Kodagu
ಡಾ.ಸುಬ್ರಮಣಿಯನ್ ಸ್ವಾಮಿ ಅನುದಾನ : ನೂರುಕ್ಕನಾಡ್ ಹಿಲ್ಸ್-ಕತ್ತಲೆಕಾಡ್ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಮಡಿಕೇರಿ : ಕೇಂದ್ರದ ಮಾಜಿ ಸಚಿವ ಹಾಗೂ ಆರ್ಥಿಕ ತಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ತಮ್ಮ ರಾಜ್ಯಸಭಾ ನಿಧಿಯಿಂದ ಕೊಡಗು ಜಿಲ್ಲೆಗೆ ನೀಡಿದ ಅನುದಾನದಲ್ಲಿ ನೂರುಕ್ಕನಾಡ್ ಹಿಲ್ಸ್-ಕತ್ತಲೆಕಾಡ್ ರಸ್ತೆ ಅಭಿವೃದ್ಧಿಯಾಗಿದೆ.
ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ಡಾ.ಸುಬ್ರಮಣಿಯನ್ ಸ್ವಾಮಿ ಅವರ ಆಪ್ತ ಹಾಗೂ ವಿಹೆಚ್‍ಎಸ್‍ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಕೊಡವರು ಹಾಗೂ ಕೊಡಗಿನ ಮೇಲಿನ ಅಭಿಮಾನ ಮತ್ತು ಪ್ರೀತಿಯಿಂದ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಅನುದಾನವನ್ನು ನೀಡಿದ್ದಾರೆ. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ
ಎನ್.ಯು.ನಾಚಪ್ಪ ಪ್ರಯತ್ನದ ಫಲವಾಗಿ ಇಂದು ರಸ್ತೆ ನಿರ್ಮಾಣಗೊಂಡಿದೆ. ಗ್ರಾಮಸ್ಥರು ಕಾಮಗಾರಿಯ ಬಗ್ಗೆ ಹೆಚ್ಚು ಆಸಕ್ತಿ ತೋರಿ ತಮ್ಮನ್ನು ತಾವು ತೊಡಗಿಸಿಕೊಂಡ ಕಾರಣ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣವಾಗಿದೆ ಎಂದರು.
ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮಾತನಾಡಿ ಕೊಡಗು ಹಿಂದೆ “ಕೂರ್ಗ್’ ರಾಜ್ಯವಾಗಿದ್ದಾಗ ಅಭಿವೃದ್ಧಿ ಕಾರ್ಯಗಳು ಗುಣಮಟ್ಟದಿಂದ ಕೂಡಿರುತ್ತಿತ್ತು. ಕರ್ನಾಟಕದೊಂದಿಗೆ ವಿಲೀನವಾಗಿ ಜಿಲ್ಲೆಯಾಗಿ ಪರಿವರ್ತನೆಯಾದ ನಂತರ ಕಮಿಷನ್
ಆಧಾರದ ಕಳಪೆ ಕಾಮಗಾರಿಗಳು ನಡೆದಿವೆ. ಆದರೆ ನೂರುಕ್ಕನಾಡ್ ಹಿಲ್ಸ್-ಕತ್ತಲೆಕಾಡ್ ರಸ್ತೆ ಕಾಮಗಾರಿ ಯಾವುದೇ ಕಮಿಷನ್‍ಗೆ ಅವಕಾಶವಿಲ್ಲದೆ ಉತ್ತಮ ಗುಣಮಟ್ಟದಿಂದ ನಿರ್ಮಾಣಗೊಂಡಿದೆ ಎಂದರು.
ನನ್ನ ಕೋರಿಕೆಯ ಮೇರೆಗೆ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯ ನಿಧಿಯಡಿ ಕೊಡಗಿನ ಕುಗ್ರಾಮಗಳ “ಬಲ್ಯಮನೆ” ರಸ್ತೆ ಮತ್ತು ಇತರ ರಸ್ತೆಗಳ ಅಭಿವೃದ್ಧಿಗೆ 2.46
ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದರು. ಮೊದಲ ಹಂತದಲ್ಲಿ ನೂರುಕ್ಕನಾಡ್ ಹಿಲ್ಸ್-ಕತ್ತಲೆಕಾಡ್ ರಸ್ತೆ ನಿರ್ಮಾಣವಾಗಿದೆ ಎಂದು ನಾಚಪ್ಪ ಹೇಳಿದರು.
ವೀರರ ಸಂಕೇತವಾದ ಕೊಡವ ಸಾಂಪ್ರದಾಯಿಕ ಕೋವಿ ಮೂಲಕ ಗಾಳಿಯಲ್ಲಿ ಗುಂಡು ಹಾರಿಸಿ ರಸ್ತೆಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟಿ, ಎನ್.ಯು.ನಾಚಪ್ಪ, ರಸ್ತೆ ನಿರ್ಮಿಸಿದ ಗುತ್ತಿಗೆದಾರರಾದ
ಜಯಚಂದ್ರೇಗೌಡ, ಮಾದಪ್ಪ ಹಾಗೂ ನಿಗಾ ವಹಿಸಿದ ಗ್ರಾಮದ ಪ್ರಮುಖ ಜನಾರ್ಧನ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಸ್ಥಳೀಯ ಗ್ರಾಮಸ್ಥರು ಎನ್.ಯು.ನಾಚಪ್ಪ ಅವರ ಸಹಕಾರವನ್ನು ಶ್ಲಾಘಿಸಿದರು.
ಚೆಟ್ಟಳ್ಳಿ ಗ್ರಾ.ಪಂ ಅಧ್ಯಕ್ಷ ಮುತ್ತಪ್ಪ, ಸದಸ್ಯೆ ಪೆÇರಿಮಂಡ ತಂಗಮ್ಮ ಲೋಕೇಶ್ ಸೇರಿದಂತೆ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Kodagu
ಬಲ್ಲಮಾವಟಿ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆ – 112ಪೊಲೀಸರಿಂದ ಮಗುವಿನ ರಕ್ಷಣೆ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ನಾಪೋಕ್ಲು ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೇರೂರು ಗ್ರಾಮದ ಲೈನ್ ಮನೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆಯಾಗಿರುವ ಘಟನೆ ಶನಿವಾರ ರಾತ್ರಿ ವರದಿಯಾಗಿದೆ.
ಬಲ್ಲಮಾವಟಿ ಪೇರೂರು ಗ್ರಾಮದ ತೋಳಂಡ ಪೂಣಚ್ಚ ಎಂಬುವವರ ಲೈನ್ ಮನೆಯಲ್ಲಿ ಶನಿವಾರ ರಾತ್ರಿ (ದಿನಾಂಕ:15/03/2025/ 8.ಗಂಟೆಗೆ )ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿ ಬಳಿಕ ಬಿಟ್ಟುಪರಾರಿ ಯಾಗಿದ್ದಾಳೆ.
ಜನರು ವಾಸವಿಲ್ಲದ ಲೈನ್ ಮನೆಯಲ್ಲಿ ಮಗುವಿನ ಕೂಗು ಕೇಳಿದ ಸ್ಥಳೀಯರು ಮನೆ ಮಾಲೀಕ ಪೂಣಚ್ಚ ಎಂಬುವರಿಗೆ ಮಾಹಿತಿ ನೀಡಿದ್ದಾರೆ. ಪರಿಶೀಲಿಸಿದ ಮಾಲಿಕ ಪೂಣಚ್ಚ ಎಂಬುವವರು ಮಗುವಿನ ಬಳಿ ಯಾರು ಇಲ್ಲದಿರುವುದನ್ನು ಕಂಡು 112 ಪೊಲೀಸ್ ಕಂಟ್ರೋಲ್ ರೂಮಿಗೆ ಕರೆ ಮಾಡಿ ತಿಳಿಸಿದ್ದಾರೆ. ತಕ್ಷಣ
ಸ್ಥಳಕ್ಕೆ ಧಾವಿಸಿದ 112 ಸಿಬ್ಬಂದಿಗಳಾದ ಮುಖ್ಯಪೇದೆ ರಾಜೇಶ್, ಮತ್ತು ಮೊಣ್ಣಪ್ಪ ರವರು ಮಗುವನ್ನು ರಕ್ಷಿಸಿ ನಾಪೋಕ್ಲು ಸಮುದಾಯ ಅರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಆಂಬುಲೆನ್ಸಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ರಕ್ತದ ಮಡುವಿನಲ್ಲಿ ಇರುವೆಗಳೊಂದಿಗೆ ಜೀವ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಮಗುವನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಘಟನೆ ಸಂಬಂಧ ಮಡಿಕೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಮಗುವಿನ ಅರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Kodagu
ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಡಾ.ಮಂತರ್ ಗೌಡ

ಮಡಿಕೇರಿ: ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸ ಸಚಿವ ಅವರಿಂದ ಮಾಹಿತಿ ಪಡೆದಿದ್ದಾರೆ.
ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು ಭೌತಿಕ ಅಡೆತಡೆಗಳ ನಿರ್ಮಾಣ: ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು ಮತ್ತು ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮಾನವ ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ರೈಲ್ವೆ ಹಳಿಗಳನ್ನು ಉಪಯೋಗಿಸಿಕೊಂಡು ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಒಟ್ಟು 391.832 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ ಎಂದರು.
ಆನೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಾಗೂ ಚಾಮರಾಜನಗರ ಜಿಲ್ಲೆ, ರಾಮನಗರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಾನೆ ಹಾವಳಿಯನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ 08 ಆನೆ ಕಾರ್ಯಪಡೆ ರಚಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ವಿವರಿಸಿದ್ದಾರೆ.
ಚಿರತೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಮೈಸೂರು ವೃತ್ತದ ಮೈಸೂರು, ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಟಿ.ನರಸೀಪುರ, ಮಂಡ್ಯ, ಪಾಂಡವಪುರ ಹಾಗೂ ನಾಗಮಂಗಲ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಚಿರತೆ ಹಾವಳಿ ನಿಭಾಯಿಸುವ ನಿಟ್ಟಿನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ವನ್ಯಜೀವಿ ವಿಭಾಗ, ಮೈಸೂರು ಇವರ ನೇತೃತ್ವದಲ್ಲಿ ಚಿರತೆ ಕಾರ್ಯಪಡೆ ರಚಿಸಲಾಗಿದೆ. ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಪುಂಡಾನೆಗಳನ್ನು ಗುರುತಿಸಿ, ಸೆರೆಹಿಡಿದು ಆಗ್ಲಿಂದಾಗ್ಗೆ ಆನೆ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನಿಡಿದ್ದಾರೆ.
Kodagu
ಮಾ.16 ಹಾಗೂ 17ರಂದು ಕೊಳಕೇರಿ ಬೊಮ್ಮಂಜಿ ಭದ್ರಕಾಳಿ ಉತ್ಸವ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು: ನಾಪೋಕ್ಲು ಬಳಿಯ ಕೊಳಕೇರಿ ಗ್ರಾಮದ ಬೊಮ್ಮಂಜಿಕೇರಿಯಲ್ಲಿ ವಾರ್ಷಿಕವಾಗಿ ಆಚರಿಸಲ್ಪಡುವ ಶ್ರೀ ಭದ್ರಕಾಳಿ ದೇವರ ಉತ್ಸವವು ಮಾ.16ಮತ್ತು17ರಂದು ನಡೆಯಲಿದೆ.
ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
-
State20 hours ago
ಬೆಂಗಳೂರು ನಮ್ಮ ಮೆಟ್ರೋ ನೇಮಕಾತಿ : ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿ
-
Kodagu19 hours ago
ಬಲ್ಲಮಾವಟಿ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆ – 112ಪೊಲೀಸರಿಂದ ಮಗುವಿನ ರಕ್ಷಣೆ
-
Chamarajanagar24 hours ago
ಸತತ ನಾಲ್ಕನೇ ಬಾರಿ ಅಧ್ಯಕ್ಷರಾಗಿ ಎಂ.ಪಿ.ಸುನೀಲ್ ಆಯ್ಕೆ
-
National - International20 hours ago
ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ಸ್ವೀಕಾರ
-
Kodagu21 hours ago
ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಡಾ.ಮಂತರ್ ಗೌಡ
-
State22 hours ago
ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ಬಸವರಾಜ ಬೊಮ್ಮಾಯಿ
-
Hassan24 hours ago
ಗಮನಸೆಳೆದ ತಿಂಗಳ ಮಾಮನ ತೇರು: ಚಂದ್ರನಿಗೆ ಮದುವೆ ಮಾಡಿದ ನಿವಾಸಿಗಳು
-
Mysore24 hours ago
ನನಗೆ ಸಿಎಂ ಹುದ್ದೆ ಕೊಟ್ಟರೆ ನಿರ್ವಹಿಸುವೆ: ಶಾಸಕ ತನ್ವೀರ್ ಸೇಠ್