State
ಕರ್ನಾಟಕ ಸರ್ಕಾರ ಬೃಹತ್ ಉದ್ಯೋಗ ಮೇಳ : ಸಹಾಯವಾಣಿ ಬಿಡುಗಡೆ ಆಗಿದೆ

ಕರ್ನಾಟಕ ಸರ್ಕಾರ ಬೃಹತ್ ಉದ್ಯೋಗ ಮೇಳ : ಸಹಾಯವಾಣಿ ಬಿಡುಗಡೆ ಆಗಿದೆ.
ರಾಜ್ಯ ಸರ್ಕಾರವು ಫೆಬ್ರವರಿ 19 ಮತ್ತು 20 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಿದೆ. ಜಾಬ್ ಮೇಳ ಸಹಾಯವಾಣಿಯನ್ನು ಈಗ ಪ್ರಾರಂಭಿಸಲಾಗಿದೆ. ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಪರಿಣಾಮಕಾರಿಯಾಗಿ ನಡೆಸಲು ಆರು ಸಚಿವರ ತಂಡವನ್ನು ರಚಿಸಲಾಗಿದೆ.
ಬೆಂಗಳೂರು, ಜನವರಿ 31: ರಾಜ್ಯ ಸರ್ಕಾರವು ಫೆಬ್ರವರಿ 19 ಮತ್ತು 20 ರಂದು ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನಗಳ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಇದೀಗ ಉದ್ಯೋಗ ಮೇಳಕ್ಕಾಗಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳಿದ್ದಲ್ಲಿ ನೀವು 18005999918 ಗೆ ಕರೆ ಮಾಡಬಹುದು. ಉದ್ಯೋಗ ಮೇಳವು ಎಲ್ಲಾ ಅರ್ಹ ಉದ್ಯೋಗಾಕಾಂಕ್ಷಿಗಳಿಗೆ ಮುಕ್ತವಾಗಿದೆ.
ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರು ಸ್ಕಿಲ್ ಕನೆಕ್ಟ್ ವೆಬ್‌ಸೈಟ್‌ಗೆ ಭೇಟಿ ನೀಡಿ ವಿವಿಧ ಹಂತಗಳಲ್ಲಿ ನೋಂದಾಯಿಸಿಕೊಳ್ಳಬಹುದು. ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಪರಿಣಾಮಕಾರಿಯಾಗಿ ನಡೆಸಲು ಆರು ಸಚಿವರ ತಂಡವನ್ನು ರಚಿಸಲಾಗಿದೆ.
ತಂಡದ ಎಲ್ಲಾ ಸಚಿವರು
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಐಟಿ, ಬಿಟಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷಲಾದ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಚಿವರ ತಂಡ ರಚಿಸಿ ಮಾಲಕರೊಂದಿಗೆ ಸಭೆ ನಡೆಸಿ ಜನಸ್ತೋಮ ಸೇರುವಂತೆ ಕ್ರಮಕೈಗೊಳ್ಳುವಂತೆ ಆದೇಶಿಸಿದರು.
ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ ಉದ್ಯೋಗ ಮೇಳ ನಡೆಸಲಾಗುವುದು. ಕೈಗಾರಿಕೆಗಳ ಅಗತ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ದೀರ್ಘ-ಶ್ರೇಣಿಯ ಕಾರ್ಯಕ್ರಮಗಳನ್ನು ರೂಪಿಸಲು ಶಿಫಾರಸುಗಳನ್ನು ಮಾಡಲು ಸಚಿವರ ಗುಂಪಿಗೆ ನಿರ್ದೇಶನ ನೀಡಲಾಗಿದೆ.

ವಿದೇಶಗಳಲ್ಲಿನ ಉದ್ಯೋಗಾವಕಾಶಗಳ ಬಗ್ಗೆಯೂ ಗಮನಹರಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಇದಲ್ಲದೆ, ರಾಜ್ಯದ ಯುವಜನರಿಗೆ ಉದ್ಯೋಗಾವಕಾಶಗಳನ್ನು ಸುಧಾರಿಸಲು ಉದ್ಯೋಗ ನೀತಿಯನ್ನು ರೂಪಿಸುವ ಅವಶ್ಯಕತೆಯಿದೆ. ಈ ನೀತಿ ರೂಪಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ ಸೂಚಿಸಿದರು.
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ಕೌಶಲ್ಯಾಭಿವೃದ್ಧಿಗೆ 80 ಸಾವಿರ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವುದಾಗಿ ಹೇಳಿದರು.
State
ವಿಷಾಹಾರ ಸೇವಿಸಿ ವಿದ್ಯಾರ್ಥಿ ಸಾವು: ಸಿಎಂ ಫಸ್ಟ್ ರಿಯಾಕ್ಷನ್

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಟಿ.ಕಾಗೇಪುರ ಖಾಸಗಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅದರಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ವಿದ್ಯಾರ್ಥಿ ನಿಧನಕ್ಕೆ ಸಂತಾಒಪ ಸೂಚಿಸಿದ್ದಾರೆ.
ತಮ್ಮ ಟ್ವೀಟ್‌ನಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು.
ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ಬರೆದುಕೊಂಡು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
State
ಬೆಂಗಳೂರು ನಮ್ಮ ಮೆಟ್ರೋ ನೇಮಕಾತಿ : ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿ

BMRCL Train Operator’s Recruitment 2025 : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೋಟಿಫಿಕೇಷನ್ ಬಿಡುಗಡೆ ಮಾಡಿದ್ದಾರೆ.
ನಮ್ಮ ಮೆಟ್ರೋ, BMRCL ನಲ್ಲಿ ಒಟ್ಟು 50 ಟ್ರೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೆಟ್ರೋ ಇಲಾಖೆಯ ಏನೆಲ್ಲಾ ಅರ್ಹತೆಗಳನ್ನು ನಿಗದಿಪಡಿಸಿದೆ? ಯಾವ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂಬ ಮಾಹಿತಿ ಇಲ್ಲಿದೆ..
ಹುದ್ದೆಗಳ ವಿವರ :
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟ್ರೇನ್ ಆಪರೇಟರ್ ಹುದ್ದೆಗಳನ್ನು 5 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನಂತರದಲ್ಲಿ ಅಭ್ಯರ್ಥಿಯು ಮಾಡುವ ಕೆಲಸದ ಆಧಾರದ ಮೇಲೆ ಸೇವಾ ಅವಧಿಯನ್ನು ಹೆಚ್ಚಿಸಲಾಗುವುದು.
ಯಾವ ಯಾವ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ?
ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ 38 ವರ್ಷದ ಒಳಗಿನ ಅಭ್ಯರ್ಥಿಗಳಾಗಿದ್ದು, ಈ ಕೆಳಗಿನ ಯಾವುದಾದರೂ ಒಂದು ವಿಷಯದಲ್ಲಿ ಡಿಪ್ಲೋಮಾ ಇನ್ ಇಂಜಿನಿಯರಿಂಗ ಕೋರ್ಸ್ ಮುಗಿಸಿರಬೇಕು.
Electrical Engineering / Electrical & Electronics
Engineering / Telecommunications/ Electronics & Communication Engineering/ Electrical
Power Systems /Industrial Electronics/ Mechanical Engineering
ಆಯ್ಕೆಯಾಗುವವರಿಗೆ ಸಿಗುವ ಸಂಬಳ : ನೇಮಕಾತಿಯಲ್ಲಿ ಅಂತಿಮವಾಗಿ ಕೆಲಸಕ್ಕೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಮಾಸಿಕ 35,000 ರೂಪಾಯಿಯಿಂದ 82,660 ರೂಪಾಯಿವರೆಗೆ ನೀಡಲಾಗುವುದು.
ಅರ್ಜಿ ಸಲ್ಲಿಸುವುದು ಯಾವಾಗ?
ಈ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯೂ ಮಾರ್ಚ್ 12, 2025 ರಂದು ಬಿಡುಗಡೆಯಾಗಿದ್ದು ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವು ಏಪ್ರಿಲ್ 09, 2025 ಆಗಿರುತ್ತದೆ.
ಅರ್ಜಿ ಸಲ್ಲಿಕೆಯ ಪ್ರಕ್ರಿಯೆ :
ಮೊದಲು ಕೆಳಗೆ ನೀಡಿರುವ ಲಿಂಕ್ ಮೇಲೆ ಒತ್ತಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಿದ ನಂತರ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆಸಿ ಅದಕ್ಕೆ ನಿಗದಿತ ಸ್ಥಳದಲ್ಲಿ ಪಾಸ್ ಪೋರ್ಟ್ ಅಳತೆಯ ಫೋಟೋ ಅಂಟಿಸಿ ಕೆಳಗಿನ ವಿಳಾಸಕ್ಕೆ ಕಳುಹಿಸಿ.
ವಿಳಾಸ : The General Manager (HR), Bangalore Metro Rail Corporation Limited, III Floor, BMTC Complex, K.H.Road, Shanthinagar, Bangalore 560027
ಅಧಿಕೃತ ಜಾಲತಾಣ – https://projectrecruit.bmrc.co.in/
State
ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ವಿಚಾರ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಅವಳ ಬರ್ಬರ ಕೊಲೆಯ ನೋವು ಮಾಸುವ ಮುನ್ನ ಈಗ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎನ್ನುವ ಯುವತಿಯ ಕೊಲೆಯಾಗಿದ್ದು, ಇದೂ ಕೂಡ ಲವ್ ಜಿಹಾದ್ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಇತ್ತೀಚಿನ ದಿನಗಳಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ರಾಜ್ಯದಲ್ಲಿ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕೃತ್ಯ ನಡೆಸುವವರಿಗೆ ಪೊಲೀಸರ ಭಯ ಇಲ್ಲದಿರುವುದು ಇಂತಹ ಪ್ರಕರಣ ಹೆಚ್ಚಾಗಲು ಕಾರಣ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದರಿಂದ ಮಾತ್ರ ಇಂತಹ ಪ್ರಕರಣಗಳಿಗೆ ತಡೆ ಒಡ್ಡಬಹುದಾಗಿದೆ.
ಹೆಣ್ಣು ಮಕ್ಕಳ ಕುಟುಂಬ, ಬಂಧುಗಳು ಮತ್ತು ಸಮಾಜ ಅತ್ಯಂತ ನೋವು ಪಡುವ ಈ ಘಟನೆಯಲ್ಲಿ ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಮತ್ತು ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
-
State21 hours ago
ಬೆಂಗಳೂರು ನಮ್ಮ ಮೆಟ್ರೋ ನೇಮಕಾತಿ : ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿ
-
Kodagu20 hours ago
ಬಲ್ಲಮಾವಟಿ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆ – 112ಪೊಲೀಸರಿಂದ ಮಗುವಿನ ರಕ್ಷಣೆ
-
National - International22 hours ago
ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ಸ್ವೀಕಾರ
-
Kodagu23 hours ago
ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಡಾ.ಮಂತರ್ ಗೌಡ
-
State23 hours ago
ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ಬಸವರಾಜ ಬೊಮ್ಮಾಯಿ
-
Chikmagalur8 hours ago
ಹತ್ತು ಲಕ್ಷ ಮೌಲ್ಯದ 11 ಬೈಕ್ ಕದ್ದಿದ್ದ ಕಳ್ಳನ ಬಂಧನ
-
Chamarajanagar6 hours ago
ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಮೃತ
-
Chamarajanagar5 hours ago
ಕಾಂಗ್ರೆಸ್ ಗೆ ಭರ್ಜರಿ ಗೆಲುವು