Deficiency
ಆನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ
ಸಿದ್ದಾಪುರ : ವಿರಾಜಪೇಟೆ ಅರಣ್ಯ ವಲಯ ಅಮ್ಮತ್ತಿ ಶಾಖೆ ವ್ಯಾಪ್ತಿಯಲ್ಲಿ ಬರುವ ಕಣ್ಣಂಗಾಲ, ಪುಲಿಯೇರಿ, ಗುಹ್ಯ, ಇಂಜಲಗೆರೆ,
ಸಿದ್ದಾಪುರ ಗ್ರಾಮಗಳಲ್ಲಿ ಬೀಡು ಬಿಟ್ಟಿದ್ದ ಆನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗಟ್ಟುವಲ್ಲಿ ಸಫಲರಾದರು.
ಕಾಫಿ ತೋಟಗಳ ಮಾರ್ಗದಲ್ಲಿ ತೆರಳಿದ ಅರಣ್ಯ ಇಲಾಖೆಯ ೨೦ಕ್ಕೂ ಹೆಚ್ಚು ಸಿಬ್ಬಂದಿ ಪುಲಿಯೇರಿ ಗ್ರಾಮಗಳಲ್ಲಿ ಬೀಡು
ಬಿಟ್ಟಿದ್ದ ೨೬ ಆನೆಗಳ ಹಿಂಡನ್ನು ಪಟಾಕಿ ಸಿಡಿಸಿ, ಕಾಡಿಗೆ ಅಟ್ಟಿದರು.
ಈ ಆನೆಗಳು ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿ ಕಾರ್ಮಿಕರು ಹಾಗೂ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದವು. ಆನೆ
ಕಾರ್ಯಾಚರಣೆ ಬಗ್ಗೆ ಮೊದಲೇ ಕಾಪಿ ತೋಟದಲ್ಲಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರು, ಶಾಲಾ ಮಕ್ಕಳು, ಸಾರ್ವಜನಿಕರಲ್ಲಿ
ಜಾಗೃತಿ ಮೂಡಿಸಲಾಗಿತ್ತು.
ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶರಣ ಬಸಪ್ಪ, ವಲಯ ಅರಣ್ಯಾಧಿಕಾರಿ ಕಳ್ಳಿರ ಎಂ.ದೇವಯ್ಯ, ಉಪ
ವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ಆರ್‌ಆರ್‌ಟಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Deficiency
ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಮತ್ತು ಪ್ರತ್ಯಕ್ಷಿತೆ ಕಾರ್ಯಕ್ರಮ
ಸಾಲಿಗ್ರಾಮ : ತೆಂಗಿನ ಬೆಳೆ ಕೀಟ ನಿಯಂತ್ರಣ ತರಬೇತಿ ತೋಟಗಾರಿಕೆ ಇಲಾಖೆ ಹಾಗು ತೋಟಗಾರಿಕೆ ಮಹಾವಿದ್ಯಾಲಯ ಇವರ ಸಹ ಬಾಗಿತ್ವದಲ್ಲಿ ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಮತ್ತು ಪ್ರತ್ಯಕ್ಷಿತೆ ಕಾರ್ಯಕ್ರಮ ವನ್ನು ಮಿರ್ಲೆ ಹೋಬಳಿಯ ಎಲೆಮುದ್ದನಹಳ್ಳಿ ಕೊಪ್ಪಲು ಗ್ರಾಮದ ರೈತ ಪುಟ್ಟಸ್ವಾಮಿಗೌಡ ಅವರ ತೆಂಗಿನತೋಟದಲ್ಲಿ ಅಕ್ಟೋಬರ್ 31 ರ ಮಂಗಳವಾರ ಬೆಳ್ಳಿಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಟಿ. ಎಸ್. ಭಾರತಿ ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಡಿ. ರವಿಶಂಕರ್ ನೆರವೇರಿಸಳಲಿದ್ದು, ಮುಖ್ಯ ಅತಿಥಿಗಳಾಗಿ ತೋಟಗಾರಿಕೆ ಉಪ ನಿರ್ದೇಶಕ ಡಾ: ಮಂಜುನಾಥ್ ಅಂಗಡಿ,ಡಾ : ಸುದರ್ಶನ್, ಡಾ : ಮುತ್ತು ರಾಜ್, ಭಾಗವಹಿಸಲಿದ್ದಾರೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೆಂಗಿನ ಬೆಲೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಪಡೆದುಕೊಳ್ಳುವಂತೆ ಕೊರಿದ್ದಾರೆ.
ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
Deficiency
ಅಧಿಕಾರಿಗಳು ಹಣ ಮಾಡೋದು ಒಂದೇ ದಾರಿಯಲ್ಲ ರೈತರ ಜೊತೆ ಸರಿಯಾಗಿ ನಡೆದುಕೊಳ್ಳಬೇಕು
ಹುಣಸೂರು : ಅಧಿಕಾರಿಗಳು ಹಣ ಮಾಡೋದು ಒಂದೇ ದಾರಿಯಲ್ಲ ರೈತರ ಜೊತೆ ಸರಿಯಾಗಿ ನಡೆದುಕೊಳ್ಳಬೇಕು ಎಂದು ಕೆಲವರು ಆರೋಪಿಸಿದರೆ, ಕೆಲವರು ಸಣ್ಣ ಪುಟ್ಟ ರೈತರ ಮೇಲೆ ನಡೆಯುವ ತೊಂದರೆಗಳನ್ನು ಪ್ರಶ್ನೆಸಿದರೆ ಆ ರೈತರಿಗೆ ಅಧಿಕಾರಿಗಳು ಮಾನಸಿಕವಾಗಿ ತೊಂದರೆ ನೀಡುತ್ತಾರೆ ಆದರೆ ಈಗ ರೈತನಿಗೆ ಶೂ ನಲ್ಲಿ ಹೊಡೆಯಲು ಮುಂದಾಗಿರೋ ಅಧಿಕಾರಿಗೆ ಏನು ಕ್ರಮ ಕೈಗೊಳ್ಳಬೇಕು ಎಂದು ರೈತರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಸಭೆಯಲ್ಲಿ ಹೊರಹಾಕಿದ್ದು ಹೀಗೆ.
ಅವರು ಹುಣಸೂರು ತಾಲೂಕಿನ ಚಿಲ್ಕುಂದ ಗ್ರಾಮದ ತಂಬಾಕು ಮಂಡಳಿಯ ರೈತ ಭವನದಲ್ಲಿ ಪ್ಲಾಟ್ ಫಾರಂ ನಂಬರ್ 62ರ ಹರಾಜು ಅಧೀಕ್ಷಕ ಬ್ರಿಜ್ ಭೂಷಣ್ ವಿರುದ್ಧ ರೈತರು ಸೋಮವಾರ ಸಭೆ ಸೇರಿ ಚರ್ಚಿಸಿ ನಿರ್ಣಯ ಕೈಗೊಂಡು ತಂಬಾಕು ಮಂಡಳಿಯ ಅಧಿಕಾರಿ ಒಬ್ಬ ತಂಬಾಕು ರೈತನಿಗೆ ಶೂ ನಿಂದ ಹೊಡೆಯಲು ಮುಂದಾಗಿರುವುದು ರೈತ ಕುಲಕ್ಕೆ ಅವಮಾನ ಆ ಅಧಿಕಾರಿಯನ್ನು ಕರ್ನಾಟಕ ರಾಜ್ಯದಿಂದ ವರ್ಗಾವಣೆ ಮಾಡಬೇಕು, ಹಾಗೂ ಆತ ಸಭೆಯಲ್ಲಿ ಕ್ಷಮೆ ಕೇಳಬೇಕು ಜೊತೆಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳು ವಿಚಾರಣೆ ಕೈಗೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನ ಕೈಗೊಂಡು ಈ ನಿರ್ಣಯವನ್ನು ಸಭೆಯಲ್ಲಿ ಸರ್ವ ಸದಸ್ಯರಿಂದ ಒಪ್ಪಿಗೆ ಪಡೆದ ಗೊಬ್ಬರ ಕಮಿಟಿಯ ಅಧ್ಯಕ್ಷ ಅಣ್ಣೂರು ಕಾಳೇಗೌಡ ಈ ನಿರ್ಣಯವನ್ನು ಓದಿ ತಿಳಿಸಿದರು.
ಈ ನಿರ್ಣಯದ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಲು ಆರ್.ಎಂ. ಓ ಲಕ್ಷ್ಮಣ್ ರಾವ್ ರವರಿಗೆ ನೀಡಿದರು. ಕಾರ್ಯಕ್ರಮದಲ್ಲಿ ತಂಬಾಕು ಮಂಡಳಿಯ ಉಪಾಧ್ಯಕ್ಷ ಬಸವರಾಜಪ್ಪ, ಸದಸ್ಯರಾದ ವಿಕ್ರಂ ಗೌಡ ,ದಿನೇಶ್ , ಗೊಬ್ಬರ ಕಮಿಟಿಯ ಉಪಾಧ್ಯಕ್ಷ ಮಂಜುನಾಥ್ ಕೆರೆಗೋಡು, ಕಾರ್ಯದರ್ಶಿ ಮರಿಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಡಿಎಸ್ಎಸ್ ಸಂಚಾಲಕ ರಾಮಕೃಷ್ಣ ಅತ್ತಿಕುಪ್ಪೆ, ಪ್ರಭಾಕರ್, ಮೋದೂರು ಶಿವಣ್ಣ, ದೇವರಾಜ್, ಉಂಡವಾಡಿ ಚಂದ್ರೇಗೌಡ, ರವಿಕುಮಾರ್, ನವೀನ್, ಅಗ್ರಹಾರ ರಾಮೇಗೌಡ ಸೇರಿದಂತೆ ಸಾವಿರಾರು ರೈತರು ಭಾಗವಹಿಸಿದ್ದರು.
Chikmagalur
ಧಾರಾಕಾರ ಮಳೆಗೆ ಎರಡು ಮನೆಗಳಿಗೆ ಹಾನಿ
ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ಪಶ್ಚಿಮ ಘಟಕ್ಕೆ ಹೊಂದಿಕೊಂಡಂತೆ ಇರುವ ಮಲೆನಾಡಿನ ಪ್ರದೇಶಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮೂಡಿಗೆರೆ ತಾಲೂಕಿನಲ್ಲಿ ಎರಡು ಮನೆಗಳು ಕುಸಿದಿವೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಚಿನ್ನಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣಜೂರು ಗ್ರಾಮದಲ್ಲಿ ದಿನೇಶ್ ಎಂಬುವವರು ಮನೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಕುಸಿದಿದೆ. ಹಾಗೆಯೇ ಬಾಳೂರು ಹೋಬಳಿ ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗೂರು ಗ್ರಾಮದಲ್ಲಿ ಮನೆಯೊಂದು ಕುಸಿದಿದೆ.
ಮೇಗೂರು ಗ್ರಾಮದ ರಾಮಯ್ಯ ಎಂಬುವವರ ಮನೆ ಮಳೆಯಿಂದಾಗಿ ಕುಸಿದು ಬಿದ್ದಿದೆ. ಮನೆಯ ಗೋಡೆ ಮತ್ತು ಮೇಲ್ಚಾವಣಿ ಬಹುತೇಕ ಕುಸಿದು ಬಿದ್ದಿದೆ. ಈ ಸಮಯದಲ್ಲಿ ಮನೆಯವರು ಒಳಗಡೆಯೇ ಇದ್ದರು ಎಂದು ತಿಳಿದುಬಂದಿದ್ದು. ಮನೆಯವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಕಂದಾಯ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅವರ ಮನೆಗೆ ತಾತ್ಕಾಲಿಕ ರಕ್ಷಣೆಗಾಗಿ ಟಾರ್ಪಲ್ ಹೊದಿಸಲು ವ್ಯವಸ್ಥೆ ಮಾಡಿದ್ದು. ಕುಟುಂಬದವರನ್ನು ಪಕ್ಕದ ಮನೆಗೆ ಸ್ಥಳಾಂತರಿಸಲಾಗಿದೆ.
-
Mysore4 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State7 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State7 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health7 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan4 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized3 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized9 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State7 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.