Connect with us

Mysore

ಕೋಮುವಾದಿ ರಾಜಕಾರಣವನ್ನು ಕೊನೆಗಾಣಿಸಬೇಕು: ಡಾ.ಎಚ್.ಸಿ.ಮಹದೇವಪ್ಪ

Published

on

ಮೈಸೂರು,ಡಿ.28: ಸ್ವಾತಂತ್ರ್ಯ ಸಂಗ್ರಾಮದ ಮೂಲಕ ಸಮೃದ್ದ ಭಾರತದ ನಿರ್ಮಾಣಕ್ಕೆ ಪೂರಕವಾಗುವಂತೆ ದೇಶದ ಆತ್ಮವಾದ ಸಂವಿಧಾನದ ಆಶಯವನ್ನು ಬಲಪಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಆದರೆ ಧರ್ಮ ಮತ್ತು ದೇವರ ಹೆಸರಿನಲ್ಲಿ ದೇಶವನ್ನು ವಿಭಜಿಸಲು ಹೊರಟಿರುವ ಕೋಮುವಾದಿ ರಾಜಕಾರಣವನ್ನು ಕೊನೆಗಾಣಿಸಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ಮೈಸೂರು ನಗರ ಮತ್ತು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಸೇವಾದಳ ಸಹಯೋಗದಲ್ಲಿ ಗುರುವಾರ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ 138ನೇ ಭಾರತದ ರಾಷ್ಟ್ರೀಯ ಕಾಂಗ್ರೆಸ್ ಹಾಗೂ 100 ನೇ ಕಾಂಗ್ರೆಸ್ ಸೇವಾದಳ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚಳುವಳಿಗೆ ಆಗಾಧವಾದ ಶಕ್ತಿ ಇದೆ‌. ಇಂದಿನ ದೇಶದ ಪರಿಸ್ಥಿತಿಗೆ ಅನುಗುಣವಾಗಿ ಚಳುವಳಿಯನ್ನು ನಿರಂತರವಾಗಿ ನಡೆಸುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಪ್ರಾರಂಭಿಸಲು ಕಾಂಗ್ರೆಸ್ ಪಕ್ಷ ಸಿದ್ಧವಿದೆ ಎಂದು ಹೇಳಿದರು.

ಅನೇಕ ಧರ್ಮಗಳು, ವಿವಿಧ ಭಾಷೆಯ ಜನರು ವಾಸಿಸುವ ಬಹುತ್ವದ ಭಾರತಕ್ಕೆ ಕಾಂಗ್ರೆಸ್ ಅನೇಕ ಕೊಡುಗೆಗಳನ್ನು ನೀಡಿದೆ. ಇಂದು ಕೋಮುವಾದ, ಮತೀಯವಾದ, ಧರ್ಮಾಂದತೆ, ಸ್ವಾತಂತ್ರ್ಯದ ಉದ್ದೇಶ ಕಾಂಗ್ರೆಸ್ ಹೋರಾಟದ ಆಶಯಗಳನ್ನು ನಾಶ ಮಾಡಲು ಹೊರಟಿದ್ದಾರೆ. ಭಾರತದ ಇಡೀ ಚರಿತ್ರೆಯನ್ನು ತಿರುಚುವ ಕೆಲಸ ಮಾಡಲಾಗುತ್ತದೆ. ನಮ್ಮ ನಾಗರೀಕ ಬದುಕನ್ನು, ಸಾಂಸ್ಕೃತಿಕ ಜೀವನ ನಾಶಮಾಡಿ ಬಹುತ್ವಕ್ಕೆ ಭಂಗ ತರುವ ಕೆಲಸ ನಡೆಯುತ್ತಿದೆ. ಹೀಗಾಗಿ ಸರ್ವಾಧಿಕಾರ ಆಡಳಿತವನ್ನು ಕೊನೆಗಾಣಿಸಬೇಕು ಕರೆ ನೀಡಿದರು.

ಕಾಂಗ್ರೆಸ್ ಎಂದರೆ ಒಗ್ಗೂಡುವಿಕೆ ಎಂದರ್ಥ. ಜನರನ್ನು ಒಗ್ಗೂಡಿಸಿ ಜನಶಕ್ತಿಯ ಮೂಲಕ ಪರಕೀಯರು ನಮ್ಮನ್ನು ಆಳುವಿಕೆಯ ವಿರುದ್ಧವಾಗಿ ಕಾಂಗ್ರೆಸ್ ಹೋರಾಟ ಮಾಡಿದೆ. ವಸಹಾತುಶಾಹಿ ಸಾಮ್ರಾಟದ ವಿರುದ್ಧವಾಗಿ ಸಂಘಟನಾತ್ಮಕವಾಗಿ ಅಹಿಂಸೆ ಮತ್ತು ಅಸಹಕಾರ ಚಳುವಳಿಯನ್ನು ಮಾಡಿರುವ ಕಾಂಗ್ರೆಸ್‌ನ ಉದ್ದೇಶ ಕೋಮುಸೌರ್ಹದತೆ ಕಾಪಾಡುವುದು, ಅಸ್ಪೃಶ್ಯತೆ ನಿವಾರಣೆ ಮಾಡುವುದು ಆಗಿದೆ ಎಂದು ಹೇಳಿದರು.

ಕಾಂಗ್ರೆಸ್ ಹೋರಾಟ ರಾಜಕೀಯ ಉದ್ದೇಶವನ್ನು ಇಟ್ಟುಕೊಂಡು ಮಾಡಿದ್ದಲ್ಲ. ಜನರು ಮತ್ತು ದೇಶದ ಹಿತಕ್ಕಾಗಿ ಮಾಡಿದ ಚಳುವಳಿ. ಕಾಂಗ್ರೆಸ್‌ನ ಅನೇಕ ನಾಯಕರು ತ್ಯಾಗ, ಬಲಿದಾನಗಳನ್ನು ಮಾಡಿರುವುದು ಚರಿತ್ರೆಯಲ್ಲಿ ದಾಖಲಾಗಿದೆ. ಹೀಗಾಗಿ ಕಾಂಗ್ರೆಸ್‌ ಪಕ್ಷದ ಸದಸ್ಯರು ಎಂದೇಳಲು ನಮ್ಮೆಲ್ಲರಿಗೂ ಹಮ್ಮೆ ಇದೆ. ಸಿದ್ಧಾಂತದ ಅನ್ವಯ ಹೋರಾಟಗಳನ್ನು ಕೈಗೊಂಡು ಗುಲಾಮಗಿರಿಯನ್ನು ಕೊನೆಗೊಳಿಸಲಾಗಿದೆ‌ ಎಂದರು.

ಸ್ವಾತಂತ್ರ್ಯ ಹೊರಾಟಕ್ಕೂ ಮೊದಲೇ ದಕ್ಷಿಣ ಆಫ್ರಿಕಾದಲ್ಲಿ ಕರಿಯರು ಹಾಗೂ ಬಿಳಿಯರ ನಡುವಿನ ಹೋರಾಟವನ್ನು ಕಾಂಗ್ರೆಸ್ ಮಾಡಿದೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ, ನೆಹರು ಹಾಗೂ ವಲ್ಲಭಾಯ್ ಪಟೇಲ್ ಸೇರಿದಂತೆ ಅನೇಕ ಘಟಾನುಘಟಿ ನಾಯಕರು ಭಾಗಿಯಾಗಿದ್ದಾರೆ. ಸಾಮಾಜಿಕ, ಆರ್ಥಿಕವಾಗಿ ಜನರ ಸ್ಥಿತಿಗತಿಗೆ ಅನುಗುಣವಾಗಿ ನಾವು ಸಂವಿಧಾನ ಪಡೆಯಲು ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನದ ರಚಿಸಿದರು. ಆದರೆ ಇಂದು ಸ್ವಾತಂತ್ರ್ಯ ಸಂಗ್ರಾಮದ ಗೋಜಿಗೆ ಹೋಗದವರು ಇಂದು ಮೂಗುತೂರಿಸುತ್ತುದ್ದಾರೆ ಎಂದು ಹೇಳಿದರು.

ಜವಹರ ಲಾಲ್ ನೆಹರು ಅವರಿಗೆ ಬದ್ಧತೆ ಇತ್ತು. ವೈಚಾರಿಕ ಮತ್ತು ವೈಜ್ಞಾನಿಕ ಆಲೋಚನೆ ಮೈಗೂಡಿಸಿಕೊಂಡಿದ್ದರು. ದೇಶವನ್ನು ಮುನ್ನಡೆಸುವ ದಾರಿ ಅವರಿಗೆ ಸ್ಪಷ್ಟವಾಗಿ ತಿಳಿದಿತ್ತು. ನೆಹರು ಅವರು ಈ ದೇಶದ ಸರ್ವಾಂಗೀಣ ಅಭಿವೃದ್ದಿಗೆ ಅಹರ್ನಶಿ ಶ್ರಮಿಸಿದ್ದಾರೆ. ಸ್ವಾಂತತ್ರ ದೊರೆತಾಗ ದೇಶದ ಶಿಕ್ಷಣ ಸಾಕ್ಷರತೆ ಕೇವಲ ಶೇ.10 ರಷ್ಟಿತ್ತು, ಪ್ರಸ್ತುತ ಶೆ.84 ರಷ್ಟಿದೆ. ಆದರೆ ಶ್ರೇಣಿಕೃತ ಸಮಾಜ ಬಹುಸಂಖ್ಯಾತರನ್ನು ಶಿಕ್ಷಣದಿಂದ ವಂಚಿಸಿತ್ತು. ತಳಸಮುದಾಯಕ್ಕೆ ಮತ್ತು ಶೂದ್ರಸಮುದಾಯಗಳಿಗೆ ಶಿಕ್ಷಣ ವಂಚಿಸುವ ಕಾರ್ಯಕ್ರಮ ರೂಪಿಸಿತ್ತು ಎಂದರು.

ಆರೋಗ್ಯ, ಉದ್ಯೋಗ ಹಾಗೂ ಬದುಕಿನ ಅವಶ್ಯಗಳಿಗೆ ಪ್ರೇರಣ ಶಕ್ತಿಯಾಗಿ ಕಾಂಗ್ರೆಸ್ ಕೆಲಸ ಮಾಡಿದೆ‌. ಆಹಾರ ಸ್ವಾವಲಂಬನೆಗಾಗಿ ದೇಶದಲ್ಲೇ ಅತ್ಯಂತ ಬಹುದೊಡ್ಡ ಬಾಕ್ರನಂಗಲ್ ಅಣೆಕಟ್ಟು ಕಟ್ಟಿದೆ. ದೇಶವನ್ನು ಸಮೃದ್ಧಿಯಾಗಿ ನಿರ್ಮಿಸಲು ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದಿದೆ‌. ಉಳುವವನೆ ಹೊಲದೊಡೆಯ ಕಾಯ್ದೆ ಅನುಷ್ಠಾನ ಮಾಡಿದೆ‌. ಅನಾರೋಗ್ಯದಿಂದರುವವರು ಅರೋಗ್ಯವಾಗಬೇಕು, ಅನಕ್ಷರಸ್ಥರು ಅಕ್ಷರಸ್ಥರಾಗಬೇಕು. ಸ್ವಾಭಿಮಾನ ಮತ್ತು ಸ್ವಾವಲಂಬನೆ ಆರ್ಥಿಕ ಸ್ವಾತಂತ್ರ್ಯ ತಳಹದಿಯ ಮೇಲೆ ನಮ್ಮ ಹೋರಾಟ ಮಾಡಬೇಕು ಎಂಬ ಪರಿಕಲ್ಪನೆಯೊಂದಿಗೆ ಕಾಂಗ್ರೆಸ್ ಕೆಲಸ ಮಾಡಿದೆ ಎಂದು ತಿಳಿಸಿದರು.

ನಮ್ಮ ದೇಶದ ಕೃಷಿ, ನೀರಾವರಿ ವ್ಯವಸ್ಥೆ, ಯುವಕರ ಭವಿಷ್ಯ, ಮಹಿಳೆಯರ ಮತ್ತು ಅಲ್ಪಸಂಖ್ಯಾತರ ಹಕ್ಕು, ಅಂತಾರಾಷ್ಟ್ರೀಯ ಹಾಗೂ ಕೈಗಾರಿಕ ನೀತಿಗಳು ಹೇಗಿರಬೇಕು ಎಂಬುದು ಹಾಗೂ ದೇಶದ ಸಂಪನ್ಮೂಲ ಸರಿಸಮಾನವಾಗಿ ಹಂಚುವಲ್ಲಿ ಕಾಂಗ್ರೆಸ್ ಪ್ರಗತಿ ಸಾಧಿಸಿದೆ. ಆದರೆ ಇತ್ತೀಚಿನ ವರ್ಷದಲ್ಲಿ ಏನೂ ಕೆಲಸ ಮಾಡದೆ, ಮಾಡಿರುವ ಕೆಲಸಕ್ಕೆ ಅಪಪ್ರಚಾರ ಮಾಡಿ, ನಮ್ಮ ನಾಯಕರನ್ನು ಅವಹೇಳನ ಮಾಡುವ ಕೋಮುವಾದಿಗಳಿಗೆ ಕಾಂಗ್ರೆಸ್ ತಕ್ಕಪಾಠ ಕಲಿಸಲಿದೆ ಎಂದು ಹೇಳಿದರು.

ಇದೇ ವೇಳೆ ‘ಡೊನೆಟ್ ಫಾರ್ ದೇಶ್’ ವಂತಿಕೆ ಸಂಗ್ರಹ ಅಭಿಯಾನಕ್ಕೆ ಸಚಿವರು ವೈಯಕ್ತಿಕವಾಗಿ 1.38 ಲಕ್ಷ ರೂ. ನೀಡುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಮೂರ್ತಿ, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ನಗರ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಎಂ.ಶಿವಣ್ಣ, ಮಾಜಿ ಸಂಸದ ಶಿವಣ್ಣ, ಮಾಜಿ ಶಾಸಕಿ ಸುನಿತಾ ವೀರಪ್ಪಗೌಡ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mysore

ಖ್ಯಾತ ಜಾನಪದ ವಿದ್ವಾಂಸರಾದ ಡಾ.ಜಯಲಕ್ಷ್ಮೀ ಸೀತಾಪುರ ವಿಧಿವಶ

Published

on

ಮೈಸೂರು: ಹೆಸರಾಂತ ಜಾನಪದ ಶಾಸ್ತ್ರಜ್ಞೆ ಡಾ.ಜಯಲಕ್ಷ್ಮೀ ಸೀತಾಪುರ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ವಾರ ಅವರು ಬೆಂಗಳೂರಿಗೆ‌ ಕಾರಲ್ಲಿ ಹೊರಟಿದ್ದಾಗ ಅಪಘಾತ ಸಂಭವಿಸಿದ್ದು, ಗಾಯಗೊಂಡಿದ್ದ ಅವರು ನಗರದ ಖಾಸಗಿ ಆಸ್ಪತ್ತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ಹೃದಯಾಘಾತದಿಂದ ನಿಧನರಾದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸೀತಾಪುರದವರು. ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಜಾನಪದ ವಿಭಾಗದಲ್ಲಿ ಅಧ್ಯಾಪಕರಾಗಿ ನಿವೃತ್ತರಾಗಿದ್ದರು. ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದರು.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಜಾನಪದ ಎಂ.ಎ ಪದವಿ ಪಡೆದು, ಸಂಶೋಧನಾ ಸಹಾಯಕರಾಗಿ ಕಾರ್ಯನಿರ್ವಹಿಸಿದರು. ನಂತರ ‘ಕನ್ನಡದಲ್ಲಿ ಐತಿಹಾಸಿಕ ಜಾನಪದ ಮಹಾಕಾವ್ಯಗಳು’ ಕುರಿತು ಪಿಎಚ್.ಡಿ ಪದವಿ ಪಡೆದರು. ಅಮೆರಿಕದ ಫೋರ್ಡ್ ಫೌಂಡೇಷನ್ ಫೆಲೋಶಿಪ್ ಗೆ ಆಯ್ಕೆಯಾಗಿದ್ದರು.

ಹಲವಾರು ವಿದ್ಯಾರ್ಥಿಗಳಿಗೆ ಪಿಎಚ್.ಡಿ ಅಧ್ಯಯನಕ್ಕೆ ಅವರು ಮಾರ್ಗದರ್ಶಕರಾಗಿದ್ದರು. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಜಿಶಂಪ ಪ್ರಶಸ್ತಿ, ಮುದ್ದು ಮಾದಪ್ಪ ಪುರಸ್ಕಾರ, ಜಾನಪದ ಲೋಕ ಪ್ರಶಸ್ತಿ ಪುರಸ್ಕೃತರಾಗಿದ್ದರು.

Continue Reading

Mysore

ವಿಜೃಂಭಣೆಯಿಂದ ಜರುಗಿದ ಶ್ರೀ ಆದಿಶಕ್ತಿ ಮುತ್ತುತಾಳಮ್ಮ‌ ದೇವರ ರಥೋತ್ಸವ

Published

on

ಸಾಲಿಗ್ರಾಮ  : ತಾಲೂಕಿನ‌ ಚಿಕ್ಕಕೊಪ್ಪಲು ‌ಗ್ರಾಮದಲ್ಲಿ‌ ಬಂಡಿಹಬ್ಬದ ಪ್ರಯುಕ್ತ ಶ್ರೀ ಆದಿಶಕ್ತಿ ಮುತ್ತುತಾಳಮ್ಮ‌ ದೇವರ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಾರಿ ವಿಜೃಂಭಣೆಯಿಂದ ನಡೆಯಿತು.
11 ವರ್ಷದ ನಂತರ ನಡೆದ ಈ ಹಬ್ಬದ ಹಿನ್ನಲೆಯಲ್ಲಿ ಚಿಕ್ಕಕೊಪ್ಪಲು ಗ್ರಾಮದ ದೇವರಹಟ್ಟಿ ಬಳಿ ಹೂವಿನ ಅಲಂಕಾರ ದಿಂದ ಶೃಂಗಾರಗೊಂಡಿದ್ದ ರಥದಲ್ಲಿ ಆದಿಶಕ್ತಿ ಮುತ್ತುತಾಳಮ್ಮ‌ ದೇವರನ್ನ ಪ್ರತಿಷ್ಠಾಪಿಸಿದ ಬಳಿದ ಅರ್ಚಕ ಮಂಜುನಾಯಕ್ ದೇವರಿಗೆ ಪೂಜೆ ಸಲ್ಲಿಸಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.


ನಂತರ ಹಾಜರಿದ್ದ ಭಕ್ತರು ದೇವರಿಗೆ ಚಪ್ಪಾಳೆ- ಜಯಕಾರ ದೊಂದಿಗೆ ರಥವನ್ನು ಗ್ರಾಮದಿಂದ ಕುಪ್ಪೆ ಗ್ರಾಮಕ್ಕೆ ಎಳೆದು ತಂದು ದೂಳ್ ಮರಿ ಬಲಿ ಕೊಟ್ಟ ನಂತರ ಮತ್ತೆ ಚಿಕ್ಕಕೊಪ್ಪಲು ಗ್ರಾಮದ ಹೊರವಲಯದ ಬಳಿ ಇರುವ ಶ್ರೀ ಆದಿಶಕ್ತಿ ಮುತ್ತುತಾಳಮ್ಮ ದೇವರ ದೇವಸ್ಥಾನಕ್ಕೆ ತಂದು ಸಂಭ್ರಮಿಸಿದರು.

21 ಕ್ಕೆ ಮಡೆ ಹಬ್ಬ
14 ಶುಕ್ರವಾರ ದಿಂದ ಗ್ರಾಮದಲ್ಲಿ ಆಂಭಗೊಂಡ ಬಂಡಿ ಹಬ್ಬವು 21 ರ ಶುಕ್ರವಾರ ಸಂಜೆ 7 ಗಂಟೆಗೆ ಗ್ರಾಮದ‌ ಮಲ್ಲಮ್ಮನ ಕೊಳದ ಬಳಿಯಿಂದ ತಂ ಬ್ಬಿಟ್ಟಿನ ಆರತಿಯನ್ನು ಗ್ರಾಮದ ಹೆಬ್ಬಾಗಿಲಿನ ವರಿಗೆ ಮೆರವಣಿಗೆ ಮಾಡುವ ಮೂಲಕ ಮಡೆ ಹಬ್ಬ ನಡೆದು, 8 ದಿನಗಳ ಕಾಲ ನಡೆದ ಮುತ್ತುತಾಳಮ್ನ‌ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಮುಕ್ತಾಯವಾಗಲಿದೆ.

ಆನಂತರ ಭಕ್ತಾಧಿಗಳು ಮತ್ತು ಗ್ರಾಮಸ್ಥರು ಆದಿ ಶಕ್ತಿ ಮುತ್ತುತಾಳಮ್ಮ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಹಬ್ಬದ ಹಿನ್ನಲೆಯಲ್ಲಿ ದೇವಾಲಯದ ಬಳಿ ಹಾಕಲಾಗಿದ್ದ ಕೊಂಡ ಹಾದು ತಮ್ಮ‌ಇಷ್ಟಾರ್ಥಗಳು  ನೇರವೇರಿಸುವಂತೆ ಮತ್ತು ಗ್ರಾಮಕ್ಕೆ ಒಳಿತಾಗುವಂತೆ ಪ್ರಾರ್ಥಿಸಿಕೊಂಡರು.
ಬಂಡಿ ಹಬ್ಬ ಮತ್ತು ರಥೋತ್ಸವದ ಹಿನ್ನಲೆಯಲ್ಲಿ ಗ್ರಾಮದಲ್ಲಿ ಹಾಕಲಾಗಿದ್ದ ವಿದ್ಯುತ್ ಆಲಂಕಾರ ಮತ್ತು ವಿವಿಧ ಬಗೆಯ ಪಟಾಕಿಗಳ ಆರ್ಭಟ ವೀರಗಾಸೆಯ ನೃತ್ಯಗಳು ಜೊತೆಗೆ ನಗಾರಿ ಶಬ್ದ ಅಲ್ಲದೇ ಯುವಕರ ಭರ್ಜರಿ ನೃತ್ಯ ಮನಸೂರೆಗೊಂಡಿತು. ಬೆಳಿಗ್ಗೆ 6 ಗಂಟೆಯಿಂದಲೇ ಮುತ್ತುತಾಳಮ್ಮ ದೇವಾಲಯದಲ್ಲಿ ಹೋಮ ಮತ್ತು ವಿಶೇಷ ಪೂಜಾಕಾರ್ಯ ನಡೆದವು.
ರಥೋತ್ಸವದಲ್ಲಿ ಯಜಮಾನರಾದ ಟಿ.ಪುರುಷೋತ್ತಮ್, ಸತ್ಯಪ್ಪ,ಸಿ.ಬಿ.ಸಂತೋಷ್, .ಸ್ವಾಮಿಗೌಡ,ಸಿ.ಎಲ್.ಬಸವರಾಜು,ಡಿ.ಕುಮಾರಸ್ವಾಮಿ, ಸಿ.ಆರ್.ಉಮೇಶ್, ಪ.ಸ್ವಾಮಿಗೌಡ, ಸಿ.ಕೆ.ರಾಮಸ್ವಾಮಿ,ರವೀಶ,ಅಪ್ಪಾಜಿಗೌಡ,ಬಡ್ಡಪ್ಪ ಜವರನಾಯಕ, ಸೇರಿದಂತೆ ಸಾವಿರಾರು ಮಂದಿ  ಭಕ್ತರು ಭಾಗವಹಿಸಿದ್ದರು.

ವರದಿ : ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ

Continue Reading

Mysore

ಮೈಸೂರು ಮೃಗಾಲಯವನ್ನು ಅಭಿವೃದ್ಧಿಪಡಿಸಿ ವಿಶ್ವ ಮಟ್ಟದ ಪ್ರವಾಸಿ ತಾಣ ಮಾಡಲಾಗುವುದು ಈಶ್ವರ್ ಬಿ ಖಂಡ್ರೆ

Published

on

ಮೈಸೂರು: ಜೂನ್.15 ಮೈಸೂರುಮೃಗಾಲಯವನ್ನು ಅಭಿವೃದ್ಧಿಪಡಿಸಿ ವಿಶ್ವ ಮಟ್ಟದ ಪ್ರವಾಸಿ ತಾಣ ವನ್ನಾಗಿ ಮಾಡಲಾಗುವುದು ಎಂದು ಅರಣ್ಯ, ಪರಿಸರ ಜೀವ ಶಾಸ್ತ್ರ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದರು.

ಮೈಸೂರು ಮೃಗಾಲಯದಲ್ಲಿ ವಾಟ್ಸ್ ಅಪ್ ಟಿಕೆಟ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಮೃಗಾಲಯದ ವೀಕ್ಷಣೆಗೆ ಸಾಲಿನಲ್ಲಿ ಕಾಯುವುದೇ ಏಕೆ, ಈಗ ವಾಟ್ಸಪ್ ನಲ್ಲಿ ಮೃಗಾಲಯದ ವೀಕ್ಷಣೆ ಟಿಕೆಟ್ ಪಡೆಯಬಹುದಾಗಿದ್ದು ಈ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ನಂತರ ಮೃಗಾಲಯದ ಸಾವಯವ ತ್ಯಾಜ್ಯವನ್ನು ಎರೆಹುಳು ಗೊಬ್ಬರ ವನ್ನಾಗಿ ಪರಿವರ್ತಿಸುವ ಯೋಜನೆಗೆ ಚಾಲನೆ ನೀಡಿ, ಮೃಗಾಲಯದಲ್ಲಿ ಜನಿಸಿದ ಜಿರಾಫೆ ಮರಿಗೆ ದಕ್ಷ ಎಂದು ನಾಮಕರಣ ಮಾಡಿದರು

Continue Reading

Trending

error: Content is protected !!