Connect with us

Mysore

‘ಜಾತಿಯ ಬಂಧನದಿಂದ ಬಿಡುಗಡೆಯಾಗಬೇಕು’

Published

on

ಅಂಬೇಡ್ಕರ್ ಧಮ್ಮ ದೀಕ್ಷಾ ದಿನಾಚರಣೆ ಕಾರ್ಯಕ್ರಮದಲ್ಲಿ ಆರ್.ಮಹಾದೇವಪ್ಪ ಅಭಿಪ್ರಾಯ
ಮೈಸೂರು: ಜಾತಿ, ದೇವರು, ಧರ್ಮ ಈ ಮೂರು ಅಂಶಗಳು ಜನರಿಗೆ ಸಮಸ್ಯೆಯಾಗಿ ಕಾಡುತ್ತಿದೆ. ಇಲ್ಲದಿರುವ ಬಗೆಯೇ ಜನರು ಹೆಚ್ಚು ತಲೆಕೆಡಿಸಿಕೊಳ್ಳುತ್ತಿದ್ದಾರೆ. ಜಾತಿಗೆ ಯಾವುದೇ ಮಾನದಂಡವಿಲ್ಲ, ಜಾತಿ ವಂಶಪರಂಪರೆಯಾಗಿ ಬಂದಿದೆ. ಆದರೆ ಧರ್ಮ ಅನುವಂಶಿಯವಾಗಿ ಬಂದಿಲ್ಲ ಎಂದು ಕರ್ನಾಟಕ ಬುದ್ಧಧಮ್ಮ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್. ಮಹಾದೇವಪ್ಪ ಹೇಳಿದರು.

ವಿಜುಂನಗರ ೧ನೇ ಹಂತದ ಡಿ.ಸಂಜೀವ್ಂಯು ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧವಿಹಾರದಲ್ಲಿ ಕರ್ನಾಟಕ ಬುದ್ಧಧಮ್ಮ ಸಮಿತಿ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಧಮ್ಮ ಧೀಕ್ಷಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಗವಾನ್ ಬುದ್ಧ ಹಾಗೂ ಬಾಬಾ ಸಾಹೇಬರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ಜಾತಿ ಅನುವಂಶಿಯವಾಗಿದೆ, ಜಾತಿ ವ್ಯವಸ್ಥೆಯನ್ನು ಹಿಂದೂ ಧಾರ್ಮಿಕ ವ್ಯವಸ್ಥೆ ಪೋಷಿಸುತ್ತಾ ಬಂದಿದೆ. ಒಂದೊಂದು ಜಾತಿಯೂ ತನ್ನದೇ ಆದ ಹಬ್ಬ, ಸಂಪ್ರದಾಯ ಸಂಸ್ಕೃತಿ ಯನ್ನು ಹೊಂದಿವೆ. ಆದ್ದರಿಂದ ಪ್ರತಿಯೋಬ್ಬರೂ ಜಾತಿಯನ್ನು ಬಿಟ್ಟು ಬದುಕಬೇಕು. ಧರ್ಮ ಮನುಷ್ಯನಿಗೆ ಅನಿವಾರ್ಯವಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಜಾತಿಯ ಕ್ರೌರ್ಯ ಮಕ್ಕಳನ್ನು ಕಾಡುತ್ತಿದೆ. ಇದರಿಂದ ಹೊರಬರಬೇಕು, ದಲಿತರು ಬೌದ್ಧ ಧರ್ಮದ ಕಡೆಗೆ ಮುಖ ವಾಡುವುದರ ಮೂಲಕ ಅಂಬೇಡ್ಕರ್ ವಾರ್ಗದಲ್ಲಿ ಎಲ್ಲರೂ ನಡೆಯಬೇಕು. ಜಾತಿಯ ಬಂಧನದಿಂದ ಎಲ್ಲರೂ ಬಿಡುಗಡೆಯಾಗಬೇಕು ಎಂದು ಹೇಳಿದರು.

ಬೌದ್ಧ ಭಿಕ್ಕು ಡಾ.ಕಲ್ಯಾಣ ಸಿರಿ ಭಂತೇಜಿ ಧಮ್ಮ ಪ್ರವಚನ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಗಾಯಕರಾದ ಲಕ್ಷ್ಮೀರಾಮು, ಶೇಷಣ್ಣ ಭೀಮ ಗೀತೆಗಳನ್ನು ಹಾಡಿದರು. ಸಮಾಜ ಸೇವಕ ಡಾ.ಪುಟ್ಟ ಸಿದ್ದಯ, ಚಿಂತಕ ಡಾ.ಕೃಷ್ಣಮೂರ್ತಿ ಚಮರಂ ಮಾತನಾಡಿದರು. ಸಮಿತಿಯ ಅಧ್ಯಕ್ಷರಾದ ಪ್ರೊ.ಡಿ.ನಂಜುಂಡಯ್ಯ ಅಧ್ಯಕ್ಷತೆ ವಹಿಸಿದ್ದರು. ಖಜಾಂಚಿ ಸಾವಕಯ್ಯ, ಸಮಿತಿಯ ಸಹ ಕಾರ್ಯದರ್ಶಿ ಎಚ್.ಶಿವರಾಜು, ನಾಗರಾಜು, ಗಾಯತ್ರಿದೇವಿ, ಪುಟ್ಟಮ್ಮಣ್ಣಿ, ಡಾ.ಹೇಮಾಲತಾ, ಪ್ರಾಧ್ಯಾಪಕ ಡಾ.ಕುಪ್ನಳ್ಳಿ ಎಂ.ಭೈರಪ್ಪ, ನಾಗಮಲ್ಲೇಶ್, ನಿವೃತ್ತ ಎಎಸ್‌ಐ ಡಾ.ನಾಗರಾಜು, ದಸಂಸ ಮುಖಂಡ ಚೋರನಹಳ್ಳಿ ಶಿವಣ್ಣ, ಅಹಿಂದ ಜವರಪ್ಪ, ವಾಸು, ನಿವೃತ್ತ ಇಂಜಿನಿಯರ್‌ಗಳಾದ ಬಿ.ಬೋರಯ, ಆರ್.ನಟರಾಜ, ಉಪಾಸಕರಾದ ಪುಟ್ಟಸ್ವಾಮಿ, ನಿಸರ್ಗ ಸಿದ್ದರಾಜು, ಹೊ.ಬ.ರಘೋತ್ತಮ, ನಿರಂಜನ್, ರಾಘವೇಂದ್ರ ಅಪುರ, ಇರಸವಾಡಿ ಮಹೇಶ್, ವಿಜಯ್‌ಕುಮಾರ್, ವಿಶಾಲ್, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಜರಿದ್ದರು.

ಮೈಸೂರಿನ ವಿಜಯನಗರ ೧ನೇ ಹಂತದ ಡಿ.ಸಂಜೀವ್ಂಯು ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧವಿಹಾರದಲ್ಲಿ ಕರ್ನಾಟಕ ಬುದ್ಧಧಮ್ಮ ಸಮಿತಿ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಧಮ್ಮ ಧೀಕ್ಷಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

Continue Reading
Click to comment

Leave a Reply

Your email address will not be published. Required fields are marked *

Mysore

ಜೂಜಾಡುತ್ತಿದ್ದ ನಾಲ್ವರ ಬಂಧನ

Published

on

ಮೈಸೂರು: ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ ಒಟ್ಟು 12.5 ಸಾವಿರ ರೂ ನಗದು ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರ 2ನೇ ಹಂತದ ಜೆ.ಬಿ. ಪ್ಯಾರಡೈಸ್ನ ಕೊಠಡಿಯೊಂದರಲ್ಲಿ ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಡುತ್ತಿದ್ದರು.

ಇದರ ಬಗ್ಗೆ ಜನವರಿ 14 ರಂದು ನಗರದ ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿ.ಸಿ ಬಿ.ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ವಿ ಜಯನಗರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ.

Continue Reading

Mysore

ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡುತ್ತಿದ್ದ ನಾಲ್ವರ ಬಂಧನ.

Published

on

ಮೈಸೂರು: ವಿವಿಧ ಕಂಪನಿಗೆ ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡಿಕೊಂಡು ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ. ಒಟ್ಟು 127 ಸಿಲಿಂಡರ್ ಗಳು 79 ರಾಡುಗಳು, 2 ಡಿಜಿಟಲ್ ಯಂತ್ರಗಳು ಹಾಗೂ 1 ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.


ನಗರದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯ ಜಮೀನಿನಲ್ಲಿ ನಿರ್ಮಾಣ ಮಾಡಿರುವ ಶೆಡ್ ನಲ್ಲಿ ಅಕ್ರಮವಾಗಿ ವಿವಿಧ ಕಂಪನಿಗಳಿಗೆ ಅಡುಗೆ ಅನಿಲ ಸಿಲಿಂಡರ್ ಗಳನ್ನು ಉಪಯೋಗಿಸಿಕೊಂಡು ಯಾವುದೇ ಅಧಿಕೃತ ರಹದಾರಿ ಮತ್ತು ಖರೀದಿ ಮಾಡಿರುವ ಬಿಲ್ ಇಲ್ಲದೆ.

ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾರೆ ಎಂದು ಜನವರಿ 11 ರಂದು ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ. ಸಿ.ಸಿ.ಬಿ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

Continue Reading

Mysore

ಮಾದಕವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತದ್ದ ಪೆಡ್ಲರ್ ಬಂಧನ

Published

on

ಮೈಸೂರು ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಪ್ರಯತ್ನಿಸಿದ ಪೆಡ್ಲರ್ ನನ್ನು ಸಿ.ಸಿ.ಬಿ ಘಟಕದ ಪೊಲೀಸರು ಬಂಧಿಸಿ ಒಟ್ಟು 20. ಸಾವಿರ ರೂ ಮೌಲ್ಯದ 6 ಗ್ರಾಂ 600 ಮಿಲಿ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.


ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣಿಗಿರಿ ಹಳೇ ಆರ್.ಟಿ.ಒ. ಅಫೀಸ್ ಹತ್ತಿರ ಇರುವ ತ್ರಿವೇಣೆ ಪಾರ್ಕ್ ಬಳಿ. ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಒಬ್ಬ ಪೆಡ್ಲರ್ ನಿಂತಿದ್ದಾನೆಂದು ಜನವರಿ 7 ರಂದು ನಗರದ ಸಿ.ಸಿ.ಬಿ. ಘಟಕದ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ.

ಸಿ.ಸಿ.ಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.

Continue Reading

Trending

error: Content is protected !!