State
ಕನ್ನಡಪರ ಹೋರಾಟಗಾರರ ಬಗ್ಗೆ ಗೌರವವಿದೆ, ಆದರೆ ಕಾನೂನು ಕೈಗೆತ್ತಿಕೊಂಡು ಆಸ್ತಿಪಾಸ್ತಿ ಹಾನಿ ಮಾಡೋದು ಸಹಿಸಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು : “ನಾವೆಲ್ಲರೂ ಕನ್ನಡ ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.
ಸದಾಶಿವನಗರ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಕನ್ನಡ ನಾಮಫಲಕ ಕುರಿತ ಹೋರಾಟದ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದು ಹೀಗೆ:
“ಕನ್ನಡ ಉಳಿಸಿ, ಬೆಳೆಸುವ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ. ಹೋರಾಟದ ಹೆಸರಿನಲ್ಲಿ ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ, ಸಹಿಸುವುದೂ ಇಲ್ಲ. ಇದರಿಂದ ಕರ್ನಾಟಕದ ಗೌರವ, ಘನತೆಗೆ ಧಕ್ಕೆಯಾಗುತ್ತದೆ. ಕಾನೂನು ಪಾಲನೆ ಎಲ್ಲರ ಕರ್ತವ್ಯ. ನೀವು ಹೋರಾಟ ಮಾಡುವುದಾದರೆ ಮಾಡಿ, 60% ನಾಮಫಲಕ ಹಾಕಬೇಕು ಎನ್ನುವುದನ್ನು ಕೇಳಲು ಒಂದು ಇತಿಮಿತಿ ಇದೆ.

ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣಗೌಡರ ಮೇಲೆ ಕೇಸ್ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳ ಜತೆ ನಾನೇ ಮಾತನಾಡಿದ್ದೆ. ಕನ್ನಡ ಕಡ್ಡಾಯ ಮಾಡಲು ನೋಟೀಸ್ ನೀಡೋಣ. ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು. ನಾರಾಯಣಗೌಡರಿಗೆ ಈ ಮಾತನ್ನು ಇವತ್ತೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ.
ಪ್ರತಿಭಟನೆ ಮಾಡಲಿ, ಧಿಕ್ಕಾರ ಕೂಗಲಿ. ನಾವು ತಪ್ಪು ಮಾಡಿದರೆ ನಮ್ಮ ಮನೆ ಮುಂದೆಯೂ ಬಂದು ಪ್ರತಿಭಟನೆ ಮಾಡಲಿ. ನಾವೂ ಕನ್ನಡಿಗರೇ. ಕನ್ನಡದ ಬಗ್ಗೆ ನಮಗೂ ಬದ್ಧತೆ ಇದೆ. ಸಚಿವ ಸಂಪುಟದಲ್ಲಿ ನಿಮ್ಮ ಟಿಪ್ಪಣಿಗಳೇನೆ ಇದ್ದರೂ ಕನ್ನಡದಲ್ಲೇ ಇರಬೇಕು ಎಂದು ಮುಖ್ಯಮಂತ್ರಿಗಳು ಸಚಿವರುಗಳಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಕನ್ನಡ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ.”

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪಾಠ ಕಲಿಸುತ್ತೇವೆ ಎಂಬ ನಾರಾಯಣಗೌಡರ ಎಚ್ಚರಿಕೆ ವಿಚಾರವಾಗಿ ಕೇಳಿದಾಗ, “ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕನ್ನಡಪರ ಹೋರಾಟಗಾರರ ಸಹಕಾರ ಇಲ್ಲ ಎಂದು ನಾನು ಹೇಳುವುದಿಲ್ಲ. ಹಾಗೆಂದು ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಏನು ಬೇಕಾದರೂ ಮಾಡಲಿ. ಅವರು ತಪ್ಪು ಮಾಡಿದ್ದಾರೆ. ಕಾನೂನು ಕೈಗೆತ್ತಿಕೊಳ್ಳಲು ನಾವು ಬಿಡುವುದಿಲ್ಲ. ಅನೇಕರು ಇಲ್ಲಿ ಬಂದು ಬಂಡವಾಳ ಹೂಡಿಕೆ ಮಾಡಿದ್ದಾರೆ. ಹೊರಗಡೆಯಿಂದ ಬಂದವರು ಇಲ್ಲಿ ಬದುಕುತ್ತಿದ್ದಾರೆ. ಅವರಿಗೆ ಕನ್ನಡ ಬಳಕೆ ಬಗ್ಗೆ ಹೇಳೋಣ. ಹಾಗೆಂದು ಅವರನ್ನು ಬೆದರಿಸಲು ಅವಕಾಶವಿಲ್ಲ” ಎಂದು ತಿಳಿಸಿದರು.
ಅನೇಕರು ಕನ್ನಡ ನಾಮಫಲಕ ಹಾಕದಿರುವ ಬಗ್ಗೆ ಕೇಳಿದಾಗ, “ಯಾರೆಲ್ಲಾ ಕನ್ನಡ ನಾಮಫಲಕ ಹಾಕಿಲ್ಲ ಅವರಿಗೆ ನಾವು ನೊಟೀಸ್ ಜಾರಿ ಮಾಡುತ್ತೇವೆ” ಎಂದು ತಿಳಿಸಿದರು.

ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರ ಅಕ್ರಮ ಮಾಡಿತ್ತು ಎಂಬ ಯತ್ನಾಳ್ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, “ಇಲ್ಲಿ ಆ ವಿಚಾರ ಮಾತನಾಡುವುದು ಬೇಡ. ನಾವು ಅದೇ ವಿಚಾರವಾಗಿ ಜನರ ಗಮನ ಸೆಳೆದಿದ್ದೆವು. ಈಗ ಅವರು ಸೆಳೆಯುತ್ತಿದ್ದಾರೆ. ಬಹಳ ಸಂತೋಷ. ಮುಂದೆ ಅದರ ಬಗ್ಗೆ ಚರ್ಚೆ ಮಾಡೋಣ.” ಎಂದರು.
ಅನೇಕ ಅಂಗಡಿ ಮುಂಗಟ್ಟುಗಳು ಮುಚ್ಚಿರುವ ವಿಚಾರವಾಗಿ ಕೇಳಿದಾಗ, “ಎಲ್ಲಾ ವ್ಯಾಪಾರಿಗಳು ಸರ್ಕಾರದ ಆದೇಶ ಪಾಲನೆ ಮಾಡಬೇಕು. ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯವಾಗಿ ಬಳಸಬೇಕು. ಸರ್ಕಾರ ನಿಮ್ಮ ಹಾಗೂ ನಿಮ್ಮ ಹಿತಾಸಕ್ತಿ ಕಾಯಲು ಬದ್ಧವಾಗಿದೆ” ಎಂದು ಹೇಳಿದರು.
Special
ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ: ಇಲ್ಲಿದೆ ಸಂಪೂರ್ಣ ಮಾಹಿತಿ!
ಕರ್ನಾಟಕ ಸರ್ಕಾರ ಮಹಿಳೆಯರ ಸ್ವಾವಲಂಬನೆಯನ್ನು ಹೆಚ್ಚಿಸಲು ಮತ್ತು ಮನೆಯಲ್ಲೇ ಆದಾಯ ಸಂಪಾದಿಸಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಉಚಿತ ಹೊಲಿಗೆ ಯಂತ್ರ ಯೋಜನೆ ಅನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಬಡ ಮತ್ತು ಅಶಕ್ತ ಮಹಿಳೆಯರಿಗೆ ಹೊಲಿಗೆ ಯಂತ್ರ ನೀಡಲಾಗುತ್ತದೆ, ಇದರಿಂದ ಅವರು ಕೆಲಸ ಮಾಡಿ ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಬಹುದು.
ಅರ್ಹತೆ:
•ಕರ್ನಾಟಕ ರಾಜ್ಯದ ನಿವಾಸಿ ಮಹಿಳೆ ಆಗಿರಬೇಕು
•BPL / APL ಬಡಕುಟುಂಬದ ಸದಸ್ಯರಾಗಿರಬೇಕು
•ವಯಸ್ಸು ಸಾಮಾನ್ಯವಾಗಿ 20 ರಿಂದ 45 ವರ್ಷಗಳ ನಡುವೆ
•ಹೊಲಿಗೆ ಕೆಲಸ ಕಲಿಯುವ ಇಚ್ಛೆ ಅಥವಾ ಈಗಾಗಲೇ ಮೂಲಭೂತ ಹೊಲಿಗೆ ಕೌಶಲ್ಯ ಇರಬೇಕು
•ವಿಧವೆ, ವಿಚ್ಛೇದಿತ ಅಥವಾ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಆದ್ಯತೆ

ಅರ್ಜಿಯನ್ನು ಹೇಗೆ ಸಲ್ಲಿಸಬೇಕು?
•ಹತ್ತಿರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) ಕಚೇರಿಗೆ ಭೇಟಿ.
•ಅಲ್ಲಿ ಲಭ್ಯವಿರುವ ಉಚಿತ ಹೊಲಿಗೆ ಯಂತ್ರ ಅರ್ಜಿ ಫಾರ್ಮ್ ಪಡೆಯಿರಿ
•ನಂತರ ಅಗತ್ಯ ದಾಖಲೆಗಳನ್ನು ಸೇರಿಸಿ ಅರ್ಜಿ ಪೂರ್ಣಗೊಳಿಸಬೇಕು.
ಪ್ರಮುಖ ದಾಖಲೆಗಳು:
•ಆಧಾರ್ ಕಾರ್ಡ್
•ರೇಷನ್ ಕಾರ್ಡ್ (BPL / APL)
•ವಾಸಸ್ಥಳ ಪ್ರಮಾಣ ಪತ್ರ
•ಆದಾಯ ಪ್ರಮಾಣ ಪತ್ರ
•ಪಾಸ್‌ಪೋರ್ಟ್ ಗಾತ್ರದ ಫೋಟೋ
•ಬ್ಯಾಂಕ್ ಖಾತೆ ಪಾಸ್‌ಬುಕ್ ಪ್ರತಿಗೆ
•ಹೊಲಿಗೆ ತರಬೇತಿ ಪಡೆದಿದ್ದರೆ ಅದರ ಪ್ರಮಾಣ ಪತ್ರ (ಐಚ್ಛಿಕ)
ಉಚಿತ ಹೊಲಿಗೆ ಯಂತ್ರ ಯೋಜನೆ ಮಹಿಳೆಯರು ತಮ್ಮ ಕಾಲ ಮೇಲೆ ನಿಲ್ಲಲು, ಸ್ವಂತ ಆದಾಯ ಸಂಪಾದಿಸಲು, ಮತ್ತು ಮನೆದಲ್ಲಿ ಕುಳಿತು ಕೆಲಸ ಮಾಡಲು ಅತ್ಯುತ್ತಮ ಅವಕಾಶ.ಅಗತ್ಯವಿರುವವರು ಇದನ್ನು ಸದುಪಯೋಗಪಡಿಸಿಕೊಳ್ಳಿರಿ.
National
2023ರ ಚುನಾವಣೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಿದ ಸುಪ್ರೀಂ
ನವದೆಹಲಿ: ಸಿಎಂ ಸಿದ್ದರಾಮಯ್ಯ 2023ರ ಚುನಾವಣೆಯಲ್ಲಿ ವರುಣಾ (a) ಕ್ಷೇತ್ರದಿಂದ ಆಯ್ಕೆಗೆ ಸಂಬಂಧಿಸಿದಂತೆ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾ. ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠವು, ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ. ಕೆ. ಶಂಕರ್ ಎಂಬವರು ಮೇಲ್ಮನವಿ ಸಲ್ಲಿಸಿದ್ದರು. ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಆರೋಪಿಸಲಾಗಿತ್ತು.

1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಯ ಅಡಿಯಲ್ಲಿ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದರು. ಶಂಕರ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
Special
ಮಹಿಳೆಯರಿಗೆ ದೊಡ್ಡ ಅವಕಾಶ! ಅಂಗನವಾಡಿಯ 571 ಹುದ್ದೆಗಳಿಗೆ ಅರ್ಜಿ ಅಹ್ವಾನ.
ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD Karnataka) ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಿಗೆ ಒಟ್ಟು 571 ಹುದ್ದೆಗಳ ನೇಮಕಾತಿ ಪ್ರಕಟಿಸಿದೆ. ಮಹಿಳೆಯರಿಗೆ ಸರ್ಕಾರದಡಿ ದೊರೆಯುವ ಸುರಕ್ಷಿತ ಮತ್ತು ಮಾನ್ಯ ಉದ್ಯೋಗಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳು ಪ್ರಮುಖವಾಗಿದ್ದು, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಅವಕಾಶ ಲಭ್ಯವಾಗಿದೆ.
ಲಭ್ಯವಿರುವ ಹುದ್ದೆಗಳು:
•ಅಂಗನವಾಡಿ ಕಾರ್ಯಕರ್ತೆ
•ಅಂಗನವಾಡಿ ಸಹಾಯಕಿ
ಅರ್ಹತೆ :
1. ಅಂಗನವಾಡಿ ಕಾರ್ಯಕರ್ತೆ
•SSLC ಪಾಸಾಗಿರಬೇಕು
•ಸ್ಥಳೀಯ ಗ್ರಾಮ/ವಾರ್ಡ್ ನಿವಾಸಿಯಾಗಿರಬೇಕು
2. ಅಂಗನವಾಡಿ ಸಹಾಯಕಿ
•4ನೇ ತರಗತಿಯಿಂದ 9ನೇ ತರಗತಿ ವರೆಗೆ ವಿದ್ಯಾರ್ಹತೆ ಹೊಂದಿರಬಹುದು
•ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ

ವಯೋಮಿತಿ: 19-35 ವರ್ಷ
ಅರ್ಜಿ ಸಲ್ಲಿಸುವ ವಿಧಾನ :
•ನಿಮ್ಮ ತಾಲೂಕು/ಜಿಲ್ಲೆಯ ಅಧಿಕೃತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ.
•ಆನ್‌ಲೈನ್ ಅರ್ಜಿಯನ್ನು ಸರಿಯಾದ ಮಾಹಿತಿ ಹಾಗೂ ಅಗತ್ಯ ದಾಖಲೆಗಳಿಂದ ಭರ್ತಿ ಮಾಡಿ.
•ಅರ್ಜಿ ಸಲ್ಲಿಸಿದ ನಂತರ ದೃಢೀಕರಣ ಪ್ರತಿಯನ್ನು ಸೇವ್ ಮಾಡಿ.
ಆಯ್ಕೆ ಪ್ರಕ್ರಿಯೆ ಹೇಗೆ?:
ಅಂಗನವಾಡಿ ಹುದ್ದೆಗಳಿಗೆ ಯಾವುದೇ ಪರೀಕ್ಷೆ ಇಲ್ಲ.ಆಯ್ಕೆ ಸಂಪೂರ್ಣವಾಗಿ ವಿದ್ಯಾರ್ಹತೆ, ದಾಖಲೆಗಳ ಪರಿಶೀಲನೆ, ಸ್ಥಳೀಯತೆ, ಮೀಸಲಾತಿ ನಿಯಮಗಳು ಇವುಗಳನ್ನು ಆಧರಿಸಿ ಮಾಡಲಾಗುತ್ತದೆ.
ಉದ್ದೇಶ:
•ಸ್ಥಳೀಯ ಮಹಿಳೆಯರಿಗೆ ಸುರಕ್ಷಿತ ಸರ್ಕಾರಿ ಉದ್ಯೋಗ
•ತಿಂಗಳ ವೇತನ, ಮಾನ್ಯತೆ, ಮತ್ತು ಭದ್ರ ಉದ್ಯೋಗ
•ಸಮಾಜ ಸೇವೆ ಜೊತೆಗೆ ಕುಟುಂಬಕ್ಕೆ ಆರ್ಥಿಕ ಸಹಾಯ
ಕರ್ನಾಟಕದಲ್ಲಿ ಪ್ರಕಟವಾದ 571 ಅಂಗನವಾಡಿ ಕಾರ್ಯಕರ್ತೆ / ಸಹಾಯಕಿ ಹುದ್ದೆಗಳು, ಸರ್ಕಾರಿ ಸೇವೆಗೆ ಬಯಸುವ ಮಹಿಳೆಯರಿಗೆ ದೊಡ್ಡ ಅವಕಾಶ. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದೆ ಅರ್ಹರು ಈಗಲೇ ಅರ್ಜಿ ಹಾಕಿ ಸದುಪಯೋಗ ಪಡಿಸಿಕೊಳ್ಳಿರಿ
-
Mandya11 hours agoಡಿ.17ಕ್ಕೆ ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಜಿಲ್ಲಾಧಿಕಾರಿಗಳಿಂದ ಸ್ಧಳ ಪರಿಶೀಲನೆ
-
Mysore9 hours agoಮೈಸೂರು ದಸರಾ: ಮಹಿಳಾ ಉದ್ಯಮಿ ಉಪಸಮಿತಿಗೆ ಎಸ್. ರಂಗನಾಥ ಸಂಚಾಲಕರಾಗಿ ನೇಮಕ
-
Mandya17 hours agoಡಿ 10 ಶ್ರೀರಂಗಪಟ್ಟಣ ಸೇರಿದಂತೆ ವಿವಿದೆಡೆ ವಿದ್ಯುತ್ ಕಡಿತ
-
Hassan13 hours agoಜಿಲ್ಲಾ ಮಟ್ಟದ ಅಂತರಶಾಲಾ ಚೆಸ್ ಸ್ಪರ್ಧೆ ಯಶಸ್ವಿ
-
Hassan13 hours agoಎಂಸಿಇ ಕಾಲೇಜಿನ ಸಿವಿಲ್ ವಿಭಾಗದಲ್ಲಿ ಸ್ಪೋರ್ಟ್ಸ್ ವಿಜೇತರಿಗೆ ಸನ್ಮಾನ
-
Mysore19 hours agoಡಾ.ಬಿ.ಆರ್. ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನ: ಸೇವಾ ಕಾರ್ಯದೊಂದಿಗೆ ಗೌರವ ನಮನ
-
Kodagu15 hours agoಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ : ಗಾಯತ್ರಿ ನರಸಿಂಹ
-
Mysore13 hours agoದೌರ್ಜನ್ಯ ತಡೆಗೆ ಕೆಪಿಎ- ಸಾವಿತ್ರಿಬಾ ಫುಲೆ ಸಂಸ್ಥೆ ನಡುವೆ ಒಡಂಬಡಿಕೆ
