಾ ಉನ್ನೀಸ್ ಅವರು ಎರಡನೇ ಅವಧಿಯಲ್ಲಿ ಸ್ಥಾಯಿ ಸಮಿತಿ ಸಭೆ ನಡೆಸದ ಬಗ್ಗೆ ತೀರ್ವ ಅಸಮಾಧಾನ ವ್ಯಕ್ತಪಡಿಸಿದ ಸದಸ್ಯರು, ಸಾಮಾನ್ಯ ಸಭೆ ನಡೆಸುವ ಮುನ್ನ ಸ್ಥಾಯಿ ಸಮಿತಿಗಳ ಸಭೆ ನಡೆಸಿ, ವಾರ್ಡಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದು,ಸಾಮಾನ್ಯ ಸಭೆಯಲ್ಲಿ ಮಂಡಿಸಬೇಕು ಆದರೆ ಇದುವರೆಗೂ ಸ್ಥಾಯಿ ಸಮಿತಿ ಸಭೆ ನಡೆಸಿಲ್ಲ, ಇದರ ಬಗ್ಗೆ ನೀವಾದರೂ ತಿಳಿಸಬಾರದ ಎಂದು ಗ್ರಾಂ ಪಂ ಪಿಡಿಒ ಅವರನ್ನು ಆಗ್ರಹಿಸಿದರು. ಸಾರ್ವಜನಿಕರ ತೆರಿಗೆ ಹಣವನ್ನು ಹೆಚ್ಚು ವೆಚ್ಚ ಮಾಡುತ್ತಿದ್ದಾರೆ ಎಂದು ಜನತೆ ಬೈಯುತ್ತಾ ಇದ್ದಾರೆ, ಸದಸ್ಯರು ಹಬ್ಬದ ಸಮಯದಲ್ಲಿ ಕುಡಿಯುವ ನೀರಿನ ಬಗ್ಗೆ ಜಾಗೃತಿ ವಹಿಸಿ ನೀರಿನ ನಿರ್ವಹಣೆಯ ಗುತ್ತಿಗೆದಾರರಿಗೆ ಮಾಹಿತಿ ನೀಡಿ ಸೂಕ್ತ ಕ್ರಮ ಕ್ರಮಕೈಗೊಳ್ಳ ಬೇಕು ಎಂದರು.
ನೂತನವಾಗಿ ನಿರ್ಮಾಣ ಮಾಡುತ್ತಿರುವ ಖಾಸಗಿ ಬಡಾವಣೆಗೆ ರಾಜಕಾಲುವೆ ಮೇಲೆ ರಸ್ತೆ ನಿರ್ಮಾಣ ಮಾಡಿರುವ ಬಗ್ಗೆ ಸಾರ್ವಜನಿಕರು ಗ್ರಾಂ ಪಂ ಆಡಳಿತ ಮಂಡಳಿ ಶಾಮೀಲಾಗಿದೆ ಎಂದು ಆರೋಪಿಸುತ್ತಿದ್ದಾರೆ, ಇದರ ಬಗ್ಗೆ ಸಮಗ್ರ ತನಿಖೆ ನಡೆಸಲು ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಮನವಿ ಮಾಡುತ್ತೇವೆ ಎಂದ ಸದಸ್ಯರುಗಳು ಸಾರ್ವಜನಿಕರಿಗೆ ಹಾಗೂ ಗ್ರಾಂ ಪಂ ಸದಸ್ಯರುಗಳಿಗೆ ಗೌರವ ಕೊಡದ ಗ್ರಾಂಪಂ ಅಧಿಕಾರಿಗಳ ವಿರುದ್ಧ ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು ಎಂದು ಸಭೆಯಲ್ಲಿ ಸದಸ್ಯರುಗಳು ಮಾತನಾಡಿದರು.
ಗ್ರಾಂ ಪಂ ಅಧ್ಯಕ್ಷೆ ಫಾತಿಮಾ ಉನ್ನೀಸ್, ಉಪಾಧ್ಯಕ್ಷೆ ಶಶಿಕಲಾ ಶಿವರಾಜ್, ಸದಸ್ಯರಾದ ಸುಧಾರೇವಣ್ಣ, ಲೋಕೇಶ್, ಸಾರಾ ಪ್ರಕಾಶ್, ಹರೀಶ್, ಹೇಮಂ,,ಅನಂತ್, ಅಸ್ಮತಾ ಉನ್ನೀಸ್, ಶೈಲಜಜಗಧೀಶ್, ಶ್ವೇತಾ ಸತೀಶ್, ಶಕೀಲ್, ಗಂಗಾಧರ, ರಾಣಿ ಜಯರಾಂ,ಮಂಜುಳ, ರತ್ನಮ್ಮ, ಬಲರಾಮ,ಪಿಡಿಒ ತಿಲಕ್ ರಾಜ್ ಲೆಕ್ಕ ಸಹಾಯಕ ರವಿ ಸ್ವಾಮಿ, ಸಿಬ್ಬಂದಿಗಳಾದ ಅಬಿ, ಮುರುಗೇಶ್, ಅಕ್ಷಯ್, ಮಧು ಇದ್ದರು.
ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ
-
Mysore6 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State9 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State9 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health9 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan6 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized5 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized11 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State9 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.