Connect with us

Mandya

ಜ.7 ರಿಂದ 14 ರವರೆಗೆ ಮಂಡ್ಯದಲ್ಲಿ ಅಂತಾರಾಷ್ಟ್ರೀಯ ಟೆನಿಸ್ ಟೂರ್ನಿ

Published

on

ಮಂಡ್ಯ: ನಗರದ ಪಿ.ಇ.ಟಿ. ಕ್ರೀಡಾಂಗಣದಲ್ಲಿ ಪಿ.ಇ.ಟಿ ಐಟಿಎಫ್ ಅಂತಾರಾಷ್ಟ್ರೀಯ ಪುರುಷರ ಟೆನಿಸ್ ಟೂರ್ನಿಯು ಜ.7 ರಿಂದ 14 ರವರೆಗೆ ನಡೆಯಲಿದೆ ಎಂದು ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ ಹಾಗೂ ಮಂಡ್ಯ ಜಿಲ್ಲಾ ಲಾನ್ ಟೆನಿಸ್ ಅಸೋಸಿಯೇಶನ್ ಅಧ್ಯಕ್ಷ ಕೆ.ಆರ್‌.ದಯಾನಂದ ತಿಳಿಸಿದರು.

ಈ ಹಿಂದೆ 2010 ಮತ್ತು 2012 ರಲ್ಲಿ ನಂತರ 2015 ರಲ್ಲಿ ಮಂಡ್ಯದಲ್ಲಿ ಅಂತಾರಾಷ್ಟ್ರೀಯ ಟೂರ್ನಿ ನಡೆದಿತ್ತು. ಇದೀಗ ಎಂಟು ವರ್ಷಗಳ ನಂತರ ಸಕ್ಕರೆ ನಗರಿ ಮಂಡ್ಯದಲ್ಲಿ ಅಂತಾರಾಷ್ಟ್ರೀಯ ಟೆನಿಸ್ ಟೂರ್ನಿ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.

ಜಗತ್ತಿನ 18 ರಾಷ್ಟ್ರಗಳ ಪ್ರತಿಭಾವಂತ ಟೆನಿಸ್ ಪಟುಗಳು ಪಾಲ್ಗೊಳ್ಳುವ ಈ ಕ್ರೀಡಾಕೂಟದಲ್ಲಿ ವಿಜೇತರು 25 ಸಾವಿರ ಡಾಲರ್ ಬಹುಮಾನ ಪಡೆಯಲಿದ್ದಾರೆ. ಉಕ್ರೇನ್‌ನ ಎರಿಕ್ ವಾನ್ಶೆಲ್ಬಾಯ್, ದಕ್ಷಿಣ ಆಫ್ರಿಕಾದ ಕ್ರಿಸ್ ವ್ಯಾನ್ ವಿಕ್, ಗ್ರೇಟ್ ಬ್ರಿಟನ್ ಗೈಲ್ಸ್ ಹಸ್ಸಿ, ಆಸ್ಟ್ರೇಲಿಯಾದ ಥಾಮಸ್ ಫ್ಯಾಂಕಟ್ ಮತ್ತು ಭಾರತದ ಸಸಿಲ್‌ ಕುಮಾರ ಮುಕುಂದ ರಾಜ್ಯದ
ಮೈಸೂರು ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟು ಎಸ್.ಡಿ.ಪ್ರಜ್ವಲದೇವ ಕೂಡಾ ಒಬ್ಬರಾಗಿದ್ದಾರೆ ಎಂದು ವಿವರಿಸಿದರು.

ಎಂಟು ವರ್ಷಗಳ ನಂತರ ಮಂಡ್ಯದಲ್ಲಿ ಅಂತಾರಾಷ್ಟ್ರೀಯ ಟೆನಿಸ್ ಟೂರ್ನಿ ಆಯೋಜನೆಗೊಳ್ಳುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಕ್ರೀಡಾಕೂಟದ ಸಿಂಗಲ್ಸ್ ನಲ್ಲಿ 32 ಆಟಗಾರರು ಪಾಲ್ಗೊಳ್ಳಲಿದ್ದು, ಆ ಪೈಕಿ
20 ಜನರಿಗೆ ನೇರ ಪ್ರವೇಶ ದೊರಕಲಿದ್ದು, ನಾಲ್ಕು ಜನರಿಗೆ ವೈಲ್ಡ್ ಕಾರ್ಡ್‌ ಪ್ರವೇಶ ದೊರೆಯಲಿದೆ ಎಂದು ತಿಳಿಸಿದರು.

ಜ.7 ಮತ್ತು 8 ರಂದು ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿದ್ದು, ಅಲ್ಲಿ 32 ಆಟಗಾರರ ಪೈಕಿ ನೇರ ಪ್ರವೇಶ ಮತ್ತು
ವೈಲ್ಡ್ ಕಾರ್ಡ್‌ ಪ್ರವೇಶ ಹೊರತುಪಡಿಸಿ ಅರ್ಹತಾ ಸುತ್ತಿನ ಪಂದ್ಯಗಳ ಬಳಿಕ ಬಾಕಿ 8 ಜನ ಆಟಗಾರರಿಗೆ ಮುಂದಿನ ಹಂತಕ್ಕೆ ಪ್ರವೇಶ ದೊರೆಯಲಿದೆ. ಡಬಲ್ಸ್ ಪಂದ್ಯಾವಳಿಯಲ್ಲಿ ಒಟ್ಟು 16 ಜೋಡಿಗಳು ಪಾಲ್ಗೊಳ್ಳಲಿವೆ. ಜ.13 ರಂದು ಡಬಲ್ಸ್ ಪೈನಲ್ ಪಂದ್ಯ ನಡೆಯಲಿದ್ದು, ಜ.14 ರಂದು ಸಿಂಗಲ್ಸ್ ಪಂದ್ಯ ನಡೆಯಲಿದೆ ಎಂದರು.

ಪಂದ್ಯಾವಳಿಯ ನಿರ್ದೇಶಕ ಜಿ.ಆರ್.ಅಮರನಾಥ್, ಅನಿಲ್ ಕುಮಾರ್, ಪಾರ್ಥಸಿಂಗ್, ಗಣೇಶ್, ಮನೋಹರ್, ಆದರ್ಶ ಇದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಎಚ್ಡಿಕೆ ಮಂಡ್ಯದಲ್ಲಿ ಅಬ್ಬರದ ಪ್ರಚಾರ

Published

on

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಪ್ರಚಾರದ ಕೊನೆಯ ದಿನ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿಪ್ರದರ್ಶಿಸಿದರು.

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಹೆಚ್‍.ಡಿ ಕುಮಾರಸ್ವಾಮಿಗೆ ಅಪಾರ ಜನಸ್ತೋಮ ಬೆಂಬಲ ಸೂಚಿಸಿತು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಿಂದ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ರೋಡ್ ಶೋ ಮೂಲಕ ಮತಯಾಚನೆಗೆ ಹೊರಟ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿ ಹರ್ಷೋದ್ಗಾರದ ನಡುವೆ ಪುಷ್ಪಾರ್ಚನೆ ಮೂಲಕ ಹೆಜ್ಜೆ ಹಾಕಿದರು. ಅಪಾರ ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಕೈ ಮುಗಿದು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.


ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಹಿರಂಗ ಪ್ರಚಾರದ ಕೊನೆಯ ದಿನ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಶಕ್ತಿಪ್ರದರ್ಶಿಸುವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಣಿಯಾಗಿದ್ದಾರೆ.

Continue Reading

Mandya

ಕಾಂಗ್ರೆಸ್ ಪಕ್ಷದಿಂದ ಬೈಕ್ ರ್‍ಯಾಲಿ

Published

on

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಎರು ಮಂಡ್ಯದಲ್ಲಿ ಬೈಕ್ ರ್‍ಯಾಲಿ ಮೂಲಕ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ ಜೊತೆಗೂಡಿ ಕೊನೆಯ ದಿನದ ಪ್ರಚಾರ ಮಾಡಿದರು.

ನಗರದ ಕಾರಿಮನೆ ಗೇಟ್ ನಿಂದ ಬೈಕ್ ರ್‍ಯಾಲಿ ಮೂಲಕ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು, ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಜಯ ಚಾಮರಾಜೇಂದ್ರ ಒಡೆಯರ್ ವೃತ್ತ, ಆರ್ ಪಿ ರಸ್ತೆ, ಅಂಬೇಡ್ಕರ್ ರಸ್ತೆ ಯಲ್ಲಿ ಮತಯಾಚಿಸಿ ಹೊಸಹಳ್ಳಿಯಲ್ಲಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷ ಜನರ ಪರವಾದ ಪಕ್ಷವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ಸವಲತ್ತು ದೊರಕಿಸಿಕೊಟ್ಟಿದೆ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮತ್ತಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Mandya

ಕುಮಾರಸ್ವಾಮಿ ಪರ ಮತ ಪ್ರಚಾರ

Published

on

ಭಾರತೀನಗರ :ಕೆ.ಎಂ.ದೊಡ್ಡಿಯಲ್ಲಿನ 1 ಮತ್ತು 2ನೇ ಬ್ಲಾಕ್ನಲ್ಲಿ ಜಾ.ದಳ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಎನ್.ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಪ್ರತೀ ಮನೆಯಲ್ಲಿ ಮತದಾರರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕೊಟ್ಟ ಕೊಡುಗೆಗಳ ಹಾಗೂ ಅಭಿವೃದಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ರೈತರ ಉದ್ಧಾರಕ್ಕೋಸ್ಕರ ಸಾಲ ಮನ್ನಾ ಮಾಡಿದ್ದರು. ಹಾಗಾಗಿ ಕುಮಾರಸ್ವಾಮಿ ಅವರ ತೆನೆ ಹೊತ್ತ ಮಹಿಳೆ ಗುರುತಿಗೆ ಮತ ನೀಡುವ ಮೂಲಕ ಅತ್ಯಧಿಕ ಮತಗಳಿಂದ ಜಯಗಳಿಸುವಂತೆ ಮಾಡಬೇಕೆಂದು ಮನವಿ ಮಾಡಿದರು.
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಪಕ್ಷದ ಪ್ರದಾನಮಂತ್ರಿ ನರೇಂದ್ರ ಮೋದಿ ಅವರು ಜನತೆಯ ಹಿತಕಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ, ರೈತರ ಶ್ರೇಯೋಬಿವೃದ್ಧಿ ಹಿನ್ನೆಯಲ್ಲಿಯೂ ಕೂಡ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ ಎಂದು ಮತದಾರರಿಗೆ ತಿಳಿಸಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಪ್ರದಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್, ಮುಖಂಡರಾದ ಮೊಬೈ ವೆಂಕಟೇಶ್, ಕುಮಾರ್ , ರವಿ, ವಿಶ್ವ ಶ್ರೀನಿವಾಸ್, ಪುನೀತ್, ವಿಕಾಸ್ (ಬೋರ), ಪ್ರಶಾಂತ್, ಲಕ್ಷ್ಮಮ್ಮ, ರಂಗಮ್ಮ ಮುಂತಾದವರುಗಳು ಭಾಗವಹಿಸಿದ್ದರು

Continue Reading

Trending

error: Content is protected !!