Connect with us

State

ಜಾತಿ ಗಣತಿ ಮೂಲಕ ಎಲ್ಲಾ ವರ್ಗದವರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Published

on

ಬೆಂಗಳೂರು, ಜ. 28: “ಎಲ್ಲಾ ಶೋಷಿತ ವರ್ಗದವರಿಗೆ ನ್ಯಾಯ ಒದಗಿಸಿಕೊಡಲು, ಜನಸಂಖ್ಯೆ ಆಧಾರದ ಮೇಲೆ ಅವರಿಗೆ ಶಕ್ತಿ ತುಂಬಲು ರಾಹುಲ್ ಗಾಂಧಿ ಅವರು ದೇಶದಲ್ಲಿ ಜಾತಿ ಗಣತಿಗೆ ಕರೆ ನೀಡಿದ್ದಾರೆ. ರಾಜ್ಯದಲ್ಲಿ ಇದನ್ನು ಮಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಚಿತ್ರದುರ್ಗದಲ್ಲಿ ಭಾನುವಾರ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು;

“ರಾಹುಲ್ ಗಾಂಧಿ ಅವರು ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸಲು ಹೋರಾಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲರಿಗೂ ಸಮಾನತೆ ಕಲ್ಪಿಸಲಾಗುವುದು. ಶೋಷಿತರಿಗೆ ಶಕ್ತಿ ನೀಡಬೇಕು ಎಂಬುದು ಕಾಂಗ್ರೆಸ್ ಸಂಕಲ್ಪ. ಯಾರೂ ಗಾಬರಿಯಾಗಬಾರದು. ಕಾಂಗ್ರೆಸ್ ಸರ್ಕಾರ ನಿಮ್ಮ ಬದುಕಿನ ರಕ್ಷಣೆಗೆ ಬದ್ಧವಾಗಿದೆ.

ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಶಕ್ತಿ:

ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು,
ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು
ಇದನ್ನು ನೋಡಿ ಅರಳಿದ್ದ ಕಮಲ ಉದುರಿ ಹೋಯಿತು,
ಇದನ್ನು ನೋಡಿ ಮಹಿಳೆ ತೆನೆ ಎಸೆದು ಹೋದಳು,
ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು,
ಕರ್ನಾಟಕ ಸಮೃದ್ಧವಾಯಿತು,
ಕರ್ನಾಟಕ ಪ್ರಭುದ್ಧವಾಯಿತು.

ಮಹಿಳೆಯರು ಶಕ್ತಿ ಯೋಜನೆಯಲ್ಲಿ ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ, ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ವರೆಗೂ ವಿದ್ಯುತ್ ಉಚಿತವಾಗಿ ಸಿಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಬರುತ್ತಿದೆ. ಇದೇ ಕಾಂಗ್ರೆಸ್ ಶಕ್ತಿ.

ಇದೊಂದು ಐತಿಹಾಸಿಕ ಸಮಾವೇಶ. ರಾಜ್ಯದಲ್ಲಿ ಬದಲಾವಣೆ ಪರ್ವ ತರಲು ಈ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರು ಅಧಿಕಾರಕ್ಕೆ ಬಂದಂತೆ. ಇದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ.

ಮರಕ್ಕೆ ಬೇರು ಎಷ್ಟು ಮುಖ್ಯವೋ ಹಾಗೆಯೇ ಮನುಷ್ಯರಿಗೆ ನಂಬಿಕೆ ಮುಖ್ಯ.

ದೇವರು ವರವನ್ನೂ ನೀಡುವುದಿಲ್ಲ. ಶಾಪವನ್ನೂ ನೀಡುವುದಿಲ್ಲ. ಕೇವಲ ಅವಕಾಶ ನೀಡುತ್ತಾನೆ. ನಾವು ನಮ್ಮ ಬದುಕಿನಲ್ಲಿ ಸಿಗುವ ಅವಕಾಶವನ್ನು ಬಹಳ ಜಾಗೃತವಾಗಿ ಬಳಸಿಕೊಳ್ಳಬೇಕು. ಯಶಸ್ಸು ಯಾರ ಆಸ್ತಿಯೂ ಅಲ್ಲ. ಯಾವುದೇ ರಾಜ ಸದಾ ರಾಜನಾಗಿರಲು ಸಾಧ್ಯವಿಲ್ಲ. ಶ್ರೀಮಂತ ಸದಾ ಶ್ರೀಮಂತನಾಗಿರಲು ಸಾಧ್ಯವಿಲ್ಲ. ಎಲ್ಲರಿಗೂ ರಾಜನಾಗುವ ಹಾಗೂ ಶ್ರೀಮಂತನಾಗುವ ಅವಕಾಶವನ್ನು ಪ್ರಜಾಪ್ರಭುತ್ವ ವ್ಯವಸ್ಥೆ ಕಲ್ಪಿಸಿದೆ. ಇದೇ ಪ್ರಜಾಪ್ರಭುತ್ವದ ಶಕ್ತಿ.

ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ, ಭಗವದ್ಗೀತೆ, ಖುರಾನ್, ಬೈಬಲ್ ನಂತೆ ಪವಿತ್ರವಾದ ಗ್ರಂಥ. ಅವು ಧಾರ್ಮಿಕ ಗ್ರಂಥವಾದರೆ, ಸಂವಿಧಾನ ನಮ್ಮ ಬದುಕಿಗೆ ರಕ್ಷಣೆ ಹಾಗೂ ಆಶ್ರಯ ನೀಡುವ ಗ್ರಂಥ.

ಹಸಿದವನ ಹೊಟ್ಟೆಗೆ ಅನ್ನ ನೀಡಬೇಕು, ಕಷ್ಟದಲ್ಲಿರುವವರ ಜೊತೆಯಾಗಿ ನಿಲ್ಲಬೇಕು, ನಿಮ್ಮ ಹೋರಾಟ ಮುಂದುವರಿಸಲು ನಾವು ಇಲ್ಲಿದ್ದೇವೆ.

ಯಶಸ್ಸು ಯಾರ ವೈಯಕ್ತಿಕ ಸ್ವತ್ತು ಅಲ್ಲ. ನಿಮ್ಮ ಪರಿಶ್ರಮ, ಧೈರ್ಯ ಇದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಮನುಷ್ಯನ ಜೀವನದಲ್ಲಿ ಹೋರಾಟ ಮಾಡಿದಾಗ ಮಾತ್ರ ಪ್ರಗತಿ ಸಾಧ್ಯ. ನಂಬಿಕೆ ಹೋದರೆ ಅದು ಮತ್ತೆ ಸಿಗುವುದು ಕಷ್ಟ.

ಮನೆ ಎಂದಮೇಲೆ ಕಸ ಇರುತ್ತದೆ, ಬದುಕು ಎಂದ ಮೇಲೆ ಕಷ್ಟ ಇರುತ್ತದೆ. ಕಾಂಗ್ರೆಸ್ ಪಕ್ಷ ಇದೇ ಜಾಗದಲ್ಲಿ ದೊಡ್ಡ ಸಮಾವೇಶ ಮಾಡಿತ್ತು. ನಂತರ ನಿಮಗೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು. ದೇಶದಲ್ಲಿ ಯಾವುದಾದರೂ ಸರ್ಕಾರ ಕೇವಲ ಐದಾರು ತಿಂಗಳಲ್ಲಿ ಕೊಟ್ಟ ಮಾತಿನಂತೆ ಯೋಜನೆ ಜಾರಿ ಮಾಡಿದ್ದರೆ ಅದು ಸಿದ್ದರಾಮಯ್ಯ, ನಮ್ಮ ಕಾಂಗ್ರೆಸ್ ಸರ್ಕಾರ ಮಾತ್ರ.

Continue Reading
Click to comment

Leave a Reply

Your email address will not be published. Required fields are marked *

State

7 ಬಾರಿ ಸಂಚಾರಿ ನಿಯಮ ಉಲ್ಲಂಘನೆ: ಕೊನೆಗೂ ದಂಡ ಪಾವತಿಸಿದ ಸಿಎಂ ಸಿದ್ದರಾಮಯ್ಯ, ಎಷ್ಟು ಗೊತ್ತಾ?

Published

on

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಇನೊವಾ ಕಾರು 2024ರಿಂದ ಈವರೆಗೆ ಏಳು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದು ಜಂಕ್ಷನ್‌ಗಳಲ್ಲಿ ಅಳವಡಿಸಿರುವ ಕ್ಯಾಮೆರಾಗಳಲ್ಲಿ ದಾಖಲಾಗಿದೆ.

ಬೆಂಗಳೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಕಾರು ಕೂಡ ಬರೊಬ್ಬರಿ 7 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಕಾರಣ ದಂಡ ಹೇರಲಾಗಿದೆ.

ಹೌದು.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಇನೊವಾ ಕಾರು 2024ರಿಂದ ಈವರೆಗೆ ಏಳು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದು ಜಂಕ್ಷನ್‌ಗಳಲ್ಲಿ ಅಳವಡಿಸಿರುವ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಅದರಂತೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿ 2,500 ಸಾವಿರ ರೂಗಳನ್ನು ದಂಡವಾಗಿ ಪಾವತಿಸಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ 50ರ ರಿಯಾಯಿತಿ ಅಡಿ ದಂಡ ಪಾವತಿಸಲು ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದ್ದು, ಸಿದ್ದರಾಮಯ್ಯ ಅವರು ಬಳಸುತ್ತಿರುವ ಕಾರಿನ ಮೇಲಿನ ಪ್ರಕರಣಗಳ ಸಂಬಂಧ ದಂಡ ಪಾವತಿಯಾಗಿದೆ ಎಂದು ಸಂಚಾರ ಪೊಲೀಸ್ ಮೂಲಗಳು ತಿಳಿಸಿವೆ.

ಆರು ಪ್ರಕರಣಗಳಲ್ಲಿ ಮುಖ್ಯಮಂತ್ರಿ ಸೀಟು ಬೆಲ್ಟ್ ಧರಿಸದೇ ನಿಯಮ ಉಲ್ಲಂಘಿಸಿದ್ದಾರೆ. ಶೇ 50ರಷ್ಟು ರಿಯಾಯಿತಿ ಅನುಸಾರ 2,500 ರೂಪಾಯಿ ದಂಡವಿತ್ತು. ಆರು ಬಾರಿ ಸೀಟು ಬೆಲ್ಟ್ ಧರಿಸದಿದ್ದಕ್ಕಾಗಿ ಮತ್ತು ಒಂದು ಬಾರಿ ಅತಿವೇಗದಲ್ಲಿ ಚಲಿಸಿದ್ದಕ್ಕಾಗಿ ದಂಡ ವಿಧಿಸಲಾಗಿದ್ದು, ಸದ್ಯ ದಂಡದ ಮೊತ್ತವನ್ನು ಪಾವತಿಸಲಾಗಿದೆ ಎಂದು ಸಂಚಾರ ಪೊಲೀಸ್ ಮೂಲಗಳು ತಿಳಿಸಿವೆ.

ಎಲ್ಲೆಲ್ಲಿ ನಿಯಮ ಉಲ್ಲಂಘನೆ?

ಸಿದ್ದರಾಮಯ್ಯ ಅವರು ಕಾರಿನ ಮುಂಭಾಗದಲ್ಲಿ ಕುಳಿತುಕೊಂಡಾಗ ಸೀಟು ಬೆಲ್ಟ್ ಧರಿಸದೇ ನಿಯಮ ಉಲ್ಲಂಘಿಸಿರುವ ದೃಶ್ಯಾವಳಿಯು ಜಂಕ್ಷನ್‌ಗಳಲ್ಲಿ ಅಳವಡಿಸಿರುವ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಂನಲ್ಲಿ (ಐಟಿಎಂಎಸ್) ಸೆರೆಯಾಗಿದೆ.

2024ರ ಜನವರಿ 24ರಂದು ಮಧ್ಯಾಹ್ನ 12.19ರಂದು ಹಳೇ ವಿಮಾನ ನಿಲ್ದಾಣ ರಸ್ತೆಯ ಲೀಲಾ ಪ್ಯಾಲೇಸ್ ಜಂಕ್ಷನ್ ಬಳಿ ಸಾಗುವಾಗ ಸಿದ್ದರಾಮಯ್ಯ ಅವರು ಸೀಟು ಬೆಲ್ಟ್ ಧರಿಸಿರಲಿಲ್ಲ.

ಅದೇ ಜಂಕ್ಷನ್​ನಲ್ಲಿ ಫೆಬ್ರುವರಿ ಹಾಗೂ ಆಗಸ್ಟ್​ನಲ್ಲಿ ಮತ್ತೆರಡು ಪ್ರಕರಣಗಳು ದಾಖಲಾದರೆ, ಮಾರ್ಚ್‌ನಲ್ಲಿ ಚಂದ್ರಿಕಾ ಹೊಟೇಲ್ ಜಂಕ್ಷನ್ ಹಾಗೂ ಆಗಸ್ಟ್‌ನಲ್ಲಿ ಶಿವಾನಂದ ವೃತ್ತ ಹಾಗೂ ಡಾರಾಜ್ ಕುಮಾರ್ ಪ್ರತಿಮೆ ಜಂಕ್ಷನ್​​ಗಳ ಬಳಿ ಸೀಟು ಬೆಲ್ಟ್ ಧರಿಸಿದ ನಿಯಮ ಉಲ್ಲಂಘಿಸಿರುವುದು ದಾಖಲಾಗಿದೆ.

ಜುಲೈ 9ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಕ್ಸ್‌ಪ್ರೆಸ್ ಕಾರಿಡಾರ್​ನಲ್ಲಿ ಮುಖ್ಯಮಂತ್ರಿ ಅವರಿದ್ದ ಕಾರು ಅತಿವೇಗದಿಂದ ಹೋಗುವ ಮೂಲಕ ನಿಯಮ ಉಲ್ಲಂಘಿಸಿರುವುದು ಐಟಿಎಂಎಸ್‌ನಲ್ಲಿ ದಾಖಲಾಗಿತ್ತು.

ಕಾರಿನ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಸಂಚಾರ ಪೊಲೀಸ್ ವಿಭಾಗದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

Continue Reading

Special

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಕ್ಷಣಗಣನೆ ಆರಂಭ

Published

on

KSP PC Recruitment 2025 : ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ, ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹಾಗೂ ಸಿವಿಲ್ ಕಾನ್ಸ್‌ಟೇಬಲ್‌ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಅನುಮತಿ ದೊರೆತಿದ್ದು ಇದರ ಮಾಹಿತಿ ಇಲ್ಲಿದೆ.

ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಂಬಂಧ ನಡೆಯುತ್ತಿರುವಂತಹ ನಿರ್ಬಂಧನೆಯಿಂದಾಗಿ ನೇಮಕಾತಿ ತಡವಾಗಿದ್ದು, ಶೀಘ್ರದಲ್ಲಿಯೇ ಸಾವಿರಾರು ಕಾನ್ಸ್‌ಟೇಬಲ್‌ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಕರ್ನಾಟಕ ಪೊಲೀಸ್ ಇಲಾಖೆಯು ತಿಳಿಸಿದೆ.

ಕೆಲವೇ ದಿನಗಳಲ್ಲಿ 2,000ಕ್ಕೂ ಅಧಿಕ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಕರ್ನಾಟಕ ಪೊಲೀಸ್ ಇಲಾಖೆಯು ಅಧಿಸೂಚನೆ ಹೊರಡಿಸಲಿದೆ.

ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಯ ಅರ್ಹತೆ ಮತ್ತು ವಿವಿಧ ಮಾಹಿತಿ :

ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೇವಲ ದ್ವಿತೀಯ ಪಿಯುಸಿ ಪಾಸ್ ಆಗಿದ್ದರೆ ಸಾಕು. ವಯೋಮಿತಿ ಅರ್ಹತೆ 18 ರಿಂದ 25 ವರ್ಷ ಇರಬೇಕು.

ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹೇಗೆ ನಡೆಯಲಿದೆ?

ನೇಮಕಾತಿಯ ಅಧಿಸೂಚನೆ ಹೊರಡಿಸಿದ ನಂತರ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಿ ಅದರಲ್ಲಿ ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳಿಗೆ, ದೈಹಿಕ ಸಾಮರ್ಥ್ಯ ಹಾಗೂ ಮೆಡಿಕಲ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಈ ನೇಮಕಾತಿಗೆ ಸಂಬಂಧಿಸಿದಂತೆ ಮುಂದಿನ ಅಪ್ಡೇಟ್‌ಗಳಿಗಾಗಿ ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.

Continue Reading

State

ಇಂದಿನ ಹವಾಮಾನ ಮುನ್ಸೂಚನೆ

Published

on

ಬೆಂಗಳೂರು: ಕರಾವಳಿಯ ಕಾಸರಗೋಡು ದ.ಕ ಉಡುಪಿ ಜಿಲ್ಲೆಗಳಾದ್ಯಂತ ನಿನ್ನೆ ಸಾಧಾರಣ ಮಳೆಯಾಗಿತ್ತು. ಮಲೆನಾಡು ದ. ಒಳನಾಡಿನಲ್ಲಿ ಸಾಮಾನ್ಯ ಮಳೆಯಾಗಿದ್ದು ಉತ್ತರ ಒಳನಾಡು ಮಳೆ ಕಡಿಮೆಯಾಗಿದೆ.

ಇವತ್ತಿನ ಮುನ್ಸೂಚನೆ ಪ್ರಕಾರ ಕಾಸರಗೋಡು ಮತ್ತು ದ.ಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಹಗಲು ಮೋಡ ಬಿಸಿಲಿನ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಸಂಜೆಯ ನಂತರ ರಾತ್ರಿ ಒಂದೆರಡು ಮಳೆಯಾಗಬಹುದು.ಉಡುಪಿ ಉ.ಕ ಜಿಲ್ಲೆಗಳಲ್ಲಿ ಮೋಡ – ಬಿಸಿಲಿನ ವಾತಾವರಣ ಇರಲಿದ್ದು ಕರಾವಳಿ ತೀರ ಪ್ರದೇಶಗಳಲ್ಲಿ ಮತ್ತು ಘಟ್ಟಪ್ರದೇಶಗಳಲ್ಲಿ ಸಂಜೆ – ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಳೆ ನಿಧಾನವಾಗಿ ಕಡಿಮೆ ಆಗುತ್ತಿದ್ದು ಕಾಸರಗೋಡು ದ.ಕ ಜಿಲ್ಲೆಗಳಲ್ಲಿ ಸೆ 7 ತನಕ ಆಗಾಗ ಮಳೆಯಾಗಲಿದ್ದು ಸೆಪ್ಟೆಂಬರ್. 8 ರಿಂದ ಮಳೆ ಬಹುತೇಕ ಕಡಿಮೆ ಆಗಬಹುದು.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇವತ್ತು ಮಳೆ ಕಡಿಮೆ ಆಗಲಿದ್ದು ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ 5-10mm ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಘಟ್ಟಪ್ರದೇಶಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮೋಡದ ಮುನ್ಸೂಚನೆ ಇದೆ. ಮೈಸೂರು ಚಾಮರಾಜನಗರ ಮಂಡ್ಯ ಚಿಕ್ಕಬಳ್ಳಾಪುರ ಬೆಂಗಳೂರು – ಗ್ರಾಮಾಂತರ ತುಮಕೂರು ಜಿಲ್ಲೆಗಳ ಕೆಲವೆಡೆ ತುಂತುರು – ಸಾಮಾನ್ಯ ಮಳೆಯಾಗಬಹುದು ನಾಳೆಯಿಂದ ಹಳೆ ಮೈಸೂರು ಪ್ರಾಂತ್ಯದ ಅಲ್ಲಲ್ಲಿ ಮುಂದುವರೆಯಲಿದೆ.

ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆ ಆಗಿದ್ದು ಇವತ್ತು ಬಿಸಿಲಿನ ವಾತಾವರಣ ಇರಲಿದ್ದು ಮಳೆಯ ಮುನ್ಸೂಚನೆ ಇಲ್ಲ ಒಣಹವೆ ಮುಂದುವರೆಯಬಹುದು.

ಮಧ್ಯಪ್ರದೇಶದಲ್ಲಿರುವ ಲೋ ಪ್ರೆಷರ್ ಗಾಳಿಯು ತಿರುಗುವಿಕೆಯು ಸೆ 7 ಕ್ಕೆ ಗುಜರಾತ್ ಮುಖಾಂತರ ಹೋಗಲಿದ್ದು ಮುಂದಿನ 3 ದಿನ ಗುಜರಾತ್ ಮಹಾರಾಷ್ಟ್ರ ರಾಜಸ್ತಾನ ಮಧ್ಯಪ್ರದೇಶಗಳಲ್ಲಿ ಅಧಿಕ ಮಳೆಯಾಗಬಹುದು. ಸೆ.. 8 ರಿಂದ ಭಾರತದ ಪಶ್ಚಿಮ ಕರಾವಳಿಯಲ್ಲಿ ಮಳೆ ಕಡಿಮೆ ಆಗಲಿದೆ.
ಸೆ .12 ಬಂಗಾಳಕೊಲ್ಲಿಯಲ್ಲಿ ವಾಯುಭಾರಕುಸಿತದ ಮುನ್ಸೂಚನೆ ಇರುವ ಕಾರಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಬಹುದು.

Continue Reading

Trending

error: Content is protected !!