Connect with us

Mandya

ತಗ್ಗಹಳ್ಳಿ: ವೈದ್ಯ ಪದವಿ ಪಡೆಯದ ಕ್ಲಿನಿಕ್‌ ಸೀಜ್‌

Published

on

ಮಂಡ್ಯ: ತಾಲ್ಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ವೈದ್ಯ ಪದವಿ ಪಡೆಯದ ವ್ಯಕ್ತಿಯೊಬ್ಬರು ಇಂಗ್ಲಿಷ್‌ ಔಷಧಿ ನೀಡುತ್ತಿರುವುದು ಸೇರಿದಂತೆ ಅಶುಚಿತ್ವದಿಂದ ಕೂಡಿದ ಕ್ಲಿನಿಕ್‌ ಅನ್ನು ಮಂಗಳವಾರ ಸೀಜ್ ಮಾಡಲಾಯಿತು ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಕೆ.ಬಿ.ಜವರೇಗೌಡ ಹೇಳಿದರು.

ನಿಖಿರವಾದ ಪದವಿ ಇಲ್ಲದ ಅತ್ತ ಎಂಬಿಬಿಎಸ್‌(ಅಲೋಪತಿ), ಇತ್ತ ಆಯುರ್ವೇದಿಕ್‌(ಆಯುಷ್‌) ಪದವಿಯನ್ನೂ ಪಡೆಯದ ಡಾ.ಮಂಜುನಾಥಶೆಟ್ಟಿ ಅವರು ನಿಯಮ ಬಾಹಿರವಾಗಿ ನಡೆಸುತ್ತಿದ್ದ ಕ್ಲಿನಿಕ್ ಅನ್ನು ಮುಚ್ಚಿಸಲಾಗಿದೆ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ತಗ್ಗಹಳ್ಳಿ ಗ್ರಾಮದ ಶ್ರೀ ದುರ್ಗಾ ಕ್ಲಿನಿಕ್‌ ಅನ್ನು ಹಲವು ವರ್ಷಗಳಿಂದ ಮಂಜುನಾಥಶೆಟ್ಟಿ ಅವರು ನಡೆಸುತ್ತಿದ್ದರು ಎನ್ನಲಾಗಿದೆ, ಈ ಬಗ್ಗೆ ತಿಳಿವಳಿಕೆ ನೊಟೀಸ್‌ ನೀಡಲಾಗಿತ್ತು, ಅದನ್ನು ನಿರ್ಲಕ್ಷಿಸಿ ಅಶುಚಿತ್ವದಿಂದ ಕೂಡಿದ ಸ್ಥಳದಲ್ಲಿ ಕ್ಲಿನಿಕ್‌ ಮುಂದುವರಿಸಿದ್ದರು, ಈ ವಿಷಯವಾಗಿ ನಮ್ಮ ಆರೋಗ್ಯ ಸಿಬ್ಬಂದಿ ಜೊತೆ ಸ್ಥಳಕ್ಕೆ ಬಂದು ಸೀಜ್‌ ಮಾಡಲಾಗಿದೆ ಎಂದರು.

ಈ ಹಿಂದೆ ಭ್ರೂಣ ಹತ್ಯೆ ನಡೆದಿದೆ ಎಂಬುವ ವಿಷಯವಾಗಿ ಜಿಲ್ಲಾಧಿಕಾರಿ ಅವರು, ಕ್ಲಿನಿಕ್‌ಗಳ ಮೇಲೆ ನಿಗಾ ಇಡುವಂತೆ ಹಾಗೂ ಪರಿಶೀಲನೆ ನಡೆಸುವಂತೆಯೂ ಸೂಚನೆ ನೀಡಿದ್ದರು, ಹಾಗಾಗಿ ಕಳೆದ ಎರಡು ತಿಂಗಳ ಹಿಂದೆಯೇ ಕ್ಲಿನಿಕ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆವು, ಅವರ ಪ್ರಮಾಣ ಪತ್ರ ಎಲ್ಲವೂ ಸೇರಿದಂತೆ ಸ್ಥಳ ಪರಿಶೀಲನೆಗೆ ಒಳಪಡಿಸಿದಾಗ ಸತ್ಯ ಹೊರಬಂದಿದೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

Mandya

ಫೆ.08 ರಂದು ಕರ್ನಾಟಕ ಸಂವಿಧಾನ ಸೇನೆಯ ವತಿಯಿಂದ ಸಂವಿಧಾನ ದಿನಾಚರಣೆ : ಎಚ್.ಎನ್.ನರಸಿಂಹಮೂರ್ತಿ

Published

on

ಮಂಡ್ಯ: ಕರ್ನಾಟಕ ಸಂವಿಧಾನ ಸೇನೆಯ ವತಿಯಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಫೆ.೮ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸೇನೆಯ ರಾಜ್ಯಾಧ್ಯಕ್ಷ ಎಚ್.ಎನ್.ನರಸಿಂಹಮೂರ್ತಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉರಿಲಿಂಗಿ ಪೆದ್ದಿ ಮಹಾಸಂಸ್ಥಾನ ಮಠದ ಶ್ರೀಜ್ಞಾನಪ್ರಕಾಶ ಸ್ವಾಮೀಜಿ ವಹಿಸಲಿದ್ದಾರೆ. ಕರ್ನಾಟಕ ಸರಕಾರದ ಯೋಜನೆ ಇಲಾಖೆಯ ನಿರ್ದೇಶಕ ಡಿ.ಚಂದ್ರಶೇಖರಯ್ಯ ಉದ್ಘಾಟಿಸುವರು ಎಂದರು.
ಹಿರಿಯ ದಲಿತ ಹೋರಾಟಗಾರ ಬಿ.ಗೋಪಾಲ್ ಜಿಲ್ಲಾಧಿಕಾರಿ ಡಾ.ಕುಮಾರ, ಕರ್ನಾಟಕ ಸಂವಿಧಾನ ಸೇನೆಯ ರಾಜ್ಯಾಧ್ಯಕ್ಷ ನರಸಿಂಹಮೂರ್ತಿ, ಲೋಕೋಪಯೋಗಿ ಇಲಾಖೆಯ ನಿವತ್ತ ಕಾರ್‍ಯಪಾಲಕ ಅಭಿಯಂತರ ಟಿ.ಆರ್.ಶಿವರಾಮು ಕಾರ್‍ಯಕ್ರಮದಲ್ಲಿ ಉಪಸ್ಥಿತರಿರುವರು. ವಿವಿಧ ಕ್ಷೇತ್ರ ಸಾಧನೆಗೈದ ೧೦ ಸಾಧಕರಿಗೆ ಸನ್ಮಾನ ಆಯೋಜಿಸಲಾಗಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಲೋಕೇಶ್, ಜಿಲ್ಲಾಧ್ಯಕ್ಷ ಜಿ.ಕೆ.ಕುಮಾರ್, ಪ್ರಧಾನ ಕಾರ್‍ಯದರ್ಶಿ ಎಚ್.ಡಿ.ಪ್ರದೀಪ್, ನಾವು ದ್ರಾವಿಡರು ಸಂಘಟನೆಯ ಅಭಿಗೌಡ, ಪ್ರಮೋದ್ ಇದ್ದರು.

Continue Reading

Mandya

ಫೆ.06 ರಂದು ಬೀರೇಶ್ವರ ದೇವಸ್ಥಾನಕ್ಕೆ ಸಿಎಂ ಭೇಟಿ : ಜಿಲ್ಲಾಧಿಕಾರಿಯಿಂದ ಪರಿಶೀಲನೆ

Published

on

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 6ರಂದು ಮಂಡ್ಯ ತಾಲ್ಲೂಕಿನ ಬೇವುಕಲ್ಲು ಗ್ರಾಮದಲ್ಲಿರುವ ಶ್ರೀ ಬೀರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದರು.

ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಿಕೆ, ಸುಗಮ ಸಂಚಾರ ವ್ಯವಸ್ಥೆ, ಸಾರ್ವಜನಿಕರ ಸುರಕ್ಷತೆ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆ ಕುರಿತು ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದೇವಸ್ಥಾನ ಆವರಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು, ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಹಾಗೂ ತುರ್ತು ಪರಿಸ್ಥಿತಿಗಳಿಗೆ ಅಗತ್ಯವಿರುವ ವೈದ್ಯಕೀಯ ಮತ್ತು ಅಗ್ನಿಶಾಮಕ ಸೌಲಭ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

 

ಮುಖ್ಯಮಂತ್ರಿಗಳ ಕಾರ್ಯಕ್ರಮವು ಸುಗಮವಾಗಿ ಹಾಗೂ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಹಾಗೂ ನಿಗದಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.

ಪರಿಶೀಲನೆ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಮಂಡ್ಯ ತಹಶೀಲ್ದಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಇತರೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಬೃಹತ್ ಕಾಲ್ನಡಿಗೆ ಜಾಥಾಗೆ ಜಿಲ್ಲಾಧಿಕಾರಿ ಚಾಲನೆ

Published

on

ಮಂಡ್ಯ : 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ–2026ರ ಅಂಗವಾಗಿ ಹಮ್ಮಿಕೊಳ್ಳಲಾದ ಬೃಹತ್ ಕಾಲ್ನಡಿಗೆ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರಸ್ತೆ ಸುರಕ್ಷತೆಯ ಮಹತ್ವವನ್ನು ವಿವರಿಸಿ ಮಾತನಾಡಿದ ಅವರು, ಅತಿವೇಗ, ಮದ್ಯಪಾನ ಮಾಡಿ ವಾಹನ ಚಾಲನೆ, ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸದೇ ಚಾಲನೆ ಮಾಡುವುದು ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ ಎಂದು ತಿಳಿಸಿದರು.

ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ರಸ್ತೆ ಅಪಘಾತಗಳಿಂದ ಉಂಟಾಗುವ ಜೀವಹಾನಿ ಹಾಗೂ ಆಸ್ತಿ ನಷ್ಟವನ್ನು ತಡೆಯಲು ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಸಂಚಾರ ನಿಯಮಗಳನ್ನು ಪಾಲಿಸುವುದು, ರಸ್ತೆ ಸುರಕ್ಷತೆಯನ್ನು ಕಾಪಾಡುವುದು ಹಾಗೂ ಅಪಘಾತ ರಹಿತ ಸಮಾಜ ನಿರ್ಮಾಣಕ್ಕೆ ಸಹಕರಿಸುವುದು ಎಂಬ ಪ್ರತಿಜ್ಞೆಯನ್ನು ಸ್ವೀಕರಿಸಿದರು.

Continue Reading

Trending

error: Content is protected !!