Connect with us

Kodagu

ಕೊಡಗು ಜಿಲ್ಲೆಯ ಜಮ್ಮಾಮಲೆ ಅಸೋಸಿಯೇಷನ್ ರವರಿಂದ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ರವರಿಗೆ ಮನವಿ ಸಲ್ಲಿಕೆ

Published

on

ಬೆಂಗಳೂರು : ಕೊಡಗು ಜಿಲ್ಲೆಯ ಮೀಸಲು ಅರಣ್ಯದೊಳಗೆ ಇರುವ ಕಂದಾಯಕ್ಕೆ ಒಳಪಟ್ಟ ಜಮ್ಮಾಮಲೆ ಹಿಡುವಳಿದಾರರ ಆಸ್ತಿಯ ಹಕ್ಕನ್ನು ಪರಿಹಾರ ಧನ ಪಡೆದು ಸರ್ಕಾರಕ್ಕೆ ಒಪ್ಪಿಸುವುದರೊಂದಿಗೆ ಸರಿಸುಮಾರು 80,000 ಎಕರೆ The greater Talakaveri wild life Area ವನ್ನು ಮಾನವ ರಹಿತದ ಅರಣ್ಯವಾಗಿ ಮಾರ್ಪಡಿಸಿ Elephant corridor ಆಗಿ ಪರಿವರ್ತಿಸಿ ಕೊಡಗಿನ ರೈತಾಪಿ ಜನರು ನಿರಂತರ ಕಾಡಾನೆ ದಾಳಿಯಿಂದ ಜೀವ ಹಾನಿಯ ಜೊತೆಗೆ ಕೃಷಿ ನಷ್ಟವನ್ನು ಅನುಭವಿಸುವ ರೈತರಿಗೆ ಅನುಕೂಲವಾಗಲಿದೆ ಎಂದು ವಿಧಾನ ಸೌಧದಲ್ಲಿ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಕುರಿತು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ಕೂಡಲೇ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಈ ಸಂದÀರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ, ಅರಣ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಮಂಜುನಾಥ್ ಪ್ರಸಾದ್, ಕೊಡಗು ಜಮ್ಮಾಮಲೆ ಅಸೋಸಿಯೇಷನ್‍ನ ಫೌಂಡರ್ ಗೌರವ ಕಾರ್ಯದರ್ಶಿಗಳಾದ ಪೆಮ್ಮಯ್ಯ, ಆಡಳಿತ ಮಂಡಳಿಯ ಸದಸ್ಯರುಗಳಾದ ಸೋಮಣ್ಣ, ಪೂವಯ್ಯ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Kodagu

ಬೊಟ್ಟಂಗಡ ಸುಮನ್ ಸೀತಮ್ಮ ಎಂ.ಎ. ಕನ್ನಡ ವಿಭಾಗದಲ್ಲಿ 78.10% ಅಂಕ

Published

on

ಮಡಿಕೇರಿ : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ 20ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಬೊಟ್ಟಂಗಡ ಸುಮನ್ ಸೀತಮ್ಮ ಎಂ.ಎ. ಕನ್ನಡ ವಿಭಾಗದಲ್ಲಿ 78.10% ಅಂಕಗಳೊಂದಿಗೆ ವಿಶ್ವವಿದ್ಯಾನಿಲಯಕ್ಕೆ 7ನೇ ರ್ಯಾಂಕ್ ಪಡೆದಿರುತ್ತಾರೆ. ಅಲ್ಲದೆ ವಿಶ್ವವಿದ್ಯಾನಿಲಯದ ಕೊಡಗು ಪ್ರಾದೇಶಿಕ ಕೇಂದ್ರದಿಂದ ಕನ್ನಡ ವಿಷಯದಲ್ಲಿ ಇವರು ಪ್ರಥಮ ಸ್ಥಾನ ಪಡೆದಿರುತ್ತಾರೆ.

ಸುಮನ್ 2014ನೇ ಪಿ.ಯು.ಸಿ. ಕಲಾ ವಿಭಾಗದಲ್ಲಿ ಕೊಡಗಿಗೆ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾಗಿದ್ದರು. ಸುಮನ್’ರವರ ಪತಿ ಬೊಟ್ಟಂಗಡ ತಿಲಕ್ ಹಾಗೂ ಮಗಳು ಸ್ತುತಿ ಬೋಜಮ್ಮ. ಇವರು ತೆರಾಲುವಿನಲ್ಲಿ ವಾಸವಾಗಿದ್ದಾರೆ.

Continue Reading

Kodagu

ಕಸ ವಿಲೇವಾರಿಗೆ ವಿರೋಧ: 4ನೇ ದಿನಕ್ಕೆ ಮುಂದುವರಿದ ಅಹೋರಾತ್ರಿ ಪ್ರತಿಭಟನೆ

Published

on

ಸಿದ್ದಾಪುರ: ವೀರಾಜಪೇಟೆ ತಾಲ್ಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ (ಕಲ್ಲಳ್ಳ) ಜಾಗದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ಕಸವಿಲೇವಾರಿ ಕೇಂದ್ರ ನಿರ್ಮಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಬಹುಜನ ಸಮಾಜ ಪಾರ್ಟಿ ನೇತ್ರತ್ವದಲ್ಲಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಾಲ್ಕನೇ ದಿನ ಅಹೋರಾತ್ರಿ ಪ್ರತಿಭಟನೆ ಮುಂದುವರೆದಿದೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕೆಂದು ಒತ್ತಾಯಿಸಿದ್ದಾರೆ.

ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಮಾತನಾಡಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಡೆಯುತ್ತಿರುವ ಆಹೋರಾತ್ರಿ ಪ್ರತಿಭಟನೆ ನಾಲ್ಕನೇ ದಿನಕ್ಕೂ ಮುಂದುವರೆದಿದ್ದು ನಮ್ಮ ಮನವಿಗೆ ಮತ್ತು ಹೋರಾಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಆಡಳಿತ ನಡೆಸುವ ಸರ್ಕಾರ ವಿರುದ್ಧ ಇಂದಿನಿಂದ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಈ ಹೋರಾಟದಲ್ಲಿ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಏನೇ ಹೆಚ್ಚು ಕಮ್ಮಿಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆ ಹಾಗೂ ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆ ವೇಳೆ ಅಧಿಕಾರಿಗಳು ಹಾಗೂ ಆಡಳಿತದ ವ್ಯವಸ್ಥೆಯ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹಾಗೂ ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ತೆಜರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಪ್ರತಿಭಟನೆಗಾರರು ಮನವಿ ಪತ್ರ ಇದೆ ಸಂದರ್ಭ ನೀಡಿದರು.

ಪ್ರತಿಭಟನೆಯಲ್ಲಿ ಬ್ರಿಗೇಡ್ ಸಂಘಟನೆಯ ರಾಜ್ಯಾಧ್ಯಕ್ಷ ರೇವತಿ ರಾಜ್, ಬಹುಜನ ಭಾಗ್ಯ ವಿಧಾತಾ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷ ಚೇತನ್ ಕುಮಾರ್, ಹಾಗೂ ಸ್ಥಳೀಯ ಕಾಫಿ ಬೆಳೆಗಾರರಾದ ಬೋಪಣ್ಣ, ರಾಮಚಂದ್ರ, ವಿಷ್ಣು, ರೋಹನ್,ಸೇದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು  ಹಾಜರಿದ್ದರು

Continue Reading

Kodagu

ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ

Published

on

ಮಡಿಕೇರಿ : ಮಡಿಕೇರಿ ಕಾಟಕೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಅಡಿಗೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಡಿಕೇರಿ-ಮಂಗಳೂರು ಮುಖ್ಯರಸ್ತೆಯ ಕಾಟಕೇರಿ ಬಳಿಯ ಪ್ರಶಾಂತಿ ಹೋಂ ಸ್ಟೇ ಎದುರು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೈಕ್ ಸವಾರ ನಾಪೋಕ್ಲು ಬಳಿಯ ಕಕ್ಕಬ್ಬೆ ನಿವಾಸಿ ಬೆಟ್ಟಗೇರಿಯಲ್ಲಿ ವಾಸವಿರುವ ಶರತ್ (28) ಮೃತ ವ್ಯಕ್ತಿ.
ಮಡಿಕೇರಿ ಮಂಗಳೂರು ಮುಖ್ಯರಸ್ತೆಯಲ್ಲಿ ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

Trending

error: Content is protected !!