State
ಅರ್ಹ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬರುವುದು ಶ್ಲಾಘನೀಯ: ಸಭಾಪತಿ ಬಸವರಾಜ ಹೊರಟ್ಟಿ

ಕೆಯುಡಬ್ಲ್ಯೂಜೆ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಕಾರ್ಯಕ್ರಮ
ಬೆಂಗಳೂರು-ಡಿ.1. ಪತ್ರಕರ್ತರು ಸಮಾಜದ ಮತ್ತು ಸರ್ಕಾರದ ಅಂಕು-ಡೊಂಕುಗಳನ್ನು ತಿದ್ದುವವರಾಗಿದ್ದು, ವೃತ್ತಿ ಬದ್ದತೆ ಕಾಪಾಡಿಕೊಳ್ಳಬೇಕು. ಈ ಬಾರಿ
ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬಂದಿರುವುದು ನಿಜಕ್ಕೂ ಶ್ಲಾಘನೀಯ ಎಂದು ವಿಧಾನಪರಿಷತ್ ಸಭಾಧ್ಯಕ್ಷರಾದ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು.
ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು.
ಇಂದಿನ ಸಮಾಜದಲ್ಲಿ ಪತ್ರಕರ್ತರು ದಿಟ್ಟತನದಿಂದ ಕಾರ್ಯ ನಿರ್ವಹಿಸಬೇಕಾದುದು ಅತ್ಯಗತ್ಯ. ಹಾಗಾಗಿ ಸಮರ್ಥರಿಗೆ ಮನ್ನಣೆ ನೀಡಬೇಕಾದುದು ಎಲ್ಲರ ಕರ್ತವ್ಯ ಎಂದು ಅವರು ಹೇಳಿದರು.
ನಾನು ಸದನಕ್ಕೆ ಬಂದ ಹೊಸದರಲ್ಲಿ ಏನೇನು ತಪ್ಪು ಮಾಡಿದೆ ಎನ್ನುವುದನ್ನು ಹಿರಿಯ ಪತ್ರಕರ್ತರೇ ತಿದ್ದಿ ಹೇಳುತ್ತಿದ್ದರು. ಹಾಗಾಗಿ ಬಹಳ ಕಲಿಯಲು ಸಾಧ್ಯವಾಯಿತು. ವೃತ್ತಿಪರವಾಗಿ ಅಷ್ಟು ಪ್ರಭುದ್ಧತೆ ಹೊಂದಿದ ಪತ್ರಕರ್ತರು ಇದ್ದರು. ಈಗ ಆ ಸಂಖ್ಯೆ ಇಳಿಮುಖವಾಗುತ್ತಿದೆ ಎಂದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮಾತನಾಡಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘವು ವೃತ್ತಿ ಭಾಂದವರ ಬಗ್ಗೆ ತೋರುತ್ತಿರುವ ಕಾಳಜಿಯು ನಿಜಕ್ಕೂ ಸ್ತುತ್ಯಾರ್ಹ. ನಿರಂತರ ಕಾರ್ಯಕ್ರಮ ಮೂಲಕ ಕೆಯುಡಬ್ಲ್ಯೂಜೆ ಹೊಸ ಹೆಜ್ಜೆ ಇಟ್ಟಿರುವುದು ವಿಶೇಷ ಎಂದು ಅಭಿನಂದಿಸಿದರು.
ಪತ್ರಿಕಾ ವಿತರಕರನ್ನೂ ಸರ್ಕಾರ ಈ ಬಾರಿ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ.
ಅಪಘಾತದಲ್ಲಿ ಮೃತಪಟ್ಟವರಿಗೆ ಮತ್ತು ಆಸ್ಪತ್ರೆಗೆ ಸೇರಿದವರಿಗೆ ನೆರವು ನೀಡುವ ಯೋಜನೆ ಜಾರಿಗೆ ತರಲಾಗಿದೆ. ವಿತರಕರನ್ನು ಗುರುತಿಸುವ ಕಾರ್ಯವು ಇನ್ನೂ ಮುಂದುವರಿಯಲಿದೆ ಎಂದು ಅವರು ಹೇಳಿದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತರಾದ ಮಾಯಾ ಶರ್ಮಾ
ಮಾತನಾಡಿ, ಪತ್ರಕರ್ತರು ಯಾವ ಪಕ್ಷಕ್ಕೂ ಮತ್ತು ಯಾವ ಪಂಥಕ್ಕೂ ಸೇರಿದವರಲ್ಲ. ಸದಾ ನಿಸ್ಪಕ್ಷಪಾತವಾಗಿ ಕೆಲಸ ಮಾಡುವ ಮೂಲಕ ವೃತ್ತಿ ಬದ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಸುದ್ದಿಮನೆಯ ಹಿರಿಯ ಸುಬ್ಬು ಹೊಲೆಯಾರ್ ಮಾತನಾಡಿ, ವೃತ್ತಿಪರವಾದ ಕೆಯುಡಬ್ಲ್ಯೂಜೆ ಸಂಸ್ಥೆಯಲ್ಲಿ ನನಗೆ ಗೌರವಿಸುತ್ತಿರುವುದು ಅಭಿಮಾನದ ಸಂಗತಿ ಎಂದರು. ಡಾ.ಅಂಬೇಡ್ಕರ್ ಆಶಯಗಳು ಸಂವಿಧಾನಬದ್ದವಾಗಿ ಶೋಷಿತ ಸಮುದಾಯಗಳಿಗೆ ನಿಜ ಅರ್ಥದಲ್ಲಿ ತಲುಪಬೇಕು ಎಂದರು.
ಹಿರಿಯ ಪತ್ರಕರ್ತ ರಫೀಕ್ ಭಂಡಾರಿ, ಪತ್ರಿಕಾ ವಿತರಕರಾದ ಜವರಪ್ಪ ಮೈಸೂರುರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ವಿಧಾನ ಪರಿಷತ್ ಸಭಾಪತಿಗಳ ವಿಶೇಷಾಧಿಕಾರಿ ಡಾ. ಮಹೇಶ್ ವಾಳ್ವೇಕರ್ , ವಿಧಾನಸಭಾಧ್ಯಕ್ಷರ ಮಾಧ್ಯಮ ಸಂಯೋಜಕರಾದ ಜ್ಞಾನಶೇಖರ್ ಅವರನ್ನೂ ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ
ಮಾತನಾಡಿ, ಕಾರ್ಯನಿರತ ಪತ್ರಕರ್ತರ ಸಂಘವು ಸದಾ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಸದಾ ಬದ್ಧವಾಗಿ ಕೆಲಸ ಮಾಡುತ್ತದೆ. ವೃತ್ತಿ ಬಾಂಧವರನ್ನು ಕೆಯುಡಬ್ಲ್ಯೂಜೆ ಅಂಗಳದಲ್ಲಿ ಸನ್ಮಾನಿಸತ್ತಿರುವುದು ಅಭಿಮಾನದ ಸಂಗತಿ ಎಂದರು.
ಸಮಾರಂಭದಲ್ಲಿ ರಾಜ್ಯ ಸಂಘದ ಕಾರ್ಯದರ್ಶಿ ನಿಂಗಪ್ಪ ಚಾವಡಿ,
ಹಿರಿಯ ಪತ್ರಕರ್ತರಾದ ಈಶ್ವರ ದೈತೋಟ, ಶೇಷಚಂದ್ರಿಕಾ, ಡಿ. ಉಮಾಪತಿ, ಪತ್ರಿಕಾ ವಿತರಕರಒಕ್ಕೂಟದ ಅಧ್ಯಕ್ಷ ಶಂಭುಲಿಂಗ, ರಾಜ್ಯ ಸಮಿತಿ ಸದಸ್ಯರಾದ ಎನ್.ರವಿಕುಮಾರ್, ಕೆ.ಆರ್.ದೇವರಾಜ್, ಕೋಲಾರದ ವಿ.ಮುನಿರಾಜು, ನಗರ ಘಟಕದ ಪದಾಧಿಕಾರಿಗಳು, ಹಿರಿಯ ಪತ್ರಕರ್ತೆ ಶಮಂತಾ, ಶಶಿಕಲಾ ಸೇರಿದಂತೆ ಹಿರಿಯ ಪತ್ರಕರ್ತರು ಮತ್ತು ಬೆಂಗಳೂರು ನಗರ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರೂ ಹಾಜಾರಿದ್ದರು.
ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಸ್ವಾಗತಿಸಿದರು, ಕೊನೆಯಲ್ಲಿ ರಾಜ್ಯ ಖಜಾಂಚಿ ವಾಸುದೇವ ಹೊಳ್ಳ ವಂದಿಸಿದರು
State
ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ 4 ಸಾವಿರ ರೂ. ಹಣ ಈ ದಿನ ಜಮವಾಗಲಿದೆ : ಸ್ಟೇಟಸ್ ಚೆಕ್ ಮಾಡುವುದು ಹೇಗೆ?

Gruhalakshmi Scheme Pending Amount Credit Date – ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು ಜಮವಾಗುವ 2000ರೂ. ಹಣವು ಕಳೆದ ಎರಡು ತಿಂಗಳಿನಿಂದ ಪಲಾನುಭವಿಗಳ ಖಾತೆಗೆ ವಿವಿಧ ಕಾರಣಕ್ಕಾಗಿ ಜಮವಾಗಿಲ್ಲ.
ಇದರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮದ ಮುಕಾಂತರ ಪಲಾನುಭವಿಗಳಿಗೆ ಬಾಕಿ ಇರುವ ಎರಡು ಕಂತುಗಳ 4 ಸಾವಿರ ರೂಪಾಯಿ ಹಣವನ್ನು ಶೀಘ್ರದಲ್ಲಿಯೇ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಯಾವಾಗ ಜಮಾವಾಗಲಿದೆ? ಜಮಾವಾದ ಹಣವನ್ನು ಪರಿಶೀಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ..
ಯಾವ ದಿನಾಂಕದಂದು ಜಮವಾಗಲಿದೆ?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ ಪ್ರಕಾರ ಬಾಕಿ ಇರುವ ಎರಡು ಕಂತುಗಳ 4,000ರೂ. ಹಣವನ್ನು ಶೀಘ್ರದಲ್ಲಿಯೆ ಅಂದರೆ ಮಾರ್ಚ್ 31 ರನಂತರ ಖಚಿತವಾಗಿ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಜಮವಾದ ಹಣದ ಸ್ಟೇಟಸ್ ಪರಿಶೀಲಿಸುವುದು ಹೇಗೆ?
ಗೃಹಲಕ್ಷ್ಮಿ ಯೋಜನೆಯ ಬಾಕಿ ಮೊತ್ತ ಜಮವಾದ ಹಣದ ಸ್ಟೇಟಸ್ ನೀವು ನಿಮ್ಮ ಮೊಬೈಲ್ ಮುಕಾಂತರ ಸುಲಭವಾಗಿ DBT ಅಪ್ ಮುಕಾಂತರ ಪರಿಶೀಲಿಕೊಳ್ಳಬಹುದು. ಗೂಗಲ್ ಪ್ಲೇ ಸ್ಟೋರ್ ನಲ್ಲಿ DBT ಆಪ್ ಡೌನ್ಲೋಡ್ ಮಾಡಿ, ನೋಂದಣಿಯಾಗಿ ನಿಮ್ಮ ಆಧಾರ್ ಕಾರ್ಡ್ ಮುಕಾಂತರ ನಿಮ್ಮ ಖಾತೆಗೆ ಜಮವಾಗುವುದರ ಕುರಿತು ಪರಿಶೀಲಿಕೊಳ್ಳಿ. DBT ಆಪ್ ನ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್ ಕೆಳಗಡೆ ನೀಡಲಾಗಿದೆ.
DBT ಆಪ್ ಲಿಂಕ್ – https://play.google.com/store/apps/details?id=com.dbtkarnataka
State
ಮುನಿರತ್ನನನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು: ಕೆ.ಎನ್ ರಾಜಣ್ಣ

ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರು ಡಿಸಿಎಂ ಡಿಕೆಶಿ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.
ಇದಕ್ಕೆಲ್ಲಾ ಡಿ.ಕೆ.ಶಿವಕುಮಾರ್ ಕಾರಣವೇ ಹೊರತು ಬೇರೆ ಯಾರೂ ಅಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಆರೋಪದ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ ಅವರು, ಮುನಿರತ್ನನನ್ನೇ ಮೊದಲು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಯಾಕೆಂದರೆ ಮುನಿರತ್ನ ಮೊದಲೆಲ್ಲಾ ಡಿಕೆಶಿ ಜೊತೆಯಲ್ಲೇ ಇದ್ದರು. ಆದ್ದರಿಂದ ಅವರನ್ನು ಮಂಪರು ಪರೀಕ್ಷೆ ಮಾಡಿಸಿ ಎಂದರು.
State
ಫೋನ್ ಕದ್ದಾಲಿಕೆ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಿಷ್ಟು?

ಬೆಂಗಳೂರು: ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ನಿಜ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಹಕಾರ ಸಚಿವ ಕೆ.ಎನ್.ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ರಾಜೇಂದ್ರ ಅವರ ಫೋನ್ ಕದ್ದಾಲಿಕೆಯಾಗಿದೆ. ಇದೇ ರೀತಿ ಹಲವು ಶಾಸಕರ ಫೋನ್ ಕದ್ದಾಲಿಕೆಯಾಗಿದೆ. ರಾಜಣ್ಣ ಮತ್ತು ರಾಜೇಂದ್ರ ಅವರನ್ನು ಟ್ರ್ಯಾಪ್ ಮಾಡಲು ಕದ್ದಾಲಿಕೆ ಮಾಡಿಸಿದ್ದಾರೆ. ಈ ಬಗ್ಗೆ ನಾನು ಮತ್ತು ಕುಮಾರಸ್ವಾಮಿ ಮೊದಲಿನಿಂದಲೂ ಹೇಳುತ್ತಿದ್ದೇವೆ. ಸುಮಾರು 2 ವರ್ಷಗಳಿಂದಲೂ ಫೋನ್ ಕದ್ದಾಲಿಕೆಯಾಗುತ್ತಿದೆ ಎಂದು ಆರೋಪಿಸಿದರು.
ಇನ್ನು ನಾವು ಧರ್ಮಾಧಾರಿತ ಮೀಸಲಾತಿ ವಿಚಾರಕ್ಕೆ ಹೋರಾಟ ಮಾಡುತ್ತಿದ್ದೇವೆ. ಮೀಸಲಾತಿ ಭೂತವನ್ನು ರಾಜ್ಯದ ಹಿಂದೂಗಳ ಮೇಲೆ ಹೇರುತ್ತಿದ್ದಾರೆ. ಕಾಮಗಾರಿಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲು ಮುಂದಾಗಿದ್ದಾರೆ. ಮಂಗಳೂರಿನಲ್ಲಿ ಈಗಾಗಲೇ ಶೇ.5ರಷ್ಟು ಮುಸ್ಲಿಮರು ಗುತ್ತಿಗೆದಾರರಾಗಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಧರ್ಮಾಧಾರಿತ ಮೀಸಲಾತಿ ಬೇಡ ಎಂದಿದ್ದಾರೆ. ಹೀಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.
-
Mandya8 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan15 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya11 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu13 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Kodagu8 hours ago
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ
-
Mandya10 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Kodagu11 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ
-
Hassan14 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ