Connect with us

State

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ: ಸಿಎಂ

Published

on

ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ: ಸಿಎಂ ಸೂಚನೆ

ಬೆಂಗಳೂರು ಜ 16: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು.

ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿ ಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿದರು.

ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು ಎಂದು ಸೂಚಿಸಿದರು.

ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ತಿಳಿ ಹೇಳಿದರು.

ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದರು.

ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ.

ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.


ಇತರೆ ಹೈಲೈಟ್ಸ್

ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯದ ಅಭಿವೃದ್ಧಿ ಸಾಧ್ಯ. ಜನರ ತಲಾ ಆದಾಯ ಮತ್ತು GDP ಹೆಚ್ಚಾಗುತ್ತದೆ. ಹೂಡಿಕೆದಾರರು ಬರುತ್ತಾರೆ. ಆದ್ದರಿಂದ ಕಾನೂನು ಸುವ್ಯವಸ್ಥೆಯನ್ನು ಸರಿಯಾಗಿ ಕಾಪಾಡಿ

ಕಳ್ಳತನ ಹೆಚ್ಚಾಗ್ತಾ ಇದೆ ಎಂದರೆ ಗಸ್ತು ವ್ಯವಸ್ಥೆ, ಹೋಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವೈಫಲ್ಯರಾಗಿದ್ದಾರೆ ಎಂದೇ ಅರ್ಥ

ಇದೇ ಸ್ಥಿತಿ ಮುಂದುವರೆದರೆ DCP ಗಳನ್ನು ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು

ಅಧಿಕಾರಿಗಳು ಪ್ರಸ್ತುತ ಪಡಿಸಿದ ಅಂಕಿ ಅಂಶ ತೃಪ್ತಿಕರವಾಗಿಲ್ಲ. ಮುಂದಿನ ವರ್ಷದ ವೇಳೆಗೆ ಕಾರ್ಯಕ್ಷಮತೆ ಉತ್ತಮವಾಗಿರಲಿ

Continue Reading
Click to comment

Leave a Reply

Your email address will not be published. Required fields are marked *

State

ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರ ನಿಧನ: ಸಿ ಎಂ ಸಂತಾಪ

Published

on

ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು.

ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ‌ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು.

ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು.

https://x.com/siddaramaiah/status/1863425175028482211?t=JSIpVXDzIIdzHZknlUcENQ&s=19

Continue Reading

State

HSRP ನಂಬರ್‌ ಪ್ಲೇಟ್‌ ಗಡುವು ಮತ್ತೆ ವಿಸ್ತರಣೆ: ಡಿ.31 ವರೆಗೆ ಕಾಲಾವಕಾಶ!

Published

on

ಬೆಂಗಳೂರು: 01-04-2019 ಕ್ಕಿಂತ ಹಳೆಯದಾದ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ (ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌) ನಂಬರ್‌ ಪ್ಲೇಟ್‌ ಅಳವಡಿಸಲು ನೀಡಿದ್ದ ಗಡುವನ್ನು ರಾಜ್ಯ ಸರ್ಕಾರ ಮತ್ತೆ ವಿಸ್ತರಿಸಿದೆ.

ರಾಜ್ಯ ಸರ್ಕಾರ ಐದನೇ ಬಾರಿಗೆ ಗಡುವು ವಿಸ್ತರಣೆ ಮಾಡಿದೆ. ಈ ಹಿಂದೆ ನವೆಂಬರ್‌ 30 ವರೆಗೆ ಪ್ಲೇಟ್‌ ಅಳವಡಿಕೆಗೆ ಅವಕಾಶ ನೀಡಿದ್ದ ಸರ್ಕಾರ ಇದೀಗ ಡಿ. 31 ವರೆಗೆ ಗಡುವು ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊಡಿಸಿದೆ.

ರಾಜ್ಯದಲ್ಲಿ ಸುಮಾರು 2 ಕೋಟಿ ವಾಹನಗಳಿದ್ದು, ಈವರೆಗೆ ಕೇವಲ 55 ಲಕ್ಷ ವಾಹನಗಳು ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಿವೆ. ವಂಚನೆ ಮತ್ತು ಕಳ್ಳತನದಿಂದ ವಾಹನಗಳನ್ನು ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನೊಳಗೊಂಡಿರುವ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಎಲ್ಲಾ ವಾಹನಗಳು ಇದೇ ಡಿ.31 ಒಳಗಾಗಿ ತಪ್ಪದೇ ಅಳವಡಿಸುವಂತೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.

Continue Reading

State

ಡಿಸೆಂಬರ್‌ 1 ರಂದು ಹಾಡ್ಲಹಳ್ಳಿ ನಾಗರಾಜ್ ಅಭಿನಂದನಾ ಸಮಾರಂಭ

Published

on

ಬೆಂಗಳೂರು: ಹಿರಿಯ ಸಾಹಿತಿ ಹಾಡ್ಲಹಳ್ಳಿ ನಾಗರಾಜ್ ರವರಿಗೆ ಅಭಿನಂದನಾ ಸಮಾರಂಭವನ್ನು ಇದೇ ಭಾನುವಾರ (ಡಿ.1) ನೆರವೇರಿಸಲಾಗುವುದು ಎಂದು ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಹಾಡ್ಲಹಳ್ಳಿ ನಾಗರಾಜ್ ಅವರ ಅಭಿನಂದನಾ ಕಾರ್ಯಕ್ರಮದ ಕುರಿತಾಗಿ ವಿವರಣೆ ನೀಡಿದರು. ಭಾನುವಾರ ಮಧ್ಯಾಹ್ನ ಅಭಿನಂದನಾ ಗ್ರಂಥ ‘ಕಾರೆಕಾಯ್ ಹಡ್ಲು’ ಬಿಡುಗಡೆಯಾಗಲಿದ್ದು, ಆನಂತರ ‘ಬೆಂಕಿ ರೂಟು’ ಎಂಬ ನಾಟಕವೂ ಇದೆ ಎಂದರು.

ತಮ್ಮದೇ ಆದ ಓದುಗ ವಲಯವನ್ನು ಹೊಂದಿರುವ ಸಾಹಿತಿ ಹಾಡ್ಲಹಲ್ಲಿ ನಾಗರಾಜ್ ಅವರು ಮಲೆನಾಡಿಗೆ ಮಾತ್ರ ಸೀಮಿತವಲ್ಲ, ಇಡೀ ಕನ್ನಡ ಸಾರಸ್ವತ ಲೋಕಕ್ಕೆ ಹಾಡ್ಲಹಳ್ಳಿ ನಾಗರಾಜ್ ಅವರ ಕೊಡುಗೆ ಗಣನೀಯವಾದದ್ದು. ಕಳೆದ 50 ವರ್ಷಗಳಿಂದಲೂ ಸಾಹಿತ್ಯ ರಚನೆ ಮಾಡಿಕೊಂಡು ಬಂದಿರುವ ಇವರಿಗೆ ಸಾಹಿತ್ಯಾಸಕ್ತರು, ಆಪ್ತರು ಎಲ್ಲರೂ ಸೇರಿ ಅಭಿನಂದನೆ ಸಲ್ಲಿಸುತ್ತಿರುವುದು ಮಹತ್ವದ ಸಂಗತಿ ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಉದ್ಯಮಿ ಶಿವಕುಮಾರ್ ಜಾಗಟೆ ಮಾತನಾಡಿ ನಾವೆಲ್ಲ ಹಾಡ್ಲಹಳ್ಳಿ ನಾಗರಾಜ್ ಅವರ ಕಥೆ ಕಾದಂಬರಿಗಳನ್ನು ಓದಿ ಬೆಳೆದವರು. ಅವುಗಳಿಂದ ಸಾಕಷ್ಟು ಜೀವನ ಅನುಭವ ಹೊಂದಲು ಸಾಧ್ಯವಾಯಿತು. ನಮ್ಮಂತಹ ಹಲವಾರು ಮಂದಿಗೆ ಸ್ಪೂರ್ತಿಯಾಗಿರುವ ಮಲೆನಾಡಿನ ಹಿರಿಯರಿಗೆ ಅಭಿನಂದಿಸುವ ಕಾರ್ಯ ಖುಷಿ ಕೊಡುತ್ತದೆ ಎಂದರು.

ಕತೆಗಾರ್ತಿ ದಯಾ ಗಂಗನಘಟ್ಟ ಮಾತನಾಡಿ ಸರ್ಕಾರ ಹಾಗೂ ಅದರ ಅಂಗ ಸಂಸ್ಥೆಗಳಿಂದ ಗುರುತಿಸಲು ಸಾಧ್ಯವಾಗದ ಸಾಹಿತಿಯೊಬ್ಬರನ್ನು ಜನಸಾಮಾನ್ಯರೇ ಗುರುತಿಸಿ ಅಭಿನಂದಿಸುತ್ತಿರುವುದು ಮಾದರಿ ಕೆಲಸವಾಗಿದೆ ಎಂದರು.

ನಾಡಿನ ಎಲ್ಲಾ ಸದಭಿರುಚಿಯ ಮನಸ್ಸುಗಳು ಡಿಸೆಂಬರ್ 1ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಲಾಯಿತು.

Continue Reading

Trending

error: Content is protected !!