Connect with us

State

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ – ವಿವರ

Published

on

01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ
04-03-2024 ಸೋಮವಾರ ಗಣಿತ ಪರೀಕ್ಷೆ
05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ
07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ
09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ
11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ


13-03-2024 ರಂದು ಇಂಗ್ಲಿಷ್ ಪರೀಕ್ಷೆ
15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ
18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
22-03-2024 ರಂದು ಹಿಂದಿ ಪರೀಕ್ಷೆ
ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ.

State

ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ವಿಜಯಪುರ :ಜೂನ್ -16: ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಸೇಡಿಗಾಗಿ ದರ ಏರಿಕೆ ಮಾಡಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಿಜಯಪುರದಲ್ಲಿ ನಾವು ಸೋತಿದ್ದೇವೆ. ಕರ್ನಾಟಕದಲ್ಲಿ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ. ವಿಜಯಪುರದಲ್ಲಿ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಿತ್ತು. ಕರ್ನಾಟಕದಲ್ಲಿ ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ , ಈ ಬಾರಿ ಒಂಭತ್ತು ಸ್ಥಾನಗಳನ್ನು ಗಳಿಸಿದ್ದೇವೆ. ಬಿಜೆಪಿ ಕಳೆದ ಬಾರಿ 25 ಇದ್ದನ್ನು ಈ ಬಾರಿ 19 ಕ್ಕೆ ಇಳಿದಿದ್ದಾರೆ. ನಮಗೆ 13% ಮತ ಹಂಚಿಕೆಯಾಗಿದೆ. ನಾವು ಸೋತಿದ್ದೇವೆಯೇ ಎಂದು ಪ್ರಶ್ನಿಸಿದರು. ನಮ್ಮ ಲೆಕ್ಕಾಚಾರದ ಪ್ರಕಾರ, ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ ಅಷ್ಟೇ ಎಂದರು.

ಸೋತಿರುವುದು ಬಿಜೆಪಿ

 

ಚುನಾವಣೆಯಲ್ಲಿ ಸೋತಿರುವುದು ಬಿಜೆಪಿ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದು ಈ ಬಾರಿ 240 ಸ್ಥಾನಗಳನ್ನು ಪಡೆದು ಬಿಜೆಪಿ ಸೋತಿದೆ ಎಂದರು. ಕಳೆದ ಬಾರಿ 31% ಈ ಬಾರಿ 41% ಮತ ಹಂಚಿಕೆಯಾಗಿದೆ. 15 ಸ್ಥಾನ ಬರಬಹುದೆಂಬ ನಿರೀಕ್ಷೆಯಿತ್ತು. ನಾವು ಸೋತಿದ್ದೇವೆಯೇ ಎಂದರು. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಕಡಿಮೆ ಮತ ಬಂದಿದೆ, ಮೋದಿ ಅಲೆ ಕಡಿಮೆಯಾಗಿದೆ ಎಂದರು.

ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ
ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. 11.4.2021ರಂದು ಪೆಟ್ರೋಲ್ ಮೇಲೆ 35% ತೆರಿಗೆ ಹಾಗೂ ಡೀಸೆಲ್ ಮೇಲೆ 24% ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92 ಕ್ಕೆ ನಂತರ ಇಳಿಸಿದರು.

 

ಡೀಸಲ್ ಮೇಲೆ 14.34ಕ್ಕೆ ಇಳಿಸಿದರು. ಶೇ7 ರೂಪಾಯಿಯಷ್ಟು ಕಡಿಮೆ ಮಾಡಿದರು. ಏಕೆಂದರೆ ಕೇರಳ ಆಗಲಿ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಕಡಿಮೆ ಮಾಡಲಿಲ್ಲ. ಈಗ ಕರ್ನಾಟಕದಲ್ಲಿ 99.85 ರೂ ಪೆಟ್ರೋಲ್ ಬೆಲೆಯಿದೆ. ನಿನ್ನೆಯಿಂದ ಮೂರು ರೂಪಾಯಿ ಹೆಚ್ಚು ಮಾಡಿದ್ದೇವೆ. 102 ರೂ ಗೆ ಹೆಚ್ಚಾಗಿದೆ. ಇದು ತಮಿಳುನಾಡಿಗೆ ಸಮವಾಗಿದೆ. ಕೇರಳದ ಕಾಸರಗೋಡಿನಲ್ಲಿ 106.66 ರೂ.ಗಳಿದೆ. ಆಂಧ್ರದ ಅನಂತಪುರದಲ್ಲಿ 109.44 , ತೆಲಂಗಾಣದ ಹೈದರಾಬಾದ್ ನಲ್ಲಿ 107.40 ಹಾಗೂ ಮಹಾರಾಷ್ಟ್ರದಲ್ಲಿ 104.46 ರೂ.ಇದೆ. ಇವೆಲ್ಲಕ್ಕೆ ಹೋಲಿಸಿದರೆ ನಮ್ಮ ದರ ಕಡಿಮೆ ಇದೆ ಎಂದರು.

ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಕರ್ನಾಟಕದ ಇತಿಹಾಸದಲ್ಲಿ ಪೆಟ್ರೋಲ್ ಬೆಲೆ ಇಷ್ಟು ದುಬಾರಿಯಾಗಿರಲಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಹಿಂದೆ ಇದ್ದಾಗ ಶೇ 35% ಇತ್ತು. ಬಿಜೆಪಿ ಸರ್ಕಾರ ಇರುವ ರಾಜಸ್ಥಾನದಲ್ಲಿ 104.86 ರೂ.ಗಳಿದೆ ಹಾಗೂ ಮಧ್ಯಪ್ರದೇಶದಲ್ಲಿ 106.47 ರೂ
ಗಳಿದೆ. ಕರ್ನಾಟದಲ್ಲಿ ಈ ರಾಜ್ಯಗಳಿಗಿಂತ ಕಡಿಮೆ ಇದೆ. ಪಕ್ಕದ ರಾಜ್ಯಗಳಿಗೆ ಸಮವಾಹಿರಲಿ ಎಂಬ ಕಾರಣಕ್ಕೆ ಬೆಲೆ ಏರಿಕೆ ಮಾಡಿರಲಿಲ್ಲ. ಚುನಾವಣೆಯ ನಂತರ ತಲೆಬದ್ಧಗೊಳಿಸಲು ಏರಿಕೆ ಮಾಡಿದ್ದೇವೆ. ಇತರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಿದೆ ಎಂದರು.

ಅನುದಾನ ನೀಡಲಾಗಿದೆ
ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ನಲ್ಲಿ ಕೆಲವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅನುದಾನವನ್ನು ನೀಡಲಾಗಿದೆ ಎಂದರು.

ಗ್ಯಾರಂಟಿಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಿದೆ ಚುನಾವಣೆಗಾಗಿ ಅಲ್ಲ
ಸಾರ್ವಜನಿಕರಲ್ಲಿ ಗ್ಯಾರಂಟಿ ಗಳನ್ನು ನಿಲ್ಲಿಸುತ್ತಾರೆ ಎಂಬ ಗಾಳಿಸುದ್ದಿ ಎದ್ದಿರುವ ಬಗ್ಗೆ ಮಾತನಾಡಿ ಗ್ಯಾರಂಟಿಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಿದೆ ಚುನಾವಣೆಗಾಗಿ ಅಲ್ಲ ಎಂದರು.

Continue Reading

State

ನೀಟ್: ಮರುಪರೀಕ್ಷೆಗೆ ಹಾಗೂ ತನಿಖೆಗೆ ಸಿಎಂ ಆಗ್ರಹ

Published

on

ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ : ಸಿಎಂ ಸಿದ್ದರಾಮಯ್ಯ

ಮೈಸೂರು, ಜೂನ್ 15: ನೀಟ್ ಪರೀಕ್ಷೆಯಲ್ಲಿ ಕೆಲವು ರ್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರುಪರೀಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ
ಎನ್ . ಟಿ .ಎ ಪರೀಕ್ಷೆಯನ್ನು ಸರಿಯಾಗಿ ಮಾಡದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ ಎಂದರು.ಬರಪರಿಹಾರದ ಬಾಕಿ ಮೊತ್ತವನ್ನು ರೈತರಿಗೆ ವಿತರಿಸಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ
ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಏನು ಮಾಡಿದರೂ ದಕ್ಷಿಣ ಭಾರತದಲ್ಲಿ ಏನು ಮಾಡಿದರು ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಆರ್.ಎಸ್.ಎಸ್ ನಾ ರಾಜಕೀಯ ಮುಖವಾಡ ಅದು ಹಾಗಾಗಿ ಉತ್ತರ ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆರ್.ಎಸ್.ಎಸ್ ನ ಮುಖ್ಯಸ್ಥರು ಅಹಂಕಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ ಎಂದರು.

ರಾಯ್ ಎಂಬುವರಿಗೆ 2010 ರ್ಯಾಲಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬಂಧಿಸಲು ಆದೇಶ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯದ್ದು ದ್ವೇಷದ ರಾಜಕಾರಣ. ಹೆದರಿಸುವುದು ಬೆದರಿಸುವುದು, ಇಡಿ, ಸಿಬಿಐ ಬಳಕೆ ಮಾಡುವುದನ್ನು ಮೊದಲಿನಿಂದಲೂ ಮಾಡಿಕೊಂಡು ಬರುತ್ತಿದ್ದಾರೆ. ಅದಕ್ಕಾಗಿ ಜನ ಈ ಬಾರಿ ಅವರಿಗೆ ಬಹುಮತ ಕೊಡಲಿಲ್ಲ ಎಂದರು.

ದ್ವೇಷದ ರಾಜಕಾರಣ ಬಿಜೆಪಿ ಕೆಲಸ
ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಮ್ಮ ಮೇಲೆ, ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು ಎಂದು ಪ್ರಶ್ನಿಸಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು. ದ್ವೇಷದ ರಾಜಕಾರಣವೂ ಇಲ್ಲ ಪ್ರೀತಿಯ ರಾಜಕ್ಕಾರಣ ಎಂದು ಕರೆಯಬೇಕೋ. ಸೇಡಿನ ರಾಜಕಾರಣ ಮಾಡುವುದು ಅವರು ನಾವು ಯಾವತ್ತೂ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದರು.

ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ
ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ಅದು ಬಿಜೆಪಿಯವರ ಕೆಲಸ ಎಂದರು.

ಎಸ್.ಸಿ.ಎಸ್.ಟಿ ವಿದ್ಯಾರ್ಥಿವೇತಬದ ಸೀಲಿಂಗ್ ಬಗ್ಗೆ ಚರ್ಚೆ
ಎಸ್.ಸಿ.ಎಸ್.ಟಿ ಮೆರಿಟ್ ವಿದ್ಯಾರ್ಥಿವೇತನವನ್ನು ಶೇ. 60ರಿಂದ ಶೇ 75 ಕ್ಕೆ ಏರಿಸಿದ್ದು, 6 ಲಕ್ಷ ಸೀಲಿಂಗ್ ಲಿಮಿಟ್ ನಿಗದಿಪಡಿಸಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನ ಶುಲ್ಕ ಶೇ.10%ರಷ್ಟು ಹೆಚ್ಚಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನನಗೆ ಗೊತ್ತಿಲ್ಲ ವಿಚಾರ ಮಾಡುವುದಾಗಿ ತಿಳಿಸಿದರು.

ಶೀರ್ಘದಲ್ಲಿ ಜಿ.ಪಂ/ ತಾ.ಪಂ ಚುನಾವಣೆ
ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗಳ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣೆಯನ್ನು ಆದಷ್ಟೂ ಶೀಘ್ರದಲ್ಲಿ ಮಾಡುತ್ತೇವೆ ಎಂದರು.

Continue Reading

State

35 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಕರ್ನಾಟಕ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್*

Published

on

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ಇತ್ತೀಚೆಗೆ ಅನುಮೋದನೆ ನೀಡಿದೆ. ರಾಜ್ಯದ ಸುಮಾರು 49,679 ಸರ್ಕಾರಿ ಶಾಲೆಗಳಲ್ಲಿ (Government Schools) ಖಾಲಿ ಇರುವ ಹುದ್ದೆಗಳ ನೇಮಕಾತಿ ಬಹಳ ಸಮಯದಿಂದ ಬಾಕಿ ಉಳಿದಿತ್ತು. ಹೊಸ ಶೈಕ್ಷಣಿಕ ವರ್ಷವು ಈಗಾಗಲೇ ಜೂನ್ ಮೊದಲ ವಾರದಲ್ಲಿ ಪ್ರಾರಂಭವಾಗಿದ್ದರೂ, 2024-25 ಕ್ಕೆ ಈ ಖಾಲಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲು ಸರ್ಕಾರ ಉದ್ದೇಶಿಸಿದೆ ಎಂದು ವರದಿಯಾಗಿದೆ.


ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ, ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿ ಇಲ್ಲಿಯವರೆಗೆ ಭರದಿಂದ ಸಾಗಿದೆ. ನೇಮಕ ಪ್ರಕ್ರಿಯೆಯನ್ನು ವೇಗಗೊಳಿಸಲು ಶಾಲಾ ಮಟ್ಟದಲ್ಲಿ ವ್ಯಕ್ತಿಯೊಬ್ಬರನ್ನು ನೇಮಕ ಮಾಡಿಕೊಳ್ಳುವಂತೆ ಇಲಾಖೆಯು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದೆ.

ಹೆಚ್ಚಾಗಿ ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್ ಅನ್ನು ನಿಭಾಯಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವುದರಿಂದ ಆ ವಿಷಯಗಳ ಶಿಕ್ಷಕರನ್ನೇ ಹೆಚ್ಚು ನೇಮಕ ಮಾಡಿಕೊಳ್ಳುವಂತೆ ಮುಖ್ಯ ಶಿಕ್ಷಕರಿಗೆ ಸೂಚಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿ ಬಿಬಿ ಕಾವೇರಿ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್​ನಲ್ಲಿ ವಿದ್ಯಾರ್ಥಿಗಳು ಕಡಿಮೆ ಸಾಧನೆ ಮಾಡುವುದು ಕಂಡುಬಂದಿದೆ. ಈ ವಿಷಯಗಳಲ್ಲೇ ಹೆಚ್ಚಿನ ವೈಫಲ್ಯಗಳನ್ನು ಕಾಣುತ್ತಿದ್ದೇವೆ. ಹೀಗಾಗಿ ಈ ವಿಷಯಗಳ ಶಿಕ್ಷಕರ ನೇಮಕಕ್ಕೆ ಒತ್ತು ನೀಡಲು ಸೂಚಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ವಿವಿಧ ವಿಷಯಗಳ ಖಾಲಿ ಹುದ್ದೆಗಳು ತಾಲೂಕಿನಿಂದ ತಾಲೂಕಿಗೆ ಬದಲಾಗುತ್ತವೆ ಮತ್ತು ಸಾರ್ವಜನಿಕ ಶಿಕ್ಷಣದ ಉಪ ನಿರ್ದೇಶಕರು (ಡಿಡಿಪಿಐಗಳು) ನೇಮಕಾತಿಗೆ ಜವಾಬ್ದಾರರಾಗಿರುತ್ತಾರೆ ಎಂದು ಅವರು ಹೇಳಿದ್ದಾರೆ.

ಮಂಜೂರಾದ ಎಲ್ಲ ಅತಿಥಿ ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಆಯುಕ್ತರು ಭರವಸೆ ನೀಡಿದ್ದಾರೆ. ಮುಖ್ಯ ಶಿಕ್ಷಕರು ವಿಷಯಗಳ ಅರ್ಹತೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳುತ್ತಾರೆ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಗೌರವಧನವನ್ನು ಮಾಸಿಕ 10,000 ರೂ. ಮತ್ತು ಪ್ರೌಢಶಾಲೆಗಳಿಗೆ 10,500 ರೂ. ನಿಗದಿಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಶಿಕ್ಷಕರ ಮೇಲಿನ ಹೊರೆ ಇಳಿಸುವ ಸರ್ಕಾರದ ಕ್ರಮ ಸ್ವಾಗತಾರ್ಹವಾದರೂ ಖಾಯಂ ಅಧ್ಯಾಪಕರ ನೇಮಕಕ್ಕೆ ಇಲಾಖೆ ಗಮನಹರಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ ನಾಗೇಶ್ ಆಗ್ರಹಿಸಿದ್ದಾರೆ.

Continue Reading

Trending

error: Content is protected !!