State
ಚಿತ್ರಕಲೆಯ ಅಭಿವೃದ್ಧಿಗೆ ಸರ್ಕಾರ ಬದ್ಧ, ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂ.ಗಳ ಅನುದಾನ : ಮುಖ್ಯ ಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜನವರಿ 07: ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ 50 ಲಕ್ಷ ರೂ.ಗಳ ಅನುದಾನವನ್ನು ಪರಿಷತ್ತಿಗೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಕರ್ನಾಟಕ ಚಿತ್ರಕಲಾ ಪರಿಷತ್ ವತಿಯಿಂದ ಆಯೋಜಿಸಿರುವ 21 ನೇ ಚಿತ್ರ ಸಂತೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆರ್ಟ್ ಗ್ಯಾಲರಿ ಸ್ಥಾಪಿಸಲು ನೆರವು
ಎಲ್ಲಾ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ ಎಂದರು.
2003 ರಿಂದ ಇಂದಿನವರೆಗೆ ಚಿತ್ರಸಂತೆ ಆಚರಣೆಯಾಗುತ್ತಿದೆ. ಈ ವರ್ಷ 21 ನೇ ಚಿತ್ರಸಂತೆ ನಡೆದಿದೆ. ಹಿಂದೆ ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಪ್ರತಿ ವರ್ಷ ಚಿತ್ರಸಂತೆಯನ್ನು ಉದ್ಘಾಟಿಸಿದ್ದೇನೆ ಎಂದು ಸ್ಮರಿಸಿದರು.
22 ರಾಜ್ಯಗಳಿಂದ 1600 ಕಲಾವಿದರು
ಪ್ರತಿ ವರ್ಷ 3 ರಿಂದ 4 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. 22 ರಾಜ್ಯಗಳಿಂದ 1600 ಕಲಾವಿದರು ಪಾಲ್ಗೊಳ್ಳುವುದು ಹೆಮ್ಮೆಯ ವಿಷಯ. ಈ ಬಾರಿ ಚಿತ್ರಸಂತೆಯನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಣೆಯಾಗಿರುವುದು ಅವರಿಗೆ ಸಲ್ಲಿಸಿರುವ ವಿಶೇಷವಾದ ಗೌರವ ಸೂಚಿಸುತ್ತದೆ ಎಂದರು.
ಚಿತ್ರಸಂತೆಯಲ್ಲಿ ಭಾಗವಹಿಸಿದ ಎಲ್ಲಾ ಕಲಾವಿದರಿಗೂ ಕರ್ನಾಟಕದ ಪರವಾಗಿ ಸ್ವಾಗತಿಸಿದರು.
ಸಚಿವರಾದ ಹೆಚ್.ಕೆ.ಪಾಟೀಲ್ , ಸುಧಾಕರ್ , ಶಾಸಕರಾದ ರಿಜ್ವಾನ್ ಅರ್ಷದ್, ಅಜಯ್ ಸಿಂಗ್ , ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್ ಶಂಕರ್, ಉಪಾಧ್ಯಕ್ಷ ಪ್ರಭಾಕರ್ ಉಪಸ್ಥಿತರಿದ್ದರು.
State
ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ನಬಾರ್ಡ್ ನಿಂದ ರಾಜ್ಯಕ್ಕೆ ಶೇ58 ರಷ್ಟು ಹಣ ಕಡಿತ: ಕೇಂದ್ರದಿಂದ ರಾಜ್ಯಕ್ಕೆ ಮತ್ತೊಂದು ಮಹಾ ದ್ರೋಹ: ಸಿಎಂ ಆಕ್ರೋಶ
ಬೆಂಗಳೂರು, ನವೆಂಬರ್ 18: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಅವರು ಇಂದು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು.
ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ.
ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.
ಏಕಾಏಕಿ ಬಿಪಿಎಲ್ ಕಾರ್ಡುಗಳನ್ನು ಕಡಿತಗೊಳಿಸಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅರ್ಹರಿಗೆ ತಪ್ಪಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಗ್ಯಾರಂಟಿಗಳ ಬಗ್ಗೆ ಮಾತನಾಡಲು ಹೆಚ್.ಡಿ .ಕುಮಾರಸ್ವಾಮಿ ಯವರಿಗೆ ಯಾವ ನೈತಿಕ ಹಕ್ಕಿದೆ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಜನರಿಗೆ ಉತ್ತರ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರೆ? ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.
ರಾಜ್ಯಕ್ಕೆ ತೆರಿಗೆ ಹಣ ಕೊಡಿಸಲಿ
ನಾವು ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆಯನ್ನು ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು 59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ರಾಜ್ಯಕ್ಕೆ ಕೊಡಿಸಲಿ ಎಂದರು. ಬರೀ ಮಾತನಾಡಿದರೆ ಪ್ರಯೋಜನವೇನು? ಹೆಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದರೆಯೇ ಎಂದು ಪ್ರಶ್ನಿಸಿದರು.
ಕುಮಾರ ಸ್ವಾಮಿ, ಪ್ರಹ್ಲಾದ ಜೋಷಿಯವರುಗಳು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ ?
ನಬಾರ್ಡ್ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲ ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ 2340 ಕೋಟಿ ನೀಡಿದ್ದಾರೆ ಇದು ಅನ್ಯಾಯವಲ್ಲವೇ? ಸಾಲದ ಪ್ರಮಾಣವನ್ನು 58% ರಷ್ಟು ಕಡಿಮೆ ಮಾಡಿದ್ದಾರೆ. ಕುಮಾರ ಸ್ವಾಮಿ, ಪ್ರಹ್ಲಾದ ಜೋಷಿಯವರುಗಳು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ ಎಂದರು. ರೈತರಿಗೆ ಅನ್ಯಾಯ ಮಾಡಬೇಡಿ ಇದು ದ್ರೋಹದ ಕೆಲಸ ಎಂದು ಪ್ರಧಾನ ಮಂತ್ರಿಗಳಿಗೆ, ಹಣಕಾಸು ಸಚಿವ ನಿರ್ಮಾಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದೇನೆ ಎಂದರು.
ನಾನು ಅಧಿಕಾರಕ್ಕೆ ಬಂದ ನಂತರ 5 ಲಕ್ಷದವರೆಗೆ ಬಡ್ಡಿರಹಿತ ಸಾಲ. 15 ಲಕ್ಷದವರೆಗೆ ಶೇಕಡಾ 3% ದರದಲ್ಲಿ ಸಾಲ ನೀಡಲಾಗಿದೆ. ನಬಾರ್ಡ್ ಬರುವುದು ಹಣಕಾಸಿನ ಮಂತ್ರಿಗಳ ಕೆಳಗೆ ಬರುತ್ತದೆ. ನಿರ್ಮಲಾ ಸೀತಾರಾಮನ್ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
2023-24 ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ. ಅನುದಾನ ನೀಡುವುದಾಗಿ ಹೇಳಿದ್ದರು. ಕುಮಾರಸ್ವಾಮಿ ಈ ಬಗ್ಗೆ ಏನು ಕೇಳಿದ್ದಾರೆ? 15ನೇ ಹಣಕಾಸು ಯೋಜನೆಯಡಿ 11595 ಕೋಟಿ ಘೋಷಣೆ ಮಾಡಿದ್ದರು. ಎಲ್ಲಿ ಕೊಟ್ಟರು. ಇದನ್ನು ನೀವು ಕೇಳುವುದಿಲ್ಲ ಎಂದರು. 56000 ಕೋಟಿ ರೂಪಾಯಿಗಳ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ . ಬಿಜೆಪಿ ಅಧಿಕಾರದಲ್ಲಿರುವ ರಾಜ್ಯ ಗಳಲ್ಲಿ ಏಕೆ ಕೊಡುತ್ತಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಜಾಹೀರಾತು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ
ಮಹಾರಾಷ್ಟ್ರ ಜನರನ್ನು ದಾರಿತಪ್ಪಿಸಲು ಮತಗಳಿಸಲು ಮಹಾರಾಷ್ಟ್ರ ಸರ್ಕಾರ ನೀಡಿರುವ ಸುಳ್ಳು ಜಾಹೀರಾತು ಎಂದರು. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ ಮಾಡಲಾಗುತ್ತಿದೆ ಎಂದರು.
State
ಕನಕದಾಸರು ವಿಶ್ವಮಾನವರಾಗಿದ್ದರು:ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕನಕದಾಸರು ಸಂತರಷ್ಟೇ ಅಲ್ಲದೇ ದಾರ್ಶನಿಕರೂ, ಸಮಾಜ ಸುಧಾರಕರೂ ಆಗಿದ್ದರು. ವಿಶ್ವಮಾನವರೂ ಆಗಿದ್ದ ಅವರ ಜಯಂತ್ಯೋತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕನಕದಾಸ ಜಯಂತಿ ಅಂಗವಾಗಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಭಕ್ತ ಕನಕದಾಸ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ ಜನಿಸಿದರು. ಕಾಗಿನೆಲೆ ಅವರ ಕರ್ಮಭೂಮಿ. ಕಾವ್ಯ, ಕೀರ್ತನೆಗಳನ್ನು ರಚನೆ ಮಾಡಿದ್ದರು ಎಂದು ವಿವರಿಸಿ ನಾಡಿನ ಎಲ್ಲಾ ಜನರಿಗೂ ಕನಕ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.
State
ಸಹಕಾರ ಕ್ಷೇತ್ರ ಸ್ವಾಯತ್ತ ವಾಗಿರಬೇಕು : ಜಿ ಟಿ ದೇವೇಗೌಡ
ಬಾಗಲಕೋಟೆ : ಸಹಕಾರ ಕ್ಷೇತ್ರ ಸ್ವಾಯತ್ತ ಆಗಿರಬೇಕು. ಅದರಲ್ಲಿ ಸರ್ಕಾರದ ಹಸ್ತಕ್ಷೇಪ ಇರಬಾರದು ಎಂದು ಶಾಸಕರೂ ಹಾಗೂ ಮಹಾಮಂಡಳದ ಅಧ್ಯಕ್ಷರಾದ ಜಿ. ಟಿ. ದೇವೇಗೌಡ ಅವರು ಅಭಿಪ್ರಾಯ ಪಟ್ಟರು.
ಬಾಗಲಕೋಟೆಯಲ್ಲಿ ಭಾನುವಾರ ನಡೆದ 71 ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತಾಡಿದ ದೇವೇಗೌಡರು ಬಸವಣ್ಣನವರ ಐಕ್ಯ ಸ್ಥಳವಾದ ಬಾಗಲಕೋಟೆಯಲ್ಲಿ ಸಹಕಾರ ಸಪ್ತಾಹ ಆಯೋಜನೆಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಸಹಕಾರ ಕ್ಷೇತ್ರಕ್ಕೆ ಸರ್ಕಾರದ ಬೆಂಬಲ ನೀಡಿ ಸಹಕಾರ ಕ್ಷೇತ್ರವನ್ನು ಉಳಿಸಿ, ಬೆಳೆಸಲು ನೆರವಾಗುವಂತೆ ಮುಖ್ಯಮಂತ್ರಿಗಳು ಹಾಗೂ ಸಹಕಾರ ಸಚಿವರಲ್ಲಿ ಮನವಿ ಮಾಡಿದರು..
ನಮ್ಮ ರಾಜ್ಯದಲ್ಲಿ 8-5-1905 ರಂದು ಗದಗ ಜಿಲ್ಲೆಯ ಕಣಗಿನ ಹಾಳ ಗ್ರಾಮದಲ್ಲಿ ಶ್ರೀ ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲ್ ಅವರು ಪ್ರಪ್ರಥಮ ಕೃಷಿ ಪತ್ತಿನ ಸಹಕಾರ ಸಂಘವನ್ನು ಪ್ರಾರಂಭ ಮಾಡಿದರು, ಮಹಾತ್ಮಾ ಗಾಂಧೀಜಿ ಯವರು ರಾಮರಾಜ್ಯ ವಾಗಬೇಕಾದರೆ ಹಳ್ಳಿಯಲ್ಲಿ ಒಂದು ಸಹಕಾರ ಸಂಘ ತೆರೆದೆರೆ ರೈತರ ಕಲ್ಯಾಣ ಕಾರ್ಯಕ್ರಮಗಳು, ರೈತರಿಗೆ ಕೃಷಿ ಉಪಕರಣ, ಗೊಬ್ಬರ, ಕೀಟ ನಾಶಕ ಇವೆಲ್ಲವನ್ನೂ ಸಹಕಾರ ಸಂಘಗಳ ಮೂಲಕ ವಿತರಿಸುವುದರಿಂದ ಕೃಷಿಗೆ ಒತ್ತು ನೀಡಲು ಸಹಕಾರಿಯಾಗುತ್ತದೆ ಎಂದು ಪರಿಕಲ್ಪನೆ ಕಂಡಿದ್ದರು.. ಪ್ರಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಪಂಚವಾರ್ಷಿಕ ಯೋಜನೆಯ ಮೂಲಕ ಸಹಕಾರ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ಕೊಟ್ಟರು.
ಆಹಾರ ಉತ್ಪಾದನೆಗೆ, ಗೊಬ್ಬರ ಉತ್ಪಾದನೆಗೆ, ವ್ಯಾಪಾರ ವಹಿವಾಟಿಗೆ ನೀಡಿದ ಕೊಡುಗೆಗಳು ಅಪಾರವಾಗಿದೆ ಎಂದರು.
ದೇಶದಲ್ಲಿ ಕ್ಷೀರ ಕ್ರಾಂತಿ ಮಾಡಿದ ಡಾ. ವರ್ಗಿಸ್ ಕುರಿಯನ್ ಅವರು ಸಹಕಾರ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸುವ ಸಲುವಾಗಿ ಪ್ರತಿ ಸಹಕಾರ ಸಂಘ ಸಂಸ್ಥೆಗಳಲ್ಲಿ ಅವರ ಭಾವಚಿತ್ರವನ್ನು ಇಟ್ಟು ಪೂಜೆ ಮಾಡುತ್ತಿರುವುದಾಗಿ ಹಾಗೂ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಸ್ಮರಿಸಿಕೊಳ್ಳುತ್ತೇವೆ ಎಂದರು.
ನಬಾರ್ಡ್ 2023-24 ನೇ ಸಾಲಿನಲ್ಲಿ ರಿಯಾಯಿತಿ ಬಡ್ಡಿ ದರದಲ್ಲಿ 5560 ಕೋಟಿ ರೂಪಾಯಿ ಸಾಲ ನೀಡಿದ್ದರು. ಆದರೆ 2024-25 ನೇ ಸಾಲಿನಲ್ಲಿ 3320 ಕೋಟಿ ರೂಪಾಯಿ ಕಡಿತ ಮಾಡಿ, ಕೇವಲ 2240 ಕೋಟಿ ರೂಪಾಯಿ ನೀಡಿದ್ದು, ಇದರಿಂದ ಕೃಷಿ ಸಾಲ ವಿತರಣೆಗೆ ಹಣದ ಕೊರತೆ ಉಂಟಾಗಿ, ಕೃಷಿ ಪತ್ತಿನ ಸಹಕಾರ ಸಂಘಗಳು, ಡಿ ಸಿ ಸಿ ಬ್ಯಾಂಕ್ ಗಳು ಹಾಗೂ ರೈತರ ಮೇಲೆ ನೇರ ಪರಿಣಾಮ ಬೀರುತ್ತದೆ. ಸಾಲದ ಮೊತ್ತವನ್ನು ಕಡಿಮೆ ಮಾಡಬಾರದೆಂದು ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಬಸವಣ್ಣ ನವರನ್ನು ಸಾಂಸ್ಕೃತಿಕ ನಾಯಕ ರನ್ನಾಗಿ ಘೋಷಣೆ ಮಾಡಿರುವುದಕ್ಕೆ, ಬಸವಣ್ಣ ನವರ ಐಕ್ಯ ಸ್ಥಳ ಬಾಗಲಕೋಟೆಯ ಈ ಪುಣ್ಯಸ್ಥಳದಲ್ಲಿ ರಾಜ್ಯದ ಎಲ್ಲಾ ಸಹಕಾರಿಗಳು ಹಾಗೂ ಕನ್ನಡಿಗರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಸಹಕಾರ ಕ್ಷೇತ್ರದಲ್ಲಿ ಗಣನಿಯ ಸೇವೆ ಸಲ್ಲಿಸಿದ 65 ಹಿರಿಯ ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು..
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಸಹಕಾರ ಸಚಿವ ಕೆ ಎನ್ ರಾಜಣ್ಣ, ಸಚಿವರಾದ ಶಿವಾನಂದ ಪಾಟೀಲ್ , ಆರ್ ಬಿ ತಿಮ್ಮಾಪುರ್ , ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ಪ್ರಕಾಶ್ ಹುಕ್ಕೇರಿ, ಶಾಸಕರಾದ ಎಚ್ ವೈ ಮೇಟಿ, ಜೆ ಟಿ ಪಾಟೀಲ್, ವಿಜಯಾನಂದ ಕಾಶಪ್ಪನವರ, ನರೇಂದ್ರಸ್ವಾಮಿ, ಕೊತ್ತೂರ್ ಮಂಜುನಾಥ್, ಭೀಮಸೇನ ಚಿಮ್ಮನಕಟ್ಟಿ, ಬಾಗಲಕೋಟೆ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಅಜಯ್ ಕುಮಾರ್ ಸರನಾಯಕ್, ಮಹಾಮಂಡಳದ ನಿರ್ದೇಶಕರಾದ ಜಿ ಪಿ ಪಾಟೀಲ್, ಶೇಖರಗೌಡ ಮಾಲಿ ಪಾಟೀಲ್, ಬಾಪೂಗೌಡ ಪಾಟೀಲ್, ಬಸವರಾಜ ಅರಬಗೊಂಡ, ಈರಣ್ಣ ಪಟ್ಟಣ ಶೆಟ್ಟಿ, ಸಹಕಾರ ಇಲಾಖೆಯ ಅಧಿಕಾರಿಗಳು, ವಿವಿಧ ಬ್ಯಾಂಕ್ ನಿರ್ದೇಶಕರು, ಸ್ಥಳೀಯ ಸಹಕಾರಿ ಮುಖಂಡರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಮಾಡುವ ಸಮಯದಲ್ಲಿ ಜಿ ಟಿ ದೇವೇಗೌಡರು ಸಹಕಾರ ವಿಷಯದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಸಹಕಾರ ಸಂಘ ಸಂಸ್ಥೆಗಳಲ್ಲಿ ಉದ್ಯೋಗ ದೊರಕಲು ಮೀಸಲಾತಿ ಜಾರಿಗೆ ತರುವಂತೆ ಕೇಳಿದ್ದು, ಇದರ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿದರು .
-
Mysore7 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State10 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State10 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health10 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan7 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized6 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized12 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State10 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.