Kodagu
ಕೊಡವ ಪದ ಬಳಕೆ : ಸಂಪುಟ ಸಭೆ ಅನುಮೋದನೆ : ಸಿಎನ್‌ಸಿ ಹರ್ಷ
ಮಡಿಕೇರಿ: ಸರ್ಕಾರಿ ದಾಖಲೆಗಳಲ್ಲಿ ಕೊಡಗರು ಅಥವಾ ಕೊಡವರು ಪದ ಬಳಕೆಗೆ ಬದಲಾಗಿ “ಕೊಡವ” ಎಂದು ಬಳಕೆ ಮಾಡಲು ರಾಜ್ಯ ಸಚಿವ ಸಂಪುಟದ ಸಭೆ ಅನುಮೋದನೆ ನೀಡಿದೆ.
ದಾಖಲೆಗಳಲ್ಲಿ ಕೊಡಗರು ಅಥವಾ ಕೊಡವರು ಎನ್ನುವ ಪದ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿ “ಕೊಡವ” ಶಾಸ್ತಿçÃಯ ಪದ ಬಳಕೆಗಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಿರತರವಾಗಿ ಹೋರಾಟ ನಡೆಸುತ್ತಾ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಹಕಾರದೊಂದಿಗೆ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು “ಕೊಡವ” ಪದ ಬಳಕೆಗೆ ಸಚಿವ ಸಂಪುಟದ ಅನುಮೋದನೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ನಾಚಪ್ಪ ಅವರು, ಇದು ಸಿಎನ್‌ಸಿ ಹೋರಾಟದ ಫಲವಾಗಿದ್ದು, ಯಶಸ್ಸಿನ ಚಾರಿತ್ರಿಕ ಮೈಲುಗಲ್ಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
“ಕೊಡವ” ಪದವನ್ನು ಕ್ಯಾಬಿನೆಟ್ ನಿರ್ಣಯದ ಮೂಲಕ ಅಧಿಕೃತಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ. “ಕೊಡವ” ಎನ್ನುವ ಉಜ್ವಲ ಶಾಸ್ತ್ರೀಯ ನಾಮಕ್ಕೆ ಶಾಸನಬದ್ಧ ಸ್ಥಿರೀಕರಣ ದೊರೆತ್ತಿದ್ದು, ಇದು ಸಿಎನ್‌ಸಿಯ ಮಹತ್ವದ ಮೈಲುಗಲ್ಲಾಗಿದೆ.
ಕೊಡವರನ್ನು “ಕೊಡವ” ಎಂದು ನಮೂದಿಸದೆ “ಕೊಡಗರು” ಎಂದು ನಮೂದಿಸುವ ಮೂಲಕ ಕೊಡವ ಬುಡಕಟ್ಟು ಆದಿಮ ಸಂಜಾತ ಮೂಲನಿವಾಸಿಗಳ ಅಸ್ತಿತ್ವದ ಬಗ್ಗೆ ಆತಂಕ ಮೂಡಿಸಲಾಗುತ್ತಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಿಎನ್‌ಸಿ ಸಂಘಟನೆ ೨೦೦೮ ರಿಂದಲೇ ಹೋರಾಟವನ್ನು ಆರಂಭಿಸಿತು. ಕೊಡವರ ಭಾವನೆಯನ್ನು ಅರ್ಥ ಮಾಡಿಕೊಂಡು ನಮ್ಮ ಬೇಡಿಕೆಯನ್ನು ಈಡೇರಿಸುವ ಮೂಲಕ ನ್ಯಾಯ ಒದಗಿಸುವ ಕೆಲಸವನ್ನು ಆಡಳಿತ ವ್ಯವಸ್ಥೆಗಳು ಇಲ್ಲಿಯವರೆಗೆ ಮಾಡಿರಲಿಲ್ಲ.
ಆದರೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಕ್ಯಾಬಿನೆಟ್ ಸಭೆಯಲ್ಲಿ ಕೊಡವರನ್ನು “ಕೊಡವ” ಎಂದು ನಮೂದಿಸುವ ಕುರಿತು ಅನುಮೋದನೆ ದೊರೆತ್ತಿದೆ. ಇದು ನಮಗೆ ಸಿಕ್ಕ ದೊಡ್ಡ ಜಯವಾಗಿದ್ದು, ಇದಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಶಿವರಾಜ್ ತಂಗAಡಗಿ, ಶಾಸಕ ಎ.ಎಸ್.ಪೊನ್ನಣ್ಣ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರುಗಳಾಗಿದ್ದ ಸಮಾಜ ವಿಜ್ಞಾನಿ ಡಾ.ದ್ವಾರಕನಾಥ್, ಡಾ.ಜಯಪ್ರಕಾಶ್ ಹೆಗ್ಡೆ, ಹೈಕೋರ್ಟ್ ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್, ನ್ಯಾಯವಾದಿ ಬಲ್ಲಚಂಡ ಬೆಳ್ಳಿಯಪ್ಪ, ಸುದೀರ್ಘ ಹೋರಾಟದಲ್ಲಿ ಕೈಜೋಡಿಸಿದ ಸಿಎನ್‌ಸಿ ಸ್ವಯಂ ಸೇವಕರು, ಅಭಿಮಾನಿಗಳು, ಪರೋಕ್ಷ ಮತ್ತು ನೇರವಾಗಿ ಬೆಂಬಲಿಸಿದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
Kodagu
ಡಾ.ಬಿ.ಆರ್.ಅಂಬೇಡ್ಕರ್ ಜೀವನ ಸಾಧನೆಗಳನ್ನು ಅಧ್ಯಯನ ಮಾಡಿ: ವೆಂಕಟ್ ರಾಜಾ
ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಅವರ ಮೌಲ್ಯ, ಜೀವನ ಸಾಧನೆಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ‘ಪರಿನಿರ್ವಾಣ ದಿನ’ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶ ವಿದೇಶಗಳಲ್ಲಿ ಹಲವು ಸ್ನಾತಕೋತ್ತರ ಪದವಿ ಪಡೆದು ರಾಷ್ಟ್ರಕ್ಕೆ ಒಳ್ಳೆಯ ಸಂವಿಧಾನ ನೀಡಿದ್ದಾರೆ. ಅವರ ಜೀವನ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.
ದೇಶ ವಿದೇಶಗಳಲ್ಲಿ ಅಂಬೇಡ್ಕರ್ ಅವರ ಅಧ್ಯಯನ ಕೇಂದ್ರಗಳು ಹಾಗೂ ಸಂಶೋಧನಾ ಕೇಂದ್ರಗಳು ಇವೆ. ಇಡೀ ಪ್ರಪಂಚದಲ್ಲಿಯೇ ಅವರು ಅಜರಾಮರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಸ್ಮರಿಸಿದರು.

ದೇಶ ವಿದೇಶಗಳಲ್ಲಿಯೂ ಸಹ ಅವರ ಪ್ರತಿಮೆಯನ್ನು ಕಾಣಬಹುದಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಅಧ್ಯಯನಶೀಲತೆ ಮತ್ತು ಸಾಮಾಜಿಕ ಹೋರಾಟ ರಾಷ್ಟ್ರದಲ್ಲಿ ಒಂದು ರೀತಿ ಮಹಾನ್ ಕ್ರಾಂತಿ ಎಂದು ಜಿಲ್ಲಾಧಿಕಾರಿ ಅವರು ವರ್ಣಿಸಿದರು.
ಅಂಬೇಡ್ಕರ್ ಅವರ ಮೌಲ್ಯಗಳು ಹಾಗೂ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು. ಅವರು ಬರೆದಿರುವ ಸಂವಿಧಾನವನ್ನು ಸ್ಮರಿಸಿಕೊಂಡು ಅಭಿವೃದ್ಧಿಯತ್ತ ಚಿಂತನೆ ಮಾಡಬೇಕು. ಮುಂದಿನ ಪೀಳಿಗೆಗೆ ಮಾರ್ಗದರ್ಶಕರಾಗಿ ನಡೆದುಕೊಳ್ಳಬೇಕು ಎಂದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ ಅವರು ಮಾತನಾಡಿ, ಸುಮಾರು ಆರು ದಶಕಗಳ ಹೋರಾಟದ ನಂತರ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣವಾಗುತ್ತಿರುವುದು ಶ್ಲಾಘನೀಯ ಎಂದರು.
ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಸಂಬಂಧ ಜಿಲ್ಲಾಧಿಕಾರಿ ಅವರು ನುಡಿದಂತೆ ನಡೆದಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ನಗರಸಭೆ ಸದಸ್ಯರಾದ ಎಸ್.ಸಿ.ಸತೀಶ್, ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕರಾದ ದೀಪಕ್ ಪೊನ್ನಪ್ಪ, ಪ್ರಮುಖರಾದ ಮೋಹನ್ ಮೌರ್ಯ, ಪ್ರೇಮ್ ಕುಮಾರ್, ರಮೇಶ್, ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
Kodagu
ಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್‌ಸಿ
ಮಡಿಕೇರಿ: ಪತ್ತ್‌ಕಟ್ಟ್‌ನಾಡಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನಡೆದ 32ನೇ ವರ್ಷದ ’ಪುತ್ತರಿ ನಮ್ಮೆ’ಯ ಹಿನ್ನೆಲೆ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
ವೀರ ಮರಣವನ್ನಪ್ಪಿದ ಕೊಡವರಿಗೆ ಗೌರವ ಸಲ್ಲಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು 1790-92 ಮತ್ತು 1799ರ ನಡುವೆ ಕ್ರಮವಾಗಿ ಜನರಲ್ ಲಾರ್ಡ್ ಕಾರ್ನ್‌ವಾಲೀಸ್ ಹಾಗೂ ಜನರಲ್ ಲಾರ್ಡ್ ವೆಲ್ಲೆಸ್ಲಿ ನೇತೃತ್ವದಲ್ಲಿ ನಡೆದ 3ನೇ ಮತ್ತು 4ನೇ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಆದಿಮ ಸಂಜಾತ ಏಕಜನಾಂಗೀಯ ಆನಿಮಿಸ್ಟಿಕ್ ನಂಬುಗೆಯ ಕೊಡವರು ತೋರಿದ ಶೌರ್ಯವನ್ನು ಸ್ಮರಿಸಿದರು.

ಡಿ.ವೀರರಾಜರ ಮಾರ್ಗದರ್ಶನದಲ್ಲಿ ಕೊಡವ ಸೈನ್ಯವು ಮೈಸೂರು ಸುಲ್ತಾನರ ವಿರುದ್ಧ ಬ್ರಿಟಿಷರೊಂದಿಗೆ ಸಮುದಾಯದ ಮಿಲಿಟರಿ ಮೈತ್ರಿಯನ್ನು ಮಾಡಿಕೊಂಡು ನಡೆಸಿದ ಯುದ್ಧದಲ್ಲಿ ಟಿಪ್ಪು ಸುಲ್ತಾನನಿಗೆ ಸೋಲಾಯಿತು. ಕೊಡವ ಯೋಧರ ವೀರಾವೇಶದಿಂದಲೇ ಮೈಸೂರು ಸುಲ್ತಾನರಿಗೆ 31 ಬಾರಿ ಸೋಲಾಗಿದೆ ಎಂದರು.
1785 ರಲ್ಲಿ ಮೈಸೂರು ಸುಲ್ತಾನರು ಹಾಗೂ ಫ್ರೆಂಚ್ ಪಡೆಗಳು ನಡೆಸಿದ ದೇವಟ್ ಪರಂಬು ದಾಳಿಯಿಂದಾದ ಕೊಡವ ನರಮೇಧದ ಪರಿಣಾಮ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಕೊಡವ ಯೋಧರು ಭಾಗವಹಿಸಲು ಕಾರಣವಾಯಿತು. ವೀರ ಕೊಡವರ ಶೌರ್ಯವನ್ನು ಗೌರವಿಸುವುದಕ್ಕಾಗಿ ’ಪುತ್ತರಿ ನಮ್ಮೆ’ಯ ಪ್ರಯುಕ್ತ ಹಿತಿಯರನ್ನು ಸ್ಮರಿಸಲಾಯಿತು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಲಿಯಂಡ ಮೀನಾ ಪ್ರಕಾಶ್, ಕಲಿಯಂಡ ಪ್ರಕಾಶ್, ಜಮ್ಮಡ ಮೋಹನ್, ಕಾಂಡೇರ ಸುರೇಶ್, ಬೇಪಡಿಯಂಡ ದಿನು, ಅರೆಯಡ ಗಿರೀಶ್, ನಂದೇಟಿರ ರವಿ ಸುಬ್ಬಯ್ಯ, ಬೊಟ್ಟಂಗಡ ಗಿರೀಶ್, ಚಂಬಂಡ ಜನತ್, ಕಿರಿಯಮಾಡ ಶೆರಿನ್, ಪಾರ್ವಂಗಡ ನವೀನ್, ಕಿರಿಯಮಾಡ ಶಾನ್, ಮದ್ರಿರ ಕರುಂಬಯ್ಯ, ಅಪ್ಪೆಯಂಗಡ ಮಾಲೆ ಪೂಣಚ್ಚ ಹಾಗೂ ಚೊಕ್ಕಂಡ ಕಟ್ಟಿ ಪಾಲ್ಗೊಂಡಿದ್ದರು.
Kodagu
ಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಶಾಸಕ ಪೊನ್ನಣ್ಣ ಭೇಟಿ
ಮಡಿಕೇರಿ : ತಾಲೂಕು ಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭೇಟಿ ನೀಡಿದರು.
ಬಳಿಕ ಶಾಸಕರ ಅನುದಾನದ 25 ಲಕ್ಷಗಳಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ದುರಸ್ತಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು, ಎಲ್ಲರಿಗೆ ಶುಭ ಕೋರಿದರು. ಬಳಿಕ ಮೇಕೇರಿಯ ಶಾಲೆ ಎದುರಿನ ಮುಖ್ಯ ರಸ್ತೆ ಬಳಿ, ನೂತನವಾಗಿ ಶಾಸಕರ ಅನುದಾನದಲ್ಲಿ ನಿರ್ಮಾಣ ಆಗುತ್ತಿರುವ ಬಸ್ ತಂಗುದಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಹಾಕತ್ತುರು ವಲಯ ಅಧ್ಯಕ್ಷರು ಪಿಯೂಸ್, ಮೇಕೇರಿ ವಲಯ ಪೊನ್ನಪ್ಪ, ಶಾರದಾ, ಜಗತ್, ವಿಜಯಲಕ್ಷ್ಮಿ, ಬೂತ್ ಅಧ್ಯಕ್ಷರು ಕೊರಗಪ್ಪ, ಶಂಕರ ಪೂಜಾರಿ, ತಿಮ್ಮಯ್ಯ, ಪಂಚಾಯಿತಿ ಸದಸ್ಯರು ಹನೀಫ್, ಸೂರಜ್ ಹೊಸೂರು, ಉದಯ ಅಯ್ಯಪ್ಪ, ಸಾಕಿಬ್, ಪ್ರಕಾಶ್, ಆಪ್ರು ರವೀಂದ್ರ, ರತ್ನಕರ್ ರೈ,ಅಭಿನ್ ರೈ ಹಾಗೂ ಉಪಸ್ಥಿತರಿದ್ದರು.
-
Hassan21 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Mandya20 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Hassan22 hours agoಹಾಸನದಲ್ಲಿ ಸರ್ಕಾರಿ ಸೇವೆಗಳ ಸಮರ್ಪಕ ಸಮರ್ಪಣಾ ಸಮಾವೇಶ ಹಿನ್ನೆಲೆ
-
Mysore19 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
-
Hassan23 hours agoಹಾಸನಕ್ಕೆ ಆಗಮಿಸಿದ ಸಿಎಂ ಮತ್ತು ಡಿಸಿಎಂ
-
Mysore18 hours agoಪಠ್ಯದಿಂದ ಡಾ.ಅಂಬೇಡ್ಕರ್ ಹೊರಗಿಡುವ ಹುನ್ನಾರ: ಪ್ರೊ.ಪ್ರಸನ್ನಕುಮಾರ್ ಕೆರಗೋಡು ಶಂಕೆ
-
Chamarajanagar18 hours agoಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು
-
Kodagu18 hours agoಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್‌ಸಿ
