Connect with us

Chikmagalur

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಹೊಣೆ ಮಂಕಾಳ ವೈದ್ಯ ಹೆಗಲಿಗೆ

Published

on

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಹೊಣೆ ಮಂಕಾಳ ವೈದ್ಯ ಹೆಗಲಿಗೆ

ಚಿಕ್ಕಮಗಳೂರು : ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೀಕ್ಷಕರಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಚಿವ ಮಂಕಾಳ ವೈದ್ಯ ನೇಮಕ.
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ, ಪಕ್ಷದ ಎಲ್ಲಾ ಹಂತಗಳ ಮುಖಂಡರುಗಳನ್ನು ಸಂಪರ್ಕಿಸಿ‍ ಸಭೆಗಳನ್ನು ಆಯೋಜಿಸಿ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿ ವರದಿ ನೀಡಲು ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಸಚಿವರುಗಳನ್ನು ವೀಕ್ಷಕರುಗಳನ್ನಾಗಿ ನೇಮಕ ಮಾಡಲಾಗಿದೆ. ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೀಕ್ಷಕರನ್ನಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಚಿವ ಮಂಕಾಳ ವೈದ್ಯ ಅವರನ್ನು ನೇಮಕ ಮಾಡಲಾಗಿದೆ. ಸಚಿವ ಮಂಕಾಳ್ ವೈದ್ಯ ಅವರಿಗೆ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಭಿನಂದನೆ ಸಲ್ಲಿಸಿದೆ.

Chikmagalur

ಈದ್ ಮಿಲಾದ್‌ ಹಬ್ಬದ ಹಿನ್ನೆಲೆ ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದಲ್ಲಿ ರೌಂಡ್‌

Published

on

ಚಿಕ್ಕಮಗಳೂರು: ಈದ್ ಮಿಲಾದ್‌ ಹಬ್ಬದ ಹಿನ್ನೆಲೆ ಮುಸ್ಲಿಂ ಸಮುದಾಯದವರು ನಗರದಲ್ಲಿ ಪ್ರಮುಖ ರಸ್ತೆಗಳನ್ನು ಶೃಂಗರಿಸಿದ್ದು, ಇದೇ ವೇಳೆ ಇಬ್ಬರು ಕಿಡಿಗೇಡಿಗಳು ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿರುವ ವಿಡಿಯೋ ಹರಿದಾಡುತ್ತಿದೆ.

ನಗರದ ಕಡೂರು – ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಮುಖ್ಯರಸ್ತೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಇಬ್ಬರು ಬೈಕ್ ನಲ್ಲಿ ಸಂಚರಿಸಿದ್ದು, ಇದನ್ನು ಗಮನಿಸಿದ ಯಾರೋ ವಿಡಿಯೋ ಮಾಡಿಕೊಂಡಿದ್ದಾರೆ.

ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದಲ್ಲಿ ರೌಂಡ್‌ ಹಾಕಿದ ಯುವಕರನ್ನು ಬಂಧಿಸುವಂತೆ ಹಿಂದೂಪರ ಸಂಘಟನೆ ಮುಖಂಡರು ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ಆಗ್ರಹಿಸಿದ್ದಾರೆ ಧ್ವಜ ಹಿಡಿದು ಓಡಾಡಿರುವ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರು ನಗರದ ಪೊಲೀಸ್ ಠಾಣೆಯ ಮುಂಭಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂತೋಷ್ ಕೋಟ್ಯಾನ್, ಶ್ಯಾಂ ವಿ ಗೌಡ, ಕೃಷ್ಣ, ಅಮಿತ್, ರಾಜೇಶ್, ಮಂಜು, ಕಿಟ್ಟಿ, ಜಾನಕಿ ರಾಮ್ ಇದ್ದರು

Continue Reading

Chikmagalur

ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳ

Published

on

ಚಿಕ್ಕಮಗಳೂರು: ಸೆ. ೧೫: ವಿವಿಧತೆಯಲ್ಲಿ ಏಕತೆ ಸಾರುವ ನಮ್ಮ ಹೆಮ್ಮೆಯ ರಾಷ್ಟ್ರದ ವೈವಿದ್ಯಮಯ ಧ್ವನಿಗಳ ಅಭಿವ್ಯಕ್ತಿಗೆ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗೆ ಅವಕಾಶ ನೀಡುವ ಆಡಳಿತ ವ್ಯವಸ್ಥೆಯೇ ಪ್ರಜಾಪ್ರಭುತ್ವದ ಜೀವಾಳವಾಗಿದೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಬೆಂಗಳೂರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ಡಿ. ರಾಜೇಗೌಡರವರು ಹೇಳಿದರು.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜರುಗಿದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್ ಭಾವಚಿತ್ರಕ್ಕೆ ಮತ್ತು ಸಂವಿಧಾನ ಪೀಠಿಕೆಗೆ ಪುಷ್ಪಾ ನಮನ ಸಲ್ಲಿಸಿ ಅವರು ಮಾತನಾಡಿದರು.


ಪ್ರಜಾಪ್ರಭುತ್ವವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ನ್ಯಾಯಕ್ಕಾಗಿ ನಮ್ಮ ಅತ್ಯುನ್ನತ ಅಕಾಂಕ್ಷೆಗಳನ್ನು ಸಾಕಾರಗೊಳಿಸುವ ಶಕ್ತಿಯುತ ಮತ್ತು ಕ್ರಿಯಾತ್ಮಕ ಶಕ್ತಿಯಾಗಿದೆ ಎಂದರು.
ಭಾರತ ದೇಶವು ಅತ್ಯಂತ ಭವ್ಯ ಶಕ್ತಿ ಶಾಲಿ ಮತ್ತು ಯಶಸ್ವಿ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ದೇಶವಾಗಿದೆ. ದೇಶದಲ್ಲಿ ಪರಿಣಾಮಕಾರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮೂಲಧಾರೆ ಡಾ|| ಬಿ.ಆರ್. ಅಂಬೇಡ್ಕರ್ ಅವರಿಂದ ರಚಿತವಾದ ಸಂವಿಧಾನ ಎಂದು ಹೇಳಿದರು.
೨೦೦೭ರಲ್ಲಿ ಜರುಗಿದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೆಪ್ಟೆಂಬರ್ ೧೫ ರ ದಿನವನ್ನು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವೆಂದು ಘೋಷಣೆ ಮಾಡಿ ವಿಶ್ವದಾದ್ಯಂತ ಪ್ರಜಾಪ್ರಭುತ್ವದ ಮೌಲ್ಯಗಳ, ಆದರ್ಶಗಳ, ತತ್ವಗಳ ಮತ್ತು ಅದರ ಅನ್ವಯಿಕತೆಯನ್ನು ಒಳಗೊಂಡ ಬೃಹತ್ ನಿರ್ಣಾಯ ಹೊರಡಿಸಿದ ಐತಿಹಾಸಿಕ ದಿನವಾಗಿದೆ. ಅಮೇರಿಕಾದ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್ ಹೇಳಿರುವ ಹಾಗೆ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರೂಪಿತಗೊಂಡ ಆಡಳಿತ ವ್ಯವಸ್ಥೆಯೇ ಪ್ರಜಾಪ್ರಭುತ್ವ ಎಂದು ಹೇಳಿದರು.
ನಮ್ಮ ಸಂವಿಧಾನವು ಜಗತ್ತಿನ ಅತಿದೊಡ್ಡ ಲಿಖಿತ ಸಂವಿಧಾನವಾಗಿದ್ದು, ಪ್ರಜೆಗಳ ಹಿತಾಸಕ್ತಿಗೆ ಅನುಗುಣವಾಗಿ ರೂಪಿತಗೊಂಡ ಸಂವಿಧಾನವಾಗಿದೆ.

ಬ್ರಿಟೀಷ್ ಆಡಳಿತದಿಂದ ಮುಕ್ತಾಗೊಂಡ ನಂತರದಲ್ಲಿ ಭಾರತದ ಜನತೆಯಾದ ನಾವು ನಮ್ಮ ದೇಶವನ್ನು ಸಾರ್ವಭೌಮ ಸಮಾಜವಾದಿ, ಧರ್ಮ ನಿರಪೇಕ್ಷಿತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸಲು ವ್ಯವಸ್ಥಿತವಾದ ಸಂವಿಧಾನವನ್ನು ನಮಗೆ ನಾವು ಅರ್ಪಿಸಿಕೊಂಡೆದ್ದೇವೆ. ನಮ್ಮ ಸಂವಿಧಾನವು ಭಾರತದ ಪ್ರತಿ ಪ್ರಜೆಗೂ ಆರ್ಥಿಕ, ಸಾಮಾಜಿಕ, ರಾಜಕೀಯ ನ್ಯಾಯವನ್ನು, ವಿಚಾರ ಅಭಿವ್ಯಕ್ತಿ ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ನೀಡುವಂತೆ ಮಾಡಿದೆ ಹಾಗೂ ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡಿ. ಪ್ರತಿ ವ್ಯಕ್ತಿಯ ಗೌರವ ದೇಶದ ಏಕತೆ ಮತ್ತು ಸಮಗ್ರತೆಯ ಉಳಿವಿಗಾಗಿ ಭಾರತದಲ್ಲಿ ಪ್ರತಿಯೊಬ್ಬರು ಸಹೋದರತ್ವ ಭಾವನೆಯಿಂದ ತಮ್ಮ ಜೀವನವನ್ನು ನಿರ್ವಹಿಸುವ ಉದ್ದೇಶದಿಂದ ಸ್ಥಾಪಿತವಾದ ನಮ್ಮ ಸಂವಿಧಾನವು ಪ್ರಜಾಪ್ರಭುತ್ವದ ಮಹತ್ವವನ್ನು ಸಾರುತ್ತದೆ ಎಂದರು.
ವಿಧಾನ ಪರಿಷತ್ ಶಾಸಕ ಸಿ.ಟಿ. ರವಿ ಮಾತನಾಡಿ ಭಾರತವು ಅನೇಕ ಧರ್ಮ, ಸಂಸ್ಕೃತಿ ಭಾಷೆಗಳ ವಿವಿಧತೆಯಿಂದ ಕೂಡಿದ ದೇಶವಾಗಿದ್ದು, ವಿವಿಧತೆಯಲ್ಲಿ ಏಕತೆಯನ್ನು ಸಾರುವ ಸಂವಿಧಾನವನ್ನು ನಾವು ರೂಪಿಸಿಕೊಂಡಿದ್ದೆವೆ. ಸಂವಿಧಾನತ್ಮಕ ಹಕ್ಕುಗಳ ಪಡೆಯುವುದರೊಂದಿಗೆ ಅದರ ಕರ್ತವ್ಯ ಪಾಲನೆಯು

ಬಹುಮುಖ್ಯವಾಗಿದೆ. ಜಾತ್ಯಾತೀತತೆಯಿಂದ, ಧರ್ಮ ನಿರಪೇಕ್ಷಿತ ರಾಷ್ಟ್ರ ನಿರ್ಮಾಣ ಮಾಡುವುದು ಸಂವಿಧಾನದ ಆಶಯ ಭಾರತದಲ್ಲಿ ಪ್ರತಿಯೊಬ್ಬರು ಭ್ರಾತೃತ್ವ ಮನೋಭಾವದಿಂದ ಬದುಕಬೇಕು. ಅಂಬೇಡ್ಕರ್‌ರವರ ಚಿಂತನೆಗಳನ್ನು ಮೈಗೂಡಿಸಿಕೊಂಡು ಪಾಲನೆ ಮಾಡಿದಲ್ಲಿ ಭಾರತವು ವಿಶ್ವಗುರು ಸ್ಥಾನವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದ ಅವರು ಯುವ ಜನತೆಯು ಸಂವಿಧಾನವನ್ನು ಅರಿತು ಅದರ ಸಂರಕ್ಷಣೆಗೆ ಮುಂದಾಗಬೇಕು ಎಂದರು.
ಮಾನವ ಬಂಧುತ್ವ ಗಟ್ಟಿಗೊಳಿಸುವ ಮಾನವ ಸರಪಳಿ:-
ರಾಜ್ಯವು ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ೨,೫೦೦ ಕಿ.ಮೀ. ಉದ್ದದ ಮಾನವ ಸರಪಳಿಯನ್ನು ನಿರ್ಮಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ ಚಿಕ್ಕಮಗಳೂರು ತಾಲ್ಲೂಕಿನ ಮಾಗಡಿ ಗಡಿಯಿಂದ ತರೀಕೆರೆ ತಾಲ್ಲೂಕಿನ ಎಂ.ಸಿ. ಹಳ್ಳಿ ಗ್ರಾಮದವರೆಗೆ ೯೨ ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸಲಾಗಿತ್ತು, ಈ ಮಾನವ ಸರಪಳಿ ಕಾರ್ಯಕ್ರಮವನ್ನು ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಸ್ವಯಂ ಪ್ರೇರಿತವಾಗಿ ಮಾನವ ಸರಪಳಿಯನ್ನು ನಿರ್ಮಿಸುವ ಮೂಲಕ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮಹತ್ವ ಸಾರುವ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು.


ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್. ಹರೀಶ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಉಪಾಧ್ಯಕ್ಷೆ ಅನು ಮಧುಕರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದರ್ ಕುಮಾರ್ ದಹೀಮ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿ ದಲ್ಜೀತ್ ಕುಮಾರ್, ತಹಸೀಲ್ದಾರ್ ಡಾ. ಸುಮಂತ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗಿಶ್, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Continue Reading

Chikmagalur

ಮಾಜಿ ಸಚಿವ ಹಿರಿಯ ಕಾಂಗ್ರೆಸ್ ಮುಖಂಡ ಸಗೀರ್ ಅಹಮ್ಮದ್ ಗೆ ಚಿಕ್ಕಮಗಳೂರು ಜಿಲ್ಲಾಡಳಿತ ಶಾಕ್

Published

on

ಚಿಕ್ಕಮಗಳೂರು:ರಾಜ್ಯದ ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಾರಿಗೆ ಸಚಿವ ಸಗೀರ್ ಅಹಮ್ಮದ್ ಗೆ ಚಿಕ್ಕಮಗಳೂರು ಜಿಲ್ಲಾಡಳಿತ ಶಾಕ್ ನೀಡಿದೆ. ಸಗೀರ್ ಅಹಮ್ಮದ್ ಪತ್ನಿ ಹೆಸರಿನಲ್ಲಿದ್ದ ಹಿಡುವಳಿ ಭೂಮಿಯನ್ನು ಸರ್ಕಾರಿ ಭೂಮಿ ಎಂದು ನಮೂದಿಸಲು ಜಿಲ್ಲಾಧಿಕಾರಿಗಳ ಕೋರ್ಟ್ ಆದೇಶ ನೀಡಿದ್ದು ಸಗೀರ್ ಪತ್ನಿ ಹೆಸರಿನಲ್ಲಿದ್ದ ಪಹಣಿಯಲ್ಲಿ ಸರ್ಕಾರಿ ಎಂದು ನಮೂದಿಸಲು ಜಿಲ್ಲಾಧಿಕಾರಿಗಳ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ…

ಇನಾಂ ದತ್ತಾತ್ರೇಯ ಪೀಠ ಗ್ರಾಮ ವ್ಯಾಪ್ತಿಯಲ್ಲಿ ಮಾಜಿ ಸಚಿವ ಸಿ.ಆರ್‌.ಸಗೀರ್ ಅಹಮದ್ ಅವರ ಪತ್ನಿ ಫಾತಿಮಾ ಹೆಸರಿನಲ್ಲಿದ್ದ 31 ಎಕರೆ, 31 ಗುಂಟೆ ಜಾಗವು ಸರ್ಕಾರಿ ಜಾಗ ಎಂದು ಘೋಷಿಸಿ ಜಿಲ್ಲಾಧಿಕಾರಿ ಮಹತ್ವದ ಆದೇಶ ಹೊರಡಿಸಿದ್ದಾರೆ.

ಈ ವರೆಗೂ ಖಾಸಗಿ ಸ್ವತ್ತಿನಲ್ಲಿದೆ ಎಂದುಕೊಂಡಿದ್ದ ಸಗೀರ್ ಫಾಲ್ಸ್ ( ಝರಿ ) ಜಲಪಾತ ಮತ್ತು ಅದಕ್ಕೆ ಸಾಗುವ ರಸ್ತೆ ಪ್ರದೇಶ ಕೂಡಾ ಸರ್ಕಾರದ್ದು ಎಂದೂ ಘೋಷಿಸಿದ್ದಾರೆ.
ಮೂಲತಃ ಈ ಜಾಗ ಇನಾಂ ಭೂಮಿ ಸ್ವತ್ತಾಗಿದೆ. ಈ ಹಿಂದಿನ ವಹಿವಾಟುದಾರರಾಗಿದ್ದ ಸಜ್ಮದ್ ಅವರು ವಾಸಿಮಲ್ ಎಂಬುವವರಿಗೆ ಗೇಣಿಗೆ ನೀಡಿದ್ದರು.

1955ರಲ್ಲಿ ಜಾರಿಗೆ ಬಂದಿದ್ದ ಕರ್ನಾಟಕ ರಿಲೀಜಿಯಸ್ ಆ್ಯಂಡ್ ಚಾರಿಟಬಲ್ ಇನಾಂ ಅಬಾಲಿಷನ್ ಕಾಯ್ದೆಯ ಪ್ರಕಾರ ಅಷ್ಟೂ ಜಾಗ ಸರ್ಕಾರಕ್ಕೆ ಸೇರ್ಪಡೆಯಾಗಿತ್ತು.
ವಾಸಿಮಲ್ ಅವರು 1966ರಲ್ಲಿ ಇ‌ಲ್ಲಿಸ್ ಖಾನ್ ಎಂಬುವರಿಗೆ ಮಾರಾಟ ಮಾಡಿದ್ದು, ಅವರಿಂದ ಮೆ.ಸಿಪಾನಿ ಆ್ಯಂಡ್ ಕಂಪನಿ ಖರೀದಿ ಮಾಡಿದೆ.
1978ರಲ್ಲಿ ಸಿ.ಆರ್. ಸಗೀರ್ ಅಹಮದ್ ಅವರ ಪತ್ನಿ ಫಾತಿಮಾ ಖರೀದಿ ಮಾಡಿ ಇನಾಂ ರದ್ದತಿ ಕಾಯ್ದೆಯಲ್ಲಿನ ಅವಕಾಶದಂತೆ ಅದಿಭೋಗದಾರಿಕೆ ಹಕ್ಕನ್ನು ಭೂನ್ಯಾಯ ಮಂಡಳಿ ಮುಂದೆ ಮಂಡಿಸಿದ್ದಾರೆ .

1994ರಲ್ಲಿ ಅದಿಭೋಗದಾರಿಕೆ ಹಕ್ಕನ್ನು ನ್ಯಾಯ ಮಂಡಳಿ ನೋಂದಾಯಿಸಿ ಆದೇಶಿಸಿದೆ. ಇದೇ ಜಾಗದಲ್ಲಿ ಇದ್ದ ಜಲಪಾತಕ್ಕೆ ಹೋಗುವ ರಸ್ತೆಯು ಸಾರ್ವಜನಿಕ ರಸ್ತೆಯಲ್ಲ ಎಂದು ಫಾತಿಮಾ ಕೋರ್ಟ್ ಮೆಟ್ಟಿಲೇರಿದ್ದರು.

ರಸ್ತೆ ಯಾರಿಗೆ ಸೇರಿದ್ದು ಎಂಬುದನ್ನು ಇತ್ಯರ್ಥಪಡಿಸಲು ಜಿಲ್ಲಾಧಿಕಾರಿಗೆ ಹೈಕೋರ್ಟ್ ಆದೇಶಿಸಿತ್ತು. ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ, ‘1993ರ ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ರದ್ದುಗೊಳಿಸಿದ ಇನಾಂ ಜಮೀನು ಮರಳಿ ನೀಡುವ ಅಧಿಕಾರ ಇರುವುದು ಜಿಲ್ಲಾಧಿಕಾರಿಗೆ ಮಾತ್ರ ಎಂದು ಸ್ಪಷ್ಟಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಭೂನ್ಯಾಯ ಮಂಡಳಿ ನೀಡಿರುವ ಮಂಜೂರಾತಿ ಅಸಿಂಧು ಎಂದು ತೀರ್ಮಾನಿಸಲಾಗಿದೆ ಎಂದು ಆದೇಶಿಸಿದ್ದಾರೆ.
ಐದೂ ಸರ್ವೆ ನಂಬರ್‌ಗಳಲ್ಲಿರುವ ಅಷ್ಟೂ ಜಾಗ ಸರ್ಕಾರಕ್ಕೆ ಸೇರಿದೆ. ಕಾಲುದಾರಿ, ಬಂಡಿದಾರಿ, ರಸ್ತೆಗಳ ಮೇಲೂ ಅವರಿಗೆ ಹಕ್ಕುದಾರಿಕೆ ಇಲ್ಲ. ‘ಸರ್ಕಾರಿ ಜಾಗ’ ಎಂದು ಪಹಣಿಯಲ್ಲಿ ದಾಖಲಿಸಬೇಕು ಎಂದು ತಹಶೀಲ್ದಾರ್‌ ಅವರು ಸೂಚನೆ ನೀಡಿ ಸೆ. 3ರಂದು ಆದೇಶ ಹೊರಡಿಸಿದ್ದಾದೇಶ ಹೊರಡಿಸಿದ್ದಾರೆ.

Continue Reading

Trending

error: Content is protected !!