Mysore
ನಂಜನಗೂಡು ತಾಲ್ಲೂಕಿನ ಕೂಗಲೂರು ಗ್ರಾಮದಲ್ಲಿ ಕೆರೆಯಲ್ಲಿ ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಕುರಿಗಳ ಸಾವು
ಕೆರೆಯಲ್ಲಿ ಕಲುಷಿತ ನೀರು ಕುಡಿದು ಐವತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೂಗಲೂರು ಗ್ರಾಮದಲ್ಲಿ ನಡೆದಿದೆ.
ಶಿರಾ ತಾಲ್ಲೂಕಿನ ಬಾಣಗೆರೆ ಗ್ರಾಮದ ರಂಗಸ್ವಾಮಿ ಎಂಬುವರು ನಾನೂರಕ್ಕೂ ಹೆಚ್ಚು ಕುರಿಗಳನ್ನು ಗ್ರಾಮದಲ್ಲಿ ಮೇಯಿಸುತ್ತಿದ್ದರು.

ಇಂದು ಬೆಳಿಗ್ಗೆ ಕೂಗಲೂರು ಗ್ರಾಮದ ಕೆರೆಯಲ್ಲಿ ನೀರು ಕುಡಿಸಿಕೊಂಡು ಮೇಯಿಸಲು ಹೋದ ಸಂದರ್ಭದಲ್ಲಿ ಐವತ್ತಕ್ಕೂ ಹೆಚ್ಚು ಕುರಿಗಳು ಅಸ್ವಸ್ಥಗೊಂಡು ಸಾವನ್ನಪ್ಪಿವೆ. ಕೆರೆಯ ನೀರಿನಲ್ಲಿ ಕ್ರಿಮಿನಾಶಕ ಮಿಶ್ರಣ ವಾಗಿರುವುದರಿಂದ ಕೆರೆ ನೀರು ಕಲುಷಿತವಾಗಿರಬಹುದು ಎಂಬುದು ಶಂಕೆ ವ್ಯಕ್ತವಾಗಿದೆ. ಕುರಿಗಳನ್ನು ನಂಬಿಕೊಂಡು ಜೀವನ ಸಾಗಿಸುತ್ತೇವೆ. ಇಷ್ಟೊಂದು ಕುರಿಗಳು ಸಾವನ್ನಪ್ಪಿರುವುದರಿಂದ ನಮಗೆ ತುಂಬಲಾರದ ನಷ್ಟ ಉಂಟಾಗಿದೆ. ಅಧಿಕಾರಿಗಳು ಯಾರು ಕೂಡ ಬಂದು ನಮ್ಮ ಸಮಸ್ಯೆಯನ್ನು ಕೇಳಿಲ್ಲ. ಸರ್ಕಾರ ಕೂಡಲೇ ಪರಿಹಾರವನ್ನು ನೀಡಬೇಕು ಎಂದು ಕುರಿಗಾಹಿ ರಂಗಸ್ವಾಮಿ ಒತ್ತಾಯಿಸಿದ್ದಾರೆ.
Mysore
ಕಲೆ, ಸಂಸ್ಕೃತಿ ಮೈಗೂಡಿಸಿಕೊಳ್ಳಿ: ಬಿ. ರಂಗೇಗೌಡ
ಮೈಸೂರು: ಕಲೆ ಎಲ್ಲರಿಗೂ ಒಲಿದು ಬರುವುದಿಲ್ಲ. ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಡುವ ಶಕ್ತಿ ಕಲೆಗೆ ಇದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ. ರಂಗೇಗೌಡ ಹೇಳಿದರು.
ಜಿಲ್ಲಾಡಳಿತ , ಕನ್ನಡ ಮತ್ತು ಸಂಸ್ಕೃತ ಇಲಾಖೆ, ಮೈಸೂರು ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿದ್ಯಾರ್ಥಿಗಳ ನಿಲಯಗಳ ವಿದ್ಯಾರ್ಥಿಗಳಿಗೆ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಕಲಾ ತರಬೇತಿ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸಂಗೀತ ನಾಟಕ, ಕ್ರೀಡೆ ಮುಂತಾದವುಗಳಿಗೆ ಜಾತಿ, ಭೇದ ಇಲ್ಲ. ಧರ್ಮಾತೀತವಾಗಿ ಎಲ್ಲವನ್ನು ಮೀರಿ ಬೆಳೆದು ಬಂದಿರುವoತದ್ದು. ಓದುವ ಜತೆಯಲ್ಲಿ ಕಲೆಯನ್ನು ಮೈಗೂಡಿಸಿಕೊಳ್ಳಿ. ಬಾಲ್ಯದಿಂದ ಪ್ರೌಢ ವ್ಯವಸ್ಥೆಗೆ ಬರುವ ಮಕ್ಕಳು ಮನಸ್ಸನ್ನು ಬೇರೆ ಕಡೆ ಚಂಚಲಗೊಳಿಸದೆ ಓದಿನ ಕಡೆ ಕೇಂದ್ರೀಕರಿಸಬೇಕು. ಯಾವುದೇ ಆಕರ್ಷಣೆಗೆ ಒಳಗಾಗಬೇಡಿ. ಒಳ್ಳೆಯ ಸಂಸ್ಕಾರ, ಸಂಸ್ಕೃತಿಯನ್ನು ಪ್ರತಿಯೊಂದು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ಹೇಳಿದರು.
ತರಬೇತುದಾರ ದೇವಾನಂದ ವರಪ್ರಸಾದ್ ಮಾತನಾಡಿ, ಜಾನಪದ ಕಲೆಯು ಒಬ್ಬರಿಂದ ಒಬ್ಬರು ಕೇಳಿ ಹಾಡುವುದರ ಮೂಲಕ ಬೆಳೆದು ಬಂದಿದೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕಲೆಯ ಬಗ್ಗೆ ತರಬೇತಿ ನೀಡಲು ಇಲಾಖೆಗಳು ಉತ್ತಮ ಕಾರ್ಯಕ್ರಮ ಆಯೋಜಿಸಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಹಾಸ್ಟಲ್ ವಿದ್ಯಾರ್ಥಿಗಳಿಗೆ ಸರಿಯಾದ ತರಬೇತಿ ಸಿಕ್ಕರೆ ಮಕ್ಕಳು ಮುಂದೆ ಬೆಳೆಯುತ್ತಾರೆ. ಕಲಾ ತರಬೇತಿಯಂತಹ ಕಾರ್ಯಕ್ರಮಗಳನ್ನು ಸದುಪಯೋಗ ಮಾಡಿಕೊಂಡರೆ ಜೀವನದಲ್ಲಿ ಮುಂದೆ ಬರಲು ಸಹಾಯಕ ಆಗಲಿದೆ ಕಲೆಗಳನ್ನು ಕಲಿತಾಗ ತನ್ನಲ್ಲಿನ ಚೈತನ್ಯ ಹೊರ ಬರುತ್ತದೆ ಎಂದು ಹೇಳಿದರು.
ತರಬೇತಿ ಪಡೆದ ವಿದ್ಯಾರ್ಥಿನಿ ಸಾಕ್ಷಿ ಮಾತನಾಡಿ ಕಲೆ ಬಗ್ಗೆ ಹೆಚ್ಚಿನ ಮತ್ತು ಸಂಸ್ಕೃತಿ ಬಗ್ಗೆ ನಮಗೆ ಯಾವುದೇ ಜ್ಞಾನ ಇರಲಿಲ್ಲ ನೃತ್ಯ, ಸಂಗೀತ, ವೀರಗಾಸೆ ಬಗ್ಗೆ ತರಬೇತಿ ನೀಡಿದ್ದರೆ ಎಂದರು. ಸಮಾಜದಲ್ಲಿ ಶಿಸ್ತಿನಿಂದ ಹೇಗಿರಬೇಕು. ಹೇಗೆ ವರ್ತಿಸಬೇಕು ಎಂದು ತಿಳಿಸಿಕೊಟ್ಟಿದ್ದಾರೆ. ಧೈರ್ಯ ತುಂಬಿ ವೇದಿಕೆಯ ಮೇಲೆ ಪ್ರದರ್ಶನ ನೀಡುವಂತೆ ತರಬೇತಿ ನೀಡಿದ್ದಾರೆ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್, ನಿಲಯ ಪಾಲಕಿ ಮೋಹನ ಕುಮಾರಿ ಕೆ. ಎಸ್. ಉಪಸ್ಥಿತರಿದ್ದರು.
Mysore
ನಾಳೆ ಶನಿವಾರಸಂತೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ
ಮಡಿಕೇರಿ : 66/11 ಕೆ.ವಿ. ಶನಿವಾರಸಂತೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನಾಲ್ಕನೆ ತ್ರೈಮಾಸಿಕ ಅವಧೀಯ ನಿರ್ವಾಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಈ ಉಪ ಕೇಂದ್ರದಿಂದ ಹೊರಹೊಮ್ಮುವ ಪೂರಕಗಳಲ್ಲಿ ಫೆ. 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶನಿವಾರಸಂತೆ ಶಾಖೆಯ ಶನಿವಾರಸಂತೆ ಪಟ್ಟಣ, ಅಪ್ಪ್ಡಶೆಟ್ಟಳ್ಳಿ, ಮಾದ್ರೆ, ಚಿಕ್ಕ ಕೊಳತ್ತೂರು, ದುಂಡಳ್ಳಿ, ಬೆಂಬಳೂರು, ಬಿಳಹ, ಹಂಡ್ಲಿ, ಕಿತ್ತೂರು, ಸಂಪಿಗೆದಳ, ಮಾದ್ರದಳ್ಳಿ, ಮಣಗಲಿ, ಗೌಡಳ್ಳಿ, ಬೀಟಿಕಟ್ಟೆ, ಶುಂಠಿ, ಶಾಂತ್ವೇರಿ, ಬಸವನಕೊಪ್ಪ, ಮುಳ್ಳೂರು, ಗೋಪಾಲಪುರ, ಜಾಗೇನಹಳ್ಳಿ, ನಿಡ್ತ, ಚೌಡೇನಹಳ್ಳಿ, ದೊಡ್ಡಳ್ಳಿ, ಹರೆಹೊಸೂರು, ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಸೂರು ಪಂಚಾಯಿತಿ, ನೀರುಗುಂದ, ನಿಲುವಾಗಿಲು, ದೊಡ್ಡಭಂಡಾರ, ಬ್ಯಾಡಗೊಟ್ಟ, ಕೊಡ್ಲಿಪೇಟೆ ಟೌನ್, ಅವರದಾಳು, ಬೆಂಬಳೂರು, ದೊಡ್ಡಕೊಡ್ಲಿ, ಕ್ಯಾತೆ, ದೊಡ್ಡಕುಂದಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.
Mysore
ಒಳ ಮೀಸಲಾತಿ ಕಾರ್ಯ ಚಟುವಟಿಕೆಗಳಿಗೆ ಬ್ರೇಕ್ ಹಾಕಿ : ನಂಜನಗೂಡಿನಲ್ಲಿ ಜನ ಸಂಗ್ರಾಮ ಪರಿಷತ್ ಒತ್ತಾಯ
ನಂಜನಗೂಡು: ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಒಳ ಮೀಸಲಾತಿ ವರದಿಯ ಸಮಸ್ಯೆಯೂ ಪೂರ್ಣವಾಗಿ ಬಗೆಹರಿವ ತನಕ ಪ್ರಸ್ತುತ ಶೈಕ್ಷಣಿಕ ವಲಯ ಮತ್ತು ಉದ್ಯೋಗಕ್ಕೆ ಅನ್ವಯಿಸುತ್ತಿರುವ ಒಳ ಮೀಸಲಾತಿಯ ಕಾರ್ಯ ಚಟುವಟಿಕೆಗಳನ್ನು ಶೀಘ್ರವೇ ತಡೆಯಾಜ್ಞೆ ನೀಡಬೇಕು ಎಂದು ಆಗ್ರಹಿಸಿ ನಂಜನಗೂಡಿನಲ್ಲಿ ಜನಸಂಗ್ರಾಮ ಪರಿಷತ್ ನಿಂದ ಮನವಿ ಸಲ್ಲಿಸಲಾಯಿತು.
ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಜನ ಸಂಗ್ರಾಮ ಪರಿಷತ್, ಛಲವಾದಿ ಮಹಾಸಭಾ ಮತ್ತು ದಲಿತ ಸಂಘರ್ಷ ಸಮಿತಿ ವತಿಯಿಂದ ಜಮಾಯಿಸಿದ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಹಶೀಲ್ದಾರ್ ಡಾ.ಸ್ಮಿತಾ ರಾಮು ರವರಿಗೆ ಜನಸಂಗ್ರಾಮ ಪರಿಷತ್ ಗೌರವಾಧ್ಯಕ್ಷ ನಗರ್ಲೆ ಎಂ.ವಿಜಯಕುಮಾರ್ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಒಳ ಮೀಸಲಾತಿಯಿಂದ ಶಿಕ್ಷಣ ಮತ್ತು ಉದ್ಯೋಗಕ್ಕೆ ತುಂಬಾ ತೊಂದರೆಯಾಗುತ್ತದೆ. ಹೊಸ ಜಾತಿ ಪ್ರಮಾಣ ಪತ್ರವನ್ನು ವಿತರಣೆ ಮಾಡುತ್ತಿರುವುದನ್ನು ತುರ್ತಾಗಿ ನಿಲ್ಲಿಸಬೇಕು. ಹಾಗೂ ಹಳೆ ಜಾತಿ ಪ್ರಮಾಣ ಪತ್ರವನ್ನೇ ಮುಂದುವರಿಸಬೇಕು. ಒಳ ಮೀಸಲಾತಿಗೆ ಅನ್ವಯಿಸಿರುವ ರೋಸ್ಟರ್ ಬಿಂದುವನ್ನು ಪರಿಷ್ಕರಣೆ ಮಾಡಬೇಕು. ಈ ಗೊಂದಲಗಳು ಪರಿಹಾರವಾಗುವ ತನಕ ಹಳೆ ಮೀಸಲಾತಿಯನ್ನೇ ಅನ್ವಯಿಸಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿದರು.
ಒಳ ಮೀಸಲಾತಿ ಮಸೂದೆಯು ಪೂರ್ಣವಾಗಿ ಜಾರಿಯಾಗದ ಕಾರಣ ಹೊಸ ಜಾತಿ ಪ್ರಮಾಣ ಪತ್ರಗಳನ್ನು ವಿತರಣೆ ಮಾಡುತ್ತಿರುವುದನ್ನು ತಕ್ಷಣವೇ ನಿಲ್ಲಿಸಿ, ಆದೇಶ ಮಾಡಬೇಕು. ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಆದೇಶವಾಗಿರುವ ಹಿನ್ನೆಲೆಯಲ್ಲಿ ಆದಿ ಆಂಧ್ರ, ಆದಿ ದ್ರಾವಿಡ, ಆದಿ ಕರ್ನಾಟಕ ಮತ್ತು ಇತರೆ ಸಮುದಾಯಗಳಿಗೆ ಜಾತಿ ಪ್ರಮಾಣ ಪತ್ರಗಳನ್ನು ನೀಡುವ ಬಗ್ಗೆ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆದು ಹಳೆ ಜಾತಿ ಪ್ರಮಾಣ ಪತ್ರವನ್ನು ಮಾನ್ಯ ಮಾಡುವಂತೆ ಶಿಕ್ಷಣ ಮತ್ತು ಔದ್ಯೋಗಿಕ ಇಲಾಖೆಗಳಿಗೆ ತುರ್ತಾಗಿ ಆದೇಶ ಹೊರಡಿಸಬೇಕು. ಡಾ.ಎಚ್.ಎನ್ ನಾಗಮೋಹನ್ ದಾಸ್ ವರದಿಯು ಪೂರ್ಣವಾಗಿ ಜಾರಿಗೊಳ್ಳುವ ಮೊದಲೇ ವರದಿಯನ್ನು ಅನ್ವಯಿಸಿ ನೀಡಿರುವ ಕೆಸೆಟ್ ಫಲಿತಾಂಶ ಮತ್ತು ವಿತರಿಸಿರುವ ಪ್ರಮಾಣ ಪತ್ರವನ್ನು ಅಮಾನ್ಯಗೊಳಿಸಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಹಾಗೂ ಮರು ಫಲಿತಾಂಶ ಬಿಡುಗಡೆ ಮಾಡಬೇಕು. ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಅನ್ವಯಿಸಿ ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ಹೊರಡಿಸಿರುವ ಈ ಆದೇಶಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷರಾದ ಅಭಿನಾಗಭೂಷಣ್, ದಸಂಸ ವಿಭಾಗೀಯ ಸಂಚಾಲಕ ಮಂಜು ಶಂಕರಪುರ, ಸರಗೂರು ಮರಿಸ್ವಾಮಿ, ಕೋಣನೂರು ಚೇತನ್, ದಯಾನಂದ, ಮಹದೇವಸ್ವಾಮಿ, ತಗಡೂರು ಮಹೇಶ್, ಆಲತ್ತೂರು ಶಿವರಾಜು, ಡಿಸಿ ಸುರೇಶ್, ಕೃಷ್ಣಮೂರ್ತಿ, ಕವಲಂದೆ ರಾಹುಲ್, ಗಟ್ಟವಾಡಿ ಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು.
-
Special15 hours agoನಮ್ಮ ಹೊಲ ನಮ್ಮ ದಾರಿ” ರೈತರ ಹೊಲಗಳಿಗೆ ರಸ್ತೆ ನಿರ್ಮಾಣಕ್ಕೆ ಪ್ರತಿ ಕಿ.ಮೀ ₹12.5 ಲಕ್ಷ ಸಹಾಯಧನ!
-
Hassan13 hours agoಎಟಿಎಂಗಳಿಗೆ ಹಣ ಹಾಕದೆ ವಂಚನೆ ಪ್ರಕರಣ : ಎಫ್ಐಆರ್ ದಾಖಲು
-
Mysore8 hours agoಡಾ.ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು
-
Chikmagalur5 hours agoಹೋಂ ಸ್ಟೇಯೊಂದರಲ್ಲಿ ಯುವತಿ ಅನುಮಾನಾಸ್ಪದ ಸಾ*ವು: 4 ತಿಂಗಳ ನಂತರ ಮಾಲೀಕನ ವಿರುದ್ಧ FIR ದಾಖಲು
-
National - International3 hours agoಡೊನಾಲ್ಡ್ ಟ್ರಂಪ್ ಸುಂಕ ರದ್ದುಗೊಳಿಸಿದ ಯುಎಸ್ ಸುಪ್ರೀಂಕೋರ್ಟ್: ಭಾರತ ಸರ್ಕಾರದ ಫಸ್ಟ್ ರಿಯಾಕ್ಷನ್ ಏನು?
-
Kodagu3 hours agoಸಂಕಷ್ಟದಲ್ಲಿದ್ದವರೊಂದಿಗೆ ಕೈ ಜೋಡಿಸಿ: ಶಾಸಕ ಮಂತರ್ ಗೌಡ ಸಲಹೆ
-
State8 hours agoವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ರಾಜ್ಯ ಸರ್ಕಾರದ ವಿರುದ್ದ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
-
Mandya4 hours agoಮಾ.22ಕ್ಕೆ ಭಾರತ ಸಂವಿಧಾನದಿಂದ ನಾವು ಕಲಿಯಬೇಕಿರುವುದು ಏನನ್ನು?’ ಕುರಿತು ಪ್ರಬಂಧ ಸ್ಪರ್ಧೆ : ಉಮಾಮಹದೇವು
