Connect with us

Mysore

ಎರಡನೇ ಕಾಶಿ ಸಾಲಿಗ್ರಾಮ ಮತ್ತು ಚುಂಚನಕಟ್ಟೆ,  ವೈಕುಂಠ ಏಕಾದಶಿ ನೂರಾರು ಭಕ್ತರ ಆಗಮನ    

Published

on

ಸಾಲಿಗ್ರಾಮವು ಎರಡನೇ  ಕಾಶಿಗೆ  ಹೆಸರು ಪಡೆದಿರುವ ಹಿನ್ನಲೆಯಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಸಾಲಿಗ್ರಾಮದ    ಶ್ರೀ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದಲೇ ಅಭಿಷೇಕ ಮಾಡಿ ವಿವಿಧ ಬಗೆಯ ಹೂ ಮಾಲೆಗಳಿಂದ   ಅಲಂಕರಿಸಿ, ವಿವಿಧ ಧಾರ್ಮಿಕ ಕಾರ್ಯಗಳನ್ನು ನಡೆಸಿದರು.

ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ತಮ್ಮ ಇಷ್ಟಾರ್ಥಗಳು ನೆರವೇರಲಿ ಎಂದು ಬೇಡಿಕೊಂಡು ಪ್ರಸಾದ ಸ್ವೀಕರಿಸಿದರು.

ಇತಿಹಾಸ ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಚುಂಚನಕಟ್ಟೆ ಗ್ರಾಮದಲ್ಲಿನ ಶ್ರೀ ರಾಮ ದೇವಾಲಯದಲ್ಲಿ  ಅದ್ಧೂರಿಯಾಗಿ ನಡೆದ ವೈಕುಂಠ ಏಕಾದಶಿಯ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿನ ಭಕ್ತರು ಭಾಗವಹಿಸಿ ಭಕ್ತಿ ಭಾವ ಮೆರೆದರು.

ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಸುಪ್ರಭಾತ, ಹಾಲು-ಮೊಸರು, ಅರ್ಚಕ ವೃಂದ ಅರಿಶಿನ-ಕುಂಕುಮ, ಎಳನೀರು, ಪಂಚಾಮೃತಾಭಿಷೇಕ ಸೇರಿದಂತೆ ಪವಿತ್ರ ಕಾವೇರಿ ನೀರಿನಿಂದ ಶ್ರೀರಾಮ, ಲಕ್ಷ್ಮಣ ಹಾಗೂ ಸೀತಮ್ಮನ ಮೂಲ ಮೂರ್ತಿಗಳಿಗೆ ಜಲಾಭಿಷೇಕ ಮಾಡಿದ್ದರು. ನಂತರ ಹಲವು ಬಗೆಯ ಪುಷ್ಪಗಳ ತೋರಣ  ಮಾಲೆ  ಅಲಂಕರಿಸಿ, ವಿವಿಧ ಧಾರ್ಮಿಕ ಕಾರ್ಯಗಳನ್ನು ನಡೆಸಲಾಯಿತು.

ಇನ್ನು ಶೃಂಗಾರಗೊಂಡಿದ್ದ ಶ್ರೀರಾಮ, ಲಕ್ಷ್ಮಣ ಹಾಗೂ ಸೀತಮ್ಮನ ಉತ್ಸವ ಮೂರ್ತಿಗಳನ್ನು ಮುಂಜಾನೆ ಪಲ್ಲಕ್ಕಿ ಮೂಲಕ ಭಕ್ತ ಸಮೂಹ ಗೋವಿಂದಾ ಗೋಪಾಲ ಎಂಬ ಮಂತ್ರ ಪಠಣದೊಂದಿಗೆ ದೇಗುಲದ ಸುತ್ತ ಪ್ರದಕ್ಷಿಣೆ ಮಾಡಿಸಿ, 5.15ಕ್ಕೆ ದೇವರನ್ನು ಉತ್ತರ ದಿಕ್ಕಿನ ವೈಕುಂಠ ದ್ವಾರದಲ್ಲಿ ಕರೆದಂದು ಪ್ರತಿಷ್ಠಾಪಿಸಿ ಪೂಜೆಗಳನ್ನು ನೆರವೇರಿಸಲಾಯಿತು.

ವೈಕುಂಠ ಸ್ವರ್ಗದ್ವಾರಕ್ಕೆ ಪ್ರವೇಶ:-  ಬಳಿಕ ಭಕ್ತರ ಸಮ್ಮುಖದಲ್ಲಿ ನೈವೇದ್ಯ ಮಂಗಳಾರತಿ ನೆರವೇರಿಸಿದ ಆರ್ಚಕರು ಬೆಳಗ್ಗೆ 6.30ರಲ್ಲಿ ಭಕ್ತರಿಗೆ ಸ್ವರ್ಗದ್ವಾರ ಪ್ರವೇಶಕ್ಕೆ ಚಾಲನೆ ನೀಡಿದರು. ಗ್ರಾಮಸ್ಥರು ಸೇರಿದಂತೆ ಜಿಲ್ಲೆಯ ನಾನಾ ಭಾಗಗಳಿಂದ ಭಕ್ತರು ಸಂಜೆವರೆಗೂ ತಂಡೋಪತಂಡವಾಗಿ ದೇಗುಲಕ್ಕೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಪ್ರಸಾದ ವಿತರಣೆ:- ದೇಗುಲ ಆಡಳಿತ ಹಾಗೂ ಭಕ್ತರ ಸಹಯೋಗದಲ್ಲಿ ಬರುವ ಭಕ್ತರಿಗೆ ಅವಲಕ್ಕಿ ಹಾಗೂ ಸಿಹಿ ಪೊಂಗಲ್ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಈ ವೇಳೆ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಮೇಗೌಡ ಹಾಗೂ ಪತ್ನಿ ವನಜಾಕ್ಷಿ,  ಗ್ರಾಪಂ ಮಾಜಿ ಅಧ್ಯಕ್ಷೆ ಗೌರಮ್ಮ, ಪ್ರೇಮಕುಮಾ‌ರ್, ಮದು, ದೇಗುಲದ ಇಒ ರಘು, ಪಾರುಪತ್ತೆದಾರು ಯತಿ, ಮಂಜುನಾಥ್, ಹರ್ಷಿತ, ಭರತ್, ಕೃಷ್ಣ ಅರ್ಚಕರಾದ ನಾರಾಯಣ ಅಯ್ಯಂಗಾರ್, ವಾಸುದೇವ, ಸಿಬ್ಬಂದಿ ಶಿವಣ್ಣ, ತಿಮ್ಮಣ್ಣ ಚಂದ್ರಣ್ಣ, ಅನಂತ್, ತಬಲ ಮಂಜು  ಇದ್ದರು.

ಶ್ರೀ ರಾಮ ದೇವಾಲಯದ ಆವರಣದಲ್ಲಿ ಶೃಂಗಾರಗೊಂಡಿದ್ದ ಉತ್ಸವ ಮೂರ್ತಿಗಳನ್ನು ಮುಂಜಾನೆ ಪಲ್ಲಕ್ಕಿ ಮೂಲಕ ಭಕ್ತ ಸಮೂಹ ದೇಗುಲದ ಸುತ್ತ ಪ್ರದಕ್ಷಿಣೆ ಮಾಡಿಸಿದರು.

ಸಾಲಿಗ್ರಾಮ   ಶ್ರೀ ಯೋಗ ನರಸಿಂಹ ಸ್ವಾಮಿ ದೇವಾಲಯದ ವಿಶೇಷ ಅಲಂಕಾರ

ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ            

 

Continue Reading
Click to comment

Leave a Reply

Your email address will not be published. Required fields are marked *

Mysore

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ದೀಪಕ್ ಆಯ್ಕೆ*

Published

on

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆಯ ಮತದಾನ ನಿನ್ನೆ ಮುಗಿದಿದ್ದು, ಇಂದು ಫಲಿತಾಂಶ ಹೊರ ಬಿದ್ದಿದೆ.

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ದೀಪಕ್ ಅವರು 138 ಮತಗಳನ್ನು ಪಡೆದು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರ ಉಪಾಧ್ಯಕ್ಷರಾಗಿ ರವಿ ಪಾಂಡವಪುರ, ಗ್ರಾಮೀಣ ಉಪಾಧ್ಯಕ್ಷರಾಗಿ ಹೆಚ್ ಎಸ್ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಗ್ರಾಮಾಂತರ ಕಾರ್ಯದರ್ಶಿ ದಾರಾ ಮಹೇಶ್, ನಗರ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ್ ಯಾದವ್, ಖಜಾಂಜಿಯಾಗಿ ಸುರೇಶ್ ಎಸ್ ಅವರುಗಳು ಆಯ್ಕೆಯಾಗಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಇಂತಿದೆ.

ಎಂ.ಟಿ ಯೋಗೇಶ್ ಕುಮಾರ್,
ಕವಿತಾ ಎಸ್, ಅನಗೋಡು ನಟರಾಜು, ಡಿ.ಜೆ ರೋಜಾ ಮಹೇಶ್, ನಾಣಿ ಹೆಬ್ಬಾಳ್, ಜೆ.ರವಿಚಂದ್ರ ಹಂಚ್ಯ, ಹಂಪಾ ನಾಗರಾಜು, ಸೋಮಶೇಖರ್ ಚಿಕ್ಕಮರಳ್ಳಿ, ಜೆ ಶಿವಣ್ಣ, ಸತೀಶ್ ಆರ್ ದೇಪುರ, ದೊಡ್ಡನ ಹುಂಡಿ ರಾಜಣ್ಣ, ಹುಲ್ಲಹಳ್ಳಿ ಮೋಹನ, ಪುನೀತ್ ಎಸ್, ರಾಜು ಕಾರ್ಯ, ಸಿಎನ್ ವಿಜಯ್ ಇವರುಗಳು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

Continue Reading

Mysore

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ದೀಪಕ್ ಆಯ್ಕೆ

Published

on

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆಯ ಮತದಾನ ನಿನ್ನೆ ಮುಗಿದಿದ್ದು, ಇಂದು ಫಲಿತಾಂಶ ಹೋರ ಬಿದ್ದಿದೆ.

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ದೀಪಕ್ ಅವರು 138 ಮತಗಳನ್ನು ಪಡೆದು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರ ಉಪಾಧ್ಯಕ್ಷರಾಗಿ ರವಿ ಪಾಂಡವಪುರ, ಗ್ರಾಮೀಣ ಉಪಾಧ್ಯಕ್ಷರಾಗಿ ಹೆಚ್ ಎಸ್ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಗ್ರಾಮಾಂತರ ಕಾರ್ಯದರ್ಶಿ ದಾರಾ ಮಹೇಶ್, ನಗರ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ್ ಯಾದವ್, ಖಜಾಂಜಿಯಾಗಿ ಸುರೇಶ್ ಎಸ್ ಅವರುಗಳು ಆಯ್ಕೆಯಾಗಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಇಂತಿದೆ.

ಎಂ.ಟಿ ಯೋಗೇಶ್ ಕುಮಾರ್,
ಕವಿತಾ ಎಸ್, ಅನಗೋಡು ನಟರಾಜು, ಡಿ.ಜೆ ರೋಜಾ ಮಹೇಶ್, ನಾಣಿ ಹೆಬ್ಬಾಳ್, ಜೆ.ರವಿಚಂದ್ರ ಹಂಚ್ಯ, ಹಂಪಾ ನಾಗರಾಜು, ಸೋಮಶೇಖರ್ ಚಿಕ್ಕಮರಳ್ಳಿ, ಜೆ ಶಿವಣ್ಣ, ಸತೀಶ್ ಆರ್ ದೇಪುರ, ದೊಡ್ಡನ ಹುಂಡಿ ರಾಜಣ್ಣ, ಹುಲ್ಲಹಳ್ಳಿ ಮೋಹನ, ಪುನೀತ್ ಎಸ್, ರಾಜು ಕಾರ್ಯ, ಸಿಎನ್ ವಿಜಯ್ ಇವರುಗಳು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

Continue Reading

Mysore

ಮುಡಾ ಅಕ್ರಮ ನಿವೇಶನ ಹಂಚಿಕೆ: ಏಕ ಸದಸ್ಯ ವಿಚಾರಣಾ ಆಯೋಗ ರಚನೆ

Published

on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್‌.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿದೆ.

ಅಕ್ರಮಕ್ಕೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ, ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು, ತಾಂತ್ರಿಕ, ಆರ್ಥಿಕ ಮತ್ತು ಆಡಳಿತಾತ್ಮಕ ಸಲಹೆಗಾರರನ್ನು ನೀಡಲು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸಬೇಕು ಎಂದು ಸೂಚಿಸಲಾಗಿದೆ.

ಆಯೋಗವು ವಿಚಾರಣೆಗೆ ಬಯಸುವ ಎಲ್ಲ ಕಡತಗಳು ಮತ್ತು ದಾಖಲಾತಿಗಳನ್ನು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಒದಗಿಸಬೇಕು. ಅಲ್ಲದೆ, ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದು ಸಂಪೂರ್ಣವಾಗಿ ಸಹಕರಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ತನಿಖೆಗೆ ಆದೇಶಿಸಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಮುಡಾ ನಿವೇಶನ ಹಂಚಿಕೆಯ ವಿರುದ್ಧ ಆರೋಪಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂಬ ಆಶಯದೊಂದಿಗೆ ರಾಜ್ಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಪಿ. ಎನ್. ದೇಸಾಯಿ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿ ತನಿಖೆಗೆ ವಹಿಸಿದೆ. ಪ್ರಕರಣದ ಕೂಲಂಕಷವಾದ ವಿಚಾರಣೆ ನಡೆದು, ಸತ್ಯಾಸತ್ಯತೆ ಹೊರಬರಲಿ ಎಂದು ಆಶಿಸುತ್ತೇನೆ’ ಎಂದು ಹೇಳಿದ್ದಾರೆ.

Continue Reading

Trending

error: Content is protected !!