Hassan
ಗುತ್ತಿಗೆದಾರನ ಮೇಲೆ ಅಟ್ಯಾಕ್ ಮಾಡಿ ಕೊಲೆಗೆ ಯತ್ನ

ಹಾಸನ : ಗುತ್ತಿಗೆದಾರನ ಮೇಲೆ ಅಟ್ಯಾಕ್ ಮಾಡಿ ಕೊಲೆಗೆ ಯತ್ನ
ಕೂದಲೆಳೆ ಅಂತರದಲ್ಲಿ ಪ್ರಾಣ ಉಳಿಸಿಕೊಂಡ ಪ್ರಥಮ ದರ್ಜೆ ಗುತ್ತಿಗೆದಾರ
ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ಸೂರನಹಳ್ಳಿ ಗ್ರಾಮದ ಬಳಿ ಘಟನೆ
ಮಾಜಿಸಚಿವ ಎಚ್.ಡಿ.ರೇವಣ್ಣ ಅವರ ಆಪ್ತರಾಗಿರುವ ಗುತ್ತಿಗೆದಾರ ಅಶ್ವಥ್
ಸಂಜೆ ಹಾಸನದಿಂದ ಎಚ್.ಡಿ.ರೇವಣ್ಣ ಅವರ ಜೊತೆ ಹೊಳೆನರಸೀಪುರದ ಮನೆಗೆ ತೆರಳಿದ್ದ ಅಶ್ವಥ್
ಕೆಲಕಾಲ ಎಚ್.ಡಿ.ರೇವಣ್ಣ ಅವರ ನಿವಾಸದಲ್ಲಿ ಚರ್ಚಿಸಿ ರಾತ್ರಿ 8.30 ಕ್ಕೆ ಚನ್ನರಾಯಪಟ್ಟಣದ ತಮ್ಮ ನಿವಾಸಕ್ಕೆ ಫಾರ್ಚೂನರ್ ಕಾರಿನಲ್ಲಿ ಹೊರಟಿದ್ದ ಗುತ್ತಿಗೆದಾರ ಅಶ್ವಥ್
KA-53 MF 5555 ನಂಬರ್ ಫಾರ್ಚುನರ್ ಕಾರು
ಅಶ್ವಥ್ ಮನೆಗೆ ಹೊರಟಿರುವ ಬಗ್ಗೆ ಮಾಹಿತಿ ಪಡೆದು ಸೂರನಹಳ್ಳಿ ಹಂಪ್ಸ್ ಬಳಿ ಕಾರಿನ ಮೇಲೆ ಅಟ್ಯಾಕ್ ಮಾಡಿದ ದುರುಳರು
ಕಲ್ಲಿನಿಂದ ಕಾರಿನ ಗ್ಲಾಸ್ ಮೇಲೆ ಕಲ್ಲು ಎತ್ತಿಹಾಕಿ ಮಾರಕಾಸ್ತ್ರಗಳಿಂದ ಕೊಲೆ ಮಾಡಲು ಮುಂದಾದ ಐದಾರು ಮಂದಿ ಅಪರಿಚಿತರು
ಕೂಡಲೇ ಕಾರು ರಿವರ್ಸ್ ತೆಗೆದು 150 ಕಿಲೋಮೀಟರ್ ವೇಗದಲ್ಲಿ ಕಾರು ಮುಂದೆ ಓಡಿಸಿಕೊಂಡು ಹೋಗಿ ಎಸ್ಕೇಪ್ ಆದ ಅಶ್ವಥ್
ಮೂಡಲಹಿಪ್ಪೆ ಗ್ರಾಮದವರೆಗೂ ಅಶ್ವಥ್ ಅವರನ್ನು ಹಿಂಭಾಲಿಸಿದ ದುಷ್ಕರ್ಮಿಗಳು
ಚನ್ನರಾಯಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡುತ್ತಿರುವ ಗುತ್ತಿಗೆದಾರ ಅಶ್ವಥ್
ಚನ್ನರಾಯಪಟ್ಟಣಕ್ಕೆ ತೆರಳುತ್ತಿರುವ ಮಾಜಿಸಚಿವ ಎಚ್.ಡಿ.ರೇವಣ್ಣ
Hassan
ವಿಶ್ವ ಪರಿಸರ ದಿನಾಚರಣೆ ಆಚರಿಸಿದ ಪೋದಾರ್ ಪರಿಸರ ಸ್ನೇಹಿಗಳು

ಹಾಸನ: ಬಿ. ಕಾಟಿಹಳ್ಳಿ ದೂರವಾಣಿ ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಪಂಚಮುಖಿ ಪಾರ್ಕ್ ಉದ್ಯಾನದಲ್ಲಿ “ವಿಶ್ವ ಪರಿಸರ ದಿನಾಚರಣೆ”ಯ ಅಂಗವಾಗಿ ಪೋದಾರ್ ಪರಿಸರ ಸ್ನೇಹಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಗಣ್ಯರು ಭಾಗಿಯಾಗಿ ಗಿಡ ನೆಟ್ಟು ಸಸ್ಯೋತ್ಸವ ಆಚರಣೆ ಅರ್ಥ ಪೂರ್ಣವಾಗಿ ಆಚರಿಸಲಾಯಿತು.
Hassan
ಬಿರುಗಾಳಿ ಸಹಿತ ಮಳೆಗೆ ಭಾರೀ ಪ್ರಮಾಣದಲ್ಲಿ ಭೂಕುಸಿತ

ಹಾಸನ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ.
ಈ ಘಟನೆ ಸಕಲೇಶಪುರ ತಾಲ್ಲೂಕಿನ, ಹೆಗ್ಗದ್ದೆ ಗ್ರಾಮದ ಬಳಿ ಶಿರಾಡಿಘಾಟ್ ರಸ್ತೆ ಎನ್‌ಎಚ್- 75 ರಲ್ಲಿ ನಡೆದಿದೆ. ಮೊದಲೇ ಭೂಕುಸಿತವಾಗಿದ್ದರಿಂದ ಒಂದು ಬದಿ ರಸ್ತೆ ಸಂಚಾರ ಬಂದ್ ಮಾಡಿದ್ದ ಅಧಿಕಾರಿಗಳು ಇಟಾಚಿ ಮೂಲಕ ನಡೆಯುತ್ತಿದ್ದ ಮಣ್ಣು ತೆರವು ಕಾರ್ಯಾಚರಣೆ ಮಾಡುತ್ತಿದ್ದರು. ಹೀಗಾಗಿ ವಾಹನಗಳ ಸಂಚಾರ ಬಂದ್ ಮಾಡಲಾಗಿತ್ತು.
ಈ ವೇಳೆ ಮತ್ತೆ ದೊಡ್ಡ ಪ್ರಮಾಣದಲ್ಲಿ ಕುಸಿದ ಭೂಮಿ ಮರಗಳ ಸಮೇತ ಕುಸಿದು ರಸ್ತೆ ಪೂರ್ತಿ ಜಖಂಗೊಂಡಿದೆ. ಇನ್ನೂ ವಾಹನಗಳ ಸಂಚಾರವನ್ನು ಬಂದ್ ಮಾಡಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ.
Hassan
ಮರಿ ಸತ್ತು ಮೂರು ದಿನವಾದರೂ ಸ್ಥಳ ಬಿಟ್ಟು ಕದಲದ ತಾಯಿಯಾನೆ

ಅರೇಹಳ್ಳಿ: ತನ್ನ ಮರಿ ಸತ್ತು ಮೂರು ದಿನ ಕಳೆದರೂ ತಾಯಿಯಾನೆ ತಾನು ಹೋದಲೆಲ್ಲಾ ಮೃತ ಮರಿಯಾನೆಯನ್ನು ತನ್ನೊಂದಿಗೆ ಎಳೆದುಕೊಂಡು ಹೋಗುತ್ತಿರುವ ಮನಕಲಕುವ ಘಟನೆ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಶಿರಗುರ ಗ್ರಾಮದ ಜಾಕ್‌ನಳ್ಳಿ ಎಸ್ಟೇಟ್ ಬಳಿ ನಡೆದಿದೆ.
ಘಟನೆ ಹಿನ್ನೆಲೆ:
ಕಳೆದ ಶನಿವಾರ ಗರ್ಭಿಣಿ ಹೆಣ್ಣಾನೆ ಮರಿಯಾನೆಗೆ ಜನ್ಮ ನೀಡಿದೆ. ಆದರೆ ಹುಟ್ಟುವ ವೇಳೆ ಮರಿಯು ಸ್ಥಳದಲ್ಲೆ ಮೃತಪಟ್ಟಿದೆ. ತಾಯಿ ಆನೆ ತನ್ನ ಮರಿ ಜೀವಂತವಾಗಿದೆ ಎಂದು ತಿಳಿದು ಕಾಲಿನಿಂದ ಒದ್ದು ಬದುಕಿಸುವ ಪ್ರಯತ್ನ ಮಾಡಿದರೂ ಸಹ ಮೃತ ಮರಿ ಮೇಲೇಳದಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ದೃಶ್ಯ ಸೆರೆಹಿಡಿದಿದ್ದಾರೆ.
ಜೋರು ಮಳೆ ಸುರಿಯುತ್ತಿರುವುದರ ಜೊತೆಗೆ ಸತ್ತ ಮರಿಯನ್ನು ಎಳೆದುಕೊಂಡು ಹೋಗುತ್ತಿರುವುದು ಎಂಥ ಕಲ್ಲು ಮನಸ್ಸಿನವರಿಗೂ ಕರುಳು ಚುರುಕ್ ಎನ್ನುವಂತಿದೆ ಈ ದೃಶ್ಯಾವಳಿ. ತನ್ನ ಕರುಳ ಕುಡಿ ಇನ್ನೂ ಬದುಕಿದೆ ಎಂಬ ಭ್ರಮೆಯಲ್ಲಿರುವ ಮಾತೃ ಹೃದಯ ಯಾರನ್ನೂ ಕೂಡ ಹತ್ತಿರ ಹೋಗಲು ಬಿಡುತ್ತಿಲ್ಲ. ಭಾನುವಾರವಷ್ಟೆ ಅರೇಹಳ್ಳಿ ಸಮೀಪದ ಕೆಸಗುಲಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮರಿಯೊಂದಿಗೆ ತಾಯಿಯಾನೆಯೂ ಸಹ ಮೃತಪಟ್ಟಿತ್ತು. ಈ ಘಟನೆ ಜನಮಾನಸದಲ್ಲಿ ಮಾಸುವ ಮುನ್ನವೇ ಮತ್ತೊಂದು ಮರಿ ಮೃತಪಟ್ಟಿರುವುದು ಪ್ರಾಣಿ ಪ್ರಿಯರಿಗೆ ಅತೀವ ನೋವನ್ನುಂಟುಮಾಡಿದೆ.
“ಕಳೆದೆರಡು ದಿನಗಳ ಹಿಂದೆ ಮೃತಪಟ್ಟ ಮರಿಯೊಂದಿಗೆ ತಾಯಿಯಾನೆ ತೆರಳುತ್ತಿರುವುದು ಬೇಸರ ತಂದಿದೆ. ಹೀಗಾಗಿ ಸಿಬ್ಬಂದಿಗಳನ್ನು ಹತ್ತಿರ ಹೋಗಲು ಬಿಡುತ್ತಿಲ್ಲ. ಮರಿ ವಾಸನೆ ಬಂದರೆ ತಾಯಿಯಾನೆ ತನ್ನಿಂತಾನೆ ಬೇರೆಯಾಗುತ್ತದೆ” ಎಂದು
ಬೇಲೂರಿನ ಆರ್‌ಎಫ್‌ಒ ಅಧಿಕಾರಿ ಯತೀಶ್ ತಿಳಿಸಿದ್ದಾರೆ.
-
Hassan12 hours ago
ಹಾಸನದ ಖಾಸಗಿ ಶಾಲಾ-ಕಾಲೇಜಿಗೆ ಬಾಂಬ್ ಹಾಕುವ ಬೆದರಿಕೆ
-
Kodagu10 hours ago
ಪಂಚಾಯತಿಯಲ್ಲಿ ಶೇ.25 ನಿಧಿಯಲ್ಲಿ ಹೊಲಿಗೆ ಯಂತ್ರ ವಿತರಣೆ.
-
Mandya6 hours ago
ಕೆ.ಆರ್.ಪೇಟೆ ದೇವಿರಮ್ಮಣ್ಣಿ ಕೆರೆಯಲ್ಲಿ ಬಲೆಗೆ ಬಿದ್ದ ಬಂಗಾರ ಬಣ್ಣದ ಗೌರಿ ಮೀನು
-
Chikmagalur13 hours ago
ಕೊಪ್ಪ ತಾಲ್ಲೂಕಿನಲ್ಲಿ ಬೃಹತ್ ಗಾತ್ರದ ಮರ ಉರುಳಿ ರಸ್ತೆ ಬಂದ್
-
Kodagu13 hours ago
ಕೊಡವರ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ
-
Chikmagalur10 hours ago
ಮರ ಬಿದ್ದು ಬೈಕ್ ಸವಾರ ದು*ರ್ಮರಣ
-
Kodagu13 hours ago
ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ ಕೊಡವ ಸಮಾಜ
-
Kodagu13 hours ago
ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ