Connect with us

Hassan

ಜ.೧೬ ರಂದು ಗೌರಿಕೊಪ್ಪಲು ಬಳಿ ಶ್ರೀದೇವಿ ಮಹಾತ್ಮೆ ಪೌರಾಣಿಕ ನಾಟಕ ಪ್ರದರ್ಶನ ಬಿ.ಟಿ. ಕುಬೇರ

Published

on

 

ಹಾಸನ: ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ನಗರದ ಗೌರಿಕೊಪ್ಪಲು ಬಳಿ ಇರುವ ಅರಲಿ ಮರದ ವೃತ್ತದ ಹತ್ತಿರ ಜನವರಿ ೧೬ರ ಮಂಗಳವಾರದಂದು ಶ್ರೀದೇವಿ ಮಹಾತ್ಮೆ ಅಥವ ಮಹಿಷಾಸುರ ಮರ್ಧಿನಿ ಎನ್ನುವ ಭಕ್ತಿ ಪ್ರಧಾನ ಪೌರಾಣಿಕ ನಾಟಕವನ್ನು ಹಮ್ಮಿಕೊಂಡಿರುವುದಾಗಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಹಾಗೂ ಶ್ರೀ ದೇವಿ ಆದಿಶಕ್ತಿ ಕಲಾವಿದರ ಟ್ರಸ್ಟ್ ಕಾರ್ಯದರ್ಶಿ ಬಿ.ಟಿ. ಕುಬೇರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಶ್ರೀ ದೇವಿ ಆದಿಶಕ್ತಿ ಕಲಾವಿದರ ಟ್ರಸ್ಟ್ ಗೌರಿಕೊಪ್ಪಲು ರಿಂಗ್ ರಸ್ತೆ ಇವರವತಿಯಿಂದ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಇದೆ ಮಂಗಳವಾರದಂದು ರಾತ್ರಿ ೭:೩೦ಕ್ಕೆ ಅರಳಿ ಮರದ ವೃತ್ತ ಹತ್ತಿರ ಗೌರಿಕೊಪ್ಪಲಿನಲ್ಲಿ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಕಲಾವಿದರಾದ ಜೆ.ಪಿ. ಶೇಖರ್ ನೇತೃತ್ವದಲ್ಲಿ ಡಿ.ಸಿ. ರಾಜು ಅವರ ನಿರ್ದೇಶನದಲ್ಲಿ ಶ್ರಿ ಸಿದ್ದಲಿಂಗೇಶ್ವರ ಡ್ರಾಮಾ ಸೀನರಿ ಬಂದೂರು ಅರಸೀಕೆರೆ ಇವರ ರಂಗ ಸಜ್ಜಿಕೆಯಲ್ಲಿ ಶ್ರೀದೇವಿ ಮಹಾತ್ಮೆ ಅಥವ ಮಹಿಷಾಸುರ ಮರ್ಧಿನಿ ಎನ್ನುವ ಭಕ್ತಿ ಪ್ರಧಾನ ಪೌರಾಣಿಕ ನಾಟಕ ಏರ್ಪಡಿಸಲಾಗಿದೆ. ನಾಟಕಕ್ಕೆ ಮೊದಲು ಶ್ರೀ ಚಾಮುಂಡೇಶ್ವರಿ ಅಮ್ಮನವರ ಕಳಸವನ್ನು ಮದ್ಯಾಹ್ನ ೧೨ ಗಂಟೆಗೆ ಗೌರಿಕೊಪ್ಪಲು ಹಾಗೂ ವಿವೇಕನಗರ ಪ್ರಮುಖ ಬೀದಿಗಳಲ್ಲಿ ಜಾನಪದ ಕಲಾತಂಡದೊಡನೆ ತರಲಾಗುವುದು ಎಂದರು. ನಾಟಕ ಪ್ರದರ್ಶನದ ಉದ್ಘಾಟನೆಯನ್ನು ಮಾಜಿ ಸಚಿವ ಹೆಚ್.ಡಿ. ರೇವಣ್ಣ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ವಹಿಸುವರು. ಮುಖ್ಯ ಅತಿಥಿಯಾಗಿ ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಮಾಜಿ ಶಾಸಕ ಪ್ರೀತಂ ಜೆ. ಗೌಡ, ಹೆಚ್.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ನಾಗರಾಜು, ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ. ಹುಡಾ ಮಾಜಿ ಅಧ್ಯಕ್ಷ ಕೆ.ಎಂ. ರಾಜೇಗೌಡ ಇತರರು ಪಾಲ್ಗೊಳ್ಳುವುದಾಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀ ದೇವಿ ಆದಿಶಕ್ತಿ ಕಲಾವಿದರ ಟ್ರಸ್ಟ್ ನಿರ್ದೇಶಕ ಸ್ವಾಮೀಗೌಡ, ಭಾನುಕುಮಾರ್ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Published

on

ಹಾಸನ : ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ

ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ತಾಲ್ಲೂಕಿನ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಣೆ

ಡಿಡಿಪಿಯು ಮಹಾಲಿಂಗಯ್ಯ ಆದೇಶ

ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಉಳಿದ ತಾಲ್ಲೂಕುಗಳಲ್ಲಿ ಹೆಚ್ಚಿನ ಮಳೆಯಾದರೆ ರಜೆ ನೀಡುವ ಬಗ್ಗೆ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಚನೆ

ಡಿಸಿ ಅನುಮತಿ ಪಡೆದು ರಜೆ ಘೋಷಣೆ ಮಾಡಿದ ಡಿಡಿಪಿಯು

Continue Reading

Hassan

ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

Published

on

ಹಾಸನ : ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

ರಾಜೇಶ್ (9) ಸಾವನ್ನಪ್ಪಿದ ಬಾಲಕ

ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಮಾಡಾಳು ಗ್ರಾಮದಲ್ಲಿ ಘಟನೆ

ಗ್ರಾಮದ ಗೌರಮ್ಮ-ನಾಗರಾಜ ದಂಪತಿ ಪುತ್ರ ರಾಜೇಶ್

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮೂರನೇ ತರಗತಿ ವ್ಯಾಸಂಗ ಮಾಡುತ್ತಿದ್ದ ರಾಜೇಶ್

ನಾಲ್ಕು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್

ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಶ್

ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಹಿಮ್ಸ್‌ಗೆ ದಾಖಲಾಗಿದ್ದ ರಾಜೇಶ್

ಚಿಕಿತ್ಸೆ ಫಲಕಾರಿಯಾಗದೆ ಇಂದು ರಾಜೇಶ್ ಸಾವು

Continue Reading

Hassan

2 ತಿಂಗಳ ಮಗುವಿಗೆ ಅನಾರೋಗ್ಯ ಬೇಸೆತ್ತ ಅಪ್ಪ ಆತ್ಮಹತ್ಯೆಗೆ ಯತ್ನ

Published

on

ಹಾಸನ: ಮಗುವಿನ ಆರೋಗ್ಯವು ಸುಧಾರಿಸದೇ ದಿನೆ ದಿನೆ ಹೆಚ್ಚಾದ ಹಿನ್ನಲೆಯಲ್ಲಿ ಮನಸ್ಸಿಗೆ ನೋವುಂಟು ಮಾಡಿದ ಹಿನ್ನಲೆಯಲ್ಲಿ ಏನು ಮಾಡುವುದು ಎಂಬುದು ತೋಚದೇ ಹಾಸನ ಜಿಲ್ಲಾ ಸರಕಾರಿ ಆಸ್ಪತ್ರೆ ಕಟ್ಟಡದ ಮೇಲೆ ಹೋಗಿ ತುದಿಯಲ್ಲಿ ನಿಂತು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿ ಕೊನೆಗೆ ಆಸ್ಪತ್ರೆ ಸಿಬ್ಬಂದಿಗಳು ಆತನ ಮನವೊಲಿಸುವಲ್ಲಿ ಯಶಸ್ವಿಯಾಗಿ ಬದುಕಿಸಿದ ಘಟನೆ ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಬೇಲೂರು ತಾಲ್ಲೂಕಿನ ಹಳೆಬೀಡು ಸಮೀಪದ ಬಸವರಾಯನಪುರ ಗ್ರಾಮದ ಗಂಗಸ್ವಾಮಿ ಎಂಬುವರ ಎರಡು ತಿಂಗಳ ಮಗುವಿನ ಅನಾರೋಗ್ಯವು ಹೆಚ್ಚಾಗುತ್ತಿರುವ ಬಗ್ಗೆ ತಿಳಿದು ಬೇಸರದಿಂದ ಆತ್ಮಹತ್ಯೆ ಯತ್ನಿಸಿರುವುದಾಗಿ ಹೇಳಲಾಗಿದೆ. ಮಗುವಿನ ಅನಾರೋಗ್ಯದಿಂದ ತಂದೆ ಮನನೊಂದಿದ್ದು, ಹಾಸನದ ಜಿಲ್ಲಾ ಹಿಮ್ಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ಮೇಲೇರಿ ಸಾಯುವ ಹೈಡ್ರಾಮ ಮಾಡಲಾಗಿದೆ. ಕಟ್ಟಡದ ಐದನೇ ಮಹಡಿಯ ತುದಿಯಲ್ಲಿ ನಿಂತು ಆತ್ಮಹತ್ಯೆ ಬೆದರಿಕೆ ಹೊಡ್ಡಿದ್ದು,

ಮಗುವಿನ ಅರೋಗ್ಯ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಈ ಆತ್ಮಹತ್ಯೆ ಯತ್ನ ಮಾಡಲಾಗಿದೆ ಎನ್ನಲಾಗಿದೆ. ಆಸ್ಪತ್ರೆ ಸಿಬ್ಬಂದಿಯ ಸಮಯ ಪ್ರಜ್ಞೆ ಯಿಂದ ಅನಾಹುತ ತಪ್ಪಿದಂತಾಗಿದೆ. ಗಂಗಸ್ವಾಮಿಯನ್ನ ಆಸ್ಪತ್ರೆ ಕಟ್ಟಡದಿಂದ ಕೆಳಗಿಳಿಸಿ ನಂತರ ಪೊಲಿಸ್ ಠಾಣೆಗೆ ಆಸ್ಪತ್ರೆ ಸಿಬ್ಬಂದಿಗಳು ಕರೆದುಕೊಂಡು ಹೋಗಿದ್ದಾರೆ. ಈ ದೃಶ್ಯವನ್ನು ರಸ್ತೆಯಲ್ಲಿ ಸಾರ್ವಜನಿಕರು ನೋಡಿದ್ದು, ವಿಡಿಯೋ ಸೆರೆ ಹಿಡಿದಿದ್ದಾರೆ.

Continue Reading

Trending

error: Content is protected !!