Connect with us

Chamarajanagar

ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಭಾಗ ಹಾಗೂ ಯಳಂದೂರು ಪೊಲೀಸ್ ಠಾಣೆಯ ಸಹಯೋಗದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Published

on

ಯಳಂದೂರು ಪಟ್ಟಣದ ಶ್ರೀ ವೈ ಎಂ ಮಲ್ಲಿಕಾರ್ಜುನ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಳಂದೂರು ಇಲ್ಲಿ ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಭಾಗ ಹಾಗೂ ಯಳಂದೂರು ಪೊಲೀಸ್ ಠಾಣೆಯ ಸಹಯೋಗದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಯಳಂದೂರು ವಿಭಾಗದ ಸಬ್ ಇನ್ಸ್ಪೆಕ್ಟರ್ ಶ್ರೀ ಚಂದ್ರಹಾಸ ನಾಯಕ್ ರವರು ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕುರಿತು ವಿಶೇಷ ಉಪನ್ಯಾಸ ನೀಡಿದರು. ದುರ್ಘಟನೆ ನಡೆಯುವ ಮೊದಲೇ ಜಾಗರೂಕರಾಗಿರಲು ತಿಳಿಸಿದರು. ಸಾಮಾಜಿಕ ಜವಾಬ್ದಾರಿ ಹಾಗೂ ಮಾನವೀಯತೆಯನ್ನು ಮರೆಯದೆ ಅಪಘಾತಗಳು ನಡೆದ ಸಂದರ್ಭದಲ್ಲಿ ಸಹಾಯಸ್ತ ಚಾಚಿ ಪೊಲೀಸ್ ಠಾಣೆಗೆ ವರದಿ ಮಾಡುವಂತೆ ತಿಳಿಸಿದರು. ಇದರೊಂದಿಗೆ ಸಾಮಾಜಿಕ ಜಾಲತಾಣಗಳ ಕುರಿತು ಎಚ್ಚರಿಕೆಯಿಂದ ಇರುವಂತೆ ಕಿವಿಮಾತು ಹೇಳಿದರು.

ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ರಾದ ಶ್ರೀಯುತ ಮಲ್ಲಿಕಾರ್ಜುನ ರವರು ವಿದ್ಯಾರ್ಥಿಗಳು ಓದಿನ ಜೊತೆಗೆ ಕಾನೂನು ಮಾಹಿತಿಯನ್ನು ತಿಳಿದುಕೊಂಡಿರುವುದು ಅವಶ್ಯಕ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಶ್ರೀ ವಿಜಯ ರವರು ಉತ್ತಮ ಜೀವನ ನಡೆಸಲು ಹಿರಿಯರ ಮಾರ್ಗದರ್ಶನದ ಜೊತೆಗೆ ಕಾನೂನಿನ ತಿಳುವಳಿಕೆ ಇರಬೇಕಾಗಿರುವುದು ಅಗತ್ಯವೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಶ್ವೇತಾ ಕೆ , ಗಿರಿಜಾ ಎಂ, ಡಾ. ಲಿಖಿತ ಎಸ್ ಅನುರಾಧ, ದಾಕ್ಷಯಣಿ ಬಿ. ವಿ, ಬೋಧಕರು ಮತ್ತು ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

Continue Reading
Click to comment

Leave a Reply

Your email address will not be published. Required fields are marked *

Chamarajanagar

ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ,

Published

on

ಶಾಲೆಯ ಪ್ರಾಂಶುಪಾಲರಾದ ನಂಜುಂಡಯ್ಯ ರವರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ಶಿಕ್ಷಕರ ದಿನಾಚರಣೆ ಮಾಡುವುದು ಎಂದು ಹೇಳಿದರು
ಈ ಸಂದರ್ಭದಲ್ಲಿ ಹಿರಿಯ ಶಿಕ್ಷಕರಾದ ತ್ರಿವೇಣಿ, ಆಶಾ, ರೋಹಿಣಿ, ಪುಟ್ಟರಾಜು, ಮಹೇಶ್, ಮಹೇಶ್ ಕುಮಾರ್, ಹಾಗೂ ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಾಗಿದ್ದ

Continue Reading

Chamarajanagar

ನೂತನ ಅಧ್ಯಕ್ಷರಾಗಿ ಶ್ರೀಮತಿ ಲಕ್ಷ್ಮಿ ಮಲ್ಲು ರವರು ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತಮ್ಮ ಲಿಂಗರಾಜು ಆಯ್ಕೆ

Published

on

ಯಳಂದೂರು ಸೆಪ್ಟೆಂಬರ್ 4

ಯಳಂದೂರು ಪಟ್ಟಣ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಲಕ್ಷ್ಮಿ ಮಲ್ಲು ರವರು ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ ಶ್ರೀಮತಿ ಶಾಂತಮ್ಮ ಲಿಂಗರಾಜು ಆಯ್ಕೆಯಾದರು.

ಇವರಿಬ್ಬರನ್ನು ಹೊರತುಪಡಿಸಿ ಇನ್ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣೆ ಅಧಿಕಾರಿ ಜಯಪ್ರಕಾಶ್ ಅವಿರೋಧ ಆಯ್ಕೆಯನ್ನು ಘೋಷಿಸಿದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಶಾಸಕ ಎ ಆರ್ ಕೃಷ್ಣಮೂರ್ತಿ ಅಭಿನಂದನೆ ತಿಳಿಸಿದರು.

ಯಳಂದೂರು ಪಟ್ಟಣವನ್ನು ಸರ್ವಾಂಗೀಣ ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ನಿಟ್ಟಿನಲ್ಲಿ ಒಗ್ಗಟಾಗಿ ಕೆಲಸ ಮಾಡಲು ಶ್ರಮಿಸಲಾಗುವುದು ಜೊತೆಗೆ ಎಲ್ಲಾ ಸದಸ್ಯರ ಸಹಕಾರ ಪಡೆದುಕೊಂಡು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ಕ್ರಮ ವಹಿಸಲಾಗುವುದು ಎಂದು ನೂತನ ಅಧ್ಯಕ್ಷ ಲಕ್ಷ್ಮಿ ಮಲ್ಲು ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಮಹೇಶ್, ರಂಗನಾಥ್, ರವಿ, ಮಾದೇವ ನಾಯಕ ,ಮಂಜು, ಪ್ರಭಾವತಿ ರಾಜಶೇಖರ್, ಸವಿತಾ ಬಸವರಾಜು, ನಾಮಿನಿ ಸದಸ್ಯರಾದ ಮುನಾವರ್ ಬೇಗ್, ನಿಂಗರಾಜು, ಶ್ರೀಕಂಠ ಸ್ವಾಮಿ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷರಾದ ಎಚ್ ವಿ ಚಂದ್ರು, ಮುಖಂಡರಾದ ಮಲ್ಲು ,ಗುಂಬಳ್ಳಿ ರಾಜಣ್ಣ, ರಾಜಶೇಖರ್
ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರ ಯೋಗೇಶ್ ,ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ವಡಗೆರೆ ದಾಸ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀಮತಿ ಕೇತಮ್ಮ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರುಗಳು ಪದಾಧಿಕಾರಿಗಳು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು..

Continue Reading

Chamarajanagar

ಕೊಳ್ಳೇಗಾಲ ತಾಲ್ಲೂಕಿನ ಮಧುನಹಳ್ಳಿ ಹಾಲು ಉತ್ಪಾದಕರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ.

Published

on

ಮಧುನಹಳ್ಳಿ ಗ್ರಾಮದ ಸಂಘದ ಆವರಣದಲ್ಲಿ ಹಾಲು ಉತ್ಪಾದಕ ಸಹಕಾರ ಸಂಘದ ವತಿಯಿಂದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಕರೆಯಲಾಯಿತು.
ಮೊದಲಿಗೆ ದೀಪ ಬೆಳಗಿಸುವುದರ ಮುಖಾಂತರಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು,
ಇದೇ ಸಂದರ್ಭದಲ್ಲಿ ಮಧುನಹಳ್ಳಿ ಹಾಲು ಉತ್ಪಾದಕರ ಸಂಘದ ಮೂರು ಸದಸ್ಯರು ನಿಧನರಾದ ಹಿನ್ನೆಲೆ ಅವರಿಗೆ ಚಾಮರಾಜನಗರ ಜಿಲ್ಲಾ ಹಾಲು ಉತ್ಪದಕರ ಸಹಕಾರ ಸಂಘಗಳ ಒಕ್ಕೂಟದಿಂದ ಸಹಾಯ ದಾನ ನೀಡಲಾಯಿತು.


ಇದೇ ವೇಳೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಚಾಮುಲ್ ನಿರ್ದೇಶಕರಾದ ನಂಜುಂಡ ಸ್ವಾಮಿ ರವರು ನಮ್ಮ ಮಧುನಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕ ಸಹಕಾರ ಸಂಘ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲು ಹಿಂದಿನ ಕೆಲವು ಹಿರಿಯರು ಕಾರಣ ಹಾಗೂ ನಾನು ಚಾಮುಲ್ ನಿರ್ದೇಶಕ ನಾಗಿ ಆಯ್ಕೆ ಆಗಲು ನಿಮ್ಮೆಲ್ಲ ಸಹಕಾರ ಕಾರಣ, ಎಂದರು.
ಈ ವೇಳೆ ಮದುವನಹಳ್ಳಿ ಹಾಲು ಉತ್ಪಾದಕ ಸಂಘದ ಅಧ್ಯಕ್ಷರಾದ ಸುಂದರ್ ಸ್ವಾಮಿ, ಉಪಾಧ್ಯಕ್ಷರಾದ ಜಡೆ ನಿಂಗಯ್ಯ, ಚಾಮುಲ್ ನ ಉಪ ವ್ಯವಸ್ಥಾಪಕರಾದ ಶರತ್ ಕುಮಾರ್, ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ವಿಸ್ತರಣಾಧಿಕಾರಿಗಳ ಸೋಮಶೇಖರ್, ನಿರ್ದೇಶಕರುಗಳು ಉಪಸ್ಥಿತರಿದ್ದರು.

Continue Reading

Trending

error: Content is protected !!