Connect with us

National - International

ಕೇಂದ್ರ ಬಜೆಟ್‌ 2024 ನಾಳೆ ಮಂಡನೆ; ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಅಧಿವೇಶನ!

Published

on

Union Budget 2024: ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನವು ಎರಡು ವಿಷಯಗಳಲ್ಲಿ ವಿಶೇಷವಾಗಿದೆ – ಮೊದಲನೆಯದಾಗಿ, ಈ ಅಧಿವೇಶನದಲ್ಲಿ ದೇಶದ ಹಣಕಾಸು ಸಚಿವರು ಮಧ್ಯಂತರ ಬಜೆಟ್ ಅನ್ನು ಮಂಡಿಸುತ್ತಾರೆ. ಅದೇ ಸಮಯದಲ್ಲಿ, ಈ ಅಧಿವೇಶನವು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಆಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಸದನದಲ್ಲಿ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.

ಬಜೆಟ್ ಅಧಿವೇಶನ ಫೆಬ್ರವರಿ 1 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಪ್ರಾರಂಭವಾಗಲಿದೆ ಮತ್ತು ಈ ಅಧಿವೇಶನವು ಫೆಬ್ರವರಿ 9 ರಂದು ಮುಕ್ತಾಯಗೊಳ್ಳಲಿದೆ.

ಭಾರತೀಯ ಸಂವಿಧಾನದ 112 ನೇ ವಿಧಿಯ ಅಡಿಯಲ್ಲಿ, ಸರ್ಕಾರವು ಪ್ರತಿ ಹಣಕಾಸು ವರ್ಷದ ಆರಂಭದ ಮೊದಲು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಅನ್ನು ಮಂಡಿಸುತ್ತದೆ. ಬಜೆಟ್ ಎನ್ನುವುದು ಹಣಕಾಸಿನ ವರ್ಷದಲ್ಲಿ ಸರ್ಕಾರದ ಆದಾಯ ಮತ್ತು ವೆಚ್ಚಗಳಿಗೆ ಸಂಬಂಧಿಸಿದ ದಾಖಲೆಯಾಗಿದೆ. ಈ ಆರ್ಥಿಕ ವರ್ಷವು ಪ್ರತಿ ವರ್ಷ ಏಪ್ರಿಲ್ 1 ರಿಂದ ಪ್ರಾರಂಭವಾಗುತ್ತದೆ ಮತ್ತು ಮುಂದಿನ ವರ್ಷದ ಮಾರ್ಚ್ 31 ರಂದು ಕೊನೆಗೊಳ್ಳುತ್ತದೆ. ಈ ವರ್ಷ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ.

ಸಾರ್ವತ್ರಿಕ ಚುನಾವಣೆಯ ನಂತರ ಚುನಾಯಿತರಾದ ಹೊಸ ಸರ್ಕಾರವು 2024-25 ರ ಹಣಕಾಸು ವರ್ಷದ ಪೂರ್ಣ ಬಜೆಟ್ ಅನ್ನು ಜುಲೈನಲ್ಲಿ ಮಂಡಿಸುತ್ತದೆ.

ಲೋಕಸಭೆಯಲ್ಲಿ ಬಜೆಟ್‌ ಪ್ರಸ್ತುತಿ ಮುಗಿದ ನಂತರ ಬಜೆಟ್‌ನ ದಾಖಲೆಗಳನ್ನು ನೀವು ಅಧಿಕೃತ ವೆಬ್‌ಸೈಟ್‌ ಮೂಲಕ ಪಡೆದುಕೊಳ್ಳಬಹುದು.

Continue Reading
Click to comment

Leave a Reply

Your email address will not be published. Required fields are marked *

National - International

ಲಷ್ಕರ್-ಎ-ತೊಯ್ಬಾ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಹತ್ಯೆಗೈದ ಭಾರತೀಯ ಸೇನೆ

Published

on

ಬಂಡಿಪೋರಾ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಬೆನ್ನಲ್ಲೆ ಇದೀಗ ಉಗ್ರರ ವಿರುದ್ದ ಕಾರ್ಯಾಚರಣೆ ತೀವ್ರಗೊಳಿಸಿರುವ ಭಾರತೀಯ ಸೇನೆ ಬಂಡಿಪೋರಾದಲ್ಲಿ ಲಷ್ಕರ್​-ಎ-ತೊಯ್ಬಾ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಹತ್ಯೆಗೈದಿದೆ.

ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಮೃತಪಟ್ಟಿದ್ದಾನೆ.

ಏಪ್ರಿಲ್. 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್​-ಎ-ತೊಯ್ಬಾ ಹೊತ್ತುಕೊಂಡಿತ್ತು. ಈ ಹಿನ್ನೆಲೆ ಭಾರತೀಯ ಸೇನೆ ಲಷ್ಕರ್​-ಎ-ತೊಯ್ಬಾದ ಟಾಪ್​ ಕಮಾಂಡರ್​ ಅಲ್ತಾಫ್​ನನ್ನು ಹತ್ಯೆ ಮಾಡಿದೆ.

ಜಮ್ಮು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಪಹಲ್ಗಾಮ್​ಗೆ ಏಪ್ರಿಲ್.22 ರಂದು ಪ್ರವಾಸಕ್ಕೆಂದು ತೆರಳಿದ್ದ ಪ್ರವಾಸಿಗರಲ್ಲಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ಈ ದುರಂತದಲ್ಲಿ 26 ಮಂದಿ ಸಾವನ್ನಪ್ಪಿದ್ದರು.

Continue Reading

National - International

ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಯೋಧನ ವಶಕ್ಕೆ ಪಡೆದ ಪಾಕ್‌

Published

on

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಇತ್ತ ಎರಡು ದೇಶಗಳ ನಡುವೆ ಎನ್‌ಕೌಂಟರ್‌ ಕೂಡಾ ನಡೆಯುತ್ತಿದ್ದು, ಈ ನಡುವೆ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ಬಂಧಿಸಿದೆ.

ಪಂಜಾಬ್ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧನನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದಾರೆ.

ಅವರ ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ ಪಡೆಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

National - International

ಪಹಲ್ಗಾಮ್‌ ದಾಳಿ; ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ವೀರ ಯೋಧ ಹುತಾತ್ಮ

Published

on

ಜಮ್ಮು ಕಾಶ್ಮೀರ: ಪಹಲ್ಗಾಮ್‌ನ ನರಮೇಧಕ್ಕೆ ಪ್ರತಿಯಾಗಿ ಜಮ್ಮು ಮತ್ತು ಕಾಶ್ಮೀರದ ಉದ್ಧಮ್‌ಪುರ ಜಿಲ್ಲೆಯ ದುಡು-ಬಸಂತ್‌ಗರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರೊಂದಿಗೆ ನಡೆಸುತ್ತಿರುವ ಎನ್‌ಕೌಂಟರ್‌ನಲ್ಲಿ ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಹುತಾತ್ಮ ಯೋಧನನ್ನು ಗಣ್ಯ 6 PARA (ವಿಶೇಷ ಪಡೆ) ಘಟಕದ ಹವಾಲ್ದಾರ್ ಜಂತು ಅಲಿ ಶೇಖ್ ಎಂದು ಗುರುತಿಸಲಾಗಿದೆ.

https://x.com/Whiteknight_IA/status/1915290204535210424

ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಗಳು ಸಾವನ್ನಪ್ಪಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದರೆಡು ದಿನಗಳಲ್ಲಿ ನಡೆಯುತ್ತಿರುವ ಮೂರನೇ ಎನ್‌ಕೌಂಟರ್ ಇದಾಗಿದೆ.

ಶಂಕಿತರು ಅಡಗಿದ್ದ ಸ್ಥಳದಲ್ಲಿ ಭದ್ರತಾ ಪಡೆಗಳು ಜಮಾಯಿಸುತ್ತಿದ್ದಂತೆಯೇ, ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ್ದು, ಎನ್ ಕೌಂಟರ್ ಆರಂಭವಾಗಿದೆ ಎಂದು ಅವರು ಮಾಹಿತಿ ಲಭ್ಯವಾಗಿದೆ.

Continue Reading

Trending

error: Content is protected !!