Connect with us

Uncategorized

ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ,ನಿತ್ಯ 40 ಲಕ್ಷ ಜನ ಬಿಎಂಟಿಸಿ ಯಲ್ಲಿ ಪ್ರಯಾಣ. ಇದರಲ್ಲಿ ಎಲ್ಲ ಜಾತಿ, ಎಲ್ಲ ಧರ್ಮದ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ

Published

on

ಬೆಂಗಳೂರು ಡಿ 26: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ ಬಿಎಂಟಿಸಿ ಯಲ್ಲಿ ಪ್ರಯಾಣ. ಇದರಲ್ಲಿ ಎಲ್ಲ ಜಾತಿ, ಎಲ್ಲ ಧರ್ಮದ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ.

ಉಚಿತ ಬಸ್ ಪ್ರಯಾಣವನ್ನು ಬಿಜೆಪಿ ಯವರು ಟೀಕಿಸುತ್ತಿದ್ದಾರೆ. ಆದರೆ ಬಿಜೆಪಿ ಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ ಎಂದು ಸಿ.ಎಂ ಪ್ರಶ್ನಿಸಿದರು.

ನಮ್ಮ ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಆರ್ಥಿಕ ಚಟುವಟಿಕೆ ಹೆಚ್ಚಾಗಿ ರಾಜ್ಯದ ಆರ್ಥಿಕ ಬೆಳವಣಿಗೆ ಆಗುತ್ತಿದೆ. ಕಾರ್ಮಿಕ ಮತ್ತು ರೈತ ಮಹಿಳೆಯರು, ದುಡಿಯುವ ವರ್ಗಗಳ ಮಹಿಳೆಯರಿಗೆ ಇದರಿಂದ ಸಾಕಷ್ಟು ಹಣ ಉಳಿತಾಯವಾಗಿದೆ. ಆ ಹಣವನ್ನು ತಮ್ಮ ಕುಟುಂಬದ ಇತರೆ ಅಗತ್ಯಗಳಿಗೆ ಬಳಸುತ್ತಿದ್ದಾರೆ. ಹೀಗಾಗಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯೂ ಹೆಚ್ಚುತ್ತಿದೆ ಎಂದು ಸರ್ಕಾರದ ಜನೋಪಯೋಗಿ ಯೋಜನೆಯ ಪರಿಣಾಮಕಾರಿ ಫಲಿತಾಂಶವನ್ನು ವಿವರಿಸಿದರು.

ರಾಜ್ಯದ 4 ಕೋಟಿ 30 ಲಕ್ಷ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆ ಮೂಲಕ ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ ಪ್ರಗತಿಯ ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದರು.

ಆರ್ಥಿಕ ಶಕ್ತಿ ಮೂಲಕ ನಾಡಿನ ಸಮಸ್ತ ಮಹಿಳೆಯರಿಗೆ ಮತ್ತು ಬಡ, ಶ್ರಮಿಕ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸ್ವಾತಂತ್ರ್ಯ ಲಭಿಸಿದೆ. ಇದನ್ನು ಸಾಧಿಸಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು. ಹಿಂದಿದ್ದ ಬಿಜೆಪಿ ಸರ್ಕಾರಗಳು ಇದನ್ನು ಸಾಧಿಸಲಿಲ್ಲ. ಬದಲಿಗೆ ಟೀಕಿಸುತ್ತಾ ಕುಳಿತಿವೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘನ ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಕ್ರೀಡಾ ಸಚಿವ ನಾಗೇಂದ್ರ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ವಿಧಾನ‌ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Uncategorized

ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ 11 ವರ್ಷಗಳ ಅಭಿವೃದ್ಧಿ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರಕ್ಕೆ ಚಾಲನೆ

Published

on

ಚಿಕ್ಕಮಗಳೂರಿನ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರ 11 ವರ್ಷಗಳ ಅಭಿವೃದ್ಧಿ ಕುರಿತ ವಿಕಸಿತ ಭಾರತ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಭಾರತ ಮಾತಾ ಫೋಟೋಗೆ ಪುಷ್ಪಾರ್ಚನೆ ಮೂಲಕ ವಿಧಾನ ಪರಿಷತ್ ಉಪ ಸಭಾಪತಿ ಶ್ರೀ ಎಂ.ಕೆ. ಪ್ರಾಣೇಶ್ ಚಾಲನೆ ನೀಡಿ ಮಾತನಾಡಿ, ಜನಪರವಾಗಿ ಎಲ್ಲರ ವಿಕಸಿತಕ್ಕಾಗಿ ನಿಸ್ವಾರ್ಥದಿಂದ 11 ವರ್ಷ ಕೆಲಸ ಮಾಡಿರುವ ಕೀರ್ತಿ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ ಎಂದರು.

11 ವರ್ಷಗಳ ಸಾಧನೆಯನ್ನು ಸುವರ್ಣ ಅಕ್ಷರದಲ್ಲಿ ಬರೆದಿಡಬೇಕು. ಕೆಳ ಹಂತದ ಜನರಿಗೆ ಯೋಜನೆಗಳನ್ನು ತಲುಪಿಸುವ ಕಾರ್ಯಗಳು ಅಚ್ಚುಕಟ್ಟಾಗಿ ನಡೆದಿವೆ ಎಂದು ಪ್ರಶಂಸಿದ ಅವರು, ಕಟ್ಟಾ ಕಡೆಯ ವ್ಯಕ್ತಿಗಳಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ತಲುಪಿಸುವ ಜವಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.

 

ದಿನ ನಿತ್ಯ ಸುಳ್ಳುಗಳನ್ನು ಪದೇ ಪದೆ ಹೇಳುವ ಮೂಲಕ ದೇಶದಲ್ಲಿ ಜನರ ದಿಕ್ಕು ತಪ್ಪಿಸುವ ಯತ್ನಗಳು ಕಾಂಗ್ರೆಸ್ ಪಕ್ಷದಿಂದ ನಡೆದಿವೆ. ಈ ಬಗ್ಗೆ ಎಲ್ಲರೂ ಜಾಗೃತರಾಗಬೇಕು ಎಂದು ಕಿವಿಮಾತು ಹೇಳಿದರು.

 

ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್.ದೇವರಾಜಶೆಟ್ಟಿ ಮಾತನಾಡಿ, ವಿಕಸಿತ ಭಾರತದ ಕಾರ್ಯಕ್ರಮಗಳನ್ನು ವಿವರಿಸಿದರು.

ವಿಕಸಿತ ಭಾರತ ಕಾರ್ಯಗಾರದ ಸಂಚಾಲಕ ಈಶ್ವರಹಳ್ಳಿ ಮಹೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಬೆಳವಾಡಿ ರವೀಂದ್ರ, ಪುಣ್ಯಾಪಾಲ್, ಡಾ.ನರೇಂದ್ರ, ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯದರ್ಶಿ ಸೀತಾರಾಭರಣ್ಯ, ಕಾರ್ಯಗಾರದ ಸಹ ಸಂಚಾಲಕ ಶರತ್ ಉಪಸ್ಥಿತರಿದ್ದರು. ನಗರ ಮಂಡಲ ನಿಕಟಪೂರ್ವ ಅಧ್ಯಕ್ಷ ಮಧುಕುಮಾರರಾಜ ಅರಸ್ ಸ್ವಾಗತಿಸಿ, ರೈತ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಮತ್ತು ಕಾರ್ಯಾಗಾರ ಸಂಚಾಲಕ ಮುಗುಳುವಳ್ಳಿ ದಿನೇಶ್ ನಿರೂಪಿಸಿದರು.

Continue Reading

Uncategorized

ನಾಗಮಂಗಲದಿಂದ ದೊಂದೆ ಮಾದಹಳ್ಳಿ ಗ್ರಾಮಕ್ಕೆ ಬಸ್ ಚಾಲನೆ : ರಾಜೇಶ್

Published

on

ನಾಗಮಂಗಲ : ಪಟ್ಟಣದಿಂದ ಪ್ರತಿದಿನ ಬೆಳಿಗ್ಗೆ ದೊoದೆ ಮಾದಹಳ್ಳಿ ಗ್ರಾಮಕ್ಕೆ ನೂತನವಾಗಿ ಬಸ್ ವ್ಯವಸ್ಥೆಗೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಚಾಲನೆ ನೀಡಿದರು.

ನಾಗಮಂಗಲ ತಾಲೂಕಿನ ದೊoದೆ ಮಾದಹಳ್ಳಿ ಗ್ರಾಮದಲ್ಲಿ ನೂತನವಾಗಿ ಬಸ್ ವ್ಯವಸ್ಥೆಯನ್ನು ಚಾಲನೆ ನೀಡಿ ಮಾತನಾಡಿದ ಅವರು , ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಕೃಷಿ ಕ್ಷೇತ್ರದಂತೆ ತಾಲೂಕಿನ ಪ್ರತೀ ಹಳ್ಳಿಗಳಿಗೂ ಪಟ್ಟಣದಿಂದ ಬಸ್ ವ್ಯವಸ್ಥೆ ಮಾಡುವ ಕನಸು ಇದ್ದು ಮುಂದಿನ ದಿನಗಳಲ್ಲಿ ಮತ್ತಷ್ಡು ಬಸ್ ಗಳ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು.

ಸಾರ್ವಜನಿಕರು ಸಾರಿಗೆ ವ್ಯವಸ್ಥೆಗೆ ಸಹಕಾರ ನೀಡಿ ಬಸ್ ಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಈ ವೇಳೆ ಮಾಜಿ ಗ್ರಾ.ಪಂ ಸದಸ್ಯ ಪುಟ್ಟಸ್ವಾಮಿ, ನರಸಿಂಹಮೂರ್ತಿ, ಪಾಂಡು ಹಾಲತಿ ಗಿರೀಶ್, ಗ್ರಾಮದ ಹಿರಿಯರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading

Uncategorized

ಎಂ.ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ| ಸರ್ಕಾರವೇ ಕಾನೂನು ಉಲ್ಲಂಘಿಸಿದೆ: ಆರ್‌.ಅಶೋಕ್‌

Published

on

ಬೆಂಗಳೂರು: ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸ್‌ ಇಲಾಖೆ ನೀಡಿದ ಸೂಚನೆಗಳನ್ನು ರಾಜ್ಯ ಸರ್ಕಾರವೇ ಉಲ್ಲಂಘಿಸಿದ್ದು, ಕಾನೂನು ಅನ್ನು ಮೀರಿದೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಶಕ್ತಿಗಳ ತಿಕ್ಕಾಟ ಇಲ್ಲದಿದ್ದರೆ ಯಾವ ವಿದ್ಯಾರ್ಥಿಗಳು ಸಾವನ್ನಪ್ಪುತ್ತಿರಲಿಲ್ಲ. ಮೃತರ ಕುಟುಂಬದವರಿಗೆ ಸ್ವಾಂತನ ಹೇಳಬೇಕಾದವರೂ ಕಪ್‌ಗೆ ಮುತ್ತಿಡಲು ಸ್ಟೇಡಿಯಂಗೆ ಹೋಗಿದ್ದರು. ಮೊದಲ ಸಾವಿನ ಸುದ್ದಿ ಬಗ್ಗೆ ಮಧ್ಯಾಹ್ನವೇ ಪೊಲೀಸರು ಮಾಹಿತಿ ನೀಡಿದ್ದರು. ಆದರೆ ಕಾರ್ಯಕ್ರಮ ಪ್ರಾರಂಭವಾದಾಗಲೇ 8 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಆ ಬಳಿಕವೂ ಕಾರ್ಯಕ್ರಮ ಮಾಡುತ್ತಾರೆಂದರೆ ಇವರೆಲ್ಲರೂ ಕಟುಕ, ಕಲ್ಲಿನ ಹೃದಯದವರು ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾನೂನನ್ನು ಪೊಲೀಸ್ ಅಧಿಕಾರಿಗಳು ಜಾರಿ ಮಾಡುತ್ತಾರೆ. ಜೂನ್‌. 4 ರಂದು ವಿಧಾನಸೌಧದ ಪೊಲೀಸರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆತುರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಹಾಗೂ ಸಿಬ್ಬಂದಿ ಕೊರತೆ ಇರುವುದರಿಂದ ಬಂದೋಬಸ್ತ್ ಕರ್ತವ್ಯಕ್ಕೆ ತೊಂದರೆಯಾಗಲಿದೆ ಎಂದು ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಯು.ಟಿ.ಖಾದರ್‌ ಆಗ ಕಾನೂನು ಪುಸ್ತಕ ತೋರಿಸಿದ್ದರು. ಈಗ ಸರ್ಕಾರವೇ ಕಾನೂನು ಉಲ್ಲಂಘಿಸಿದೆ, ಹೀಗಿದ್ದರೂ ಅವರು ಮೌನವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲಾಖೆಯ ಸಿಬ್ಬಂದಿ ಹಾಗೂ ಕುಟುಂಬದವರು ಬರಬಾರದು ಎಂದು ಕೂಡ ಪೊಲೀಸರು ಸೂಚಿಸಿದ್ದರು. ಆದರೆ ಅಲ್ಲಿ ಎಲ್ಲರ ಕುಟುಂಬದವರು ಇದ್ದರು. ಸಿಸಿಟಿವಿ ಕ್ಯಾಮೆರಾ ಬೇಕೆಂದು ಹೇಳಿದ್ದರೂ ಅದನ್ನು ಪಾಲಿಸಿಲ್ಲ. ಡ್ರೋನ್ ಗೆ ಅವಕಾಶ ಇಲ್ಲ ಎಂದು ಹೇಳಲಾಗಿದೆ. ಈ ಎಲ್ಲ ಸೂಚನೆಗಳನ್ನು ಸರ್ಕಾರ ಹರಿದು ಬಿಸಾಡಿದೆ. ವೇದಿಕೆಯಲ್ಲಿ 20-30 ಜನರು ಮಾತ್ರ ಇರಬೇಕು ಎಂಬ ಸೂಚನೆಯನ್ನು ಸಂಪೂರ್ಣ ಉಲ್ಲಂಘಿಸಿದ್ದು, 11 ಆಟಗಾರರು ಸೇರಿದಂತೆ ಒಟ್ಟು 200 ಜನರು ವೇದಿಕೆಯಲ್ಲಿದ್ದರು. ಇದು ಸರ್ಕಾರಿ ಕಾರ್ಯಕ್ರಮ ಎಂದು ಆದೇಶ ಪತ್ರದಲ್ಲಿದ್ದರೂ, ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ ಎಂದಿದ್ದಾರೆ ಎಂದು ದೂರಿದರು.

ಇಲಾಖೆಯ ಸಿಬ್ಬಂದಿ ಹಾಗೂ ಕುಟುಂಬದವರು ಬರಬಾರದು ಎಂದು ಕೂಡ ಪೊಲೀಸರು ಸೂಚಿಸಿದ್ದರು. ಆದರೆ ಅಲ್ಲಿ ಎಲ್ಲರ ಕುಟುಂಬದವರು ಇದ್ದರು. ಸಿಸಿಟಿವಿ ಕ್ಯಾಮೆರಾ ಬೇಕೆಂದು ಹೇಳಿದ್ದರೂ ಅದನ್ನು ಪಾಲಿಸಿಲ್ಲ. ಡ್ರೋನ್ ಗೆ ಅವಕಾಶ ಇಲ್ಲ ಎಂದು ಹೇಳಲಾಗಿದೆ. ಈ ಎಲ್ಲ ಸೂಚನೆಗಳನ್ನು ಸರ್ಕಾರ ಹರಿದು ಬಿಸಾಡಿದೆ. ವೇದಿಕೆಯಲ್ಲಿ 20 ರಿಂದ 30 ಜನರು ಮಾತ್ರ ಇರಬೇಕು ಎಂಬ ಸೂಚನೆಯನ್ನು ಸಂಪೂರ್ಣ ಉಲ್ಲಂಘಿಸಿದ್ದು, 11 ಆಟಗಾರರು ಸೇರಿದಂತೆ ಒಟ್ಟು 200 ಜನರು ವೇದಿಕೆಯಲ್ಲಿದ್ದರು. ಇದು ಸರ್ಕಾರಿ ಕಾರ್ಯಕ್ರಮ ಎಂದು ಆದೇಶ ಪತ್ರದಲ್ಲಿದ್ದರೂ, ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ ಎಂದಿದ್ದಾರೆ ಎಂದು ಆರೋಪಿಸಿದರು.

Continue Reading

Trending

error: Content is protected !!