Connect with us

Uncategorized

ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರ ಕಾರ್ಯ ವೈಖರಿಗೆ ಸೋಶಿಯಲ್ ಮೀಡಿಯಾದಲ್ಲಿ ಈಗ‌ ಭಾರೀ ಮೆಚ್ಚುಗೆ ವ್ಯಕ್ತ

Published

on

ಮೈಸೂರು: ನೂತನ ಜಿಲ್ಲಾಧಿಕಾರಿ ಕಚೇರಿಗೆ ಅಹವಾಲು ಹೊತ್ತು ತೆರಳುವ ಸಾರ್ವಜನಿಕರಿಗೆ ಡಿಸಿ ರಾಜೇಂದ್ರ ಅವರ ಕಾರ್ಯವೈಖರಿಯ ಅನುಭವವಾಗುತ್ತಿದೆ.

ಪ್ರತಿನಿತ್ಯ ಜಿಲ್ಲಾಧಿಕಾರಿ ಕಚೇರಿಗೆ ಅಹವಾಲು ಸಲ್ಲಿಸಲು ತೆರಳುವ ಸಾರ್ವಜನಿಕರು ಡಿಸಿ ಅವರನ್ನು ನೋಡಲು ಹೊರಗೆ ಕಚೇರಿ ಬಳಿ ಕಾದು ನಿಲ್ಲುತ್ತಾರೆ. ಇದನ್ನು ಗಮನಿಸಿದ ಡಿಸಿ ಕೆ.ವಿ. ರಾಜೇಂದ್ರ ಅವರು ಸ್ವತಃ ಕಚೇರಿಯಿಂದ ಹೊರಬಂದು ಸಾರ್ವಜನಿಕರು ನಿಂತಿರುವ ಕಡೆಯೇ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದಾರೆ.

ಡಿಸಿಯವರ ಈ ಬಗೆಯ ಕಾರ್ಯ ವೈಖರಿಗೆ ಜನರಿಂದ‌ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Continue Reading
Click to comment

Leave a Reply

Your email address will not be published. Required fields are marked *

Uncategorized

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿ -ಕೊಡಗು ಎಸ್ ಎಸ್ ಎಫ್ ಖಂಡನೆ

Published

on

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯನ್ನು ಕೊಡಗುಜಿಲ್ಲಾ ಎಸ್ ಎಸ್ ಎಫ್ ಸಮಿತಿ ತೀವ್ರವಾಗಿ ಖಂಡಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಜಿಲ್ಲಾ ಎಸ್ ಎಸ್ ಎಫ್ ಅಧ್ಯಕ್ಷ ಕಮರುದ್ದೀನ್ ಅನ್ವಾರಿಸ ಸಖಾಫಿ ಸರ್ವಧರ್ಮಗಳ ನೆಲೆಬೀಡಾಗಿದೆ ನಮ್ಮ ಭಾರತ ಪರಸ್ಪರಪ್ರೀತಿ,ವಿಶ್ವಾಸ,ಸಹಳ್ವೆಗೆ ಮತ್ತು ಐಕ್ಯತೆಗೆ ಹೆಸರಾಗಿರುವ ಭವ್ಯ ಭಾರತ ದೇಶದಲ್ಲಿ ಕೆಲವೊಂದು ದುಷ್ಟ ಶಕ್ತಿಗಳು ಕೋಮು ಗಲಭೆಗಳನ್ನು ಸೃಷ್ಟಿಸಿ ಈ ದೇಶದ ಐಕ್ಯತೆಗೆ ಧಕ್ಕೆ ಬರುವಂತಹ ಕೃತ್ಯಗಳನ್ನು ನಡೆಸುತ್ತಿರುವುದು ನಿಜಕ್ಕೂ ಖೇದಕರವಾಗಿದೆ. ಇದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆಯಾಗಿದೆ ಪಹಲ್ಗಾಮ್ ದಾಳಿ.
ಈ ಅಮಾನವೀಯ ಕೃತ್ಯವನ್ನು ಎಸ್ಎಸ್ಎಫ್ ಕೊಡಗು ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತೇವೆ.
ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ವಶಕ್ತನು ಸಹನೆಯನ್ನು ಕರುಣಿಸಲಿ, ದಾಳಿ ನಡೆಸಿದವರ ಮೇಲೆ ಸೂಕ್ತ ತನಿಖೆ ನಡೆಸಿ ಅರ್ಹ ಶಿಕ್ಷೆ ಜಾರಿಗೊಳಿಸಬೇಕೆಂದು ಜಿಲ್ಲಾಧ್ಯಕ್ಷರಾದ ಕಮರುದ್ದೀನ್ ಅನ್ವಾರಿ ಸಖಾಫಿ ಕೊಡಗರಹಳ್ಳಿ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Continue Reading

Uncategorized

ಭಾರತ-ಪಾಕ್‌ ಯುದ್ಧದ ಬಗ್ಗೆ ಸಿಎಂ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ

Published

on

ಬೆಂಗಳೂರು:ಕೇಂದ್ರ ಸರ್ಕಾರ, ಪಾಕಿಸ್ತಾನೊಂದಿಗೆ ಯುದ್ಧ ಮಾಡುವ ಅಗತ್ಯವಿಲ್ಲ. ಬದಲಿಗೆ ಪಾಕ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ವಿರುದ್ಧ ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, 40 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಇರುವ, ಎರಡೆರಡು ಬಾರಿ ಮುಖ್ಯಮಂತ್ರಿ ಆಗಿರುವ ಸಿಎಂ ಸಿದ್ದರಾಮಯ್ಯನವರಿಗೆ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಇಲ್ಲದಿರುವುದು ಕರ್ನಾಟಕದ ದೌರ್ಭಾಗ್ಯ ಎಂದು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ನವರೇ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಇಸ್ಲಾಮಿಕ್ ಉಗ್ರರ ದಾಳಿ ಆಗಿದೆ. ಗಡಿಯಾಚೆಗಿನ ನುಸುಳುಕೋರರು ನಡೆಸಿರುವ ಈ ಕೃತ್ಯ ಈಗ ಕೇವಲ ರಾಷ್ಟ್ರೀಯ ಭದ್ರತೆಯ ಪ್ರಶ್ನೆಯಾಗಿ ಉಳಿದಿಲ್ಲ. ಇದು ಭಾರತದ ಸಾರ್ವಭೌಮತೆಗೆ, ಘನತೆಗೆ ಎಸೆದಿರುವ ಸವಾಲು. ಇಂತಹ ಸನ್ನಿವೇಶದಲ್ಲಿ ಇಡೀ ದೇಶವೇ ಪಕ್ಷಾತೀತವಾಗಿ ಒಂದು ದನಿಯಾಗಿರಬೇಕು. ಇದಕ್ಕಾಗಿಯೇ ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ನಡೆಸಿ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದೆ. ನಿಮ್ಮದೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕತ್ವ ಸೇರಿದಂತೆ ಎಲ್ಲ ಪಕ್ಷಗಳೂ ಸರ್ವಾನುಮತದಿಂದ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಬೆಂಬಲಿಸುತ್ತೇವೆಂದು ಹೇಳಿದೆ ಎಂದಿದ್ದಾರೆ.

ನಮ್ಮ ದೇಶದಲ್ಲಿ ವೃತ್ತಿಪರ ಸೇನಾಪಡೆಗಳಿವೆ. ಯಾವ ಸಂದರ್ಭದಲ್ಲಿ ಎಂತಹ ಕ್ರಮ ಕೈಗೊಳ್ಳಬೇಕು ಎನ್ನುವ ಪರಿಣಿತಿ, ಅನುಭವ ನಮ್ಮ ಸೇನಾಪಡೆಗಳಿವೆ. ಈ ವಿಷಯದಲ್ಲಿ ನಿಮ್ಮ ಸಲಹೆಯ ಅಗತ್ಯವೂ ಇಲ್ಲ, ಸಲಹೆ ನೀಡುವ ಯಾವುದೇ ಅರ್ಹತೆಯೂ ತಮಗಿಲ್ಲ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಾಂಗ್ಲಾದೇಶಿ, ರೋಹಿಂಗ್ಯ, ಪಾಕಿಸ್ತಾನಿ ಅಕ್ರಮ ವಲಸಿಗರು ರಾಜಾರೋಷವಾಗಿ ತಿರುಗಾಡಿಕೊಂಡಿದ್ದಾರೆ. ಮೊದಲು ಅವರನ್ನು ಗುರುತಿಸಿ, ಗಡೀಪಾರು ಮಾಡಿ ಕನ್ನಡಿಗರ ಸುರಕ್ಷತೆ ಕಾಪಾಡುವ ಕಡೆ ಗಮನ ಕೊಡಿ. ಸುಮ್ಮನೆ ತಮ್ಮದಲ್ಲದ ವಿಷಯದಲ್ಲಿ ಅನಾವಶ್ಯಕವಾಗಿ ಮೂಗು ತೂರಿಸಬೇಡಿ ಎಂದು ತಿರುಗೇಟು ನೀಡಿದ್ದಾರೆ.

Continue Reading

Kodagu

ಮುದ್ದಂಡ ಹಾಕಿ – ನೆಲ್ಲಮಕ್ಕಡ, ಕೂತಂಡ, ಪುದಿಯೊಕ್ಕಡ, ಕರವಂಡ ಮುಂದಿನ ಹಂತಕ್ಕೆ

Published

on

ಮಡಿಕೇರಿ : ನಗರದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮುದ್ದಂಡ ಹಾಕಿ ಕಪ್ನ ಬುಧವಾರ ನಡೆದ ಪ್ರೀ-ಕ್ವಾರ್ಟರ್ ಫೈನಲ್ ಪಂದ್ಯಾವಳಿಯಲ್ಲಿ ನೆಲ್ಲಮಕ್ಕಡ, ಕೂತಂಡ, ಪುದಿಯೊಕ್ಕಡ, ಕರವಂಡ ತಂಡಗಳು ಮುಂದಿನ ಹಂತಕ್ಕೆ ಲಗ್ಗೆ ಇಟ್ಟಿದೆ.

ನೆಲ್ಲಮಕ್ಕಡ ಮತ್ತು ಕೋಳೇರ ನಡುವಿನ ಪಂದ್ಯದಲ್ಲಿ ೪-೦ ಗೋಲುಗಳ ಅಂತರದಲ್ಲಿ ನೆಲ್ಲಮಕ್ಕಡ ಗೆಲುವು ದಾಖಲಿಸಿತು. ನೆಲ್ಲಮಕ್ಕಡ ಪರ ಸಚಿನ್, ರಾಕೇಶ್ ಸುಬ್ರಮಣಿ, ರೋಶನ್ ಬೋಪಣ್ಣ ಹಾಗೂ ಅಯ್ಯಪ್ಪ ತಲಾ ೧ ಗೋಲು ದಾಖಲಿಸಿದರು. ಕೋಳೇರ ನಿಶಿಕ್ ನಾಚಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಕೂತಂಡ ಮತ್ತು ಅಮ್ಮಣಿಚಂಡ ನಡುವಿನ ಪಂದ್ಯದಲ್ಲಿ ೫-೦ ಗೋಲುಗಳ ಅಂತರದಲ್ಲಿ ಕೂತಂಡ ಜಯ ಸಾಧಿಸಿತು. ಕೂತಂಡ ಪರ ಬೋಪಣ್ಣ ೪ ಗೋಲು ದಾಖಲಿಸಿ ಗಮನ ಸೆಳೆದರೆ, ಸುರೇಶ್ ಅಪ್ಪಯ್ಯ ೧ ಗೋಲು ಬಾರಿಸಿದರು. ಅಮ್ಮಣಿಚಂಡ ಯಶ್ವಂತ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ನಾಳಿಯಂಡ ಮತ್ತು ಪುದಿಯೊಕ್ಕಡ ನಡುವಿನ ಪಂದ್ಯದಲ್ಲಿ ೨-೧ ಗೋಲುಗಳ ಅಂತರದಲ್ಲಿ ಪುದಿಯೊಕ್ಕಡ ಜಯ ಸಾಧಿಸಿತು. ಪುದಿಯೊಕ್ಕಡ ಪರ ಮಿಥನ್ ಪೊನ್ನಪ್ಪ ಹಾಗೂ ವಿಪನ್ ಸೋಮಯ್ಯ ತಲಾ ೧ ಗೋಲು ದಾಖಲಿಸಿದರು. ನಾಳಿಯಂಡ ಪರ ಚರಣ್ ಚಿಣ್ಣಪ್ಪ ೧ ಗೋಲು ಬಾರಿಸಿದರು. ನಾಳಿಯಂಡ ರತ್ನ ಬೆಳ್ಯಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಕರವಂಡ ಮತ್ತು ಕಾಂಡಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ತಲಾ ೨ ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ ೨-೧ ಗೋಲುಗಳ ಅಂತರದಲ್ಲಿ ಕರವಂಡ ಜಯ ಸಾಧಿಸಿತು. ಕರವಂಡ ಪರ ಕೃತನ್ ಅಪ್ಪಚ್ಚು ೨ ಗೋಲು ದಾಖಲಿಸಿದರು. ಕಾಂಡಂಡ ಪರ ಆದಿತ್ಯ ಅಪ್ಪಣ್ಣ ಹಾಗೂ ಕೌಶಿಕ್ ಕುಶಾಲಪ್ಪ ತಲಾ ೧ ಗೋಲು ಬಾರಿಸಿದರು. ಕಾಂಡಂಡ ಕೌಶಿಕ್ ಕುಶಾಲಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Continue Reading

Trending

error: Content is protected !!