State
ಗಡಿ ಭಾಗದ 865 ಗ್ರಾಮಗಳಲ್ಲಿ ಆರೋಗ್ಯ ವಿಮೆ ಜಾರಿಗೆ ಮುಂದಾದ ಮಹಾರಾಷ್ಟ್ರ ಸರ್ಕಾರ ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಜನವರಿ 17: ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.
ಅವರು ಇಂದು ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆಗೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
ಕನ್ನಡದವರಿಗೆ ಶೇ 65 ರಷ್ಟು ಸೀಟುಗಳು
ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% ರಷ್ಟು ಹಾಗೂ ಇತರರಿಗೆ ಶೇ 35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.
ಸಂಗೊಳ್ಳಿ ರಾಯಣ್ಣನ ಸ್ಮರಣಾರ್ಥ ರಾಕ್ ಗಾರ್ಡನ್
ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ ಎಂದರು. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ ಎಂದರು. ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದರು.
ಪಕ್ಷ ತೀರ್ಮಾನಿಸುತ್ತದೆ
ಲೋಕಸಭೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯ ಅವರೇ 5 ವರ್ಷಗಳು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಪಕ್ಷದ ವರಿಷ್ಠರರು ತೀರ್ಮಾನ ಮಾಡುತ್ತಾರೆ ಎಂದರು.
State
ಎಚ್‌ಡಿ ಕುಮಾರಸ್ವಾಮಿ ಭೇಟಿ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಫಸ್ಟ್ ರಿಯಾಕ್ಷನ್

ನವದೆಹಲಿ: ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಕೋಲಾಹಲ ಎದ್ದಿದ್ದು, ಇದೀಗ ಸಚಿವ ಸತೀಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಎಚ್.ಡಿ.ಕುಮಾರಸ್ವಾಮಿ ಅವರನ್ನು ಯಾವ ಕಾರಣಕ್ಕೆ ಭೇಟಿ ಮಾಡಿದ್ದೆ ಎಂಬುದರ ಬಗ್ಗೆ ಹೈಕಮಾಂಡ್ ನಾಯಕರಿಗೆ ಹೇಳಿದ್ದೇನೆ. ಎಚ್‌ಡಿಕೆ ಭೇಟಿ ಕುರಿತು ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲ ಅವರಿಗೂ ಮಾಹಿತಿ ನೀಡಿದ್ದೇನೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಎಚ್‌ಡಿಕೆ ಭೇಟಿ ಮಾಡಿದ್ದ ಬಗ್ಗೆ ನಾಳೆ ಎಲ್ಲವನ್ನೂ ಸಂಪೂರ್ಣವಾಗಿ ಹೇಳುತ್ತೇನೆ ಎಂದರು.
State
ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು: ಎಂಎಲ್‌ಸಿ ರಾಜೇಂದ್ರ ಹೊಸ ಬಾಂಬ್

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ್ಯಾಪ್ ಆಗಿಲ್ಲ. ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದರು.
ನವೆಂಬರ್.16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕಲು ಸ್ವಲ್ಪ ಜನ ಬಂದಿದ್ದರು. ಆ ವೇಳೆ ನನ್ನನ್ನು ಹತ್ಯೆ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳಿದರು.
ಈ ಬಗ್ಗೆ ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಸಿಐಡಿಗೆ ಹೋಗಿದೆ. ಪೊಲೀಸರು ರಾಜಣ್ಣ ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಮನೆ ಕೆಲಸದವರ ಹೇಳಿಕೆಯನ್ನು ಸಹ ಪಡೆದಿದ್ದಾರೆ. ಈ ಪ್ರಕರಣದ ನಾಯಕ ಯಾರು ಎಂದು ಗೊತ್ತಾಗುತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.
State
ಹಾಲಿನ ದರ ಹೆಚ್ಚಳ ಬೆನ್ನಲ್ಲೇ ಮತ್ತೊಂದು ಶಾಕ್: ಯೂನಿಟ್‌ಗೆ 36 ಪೈಸೆ ವಿದ್ಯುತ್ ದರ ಹೆಚ್ಚಿಸಿದ ಸರ್ಕಾರ

ಬೆಂಗಳೂರು: ಗುರುವಾರ ಕರ್ನಾಟಕದ ಜನತೆಗೆ ಬಿಗ್ ಶಾಕ್. ರಾಜ್ಯ ಸರ್ಕಾರ ಜನರಿಗೆ ಎರಡೆರೆಡು ಬಿಗ್ ಶಾಕ್ ಒಂದೇ ದಿನ ನೀಡಿದ್ದು, ಜನರಿಗೆ ದಿಕ್ಕೇ ತೋಚದಂತಾಗಿದೆ.
ಹಾಲಿನ ದರ ಪರಿಷ್ಕರಣೆ ಮಾಡಿ ಬೆಳಿಗ್ಗೆ ಶಾಕ್ ನೀಡಿದ್ದ ಸರ್ಕಾರ, ಈಗ ವಿದ್ಯುತ್ ದರ ಹೆಚ್ಚಿಸಿ ಮತ್ತೊಂದು ಶಾಕ್ ನೀಡಿದೆ.
ಇದೇ ಏ.1 ರಿಂದ ಪ್ರತಿ ಯೂನಿಟ್ ವಿದ್ಯುತ್ ಮೇಲೆ 36 ಪೈಸೆ ಹೆಚ್ಚಿಸಲಾಗುವುದು ಎಂದು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಗುರುವಾರ ಆದೇಶ ಹೊರಡಿಸಿದೆ.
ವಿದ್ಯುತ್ ಪ್ರಸರಣ ಹಾಗೂ ಎಸ್ಕಾಂಗಳ ಸಿಬ್ಬಂದಿಗಳ ಪಿಂಚಣಿ ಹಾಗೂ ಗ್ರ್ಯಾಚುರಿ ಪಾವತಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಏಂದು ಕೆಇಆರ್‌ಸಿ ತಿಳಿಸಿದೆ.
-
State24 hours ago
ಅಕ್ರಮ ಮರ ಕಡಿತಲೆಗೆ ಶಿಕ್ಷೆ ಪ್ರಮಾಣ ಹೆಚ್ಚಳ: ಈಶ್ವರ ಖಂಡ್ರೆ ಖಡಕ್ ಸೂಚನೆ
-
Special11 hours ago
ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಮನೆ ಬಾಗಿಲಿಗೆ ಬರಲಿದೆ ಉಚಿತ ಖಾತಾ : ಸರ್ಕಾರದಿಂದ ವಿನೂತನ ವ್ಯವಸ್ಥೆ
-
State24 hours ago
ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ ಮಾಡಿದ ಸಿಎಂ ಸಿದ್ದರಾಮಯ್ಯ
-
State6 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Hassan7 hours ago
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ದೂರು
-
State8 hours ago
ಪತ್ರಿಕೋದ್ಯಮ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ ಅವರಿಗೆ ಡಿ.ಲಿಟ್ ಪದವಿ
-
State6 hours ago
Nation First, Party next, Self last: ಯತ್ನಾಳ್ ಹೀಗೇಳಿದ್ದೇಕೆ?
-
Kodagu4 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ