Hassan
ಜ.೨೮ ರಂದು ಕಲಾಭವನದಲ್ಲಿ ಯುವ ಬಿಗ್ ಶೋ
ಹಾಸನ: ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜನವರಿ ೨೮ ರಂದು ಯುವ ಬಿಗ್ ಶೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿ ತಂಡಗಳಿಗೆ ೨ ಸಾವಿರ ಪ್ರವೇಶ ಶುಲ್ಕವನ್ನು ವಿಧಿಸಲಾಗಿದೆ ಎಂದು ಬಿಗ್ ಶೋ ಕಲಾತಂಡದ ಶಿವಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಸ್ವಾಮಿ ವಿವೇಕಾನಂದರು ಹೇಳಿರುವ ಗುರು ಮುಟ್ಟುವವರೆಗೂ ಪ್ರಯತ್ನದ ಶೋ ಆಗಿದೆ. ನಮ್ಮ ದೇಶ ನಾಡು ನುಡಿಯ ಬಗ್ಗೆ ನೃತ್ಯ, ಗಾಯನ, ನಾಟಕ ತಂಡದಿಂದ ೬ ನಿಮಿಷಗಳ ಕಾಲ ಎರಡು ಕಾರ್ಯಕ್ರಮಕ್ಕೆ ಅವಕಾಶ ಇರುತ್ತದೆ. ಒಂದು ತಂಡಕ್ಕೆ ಎರಡು ಸಾವಿರ ಫೀಸ್ ಕಟ್ಟಬೇಕು. ಉತ್ತಮ ಶೋ ನೋಡಿದ ತಂಡಕ್ಕೆ ಮೊದಲ ಬಹುಮಾನವಾಗಿ ೨೦ ಸಾವಿರ, ಎರಡನೇ ಬಹುಮಾನವಾಗಿ ೧೦ ಸಾವಿರ ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು. ಶಾಲಾ ಕಾಲೇಜಿನಿಂದ ನೃತ್ಯ, ಗಾಯನ, ನಾಟಕ ಕಲೆಯುಳ್ಳ ವಿದ್ಯಾರ್ಥಿಗಳು ಎರಡು ಕಾರ್ಯಕ್ರಮ ಪ್ರದರ್ಶಿಸಬಹುದು. ಒಂದು ತಂಡದಿಂದ ೮ ವಿದ್ಯಾರ್ಥಿಗಳು ಇರಬೇಕು. ಗಾಯನಕ್ಕೆ ೪ ವಿದ್ಯಾರ್ಥಿಗಳು, ಕಾರ್ಯಕ್ರಮಗಳ ಸಂಪೂರ್ಣ ಪ್ರದರ್ಶನವನ್ನು ಗಮನಿಸಿ, ವೀಕ್ಷಿಸಿ ಸೋಲು ಗೆಲುವು ನಿರ್ಧರಿಸಲಾಗುವುದು ಎಂದರು. ಕಾರ್ಯಕ್ರಮ ವೀಕ್ಷಣೆ ಮಾಡಲು ಉಚಿತ ಪ್ರವೇಶವಿದೆ. ಹೆಚ್ಚಿನ ವಿವರಗಳಿಗೆ ಸಿವ ೮೦೭೩೩೧೬೮೦೬ ಗೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಗ್ ಶೋ ಕಲಾತಂಡದ ಸ್ಯಾನಿ, ಮಧು, ನವನಿತ್, ಸುಮಂತ್ ಇತರರು ಉಪಸ್ಥಿತರಿದ್ದರು.
Hassan
ಕಾಡಿನ ಕೊಳಲು ಕುವೆಂಪು ಗೀತೆಗಳ ನೃತ್ಯ ರೂಪಕ ಸಮಾರಂಭ
ಹಾಸನ: ಸರ್ವಗುಣ ಯೋಗಿ ಎನಿಸಿಕೊಂಡಿರುವ ರಾಷ್ಟ್ರಕವಿ ಕುವೆಂಪು ಅವರ ಬರಹವನ್ನು ಯುವಕರು ಓದುವ ಮೂಲಕ ಭಾರತೀಯ ಆಧ್ಯಾತಿಕ, ಸಾಂಸ್ಕೃತಿಕ ಪರಂಪರೆಯನ್ನು ಅರಿಯಬೇಕೆಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಸಲಹೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ, ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ, ರೋಟರಿ ಕ್ಲಬ್ ಆಫ್ ಹಾಸನ್ ಟೈಗರ್, ಅಮೋಘ ಸುದ್ದಿ ವಾಹಿನಿ ಸಹಯೋಗದಲ್ಲಿ ಬೆಂಗಳೂರಿನ ಮನೋಜ್ಞ ನೃತ್ಯಕಲಾ ಅಕಾಡೆಮಿ ವತಿಯಿಂದ ನಗರದ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಹಮಿಕೊಂಡಿದ್ದ ಕಾಡಿನ ಕೊಳಲು ಕುವೆಂಪು ಗೀತೆಗಳ ನೃತ್ಯ ರೂಪಕ ಸಮಾರಂಭದಲ್ಲಿ ಮಾತನಾಡಿದರು.

ಕುವೆಂಪು ಅವರನ್ನು ಎಲ್ಲರಿಗೂ ಪರಿಚಯಿಸಬೇಕಿದೆ. ಸಾಂಸ್ಕೃತಿಕ, ಆಧ್ಯಾತಿಕವಾಗಿ ಭಾರತ ಸಾಕಷ್ಟು ಖ್ಯಾತಿ ಹೊಂದಿದೆ. ಪುರಾತನ ಪರಂಪರೆ ಬಗ್ಗೆ ವಿಶ್ವವೇ ಅಚ್ಚರಿ ವ್ಯಕ್ತಪಡಿಸುತ್ತದೆ. ಅಂತಹ ಶಕ್ತಿಯನ್ನು ಸಾಹಿತ್ಯದ ಮೂಲಕ ಪರಿಚಯಿಸಿಕೊಟ್ಟವರು ರಾಷ್ಟ್ರಕವಿ ಕುವೆಂಪು ಎಂದರು.
ಮನುಷ್ಯ ಚಿಂತನೆಗಲ್ಲಿ ಭಾವ ಹಾಗು ಅಭಾವ ಮುಖ್ಯವಾಗುತ್ತದೆ. ಯಾವುದನ್ನೇ ಆಗಲಿ ಭಾವದಿಂದ ನೋಡಬೇಕೆ ಹೊರತು ಅಭಾವದಿಂದ ಅಲ್ಲ. ಋಷಿಗಳಿಗೆ ನೋಡಿದ್ದೆಲ್ಲ ಭಾವವಾಗಿ ಕಾಣುತ್ತದೆ. ಆದ್ದರಿಂದಲೇ ಅವರು ಅಸಾಧ್ಯವಾದುದನ್ನು ಸಾಧಿಸಿದ್ದಾರೆಂದರು.
ಭಾವನೆಗಳು ಬದಲಾದರೆ ಮನುಷ್ಯರಾಗಲು ಸಾಧ್ಯವಿಲ್ಲ. ಮನುಷ್ಯ ಭಾವನೆಗಳನ್ನು ಹೊಂದಬೇಕು. ವ್ಯಕ್ತಿಯ ಚಿಂತನಾ ಲಹರಿ ಆಳಕ್ಕಿಳಿಯಬೇಕೆಂದರೆ ಕುವೆಂಪು ಸಾಹಿತ್ಯ ಓದಬೇಕು. ಮರಣ ಇಲ್ಲದ ವಸ್ತು ಎಂದರೆ ಪುಸ್ತಕ ಮಾತ್ರ. ಭಗವಂತ ಕೊಟ್ಟ ಸುಂದರ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು. ಸತ್ಕಾರ್ಯಗಳಲ್ಲಿ ನಮನ್ನು ನಾವು ತೊಡಗಿಸಿಕೊಳ್ಳಬೇಕೆಂದರು.

ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ, ಸಾಹಿತಿ ಪ್ರೊ. ಡಾ. ಜಯಪ್ರಕಾಶ್ ಗೌಡ ಅವರು ಮಾತನಾಡಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಭೈರವೈಕ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ನಾಡಿನ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸಿದ್ದಾರೆ. ಸಾಹಿತ್ಯ, ಆಧ್ಯಾತ ಹಾಗು ವೈಜ್ಞಾನಿಕತೆಗೆ ಪ್ರೋತ್ಸಾಹ ನೀಡಿದ್ದರೆಂದರು.
ಕುವೆಂಪು ಅವರನ್ನು ನೃತ್ಯದ ಮೂಲಕ ಅರಿಯಬೇಕೆಂದು ಹಾಸನದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ. ಪ್ರೌಢ ಶಾಲಾ ಹಂತದಿಂದಲೇ ನೃತ್ಯದ ಮೂಲಕ ಗಮನ ಸೆಳೆದ ಡಾ. ಮಾನಸಾ ಅವರು ಬಿಇ ಪದವಿ ಪಡೆದು ಪಿಹೆಚ್.ಡಿ. ಕೂಡ ಮಾಡಿದ್ದಾರೆ. ರಾಜ್ಯ ಮಾತ್ರವಲ್ಲದೆ ಅನೇಕ ಕಡೆ ನೃತ್ಯ ಕಾರ್ಯಕ್ರಮಗಳ ಮೂಲಕ ಕುವೆಂಪು ಅವರನ್ನು ರಾಷ್ಟ್ರಕ್ಕೆ ಪರಿಚಯಿಸುತ್ತಿದ್ದಾರೆಂದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜೆ.ಆರ್.ಕೆಂಚೇಗೌಡ, ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ ಶಿವರಾಮೇಗೌಡ ಮಾತನಾಡಿದರು.

ವಿಜಯ ಸ್ಕೂಲ್‌ನ ತಾರಾ ಎಸ್. ಸ್ವಾಮಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಾಗೂರು ಕೃಷ್ಣೇಗೌಡ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ, ನಗರಸಭೆ ಮಾಜಿ ಅಧ್ಯಕ್ಷ ಡಾ. ಹೆಚ್.ಎಸ್.ಅನಿಲ್ ಕುಮಾರ್, ರೋಟರಿ ಕ್ಲಬ್ ಆಫ್ ಹಾಸನ್ ಟೈಗರ್ ಅಧ್ಯಕ್ಷ ನಿಶ್ಚಯ್ ಧನಪಾಲ್ ಜೈನ್, ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ರಘು, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು ಮತ್ತಿತರರಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹೆಚ್.ಬಿ.ಮದನಗೌಡ ಸ್ವಾಗತಿಸಿದರು.
Hassan
ಕೃಷಿ ಸಾಲವನ್ನು ತೀರಿಸಲಾಗದೆ ರೈತನೋರ್ವ ಆತ್ಮ*ತ್ಯೆ
ಬೇಲೂರು : ಕೃಷಿ ಸಾಲವನ್ನು ತೀರಿಸಲಾಗದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಲೂರು ತಾಲೂಕಿನಲ್ಲಿ ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಮೇಶ್ ಆತ್ಮಹತ್ಯೆ ಮಾಡಿಕೊಂಡ ರೈತ ಬೇಲೂರು ತಾಲೂಕಿನ ಹಳೇಬೀಡುಸೋ ಸಮೀಪದ ಗೋಣಿ ಸೋಮೇನಹಳ್ಳಿ ಗ್ರಾಮದ ರೈತ. ಕಳೆದ ಹತ್ತು ವರ್ಷಗಳ ಹಿಂದೆ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕುಗಳಲ್ಲಿ ಕೃಷಿಗಾಗಿ ಮಾಡಿ ಕೊಂಡಿದ್ದ ಸಾಲವನ್ನ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕಿನಲ್ಲಿ ಸಾಲ ಮಾಡಿ ಹಣದಿಂದ ಕೃಷಿ ಚಟುವಟಿಕೆ ಮಾಡಿದ್ದು ಅತಿವೃಷ್ಟಿ ಮತ್ತು ಅನಾವೃಷ್ಟಿಗಳ ನಡುವೆ, ಸರಿಯಾದ ಬೆಂಬಲ ಬೆಲೆ ಸಿಗದೇ ಹಿನ್ನೆಲೆ, ನಷ್ಟವನ್ನ ಅನುಭವಿಸಿತು ಬ್ಯಾಂಕ್ ಮತ್ತು ಕೈ ಸಾಲ ಸೇರಿಸುಮಾರು 20 ಲಕ್ಷದ ತನಕ ಸಾಲ ಮಾಡಿದ್ದ ಎನ್ನಲಾಗಿದೆ.

ಮನೆ ಕೆನರಾ ಬ್ಯಾಂಕ್ ಸಿಬ್ಬಂದಿಗಳು ಮನೆ ಜಪ್ತಿ ಮಾಡಲು ಬಂದಾಗ ತನಗಿದ್ದ ಜಮೀನನ್ನ ಮಾರಾಟ ಮಾಡಿ ಬಡ್ಡಿ ರಹಿತ ಸಾಲ ಪಾವತಿಸಿದ. ಅಲ್ಲದೆ ಕೈ ಸಾಲ ಮತ್ತು ಮತ್ತೊಂದು ಬ್ಯಾಂಕಿನಲ್ಲಿ ಸಾಲ ಪಡೆದಿದ್ದು, ಜಮೀನು ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಮುಂದೆ ಸಾಲ ತೀರಿಸಲು ಸಾಧ್ಯವಾಗುವುದಿಲ್ಲ ಎಂದು ಯೋಚಿಸಿ ಎಂದು ಬೆಳಗ್ಗೆ, ತನ್ನ ಜಮೀನಿನ ಪಕ್ಕದ ದಿನೇಶ್ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ತೇಗದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಈ ಸಂಬಂಧ ಹಳೆಬೀಡು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Hassan
ಅಸಹಾಯಕ ಮಹಿಳೆಗೆ ಧಮ್ಕಿ ಹಾಕಿದ ಎಎಸ್ಐ ದೇವರಾಜ್
ಅರಕಲಗೂಡು: ಪಟ್ಟಣದ ಬ್ರಾಹ್ಮಣ ಬೀದಿಯಲ್ಲಿ ವಾಸವಾಗಿರುವ ಅರ್ಪಿತ ಎಂಬುವವರು ಸಹಾಯಕ್ಕಾಗಿ 112 ಕರೆ ಮಾಡಿದರೆ ಸಮಯಕ್ಕೆ ಸರಿಯಾಗಿ ವಾಹನ ಬಾರದೇ ಇದ್ದರಿಂದ ಪೊಲೀಸ್ ಠಾಣೆಗೆ ಕರೆ ಮಾಡಿದ್ದರು. ಆಗ ಎಎಸ್ಐ ದೇವರಾಜ್ ಸ್ಥಳಕ್ಕೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಏನಿದು ಘಟನೆ?
ಅಸಹಾಯಕ ಅರ್ಪಿತಾ ಅವರ ಅತ್ತೆ ಭಾಗ್ಯಮ್ಮ, ಅತ್ತಿಗೆ ಗೀತಾ, ನಾದಿನಿ ಜ್ಯೋತಿ, ಬಾವ ಲೋಕೇಶ್ ಎಲ್ಲಾ ಸೇರಿ ಗಂಡ ಇಲ್ಲದ ವೇಳೆ ಅವರ ಮೇಲೆ ದಾಳಿ ಮಾಡಿದ್ದರು. ಅಲ್ಲದೇ ಮನೆಯ ಮಹಡಿಯ ಮೇಲೆ ವಾಸವಿದ್ದ ಅವರ ಮನೆಗೆ ಬೀಗ ಹಾಕಿ ಅವರನ್ನು ಮನೆ ಇಂದ ಹೊರ ಹಾಕುವ ಪ್ರಯತ್ನ ಮಾಡಿದ್ದರು.
ಅರ್ಪಿತಾ ಅವರಿಗೆ ಪ್ರೀತಿಸಿ 5 ವರ್ಷದ ಹಿಂದೆ ಮದುವೆ ಆಗಿತ್ತು. ಆದರೆ ಒಂದು ವರ್ಷದಿಂದ ಚೆನ್ನಾಗಿ ನೋಡಿಕೊಳ್ಳದೆ ಹೆಂಡತಿ ಇದ್ದರಿಂದ ಗಂಡನಿಂದ ದೂರ ಉಳಿದ್ದರು. ಇದೀಗ ಅರ್ಪಿತಾ ಅವರನ್ನು ಮನೆ ಖಾಲಿ ಮಾಡಿಸೋದಕ್ಕೆ ಅವರ ಅತ್ತೆ ಬಂದಿದ್ದಾರೆ.

ಈ ವೇಳೆ ಪೊಲೀಸರು ಆಕೆಯ ಸಹಾಯಕ್ಕೆ ಬಾರದೇ ಹಲ್ಲೆ ಮಾಡಿದವರ ಜೊತೆ ಸೇರಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಈ ಹಲ್ಲೆಗೊಳಗಾದ ಅಸಹಾಯಕ ಮಹಿಳೆ ದೂರು ತೆಗೆದುಕೊಳ್ಳಲು ಎಎಸ್ಐ ದೇವರಾಜ್ ನಿರಾಕರಿಸಿದ್ದಾರೆ. ಆ ಅಸಹಾಯಕ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದರೂ, ನ್ಯಾಯ ಸಿಗದೇ ಕಣ್ಣೀರು ಹಾಕಿಕೊಂಡು ತನ್ನ ಅಳಲನ್ನು ತೋಡಿಕೊಂಡು ಬೀದಿಗೆ ಬಿದ್ದಿದ್ದಾರೆ.

ಈ ಸಂತ್ರಸ್ಥೆಯೂ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
Chamarajanagar17 hours agoನಾನಂಥವನಲ್ಲಾ ಎಂದ ನಂದಕುಮಮಾರ್: ಚಾಮರಾಜನಗರ ಹಿರಿಕಾಟಿ ಕ್ರಷರ್ ವಿವಾದಕ್ಕೆ ಸ್ಪಷ್ಟನೆ
-
Hassan15 hours agoಕೃಷಿ ಸಾಲವನ್ನು ತೀರಿಸಲಾಗದೆ ರೈತನೋರ್ವ ಆತ್ಮ*ತ್ಯೆ
-
Kodagu15 hours agoಪ್ರಸ್ತುತ ಸಮಾಜದಲ್ಲಿ ಮಕ್ಕಳಿಗೆ ಸಾತ್ವಿಕ ಶಿಕ್ಷಣ ನೀಡುವ ಜವಾಬ್ದಾರಿ ಪೋಷಕರ ಮೇಲಿದೆ : ಡಿವೈಎಸ್ಪಿ ಮಹೇಶ್ ಕುಮಾರ್
-
Uncategorized8 hours agoದಿ. ರಾಕೇಶ್ ಸಿದ್ದರಾಮಯ್ಯ ಸ್ಮರಣಾರ್ಥ ಕಾರ್ ರೇಸ್ : ಕುಚುಕು ಗೆಳೆಯ ನನ್ನ ನೆನೆದ ಸಂಸದ ಸುನಿಲ್ ಬೋಸ್
-
Kodagu9 hours agoಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ
-
Kodagu9 hours agoಮಂಗಳವಾರ ಬ್ಯಾಡಗೊಟ್ಟ ಪಂಚಾಯತ್ ನ ನೂತನ ಕಟ್ಟಡ ಉದ್ಬಾಟನೆ
-
Uncategorized9 hours agoಫೆ.11ರಂದು ನಾಪೋಕ್ಲುವಿನಲ್ಲಿ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನೆ ಹಾಗೂ ದಅವಾ ಸಮ್ಮೇಳನ
-
State9 hours agoಬೆಸ್ಕಾಂನಲ್ಲಿ 520 ಹುದ್ದೆಗಳಿಗೆ ನೇರ ನೇಮಕಾತಿ!
