Connect with us

Uncategorized

ಜನವರಿ 22ಕ್ಕೆ ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ

Published

on

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಮುಂದಿನ ಜನವರಿ 22ರಂದು ನಡೆಯಲಿದ್ದು, ಆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಆಹ್ವಾನಿಸಿದೆ.

ಇಂದು ಬೆಳಗ್ಗೆ ಬೆಂಗಳೂರಿನ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿದ್ದ ಟ್ರಸ್ಟ್ ನ ಪ್ರಮುಖರು, ಆಹ್ವಾನ ಪತ್ರಿಕೆ ನೀಡಿ ಕುಟುಂಬ ಸಮೇತವಾಗಿ ತಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕೋರಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ರಾಮ ಲಾಲ್ ಮತ್ತಿತರರು ಟ್ರಸ್ಟ್ ಪರವಾಗಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಶ್ರೀಮತಿ ಅನಿತಾ ಕುಮಾರಸ್ವಾಮಿ, ಅವರ ಪುತ್ರ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದರು.

ಆಹ್ವಾನ ಸ್ವೀಕರಿಸಿದ ಮಾಜಿ ಮುಖ್ಯಮಂತ್ರಿಗಳು, ಕುಟುಂಬ ಸಮೇತ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ರಾಮ್ ಲಾಲ್ ಅವರಿಗೆ ತಿಳಿಸಿದರು. ಅಲ್ಲದೆ, ರಾಮಜನ್ಮಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣ ಆಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಈಗಾಗಲೇ ಟ್ರಸ್ಟ್ ನ ಪ್ರಮುಖರು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Uncategorized

ಬೆಳ್ತಂಗಡಿ: ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾ’ ಪಿಎಸ್ಐಗೇ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜ – ಎಫ್ಐಆರ್ ದಾಖಲು

Published

on

ಮಂಗಳೂರು: ತನ್ನ ಬೆಂಬಲಿಗರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದಲ್ಲದೆ, ಠಾಣೆ ಏನು ನಿಮ್ಮ ಅಪ್ಪಂದಾ ಎಂದು ಪೊಲೀಸರಿಗೇ ಧಮ್ಕಿ ಹಾಕಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಬೆಳ್ತಂಗಡಿಯ ಮೆಲಂತಬೆಟ್ಟುವಿನಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಲ್ಲುಕ್ವಾರೆಗೆ ತಹಶೀಲ್ದಾರ್ ಹಾಗೂ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದರು‌. ಈ ವೇಳೆ ಕಲ್ಲುಕ್ವಾರೆ ನಡೆಸುತ್ತಿದ್ದ ಶಾಸಕ ಹರೀಶ್ ಪೂಂಜ ಆಪ್ತ, ಬೆಳ್ತಂಗಡಿ ತಾಲೂಕು ಯುವಮೋರ್ಚ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹಾಗೂ ಮತ್ತಿತರರನ್ನು ಪೊಲೀಸರು ಶನಿವಾರ ಬಂಧಿಸಿದ್ದರು‌‌. ಈ ಬಂಧನವನ್ನು ವಿರೋಧಿಸಿ ಬೆಳ್ತಂಗಡಿ ಠಾಣೆಯೆದುರು ಶಾಸಕ ಹರೀಶ್ ಪೂಂಜ ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು‌. ಅಲ್ಲದೆ ಬೆಳ್ತಂಗಡಿ ಪಿಎಸ್ಐ ಮುರುಳಿಧರ್ ನಾಯ್ಕ್ ಅವರಿಗೆ ಶಾಸಕ ಹರೀಶ್ ಪೂಂಜ ಅವರು ಬೆದರಿಕೆ ಹಾಕಿದ್ದರು‌. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲುಕೋರೆ ಮಾಲಕ ಪ್ರಮೋದ್ ದಿಡುಪೆ ತಲೆಮರೆಸಿಕೊಂಡಿದ್ದಾನೆ. ಆತನ ಬಂಧಿಸಲು ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ.

Continue Reading

Hassan

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: ಮೌನ ಮುರಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Published

on

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ೯೧ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ತಕರಾರು ಇಲ್ಲ. ಆದರೆ ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ. ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ ಎಂದರು.

ಈ ಘಟನೆ ಬಗ್ಗೆ ಕುಟುಂಬದ ಪರವಾಗಿ ಹೆಚ್?ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ. ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ. ಇದರಲ್ಲಿ ಅನೇಕ ಜನರಿದ್ದಾರೆ, ಅವರ ಹೆಸರನ್ನು ಹೇಳಲು ಹೋಗಲ್ಲ. ಅನ್ಯಾಯಕ್ಕೆ ಒಳಗಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ಈ ಎಲ್ಲ ವಿಚಾರಗಳನ್ನು ಕುಮಾರಸ್ವಾಮಿ ಬಿಡಿಸಿ ಬಿಡಿಸಿ ಹೇಳಿದ್ದಾರೆ. ಇದು ಯಾವ ರೀತಿ ನಡೆಯಿತು ಎಂದು ನಾನು ವಿಶ್ಲೇಷಣೆ ಮಾಡಲ್ಲ ಎಂದು ದೇವೇಗೌಡ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ೧೦೦ ಕೋಟಿ ಆಫರ್ ಮಾಡಿದ್ದರು ಎಂಬ ದೇವರಾಜೇಗೌಡ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದೂ ಅವರು ಹೇಳಿದರು.

Continue Reading

Uncategorized

ಅಂಜಲಿ ಕೊಲೆ ಆರೋಪಿಯಿಂದ ಮತ್ತೊಬ್ಬ ಮಹಿಳೆ ಮೇಲೆ ಹಲ್ಲೆ

Published

on

ದಾವಣಗೆರೆಯಲ್ಲಿ ಸೆರೆ ಹಿಡಿದ ರೈಲ್ವೆ ಪೋಲೀಸರು
ದಾವಣಗೆರೆ.ಮೇ.೧೭; ಹುಬ್ಬಳ್ಳಿಯ ಯುವತಿ
ಅಂಜಲಿ ಕೊಲೆ ಆರೋಪಿಯಿಂದ ಮತ್ತೊಂದು ಮಹಿಳೆಯ ಮೇಲೆ ಕೊಲೆಯತ್ನದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ ಬಳಿ ವಿಶ್ವಮಾನವ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಘಟನೆ ನಡೆದಿದೆ.ಕೊಲೆ ಆರೋಪಿ ವಿಶ್ವ ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದ ಹಲ್ಲೆಗೊಳಗಾದ ಮಹಿಳೆ ಲಕ್ಷ್ಮೀ ತುಮಕೂರಿನಿಂದ ಪ್ರಯಾಣ ಬೆಳೆಸಿದ್ದರು ಎಂದು ತಿಳಿದು ಬಂದಿದೆ.\


ರೈಲಿನಲ್ಲಿ ಆತ ನೋಡುವ ದೃಷ್ಟಿ ಸರಿ ಇಲ್ಲ ಎಂದು ವಿಶ್ವನೊಂದಿಗೆ ಮಹಿಳೆ ಜಗಳ ಮಾಡಿಕೊಂಡಿದ್ದಾಳೆ.ಇದರಿಂದ ಸಿಟ್ಟಾಗಿದ್ದ ವಿಶ್ವ ಮಹಿಳೆ ಶೌಚಾಲಯಕ್ಕೆ ಹೋಗಿ ಬಾಗಿಲು ಒಪನ್ ಮಾಡುತ್ತಿದ್ದಂತೆ ಆಕೆಗೆ ವಿಶ್ವ ಚಾಕು ಹಾಕಿದ್ದಾನೆ.ಅದೃಷ್ಟವಶಾತ್ ಎಡಗೈಗೆ ಚಾಕು ತಗುಲಿದೆ, ಸ್ಥಳದಲ್ಲಿದ್ದ ಜನರು ಕೂಡಲೇ ಆತನನ್ನು ಹಿಡಿದು ಹೊಡೆದಿದ್ದಾರೆ.ಜನರಿಂದ ತಪ್ಪಿಸಿಕೊಳ್ಳಲು ಕೊಲೆ ಆರೋಪಿ‌ ವಿಶ್ವ ರೈಲಿನಿಂದ ಧುಮುಕಿದ್ದಾನೆ.ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಬಳಿ ಆರೋಪಿ ವಿಶ್ವ ರೈಲಿನಿಂದ ಕೆಳಗೆ ದುಮುಕಿದ್ದಾನೆ.


ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ರೈಲ್ವೆ ಪೋಲೀಸರು ಅರೋಪಿಯನ್ನು ಹಾಗೂ ಹಲ್ಲೆಗೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಆಗ ಮಾಧ್ಯಮಗಳಲ್ಲಿ ವಿಶ್ವನ ಪೋಟೋ ನೋಡಿ ಕೊಲೆ ಅರೋಪಿ ಎಂದು  ರೈಲ್ವೆ ಪೊಲೀಸರು ಗುರುತಿಸಿದ್ದಾರೆ.
ಕೂಡಲೇ ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಹಲ್ಲೆಗೊಳಗಾದ ಮಹಿಳೆ ಲಕ್ಷ್ಮೀ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು‌ ತೆರಳಿದ್ದಾರೆ ಎನ್ನಲಾಗಿದೆ.

Continue Reading

Trending

error: Content is protected !!