Connect with us

Mysore

ನಂಜನಗೂಡು ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ಶಾಸಕರಾದ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ

Published

on

ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ ನೆರವೇರಿಸಿದ್ದಾರೆ.

ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 1.58 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಹಾಗೂ 16 ಲಕ್ಷ ರೂ. ವೆಚ್ಚದಲ್ಲಿ 3ನೇ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹೈಟೆಕ್ ಪ್ರಯೋಗಾಲಯ, ಕೊಠಡಿಗಳ ನಿರ್ಮಾಣ ಹಾಗೂ ಶೌಚಾಲಯ ಸೇರಿದಂತೆ ನೂತನ ಸುಸಜ್ಜಿತವಾದ ಕಟ್ಟಡ ನಿರ್ಮಾಣ ಮಾಡಲಾಗುವುದು. ಹೈಟೆಕ್ ಅಂಗನವಾಡಿ ಕೇಂದ್ರವನ್ನು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಆದಷ್ಟು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕು. ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.

ಪ್ರಾಥಮಿಕ ಆರೋಗ್ಯಕ್ಕೆ ಕೇಂದ್ರಕ್ಕೆ ಭೇಟಿ: ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ದೊಡ್ಡ ಕವಲಂದೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ದಿಢೀರ್ ಭೇಟಿ ನೀಡಿದರು.
ಆಸ್ಪತ್ರೆಯಲ್ಲಿರುವ ಸಮಸ್ಯೆಗಳನ್ನು ಆಲಿಸಿರುವ ಶಾಸಕರು ಹೋಬಳಿ ಕೇಂದ್ರವಾಗಿರುವುದರಿಂದ ಈ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಮತ್ತು ಹೆರಿಗೆ ಮತ್ತು ಆಂಬುಲೆನ್ಸ್ ಸೌಲಭ್ಯವನ್ನು ಕಲ್ಪಿಸಲು ಆರೋಗ್ಯ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಆರ್. ಸಿದ್ದರಾಜು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುಳಾ, ಗ್ರಾ.ಪಂ ಅಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷ ಪ್ರಶಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್, ಗ್ರಾ‌.ಪಂ ಸದಸ್ಯರಾದ ನಸ್ರುಲ್ಲಾ ಖಾನ್, ಅಜಮುಲ್ಲಾ ಖಾನ್, ಮಂಜುನಾಥ್, ನವೀನ್, ಸಿದ್ದಲಿಂಗಪ್ಪ, ಮಾದಶೆಟ್ಟಿ, ಸುಮ, ಮಂಜುಳಾ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ನಾಜೀಮ್ ಉಲ್ಲಾ ಖಾನ್, ಪಿಡಿಒ ನಿರ್ಮಲಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading
Click to comment

Leave a Reply

Your email address will not be published. Required fields are marked *

Mysore

ಭೈರತಿ ಸುರೇಶ್ ಕುಟುಂಬ ಸಮೇತ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ

Published

on

ನಂಜನಗೂಡು ಸೆ.08

ದಕ್ಷಿಣ ಕಾಶಿ ಎಂದು ಹೆಸರುವಾಸಿಯಾಗಿರುವ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಕುಟುಂಬ ಸಮೇತ ನಂಜನಗೂಡಿಗೆ ಭೇಟಿ ನೀಡಿ ಶ್ರೀ ನಂಜುಂಡೇಶ್ವರ ಸ್ವಾಮಿ ದೇವರ ದರ್ಶನ ಪಡೆದರು.

ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.

ದೇವಾಲಯದ ಸುತ್ತಲೂ ಪ್ರದಕ್ಷಣೆ ಹಾಕಿ, ನಂಜುಂಡೇಶ್ವರ, ಗಣಪತಿ, ಸುಬ್ರಮಣ್ಯ, ಚಂಡಿಕೇಶ್ವರ, ಪಾರ್ವತಮ್ಮ, ನಾರಾಯಣಸ್ವಾಮಿ‌ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ಪುನೀತರಾದರು.

ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿ ಪ್ರತಿ ವರ್ಷವೂ ಶ್ರೀ ಚಾಮುಂಡೇಶ್ವರಿ ದೇವಾಲಯ ಮತ್ತು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸುವುದು ನಮ್ಮ ಕುಟುಂಬದ ವಾಡಿಕೆಯಾಗಿದೆ. ಅದರಂತೆ ಇದು ಮನೆದೇವರಾದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಆಗಮಿಸಿ ದರ್ಶನ ಪಡೆದಿದ್ದೇವೆ ಎಂದು ಸಚಿವ ಭೈರತಿ ಸುರೇಶ್ ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ನಗರಸಭೆ ಆಯುಕ್ತರು ನಂಜುಂಡಸ್ವಾಮಿ, ದೇವಸ್ಥಾನದ ಕಾರ್ಯನಿರ್ವಾಹಕಧಿಕಾರಿ ಜಗದೀಶ್, ಸೇರಿದಂತೆ ಇದ್ದರು.

Continue Reading

Mysore

ಶೋಷಿತ ಸಮುದಾಯಗಳ ಪರ ನಮ್ಮ ಸರ್ಕಾರ ಇರಲಿದೆ: ಡಾ.ಎಚ್.ಸಿ.ಮಹದೇವಪ್ಪ

Published

on

ಮೈಸೂರು: ಶೋಷಿತ ಸಮುದಾಯದ ಏಳಿಗೆಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ನಮ್ಮ ಸರ್ಕಾರದಿಂದ ಒದಗಿಸಲಾಗುವುದು. ಸಾಮಾಜಿಕ ಮತ್ತು ಆರ್ಥಿಕ ಸಬಲತೆಗಾಗಿ ಸರ್ಕಾರವು ಸಮುದಾಯದ ಪರ ಸದಾ ಇರಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಭರವಸೆ ನೀಡಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾನುವಾರ ಕಲಾಮಂದಿರಲ್ಲಿ ಆಯೋಜಿಸಿದ್ದ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ನುಲಿಯ ಚಂದಯ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಚಿವರು ಮಾತನಾಡಿದರು.

ಸಮಾನತೆ ಹಾಗೂ ಸಮಾನ ಅವಕಾಶಗಳು ಸಂವಿಧಾನದ ಆಶಯವಾಗಿದೆ. ಅದನ್ನು ಸಾಕಾರಗೊಳಿಸುವುದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಅವಕಾಶ ವಂಚಿತರಿಗೆ ಅವಕಾಶ ಕಲ್ಪಿಸಿ, ತುಳಿತಕ್ಕೊಳಗಾದ ಸಮುದಾಯಗಳನ್ನು ಮೇಲೆತ್ತುವುದೇ ನಮ್ಮ ಸರ್ಕಾರದ ಪ್ರಮುಖ ಆಶಯವಾಗಿದೆ ಎಂದು ಹೇಳಿದರು.

ಹನ್ನೆರಡೇ ಶತಮಾನದ ಶರಣ ಚಳವಳಿಯನ್ನು ನೆನಪಿಸಿಕೊಳ್ಳುವ ಕಾರ್ಯಕ್ರಮ ಇದಾಗಿದೆ. ಸಾಮಾಜಿಕ ಪಿಡುಗು ಮತ್ತು ಮೌಢ್ಯಗಳನ್ನು ಪ್ರತಿಪಾದನೆ ಮಾಡುತ್ತ ವೈದಿಕಶಾಹಿಗಳು ಶ್ರಮಜೀವನಕ್ಕೆ ಒಗ್ಗದೆ ಕಾಯಕ ಸಮುದಾಯಗಳಲ್ಲಿ ಮೂಢನಂಬಿಕೆ ಬಿತ್ತು, ಅನೇಕ ಸಂಪ್ರದಾಯಗಳನ್ನು ಹೇರಿದರು. ಇದರ ವಿರುದ್ಧ ಬಸವಣ್ಣನವರು ಹೋರಾಟ ನಡೆಸಿದರು ಎಂದರು.

ಮೂಲಭೂತವಾದ ಮತ್ತು ಮೂಢನಂಬಿಕೆ ವಿರುದ್ಧ ಚಳವಳಿಯನ್ನು ಹುಟ್ಟುಹಾಕಿದ ಬಸವಣ್ಣನ ಸಮಕಾಲಿನವರಾದ ನುಲಿಯ ಚಂದಯ್ಯ ಅವರು ಶ್ರಮ ಹಾಗೂ ಕಾಯಕ ಸಂಸ್ಕೃತಿಯನ್ನು ನಂಬಿದವರು. ಸದಾ ಕಾಯಕ ಮತ್ತು ದಾಸೋಹ ಪರಿಕಲ್ಪನೆಯಲ್ಲಿ ತನ್ಮಯರಾಗಿದ್ದರು. ಸಮಸಮಾಜದ ನಿರ್ಮಾಣ ಮಾಡಲು ಸಾಮಾಜಿಕ ಪಿಡುಗು ಹಾಗೂ ಮೂಢನಂಬಿಕೆ ವಿರುದ್ಧ ಜನರಿಗೆ ಅರಿವು ಮೂಡಿಸಿದರು ಎಂದು ಹೇಳಿದರು.

ಭಾರತವು ಅನೇಕ ಧರ್ಮ, ಭಾಷೆ, ವೈವಿಧ್ಯವಾದ ಆಚಾರ ವಿಚಾರದ ನಡುವೆ ಏಕತೆಯನ್ನು ಕಾಣುತ್ತಾ ಬಂದಿದೆ. ಈ ದೇಶದ ಮೂಲನಿವಾಸಿಗಳು ದಲಿತರು‌. ಈ ಸಮುದಾಯದ ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಅಭಿವೃದ್ಧಿಗೆ ಸಂವಿಧಾನವಿದೆ. ಇದರೊಂದಿಗೆ ಅನುಭವ ಮಂಟಪದ ವಿಚಾರದ ಅಡಿಯಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕುಂದೂರು ಮಠದ ಪೀಠಾಧಿಪತಿ ಶ್ರೀ ಶರತ್ ಚಂದ್ರ ಸ್ವಾಮೀಜಿ , ಸಾಲೂರು ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಸಾನಿಧ್ಯ ವಹಿಸಿದ್ದರು. ಶಾಸಕ ಹರೀಶ್ ಗೌಡ, ಮಾಜಿ ಶಾಸಕ ಜಿ.ಚಂದ್ರಣ್ಣ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಎಕೆಎಂಎಸ್ ಜಂಟಿ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ, ರಾಜ್ಯ ಉಪಾಧ್ಯಕ್ಷೆ ಭೀಮಪುತ್ರಿ ನಾಗಮ್ಮ, ಕೃಷ್ಣದೇವರಾಯ ವಿ.ವಿ. ಕುಲಪತಿ ಎನ್.ಮುನಿರಾಜು, ನಿವೃತ್ತ ಜಿಲ್ಲಾಧಿಕಾರಿ ಎಸ್.ಟಿ.ಅಂಜನ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್, ಪತ್ರಕರ್ತ ಮೋಹನ್ ಕಾಯಕ ಉಪಸ್ಥಿತರಿದ್ದರು.

Continue Reading

Mysore

ಮುಡಾ ಮಾಜಿ ಅಧ್ಯಕ್ಷ ಎಚ್. ವಿ.ರಾಜೀವ್ ವಿರುದ್ಧ ಶಾಸಕ ಶ್ರೀವತ್ಸ ವಾಗ್ದಾಳಿ

Published

on

ಮೈಸೂರು:
ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ.
ಒಂದೇ ದಿನದಲ್ಲಿ 848 ನಿವೇಶನ ಬಿಡುಗಡೆ ಮಾಡಿಸಿಕೊಂಡ ಪ್ರಕರಣ.
ಮುಡಾ ಮಾಜಿ ಅಧ್ಯಕ್ಷ ಎಚ್. ವಿ.ರಾಜೀವ್ ವಿರುದ್ಧ ಶಾಸಕ ಶ್ರೀವತ್ಸ ವಾಗ್ದಾಳಿ.
ಇಂತಹ ಹಗರಣಗಳಿಂದ ತಮ್ಮನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ರಾಜೀವ್ ಕಾಂಗ್ರೆಸ್ ಸೇರಿದ್ದಾರೆ.
ಇಲ್ಲದಿದ್ದರೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಪಕ್ಷ ಬಿಡಬಹುದಿತ್ತು.
ಸರ್ಕಾರ ಬದಲಾದ ಕಾರಣಕ್ಕೆ ತಮ್ಮ ರಕ್ಷಣೆಗೆ ರಾಜೀವ್ ಕಾಂಗ್ರೆಸ್ ಸೇರಿದ್ದಾರೆ.


ಜ್ಞಾನಗಂಗಾ ಹೌಸಿಂಗ್ ಸೊಸೈಟಿ ಅಧ್ಯಕ್ಷ ರಾಜೀವ್, ಮುಡಾ ಅಧ್ಯಕ್ಷ ಆದ ಸಂದರ್ಭದಲ್ಲಿ ಈ ನಿವೇಶನಗಳನ್ನು ಬಿಡುಗಡೆ ಮಾಡಿಸಿಕೊಂಡಿದ್ದಾರೆ.
ಬಡಾವಣೆ ಕಾಮಗಾರಿ ಸಂಪೂರ್ಣ ಆಗದಿರುವುದು, ಸ್ಥಳೀಯ ಸಂಸ್ಥೆಗಳಿಂದ ಎನ್‌ಒಸಿ ಪಡೆಯದೆ ನಿವೇಶನ ಬಿಡುಗಡೆ ಮಾಡಿಸಿಕೊಂಡಿರುವುದು ಅಕ್ರಮ.
ಇದರ ಬಗ್ಗೆ ಅಂದಿನ ಆಯುಕ್ತರೇ 2022ರಲ್ಲಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಇಲ್ಲಿ ಆಯುಕ್ತ ಕೇವಲ ಪತ್ರ ಬರೆದು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಕೆಲಸ ಮಾಡಿದ್ದಾರೆ.
ಎರಡು ವರ್ಷ ಆದರೂ ಸರ್ಕಾರ ಯಾವುದೇ ಕ್ರಮ ವಹಿಸಿಲ್ಲ.
ಈಗಲಾದರೂ ತಪಿತಸ್ಥರ ವಿರುದ್ಧ ಕ್ರಮ ವಹಿಸಬೇಕು ಎಂಬುದು ನಮ್ಮ ವಾದ ಎಂದು ಶ್ರೀವತ್ಸ ಹೇಳಿದರು.

Continue Reading

Trending

error: Content is protected !!