Connect with us

Mysore

ಟಿಪ್ಪು ಹೆಸರು ಮೈಸೂರು ವಿಮಾನ ನಿಲ್ದಾಣಕ್ಕೆ ಇಡುವ ಪ್ರಸ್ತಾಪ ವಿಚಾರ : ಮೈಸೂರಿನಲ್ಲಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿಕೆ.

Published

on

ಟಿಪ್ಪು ಹೆಸರು ಮೈಸೂರು ವಿಮಾನ ನಿಲ್ದಾಣಕ್ಕೆ ಇಡುವ ಪ್ರಸ್ತಾಪ ವಿಚಾರ.

ಮೈಸೂರಿನಲ್ಲಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿಕೆ.

ಟಿಪ್ಪು ನಮ್ಮ ಊರಿನವರೇ ಅಲ್ವಾ? ಅವರೇನೂ ಹೊರ ದೇಶದವರಾ?

ಭೂ ಸುಧಾರಣೆ ಕಾಯ್ದೆ ತಂದವರು, ದೇವದಾಸಿ ಪದ್ಧತಿ ನಿರ್ಮೂಲನೆ ಮಾಡಿದ್ದು ಟಿಪ್ಪು ಅಲ್ವಾ?

ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನ ಬಗ್ಗೆ ನಮ್ಮ ತಕಾರರು ಇಲ್ಲ.

ಟಿಪ್ಪು ವಿಚಾರದಲ್ಲಿ ಕೆಲವರು ಅಭಿಪ್ರಾಯ ಹೇಳಿದ್ದಾರೆ. ಅಭಿಪ್ರಾಯ ಹೇಳೋದು ಅಪರಾಧವಾ? ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ವಾ?

ವಿಮಾನ ನಿಲ್ದಾಣ ವಿಚಾರದಲ್ಲಿ
ಕ್ಯಾಬಿನೆಟ್ ತೀರ್ಮಾನವಾಗಿದೆ. ಅದನ್ನು ತಿರಸ್ಕರಿಸಲು ಸಾಧ್ಯವಾ?

ಹೆಸರು ಇಡುವುದು ಬಿಡುವುದು ಬೇರೆ ವಿಚಾರ. ಆದರೆ ಅವರನ್ನು ದೇಶ ದ್ರೋಹಿ ಅಂತಾ ಬಿಂಬಿಸೋದು ಸರಿಯಲ್ಲ.

ಕೋವಿಡ್ ವಿಚಾರ.
ಮೈಸೂರು ಜಿಲ್ಲಾಡಳಿತದ ಜೊತೆಗೆ ಸಭೆ ಮಾಡುತ್ತೇನೆ.
ಗಡಿ ಜಿಲ್ಲೆಯಾದ ಕಾರಣ ಇವತ್ತೇ ಸಭೆ ಮಾಡುತ್ತೇನೆ.

ಸಂಸತ್ ನಲ್ಲಿ ಸ್ಮೋಕ್ ಬಾಂಬ್ ವಿಚಾರ

ಇದು ಗಂಭೀರವಾದ ರಾಷ್ಟ್ರೀಯ ಭದ್ರತಾ ವಿಚಾರ.

ಆರೋಪಿಗಳಿಗೆ
ಬೇರೆಯವರು ಲೇಟರ್ ಕೊಟ್ಟಿದ್ದರೆ ಮೈಸೂರು ಗತಿ ಏನಾಗುತ್ತಿತ್ತು?

ಬೇರೆ ಧರ್ಮದವರು ಲೇಟರ್ ಕೊಟ್ಟಿದ್ದರೆ ಗತಿ ಏನಾಗುತ್ತಿತ್ತು?

ಲೇಟರ್ ಕೊಟ್ಟಿದ್ದ ಕಾರಣ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

*ಒಂದೊಂದು ಬಾರಿ
ಗಡಿಪಾರು ಆದವರು, ಕೊಲೆ ಆರೋಪಿಗಳು ನಮ್ಮ ಜೊತೆಯೆ ಫೋಟೋ ತೆಗೆಸಿ ಕೊಂಡಿರುತ್ತಾರೆ*. ಅದನ್ನು ನಾವು ಗಮನಿಸೋಕೆ ಆಗುತ್ತಾ? ಇದು ರೀತಿ ಅಷ್ಟೆ*

Continue Reading
Click to comment

Leave a Reply

Your email address will not be published. Required fields are marked *

Mysore

ಆಷಾಢ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಆಗಮನ

Published

on

ಮೈಸೂರು:.ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಎರಡನೇ ಆಷಾಢ ಶುಕ್ರವಾರದ ಅಂಗವಾಗಿ ಚಾಮುಂಡೇಶ್ವರಿ ತಾಯಿಗೆ ಉತ್ಸವ ಮೂರ್ತಿ ಅಲಂಕಾರ ಮಾಡಲಾಗಿತ್ತು. ದೇವರ ಗರ್ಭಗುಡಿ ಬಾಗಿಲಿನಲ್ಲಿ ಹಣ್ಣಿನಿಂದ ಅಲಂಕಾರ ಹಾಗೂ ಹೊರಾಂಗಣದಲ್ಲಿ ನಿಂಬೆಹಣ್ಣು, ಮಂಗಳೂರು ಸೌತೆಕಾಯಿ, ಬದನೆಕಾಯಿ ಸೇರಿದಂತೆ ನಾನಾ ತರಹದ ತರಕಾರಿಗಳಿಂದ ಅಲಂಕರಿಸಲಾಗಿತ್ತು.

ಮುಂಜಾನೆಯಿಂದಲೇ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ್ ದೀಕ್ಷೀತ್ ಅವರ ನೇತೃತ್ವದಲ್ಲಿ ಚಾಮುಂಡೇಶ್ವರಿ ತಾಯಿಗೆ ವಿಶೇಷವಾಗಿ ಅಭಿಷೇಕ, ಅರ್ಚನೆ, ಮಹಾಮಂಗಳಾರತಿ ನೆರವೇರಿಸಲಾಯಿತು. ಕರ್ನಾಟಕ, ತಮಿಳುನಾಡು, ಕೇರಳ, ಆಂದ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದಲೂ ನಾಡಿನ‌ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು.

ಭಕ್ತಾದಿಗಳಿಗೆ ಸರತಿ ಸಾಲಿನಲ್ಲಿ ತಾಯಿಯ ದರ್ಶನಕ್ಕೆ ತೆರಳುವ ಭಕ್ತರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ. ಹರಕೆ ಹೊತ್ತ ಭಕ್ತರು ಊಟ ವ್ಯವಸ್ಥೆ ಮಾಡಿದ್ದರು. ನೂಕುನುಗ್ಗಲು ಉಂಟಾಗಬಾರದು ಎಂದು ಬ್ಯಾರಿಕೇಡ್ ವ್ಯವಸ್ಥೆ. ಸಿಸಿಟಿವಿ ಅಳವಡಿಕೆ, ಅಶ್ವದಳ ಪೋಲಿಸ್ ಸಿಬ್ಬಂದಿ, ದೇವಸ್ಥಾನ ಸುತ್ತ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಖಾಸಗೀ ವಾಹನಗಳಿಗೆ ನಿರ್ಬಂಧ ಏರಲಾಗಿದ್ದು, ಮೈಸೂರಿನ ಹೆಲಿಪ್ಯಾಡ್ ನಿಂದ ಭಕ್ತರಿಗಾಗಿ ಉಚಿತವಾಗಿ ಸಾರಿಗೆ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿತ್ತು.

Continue Reading

Mysore

ಮೈಸೂರಿನಲ್ಲಿ ಬೀಕರ ಅಪಘಾತ

Published

on

ಮೈಸೂರು: ಮೈಸೂರಿನ ಇನ್ಫೋಸಿಸ್ ಬಳಿಯ ರಸ್ತೆಯಲ್ಲಿ ದ್ವಿಚಕ್ರವಾಹನ ಹಾಗೂ ಗ್ಯಾಸ್ ಸಿಲಿಂಡರ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಬೀಕರ ಅಪಘಾತವಾಗಿದೆ.

ದ್ವಿಚಕ್ರವಾಹನದಲ್ಲಿದ್ದ ಕೂರ್ಗಳ್ಳಿಯ ನಿವಾಸಿಗಳಾದ ಚಂದ್ರ ಹಾಗೂ ಪ್ರೇಮ ಎಂಬ ದಂಪತಿಗಳ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದು, ನಗರದ ಒಂಟಿಕೊಪ್ಪಲ್ ವೃತ್ತದ ಬಳಿ ಇರುವ ಡಿ.ಆರ್.ಎಂ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದ ಸ್ಥಳದಲ್ಲಿ ಸಿಕ್ಕ ಆಧಾರ್ ಕಾರ್ಡ್ ನಿಂದಾಗಿ ಕೂರ್ಗಳ್ಳಿಯ ನಿವಾಸಿಗಳು ಎಂಬ ಮಾಹಿತಿ ತಿಳಿದು ಬಂದಿದೆ.

 

Continue Reading

Mysore

ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತ

Published

on

ಮೈಸೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಮುಂದುವರೆದಿದ್ದು, ಕಪಿಲಾ ನದಿಯಲ್ಲಿ ಪ್ರವಾಹ ಹೆಚ್ಚಿರುವ ಹಿನ್ನೆಲೆ ನಂಜನಗೂಡು ಹೊರವಲಯದ ಮಲ್ಲನ ಮೂಲೆ ಮಠದ ಬಳಿ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ.

ಹೆದ್ದಾರಿಯಲ್ಲಿ 4 ಅಡಿಗೂ ಹೆಚ್ಚು ನೀರು ಬಂದಿದ್ದು, ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕೇರಳದ ವಯನಾಡು ಪ್ರದೇಶದಲ್ಲಿ ಮಳೆ ಮುಂದುವರಿದಿರುವ ಪರಿಣಾಮವಾಗಿ ಕಬಿನಿ ಜಲಾಶಯದಿಂದ ಕಪಿಲಾ ನದಿಗೆ 70ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಮೈಸೂರಿನಿಂದ ನಂಜನಗೂಡಿಗೆ ತೆರಳುವ ವಾಹನಗಳನ್ನು ಅಡಕನಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಬ್ಯಾರಿಕೇಡ್ ಅಳವಡಿಸಿ ತಡೆಯಲಾಗಿದೆ. ಅಡಕನಹಳ್ಳಿ ಮಾರ್ಗವಾಗಿ ನಂಜನಗೂಡಿಗೆ ಸಂಚರಿಸುವಂತೆ ತಿಳಿಸಿದ್ದು, ನಂಜನಗೂಡಿನಿಂದ ಮೈಸೂರಿಗೆ ತೆರಳುವ ವಾಹನಗಳು ತಾಂಡವಪುರ ಮೂಲಕ ಹೆಜ್ಜಿಗೆ ಸೇತುವೆ ಮೂಲಕ ಸಂಚರಿಸಲು ತಿಳಿಸಲಾಗುತ್ತಿದೆ.

Continue Reading

Trending

error: Content is protected !!