Crime
ಎರಡು ಹಸುಗಳಿಗೆ ಗುಂಡಿಕ್ಕಿ ಕೊಂದಿರುವ ದುರುಳರು
ಹಾಸನ : ಎರಡು ಹಸುಗಳಿಗೆ ಗುಂಡಿಕ್ಕಿ ಕೊಂದಿರುವ ದುರುಳರು
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಿರೇಹಸಡೆ ಗ್ರಾಮದಲ್ಲಿ ಘಟನೆ
ವಸಂತ್ಕುಮಾರ್, ಶಿವಮ್ಮ ಎಂಬುವವರಿಗೆ ಸೇರಿದ ಹಸುಗಳು
ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ ಗೋವುಗಳು
ಗೋವುಗಳಿಗಾಗಿ ಹುಡುಕಾಡಿದ್ದ ವಸಂತ್ಕುಮಾರ್, ಶಿವಮ್ಮ
ಇಂದು ಐಬಿಸಿ ಎಸ್ಟೇಟ್ನಲ್ಲಿ ಗೋವುಗಳ ಮೃತದೇಹ ಪತ್ತೆ
ಎರಡು ಗಬ್ಬದ ಹಸುಗಳನ್ನು ಗುಂಡು ಹಾರಿಸಿ ಕೊಂದಿರುವ ಕಿರಾಕತರು
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Crime
ಹಣ ಕೊಡಲಿಲ್ಲ ಎಂದು ಯುವಕನ ಜೀವ ತೆಗೆದ ಪುಡಿ ರೌಡಿ ಪಲಾಟಂ!
ಹಾಸನ: ನಗರದಲ್ಲಿ ಪುಡಿರೌಡಿಗಳ ಅಟ್ಟಹಾಸಕ್ಕೆ ಮತ್ತೊಂದು ಅಮಾಯಕ ಜೀವ ಬಲಿಯಾಗಿದೆ. ಸೋಮವಾರ ಬೆಳ್ಳಂಬೆಳಗ್ಗೆ ನಗರದ ಹೊಳೆನರಸೀಪುರ ರಸ್ತೆಯಲ್ಲಿರುವ(ಕೌಶಿಕ ಗೇಟ್)ನ ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಕೆಲಸ ಮಾಡುತ್ತಿದ್ದ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ನಾಗತವಳ್ಳಿಯ ಸತೀಶ್(೨೫) ಎಂಬ ಯುವಕನ ಮೇಲೆ ಗುಂಪೊಂಡು ಅಟ್ಯಾಕ್ ಮಾಡಿ, ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿತ್ತು.ತಲೆ ಹಾಗೂ ಕೈ ಭಾಗಕ್ಕೆ ಗಂಭೀರ ಪೆಟ್ಟು ತಿಂದ ಸತೀಶ್ನನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಯಾಗದೆ ಸಂಜೆವೇಳೆಗೆ ಸತೀಶ್ ಮೃತಪಟ್ಟಿದ್ದಾರೆ. ಮೃತದೇಹವನ್ನು ಹಿಮ್ಸ್ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.
ಕೊಲೆಗೆ ಕಾರಣ:
ಸತೀಶನ ಜೀವ ತೆಗೆದಿರುವ ಪುಡಿ ರೌಡಿಗಳ ಪಡೆ ಸುಮಾರು ಎರಡು ತಿಂಗಳುಗಳಿಂದ ಹಣಕ್ಕಾಗಿ ಸತೀಶ್ ಹಾಗೂ ಮನೆಯವರನ್ನು ಪೀಡಿಸುತ್ತಿತ್ತು ಎನ್ನಲಾಗಿದೆ. ನಮ್ಮ ಕಡೆಯವರು ಜೈಲಿನಲ್ಲಿದ್ದಾರೆ. ಅವರನ್ನು ಬಿಡಿಸಿಕೊಂಡಬೇಕು ಬರಬೇಕು. ಅದಕ್ಕೆ ಸುಮಾರು ೬ ಲಕ್ಷ ಬೇಕು.ಅಷ್ಟು ಹಣ ಕೊಡಿ ಎಂದು ಬೆನ್ನು ಬಿದ್ದಿದ್ದರು ಎನ್ನಲಾಗಿದೆ. ಎಷ್ಟೋ ಸಾರಿ ಸತೀಶ್ ಮನೆ ಬಳಿಗೂ ಬಂದು ಕಾಟ ಕೊಟ್ಟಿದ್ದರು. ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಮೃತನ ಸಂಬಂಧಿಕರು ದೂರಿದ್ದಾರೆ.
ಅಷ್ಟೇ ಅಲ್ಲ ಆಗಾಗ ಮಿಲ್ಕ್ ಪಾರ್ಲರ್ ಬಳಿ ಬರುತ್ತಿದ್ದ ಗ್ಯಾಂಗ್ ಹಾಲು, ಟೀ ಕುಡಿದು ಹಾಗೆಯೇ ಹೋಗುತ್ತಿತ್ತು. ಹಣ ಕೇಳಿದರೆ ಅವಾಜ್ ಹಾಕುತ್ತಿದ್ದರೂ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಯಾವಾಗ ಅವರು ಕೇಳಿದಂತೆ ಹಣ ಕೊಡಲಿಲ್ಲವೋ ಇದರಿಂದ ಕೆರಳಿ ರೌಡಿ ಪಡೆ, ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಬೆಳಗ್ಗೆ ಏಕಾಏಕಿ ಬಂದು ಡೇರಿಯಲ್ಲಿದ್ದ ಸತೀಶ್ ಮೇಲೆ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ದುಡಿದು ಕುಟುಂಬಕ್ಕೆ ಆಸರೆಯಾಗಿದ್ದ ಸತೀಶ್ನನ್ನು ಕಳೆದುಕೊಂಡು ದುಃಖ ತಪ್ತರಾಗಿರುವ ಕುಟುಂಬ ಸದಸ್ಯರು, ಮಗನ ಸಾವಿಗೆ ಕಾರಣರಾಗಿರುವವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಇಂಥವರೇ ಕೊಲೆ ಮಾಡಿದ್ದಾರೆ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿರುವುದರಿಂದ ಅವರನ್ನು ಬಂಧಿಸಲು ಬಲೆ ಬೀಸಿದ್ದಾರೆ. ಕೊಲೆಗಡುಕರ ಬಂಧನಕ್ಕಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮದ್ ಸುಜೀತಾ ವಿಶೇಷ ತಂಡ ರಚನೆ ಮಾಡಿದ್ದಾರೆ.
Crime
ಕಟ್ಟಿನಮನೆ ಬಳಿ ಗಾಳಿ ಮಳೆಯಿಂದ ಮರ ಬಿದ್ದು ಓರ್ವ ಮಹಿಳೆ ಭೀಕರ ದುರ್ಮರಣ..ಮೂವರಿಗೆ ಗಾಯ
ನರಸಿಂಹರಾಜಪುರ ತಾಲೂಕಿನ ಕಾನೂರು ಪಂಚಾಯತ್ ವ್ಯಾಪ್ತಿಯ ಕಟ್ಟಿನಮನೆ ಗ್ರಾಮದಲ್ಲಿ ಪೂಜೆ ಮುಗಿಸಿ ಮನೆಗೆ ತೆರುಳುವ ಸಂದರ್ಭದಲ್ಲಿ ಭಾರಿ ಗಾಳಿಯಿಂದಾಗಿ ಮರ ಬಿದ್ದು ಮಹಿಳೆ ಮೃತಪಟ್ಟಿದ್ದಾರೆ.
Crime
ಬಿಹಾರ : ಮದುವೆ ಮನೆಯಲ್ಲಿ ಪತ್ನಿ ಡಾನ್ಸ್ | ಬೇಸರಗೊಂಡು ಪತಿ ಆತ್ಮಹತ್ಯೆ
ಬಾವನ ಮದುವೆಯಲ್ಲಿ ಪತ್ನಿ ಡಾನ್ಸ್ ಮಾಡಿದಳೆಂದು ಬೇಸರಗೊಂಡ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಿಹಾರದ ಬದಾರಿಯಾದಲ್ಲಿ ನಡೆದಿದೆ.
ಬಹುಲಾ ಗ್ರಾಮದ ನಿವಾಸಿ 35 ವರ್ಷದ ಗೋಪಾಲ್ ಸಿಂಗ್, ರಸೂಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಮಹೇಂದ್ರ ನಾಥ್ ಹಾಲ್ಟರ್ ರೈಲು ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಗೋಪಾಲ್ ಸಿಂಗ್ ಬೇನತ್ ಗ್ರಾಮದಲ್ಲಿ ತನ್ನ ಪತ್ನಿಯ ಸಹೋದರನ ಮದುವೆ ಸಮಾರಂಭಕ್ಕೆ ಹೋಗಿದ್ದರು. ಈ ವೇಳೆ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಪತ್ನಿಯನ್ನು ನೋಡಿ ಅಸಮಾಧಾನಗೊಂಡು ಗೋಪಾಲ್ ಆಕೆಯನ್ನು ತಡೆದಿದ್ದಾನೆ.
ಕುಟುಂಬಸ್ಥರ ಮಾಹಿತಿ ಪ್ರಕಾರ ಗೋಪಾಲ್ ಡಾನ್ಸ್ ಮಾಡುತ್ತಿದ್ದ ತನ್ನ ಪತ್ನಿಯನ್ನು ಸುಮ್ಮನಿರುವಂತೆ ಸೂಚಿಸಿದ್ದನು. ಆದರೆ ಆಕೆ ಮಾತ್ರ ಆತನ ಮಾತಿಗೆ ಒಪ್ಪಲಿಲ್ಲ. ಈ ವೇಳೆ ಇಬ್ಬರ ನಡುವೆ ಸಣ್ಣ ಜಗಳ ನಡೆದಿದೆ.
ಆಗ ಬಾವ-ಬಾಮೈದರ ನಡುವೆ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಇದರಿಂದ ತೀರ ಬೇಸರಗೊಂಡಿದ್ದ ಗೋಪಾಲ್, ರೈಲು ಬರುತ್ತಿದ್ದ ಸಮಯ ನೋಡಿಕೊಂಡು ಹಳಿಗೆ ಹಾರಿಗೆ ಪ್ರಾಣ ಬಿಟ್ಟಿದ್ದಾನೆ. ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.