Connect with us

Mysore

ಆಯುರ್ವೇದವು ಅನೇಕ ರೋಗಗಳನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ – ಶಾಸಕ ಜಿ.ಟಿ.ದೇವೇಗೌಡ

Published

on

ಮೈಸೂರು : ಆಯುರ್ವೇದವು ಭಾರತದ ವೈದ್ಯ ಪದ್ದತಿಯಾಗಿದ್ದು, ಇಂದು ವಿಶ್ವಮನ್ನಣೆಯನ್ನು ಪಡೆದುಕೊಂಡಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.

ಅವರು ಇಂದು ಆಯುಷ್ ಇಲಾಖೆಯು ಚಾಮುಂಡೇಶ್ವರಿ ಕ್ಷೇತ್ರದ ಲಿಂಗಾಂಬುದಿಪಾಳ್ಯ ಗ್ರಾಮದಲ್ಲಿ ಏರ್ಪಡಿಸಿದ್ದ “ಆಯುಷ್ ಸೇವಾ ಗ್ರಾಮ ಎಂಬ ವಿಶಿಷ್ಠ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಆರ್ಯುದೇವದಕ್ಕೆ ತನ್ನದೆ ಆದ ವಿಶೇಷ ಶಕ್ತಿ ಇದೆ. ಪುರಾತನ ಕಾಲದಲ್ಲಿ ಆರ್ಯುವೇದ ಬಳಸಿಕೊಂಡು ಚಿಕಿತ್ಸೆ ಪಡೆದು ಸಾಧ್ಯ ಇಲ್ಲ ಎಂಬುದನ್ನು ಸಾಧಿಸಿರುವ ಕೀರ್ತಿ ಆಯುರ್ವೇದಕ್ಕೆ ಇದೆ ಎಂದರು.
ಆರ್ಯುವೇದವು ನಮ್ಮ ದೇಹದ ಪಂಚೇಂದ್ರಿಯಗಳನ್ನು ನಿಯಂತ್ರಿಸುತ್ತದೆ.

ಆರ್ಯುವೇದವನ್ನು ನಾವು ಚಿಕಿತ್ಸೆಗಿಂತ ಮುಖ್ಯವಾಗಿ ಬದುಕಿನ ಭಾಗ ಎಂಬುದಾಗಿ ಪರಿಗಣಿಸಬೇಕಾಗಿದೆ.

ಮುಂದಿನ ಪೀಳಿಗೆಗೆ ಈ ಪದ್ದತಿಯನ್ನು ತಲುಪಿಸುವ ಕಾರ್ಯ ಮಾಡಬೇಕು. ಆರ್ಯುವೇದ ಪದ್ದತಿಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅದರ ನಿಯಮಗಳನ್ನು ಬದುಕಿನಲ್ಲಿ ಪಾಲಿಸಬೇಕು. ಇದರಿಂದ ಆತ್ಮಸ್ಥೆöÊರ್ಯ ವೃದ್ಧಿಯಾಗಿ ಗುಣಾತ್ಮಕ ಯೋಚನೆ ಮೂಡುತ್ತದೆ ಎಂದರು.

ಆಯುರ್ವೇದವು ಅನೇಕ ರೋಗಗಳನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ , ಆಯುರ್ವೇದದ ಮೂಲಕ ಅನೇಕ ರೋಗಗಳನ್ನು ಗುಣಪಡಿಸುವ ಪದ್ಧತಿ ಯುಗ ಯುಗದಿಂದಲೂ ಇದೆ. ಈ ಪದ್ಧತಿ ಮನಸ್ಸು ಮತ್ತು ದೇಹ ಎರಡನ್ನೂ ಗುಣಪಡಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಆದರೆ ಆಯುರ್ವೇದ ಪದ್ಧತಿ ತಲೆಮಾರುಗಳಿಂದ ಇದ್ದರೂ, ಕೊರೊನಾ ವಕ್ಕರಿಸಿದ ಮೇಲೆ ಸಾಕಷ್ಟು ಜನಪ್ರಿಯವಾಗಿದೆ. ಆದರೆ ಅರಿವು ಮತ್ತು ಜ್ಞಾನದ ಕೊರತೆಯಿಂದ ಆಯುರ್ವೇದದ ಬಗ್ಗೆ ಕೆಲವು ತಪ್ಪುಗ್ರಹಿಕೆಗಳಿವೆ. ಆದ್ದರಿಂದ ಆಯುರ್ವೇದ ಬಗ್ಗೆ ನಾವು ತಿಳಿದುಕೊಳ್ಳಬೇಕು ಈ ನಿಟ್ಟಿನಲ್ಲಿ ಆಯುಷ್ ಇಲಾಖೆ ಕೈಗೊಂಡಿರುವ ಈ ಕಾರ್ಯಕ್ರಮ ಶ್ಲಾಘನೀಯ.


ಇಂದಿನ ಹೈಪರ್ ಟೆನ್ಷನ್ ಪ್ರಪಂಚದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಈ ನಿಟ್ಟಿನಲ್ಲಿ ಪ್ರತಿ ನಿತ್ಯ ಯೋಗ, ಧ್ಯಾನಗಳನ್ನು ಮಾಡಬೇಕು.
ಹಣ -ಆಸ್ತಿ ಸಂಪಾದನೆ, ಉಳಿತಾಯ ಮುಂತಾದ ವಿಚಾರಗಳತ್ತ ಗಮನ ಹರಿಸುವಂತೆಯೇ, ಆರೋಗ್ಯದತ್ತಲೂ ಗಮನ ಹರಿಸುವುದರಿಂದ, ಆರ್ಥಿಕ ಸಮಸ್ಯೆಗಳೂ ಪರಿಹಾರ ಕಾಣುತ್ತವೆ. ಭಾರತದ ಪಾರಂಪರಿಕ ಆಯುರ್ವೇದ ಚಿಕಿತ್ಸೆ ಪಡೆದುಕೊಳ್ಳುವುದರಿಂದ, ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ಜೊತೆಗೆ, ದೇಹ- ಮನಸ್ಸೂ ಸುಸ್ಥಿತಿಯಲ್ಲಿರುತ್ತದೆ. ಪ್ರಾಕೃತಿಕ ಆರೋಗ್ಯ ವನ್ನು ದಯಪಾಲಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ , ಗ್ರಾಮದ ಮುಖಂಡರಾದ ದೇವಯ್ಯ, ಯೋಗೇಶ್, ಬಂಗಾರಪ್ಪ ರಾಮಣ್ಣ, ಲಕ್ಷ್ಮಯ್ಯ, ದಾಸಯ್ಯ, ಮಲ್ಲಯ್ಯ, ಯಶೋಧ, ಪುಟ್ಟಯ್ಯ, ರಾಮಸ್ವಾಮಿ, ಕೃಷ್ಣಪ್ಪ, ಸೇರಿದಂತೆ ಹಲವಾರು ಮುಖಂಡರು ಭಾಗವಹಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mysore

ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

Published

on

ನಂಜನಗೂಡು : ಇಂದು ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುವ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದ ಕಟ್ಟಡ ಕಾಮಗಾರಿಗೆ 15 ಲಕ್ಷ ರೂ ವೆಚ್ಚದಲ್ಲಿ ನಂಜನಗೂಡು ಕ್ಷೇತ್ರದ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಶಾಸಕರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಸಮುದಾಯ ಭವನಗಳ ಅವಶ್ಯಕತೆ ಇರುವ ಉದ್ದೇಶದಿಂದ ಕ್ಷೇತ್ರದ ಗ್ರಾಮೀಣ ಭಾಗದಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.

ನನ್ನ ತಂದೆ ದಿ.ಆರ್ ಧ್ರುವನಾರಾಯಣ್ ಅವರ ಆಡಳಿತ ಅವಧಿಯಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಿಗೂ ಸರ್ವ ಜನಾಂಗದ ಎಲ್ಲ ವರ್ಗದವರಿಗೂ ಸಮುದಾಯ ಭವನ ನಿರ್ಮಿಸಲಾಗಿದೆ ಅವರ ಹಾದಿಯಲ್ಲೇ ನಾನು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದೆನೆ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣವಾಗುತ್ತಿದ್ದು ಇದನ್ನು ಕೆಟ್ಟ ಚಟಗಳಿಗೆ ಬಳಸದೆ ಒಳ್ಳೆಯ ಕೆಲಸಕ್ಕೆ ಉಪಯೋಗಿಸುವ ನಿಟ್ಟಿನಲ್ಲಿ ಕಾಮಗಾರಿಯನ್ನು ಗುಣಮಟ್ಟದವಾಗಿ ಮಾಡಲು ಎಲ್ಲರೂ ಸಹಕಾರ ನೀಡಬೇಕು.

ನಾನು ಶಾಸಕನಾಗಿ ಕ್ಷೇತ್ರವನ್ನು ಪ್ರವಾಸ ಕೈಗೊಂಡ ಸಂದರ್ಭದಲ್ಲಿ ನೀಡಿದ ವೇಳೆ ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪಟ್ಟಿ ಮಾಡಲಾಗಿದೆ ಹೀಗಾಗಿ ಆದ್ಯತೆ ಮೇರೆಗೆ ಅನುದಾನ ತಂದು ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಾ ಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್,ಗ್ಯಾರಂಟಿ ಯೋಜನೆಯ ತಾಲ್ಲೂಕು ಅದ್ಯಕ್ಷ ಕೆ ಮಾರುತಿ, ಹುಲ್ಲಹಳ್ಳಿ ಬ್ಲಾಕ್ ಅದ್ಯಕ್ಷ ಶ್ರೀಕಂಠನಾಯಕ, ಗ್ರಾ ಪಂ ಅದ್ಯಕ್ಷೆ ದೇವಮ್ಮ,ಗ್ರಾ ಪಂ ಸದಸ್ಯ ಪಾಪ,ಶಿವಕುಮಾರ್,ಎಇ ಶರಣ್, ಇಂಜಿನೀಯರ್ ಕಾವ್ಯ,ಪುರುಷೋತ್ತಮ್, ಮುಖಂಡರುಗಳಾದ ಮಹದೇವಯ್ಯ,ಚೆಲುವಯ್ಯ,ದುಂಡಯ್ಯ,ವೆಂಕಟರಾಜು,ಸೇರಿದಂತೆ ಪ್ರಮುಖರು ಹಾಜರಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading

Hassan

ಚನ್ನಪಟ್ಟಣ – ರಾಮನಗರ ನಡುವೆ ಕೈಗಾರಿಕೆ : ಸ್ಥಳೀಯರಿಗೆ ಉದ್ಯೋಗಕ್ಕೆ ಒತ್ತು: ಹೆಚ್ ಡಿ ಕೆ ಭರವಸೆ

Published

on

ಚನ್ನಪಟ್ಟಣ ಕ್ಷೇತ್ರದಲ್ಲಿ ಕೇಂದ್ರ ಸಚಿವರ ಪ್ರಚಾರ

ನಿಖಿಲ್ ಒಳ್ಳೆಯ ನಾಯಕರಾಗುತ್ತಾರೆ, ಅದಕ್ಕೆ ಚನ್ನಪಟ್ಟಣ ಜನರೇ ನಾಂದಿ ಹಾಡಲಿ ಎಂದ ಯದುವೀರ್ ಅವರು

ಚನ್ನಪಟ್ಟಣ/ರಾಮನಗರ: ಕಾಂಗ್ರೆಸ್ ನಾಯಕರು ನನ್ನನ್ನು ನಿಂದನೆ ಮಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ನಾನು ಅಭಿವೃದ್ದಿ ವಿಚಾರ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದೇನೆ. ಅವರಿಗೂ ನನಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಕೇಂದ್ರ ಸಚಿವರಾದ HD ಕುಮಾರಸ್ವಾಮಿ ಅವರು ಹೇಳಿದರು.

ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಚನ್ನಪಟ್ಟಣ – ರಾಮನಗರ ನಡುವೆ ಬೃಹತ್ ಕೈಗಾರಿಕೆ ಒಂದನ್ನು ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಭರವಸೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲೆ ನಂಬಿಕೆ ಇರಿಸಿ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆಗಳನ್ನು ನೀಡಿದ್ದಾರೆ. ಎರಡೂ ಮಹತ್ವದ ಖಾತೆಗಳಾಗಿದ್ದು, ದೇವರ ಅನುಗ್ರಹ ಜನರ ಆಶೀರ್ವಾದದಿಂದ ಸಿಕ್ಕಿರುವ ಈ ಅವಕಾಶದಿಂದ ರಾಮನಗರ ಜಿಲ್ಲೆಯ ಜನರಿಗೆ ಏನಾದರೂ ಒಳ್ಳೆಯದು ಮಾಡುತ್ತೇನೆ ಎಂದು ಅವರು ಒತ್ತಿ ಹೇಳಿದರು.

ನಾವು ಟಿಕೆಟ್ ಕೊಡುತ್ತೇವೆ ಎಂದೆವು. ಬಿಜೆಪಿ ಕೂಡ ಟಿಕೆಟ್ ಕೊಡಲು ಮುಂದಾಗಿತ್ತು. ಬಿಜೆಪಿ ವರಿಷ್ಠ ನಾಯಕರ ಮಾತಿಗೆ ತಲೆಬಾಗಿ ನಾವು ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧಾರ ಮಾಡಿದ್ದೆವು. ಆದರೆ, ಎಲ್ಲರ ಮಾತನ್ನು ಧಿಕ್ಕರಿಸಿ, ಕಾಲಿನಲ್ಲಿ ಒದ್ದು ಅವರು ಕಾಂಗ್ರೆಸ್ ಸೇರಿಕೊಂಡರು. ಈಗ ನೋಡಿದರೆ ಹಾದಿಬೀದಿಯಲ್ಲಿ ಸುಳ್ಳು ಪ್ರಚಾರ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ದೂರಿದರು.

ನನ್ನ ಬಗ್ಗೆ, ನನ್ನ ತಂದೆಯ ಬಗ್ಗೆ ಬಹಳ ಕೀಳುಮಟ್ಟದ ಭಾಷೆ ಬಳಕೆ ಮಾಡಿಕೊಂಡು ಟೀಕೆ ಮಾಡುತ್ತಿದ್ದಾರೆ. ಅವರ ಪದ ಬಳಕೆಯ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಚನ್ನಪಟ್ಟಣ ಜನರೇ ತೀರ್ಪು ಕೊಡುತ್ತಾರೆ ಎಂದು ಅವರು ಹೇಳಿದರು.

ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣದಲ್ಲಿ ಎಷ್ಟು ಕೆರೆಗಳು ಇವೆ ಎಂಬುದೇ ಗೊತ್ತಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಹೇಳಿದ್ದಾರೆ. ಆದರೆ, ನಾನು ಏನು ಮಾಡಿದ್ದೇನೆ ಎಂಬುದು ಹಳ್ಳಿಗಳಿಗೆ ಹೋಗಿ ನೋಡಿದರೆ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದರು ಕುಮಾರಸ್ವಾಮಿ ಅವರು.

ನಿವೇಶನಗಳನ್ನು ಮಾಡಿಕೊಳ್ಳಬೇಡಿ

ಕೂಡ್ಲೂರು ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ನಿಮಗೆ ನೀಡಲಾಗಿರುವ ನಿವೇಶನಗಳನ್ನು ಹಾಗೆಯೇ ಇಟ್ಟುಕೊಳ್ಳಿ. ಉಳಿದ ಗ್ರಾಮಸ್ಥರಿಗೂ ಹಕ್ಕುಪತ್ರ ಕೊಡಿಸಲಾಗುವುದು. ಮನೆಗಳನ್ನು ಕಟ್ಟಿಕೊಳ್ಳಲು ಸರ್ಕಾರದಿಂದ ನೆರವು ಕೊಡಿಸಲಾಗುವುದು ಎಂದು ಕೇಂದ್ರ ಸಚಿವರು ಭರವಸೆ ನೀಡಿದರು.

ಕೇಂದ್ರ ಸಚಿವರ ಜತೆ ಯದುವೀರ್

ಚನ್ನಪಟ್ಟಣದಲ್ಲಿ ನಡೆದ ಪ್ರಚಾರದಲ್ಲಿ ಮೈಸೂರು ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್ ಅವರು ಸಾಥ್ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ವೇಗವಾಗಿ ಅಭಿವೃದ್ದಿ ಹೊಂದುತ್ತಿದೆ. ಅವರ ಸಂಪುಟದಲ್ಲಿ ಕುಮಾರಸ್ವಾಮಿ ಅವರು ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಅಧಿಕಾರಕ್ಕೆ ಬಂದಾಗಿನಿಂದ ಹಗರಣಗಳಲ್ಲಿಯೇ ಮುಳುಗಿದೆ. ಅದರಲ್ಲಿ ಮೂಡಾ ಹಗರಣದ ವಿರುದ್ಧ ಬೆಂಗಳೂರಿನಿಂದ ಮೈಸೂರುವರೆಗೂ ನಡೆದ ಪಾದಯಾತ್ರೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರೂ ಪ್ರಮುಖ ಪಾತ್ರ ವಹಿಸಿದ್ದರು. ಅವರಿಗೆ ಮುಂದೆ ಒಳ್ಳೆಯ ನಾಯಕನಾಗಿ ಬೆಳೆಯುವ ಎಲ್ಲಾ ಅವಕಾಶಗಳು ಇವೆ. ಅಂತಹ ಅವಕಾಶಕ್ಕೆ ಚನ್ನಪಟ್ಟಣದ ಜನರೇ ನಾಂದಿ ಹಾಡಬೇಕು ಎಂದು ಒಡೆಯರ್ ಅವರು ಹೇಳಿದರು.

ಇದಕ್ಕೂ ಮೊದಲು ಕೇಂದ್ರ ಸಚಿವರು ಯದುವೀರ್ ಅವರೊಂದಿಗೆ ಪಕ್ಷದ ಹಿರಿಯ ಮುಖಂಡ ಟಿ.ಪಿ.ಪುಟ್ಟಸಿದ್ದೇಗೌಡ ಅವರ ಮನೆಗೆ ಭೇಟಿ ನೀಡಿದ್ದರು

Continue Reading

Mysore

ಸಾಮಾನ್ಯ ಸಭೆ, ಸದಸ್ಯರಿಂದ ದೂರಿನ ಸುರಿಮಳೆ

Published

on

ಸಾಲಿಗ್ರಾಮ  : ಸ್ಥಾಯಿ ಸಮಿತಿ ಸಭೆ ಕರೆಯದ ಅಧ್ಯಕ್ಷರು ಹತ್ತು ಸಾವಿರಕ್ಕೂ ಹೆಚ್ಚು ವೆಚ್ಚ ಮಾಡಲು ಸಭೆಯ ಅನುಮತಿ ಪಡೆಯದ ಅಧಿಕಾರಿಗಳು, ರಾಜಕಾಲುವೆ ಮೇಲೆ ರಸ್ತೆ ನಿರ್ಮಾಣ ಮಾಡಿ ಖಾಸಗಿ ಬಡಾವಣೆ ನಿರ್ಮಾಣ ಮಾಡಿರುವ ಬಗ್ಗೆ ಸಿಇಒ ಅವರಿಂದ ತನಿಖೆಗೆ ಆಗ್ರಹಿಸಿದ ಗ್ರಾಂ ಪಂ ಸದಸ್ಯರುಗಳು. ಸಾಲಿಗ್ರಾಮ ಗ್ರಾಂ ಪಂ ಅಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗ್ರಾಂ ಪಂ ಸದಸ್ಯರುಗಳು ದೂರಿನ ಸುರಿಮಳೆಯನ್ನೇ ಸುರಿಸಿದರು.


ಗ್ರಾಂ ಪಂ ಅಧ್ಯಕ್ಷೆ ಫಾತಿಮಾ ಉನ್ನೀಸ್ ಅವರು ಎರಡನೇ ಅವಧಿಯಲ್ಲಿ ಸ್ಥಾಯಿ ಸಮಿತಿ ಸಭೆ ನಡೆಸದ ಬಗ್ಗೆ ತೀರ್ವ ಅಸಮಾಧಾನ ವ್ಯಕ್ತಪಡಿಸಿದ ಸದಸ್ಯರು, ಸಾಮಾನ್ಯ ಸಭೆ ನಡೆಸುವ ಮುನ್ನ ಸ್ಥಾಯಿ ಸಮಿತಿಗಳ ಸಭೆ ನಡೆಸಿ, ವಾರ್ಡಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದು,ಸಾಮಾನ್ಯ ಸಭೆಯಲ್ಲಿ ಮಂಡಿಸಬೇಕು ಆದರೆ ಇದುವರೆಗೂ ಸ್ಥಾಯಿ ಸಮಿತಿ ಸಭೆ ನಡೆಸಿಲ್ಲ, ಇದರ ಬಗ್ಗೆ ನೀವಾದರೂ ತಿಳಿಸಬಾರದ ಎಂದು ಗ್ರಾಂ ಪಂ ಪಿಡಿಒ ಅವರನ್ನು ಆಗ್ರಹಿಸಿದರು. ಸಾರ್ವಜನಿಕರ ತೆರಿಗೆ ಹಣವನ್ನು ಹೆಚ್ಚು ವೆಚ್ಚ ಮಾಡುತ್ತಿದ್ದಾರೆ ಎಂದು ಜನತೆ ಬೈಯುತ್ತಾ ಇದ್ದಾರೆ, ಸದಸ್ಯರು ಹಬ್ಬದ ಸಮಯದಲ್ಲಿ ಕುಡಿಯುವ ನೀರಿನ ಬಗ್ಗೆ ಜಾಗೃತಿ ವಹಿಸಿ ನೀರಿನ ನಿರ್ವಹಣೆಯ ಗುತ್ತಿಗೆದಾರರಿಗೆ ಮಾಹಿತಿ ನೀಡಿ ಸೂಕ್ತ ಕ್ರಮ ಕ್ರಮಕೈಗೊಳ್ಳ ಬೇಕು ಎಂದರು.


ನೂತನವಾಗಿ ನಿರ್ಮಾಣ ಮಾಡುತ್ತಿರುವ ಖಾಸಗಿ ಬಡಾವಣೆಗೆ ರಾಜಕಾಲುವೆ ಮೇಲೆ ರಸ್ತೆ ನಿರ್ಮಾಣ ಮಾಡಿರುವ ಬಗ್ಗೆ ಸಾರ್ವಜನಿಕರು ಗ್ರಾಂ ಪಂ ಆಡಳಿತ ಮಂಡಳಿ ಶಾಮೀಲಾಗಿದೆ ಎಂದು ಆರೋಪಿಸುತ್ತಿದ್ದಾರೆ, ಇದರ ಬಗ್ಗೆ ಸಮಗ್ರ ತನಿಖೆ ನಡೆಸಲು ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಮನವಿ ಮಾಡುತ್ತೇವೆ ಎಂದ ಸದಸ್ಯರುಗಳು ಸಾರ್ವಜನಿಕರಿಗೆ ಹಾಗೂ ಗ್ರಾಂ ಪಂ ಸದಸ್ಯರುಗಳಿಗೆ ಗೌರವ ಕೊಡದ ಗ್ರಾಂಪಂ ಅಧಿಕಾರಿಗಳ ವಿರುದ್ಧ ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು ಎಂದು ಸಭೆಯಲ್ಲಿ ಸದಸ್ಯರುಗಳು ಮಾತನಾಡಿದರು.


ಗ್ರಾಂ ಪಂ ಅಧ್ಯಕ್ಷೆ ಫಾತಿಮಾ ಉನ್ನೀಸ್, ಉಪಾಧ್ಯಕ್ಷೆ ಶಶಿಕಲಾ ಶಿವರಾಜ್, ಸದಸ್ಯರಾದ ಸುಧಾರೇವಣ್ಣ, ಲೋಕೇಶ್, ಸಾರಾ  ಪ್ರಕಾಶ್, ಹರೀಶ್, ಹೇಮಂ,,ಅನಂತ್, ಅಸ್ಮತಾ ಉನ್ನೀಸ್, ಶೈಲಜಜಗಧೀಶ್, ಶ್ವೇತಾ ಸತೀಶ್, ಶಕೀಲ್, ಗಂಗಾಧರ, ರಾಣಿ ಜಯರಾಂ,ಮಂಜುಳ, ರತ್ನಮ್ಮ, ಬಲರಾಮ,ಪಿಡಿಒ ತಿಲಕ್ ರಾಜ್   ಲೆಕ್ಕ ಸಹಾಯಕ ರವಿ ಸ್ವಾಮಿ, ಸಿಬ್ಬಂದಿಗಳಾದ ಅಬಿ, ಮುರುಗೇಶ್, ಅಕ್ಷಯ್, ಮಧು ಇದ್ದರು.

ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ

Continue Reading

Trending

error: Content is protected !!