Chamarajanagar
ನಗರಸಭೆಯ ಸಾಮಾನ್ಯ ಸಭೆ ಅಂತ್ಯದ ವೇಳೆಗೆ ನಂಬರ್ ಗಲಾಟೆ, ಅಧ್ಯಕ್ಷರ ವಿರುದ್ಧ ಘೋಷಣೆ
ಚಿಕ್ಕಮಗಳೂರು: ನಗರಸಭೆ ಸಾಮಾನ್ಯ ಸಭೆಯ ಕೊನೆಯಲ್ಲಿ ಲೆಕ್ಕಪತ್ರಕ್ಕೆ ಅನುಮೋದನೆ ವಿಚಾರವಾಗಿ ಬಿಜೆಪಿ, ಕಾಂಗ್ರೆಸ್ ನಡುವೆ ನಂಬರ್ ಗೇಮ್ ನಲ್ಲಿ ಕೋಲಾಹಲವೇ ನಡೆಯಿತು.
ಚಿಕ್ಕಮಗಳೂರು ನಗರಸಭೆಯಲ್ಲಿ ಇಂದು ನಡೆದ ಸಾಮಾನ್ಯ ಸಭೆಯ ಅಂತ್ಯದ ವೇಳೆಗೆ ಲೆಕ್ಕಪತ್ರ ಅನುಮೋದನೆ ವಿಚಾರವಾಗಿ ನಿರೀಕ್ಷೆಯಂತೆ ಕೋಲಾಹಲವೆ ನಡೆಯಿತು. ಅನುಮೋದನೆಗೆ ಬಹುಮತ ಇಲ್ಲ ಎಂದು ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಹೇಳುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಅಧ್ಯಕ್ಷರಿಗೆ ತಮ್ಮ ಬೆಂಬಲ ಸೂಚಿಸಿದರು. ಪರ ವಿರೋಧ ಎರಡೂ ಕಡೆ 17 ಸದಸ್ಯರು ಇದ್ದಾರೆ ಎಂದ ಅಧ್ಯಕ್ಷ ವೇಣುಗೋಪಾಲ ಕಾಸ್ಟಿಂಗ್ ವೋಟ್ ಚಲಾಯಿಸುವ ಮೂಲಕ ತಮ್ಮ ಬಹುಮತ ದೊರೆತಿದೆ ಎಂದು ಸಭೆಯಿಂದ ಹೊರಟು ಹೋದರು ಅವರ ಹಿಂದೆ ಶಾಸಕ ತಮ್ಮಯ್ಯ ಹಾಗೂ ಎಲ್ಲಾ ಕಾಂಗ್ರೆಸ್ ಸದಸ್ಯರು ಹೊರನಡೆದರು. ಆದರೆ ಹಾಜರಾತಿ ಪುಸ್ತಕ ತೋರಿಸಿ ಅಧ್ಯಕ್ಷರ ಪರ ಕೇವಲ 16 ಮತಗಳಿದ್ದು ನಗರಸಭೆ ಲೂಟಿ ಹೊಡೆಯಲು ಬಹುಮತ ಇದೆ ಎಂದು ಸುಳ್ಳು ಹೇಳುತ್ತಿದ್ದಾರೆಂದು ಸಭಾಂಗಣದಲ್ಲಿ ಬಿಜೆಪಿ ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದರು.

Chamarajanagar
ಚಿರತೆ ದಾಳಿ : ಬಾಲಕನಿಗೆ ಗಾಯ
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕ ಬಾಲಕನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಇಂದು ಸಂಭವಿಸಿದೆ.
ಚನ್ನಪಟ್ಟಣ ತಾಲೂಕಿನ ಭುವಳ್ಳಿ ಗ್ರಾಮದ ಶ್ರೇಯಸ್(8) ಚಿರತೆ ದಾಳಿಯಿಂದ ಗಾಯಗೊಂಡ ಬಾಲಕ.
ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಪಾದಯಾತ್ರೆಯ ಮೂಲಕ ತೆರಳುವುದು ವಾಡಿಕೆ. ಅದರಂತೆ ಪಾದಯಾತ್ರೆಯ ಮೂಲಕ ಪೊನ್ನಾಚಿ ಕ್ರಾಸ್ ನಿಂದ ತಲುಪಿ ನಂತರ ಮುಂದೆ ಅರಣ್ಯ ಪ್ರದೇಶದಲ್ಲಿ ತೆರಳುತ್ತಿದ್ದಾಗ ಬಾಲಕನೋರ್ವನ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಪಾದಯಾತ್ರಿಕರು ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಘಟನೆ ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಗದೀಶ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಗಾಯಗೊಂಡಿದ್ದ ಬಾಲಕನನ್ನು ಜೊತೆಯಲ್ಲಿದ್ದ ಭಕ್ತಾದಿಗಳು ಬಸ್ಸಿನ ಮೂಲಕ ಮಲೆ ಮಾದೇಶ್ವರ ಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕರಿಗೆ ಒಂದು ಬೃಹತ್ ಗಾತ್ರದ ಚಿರತೆ ಹಾಗೂ ಒಂದು ಚಿಕ್ಕ ಚಿರತೆ ಕಾಣಿಸಿಕೊಂಡಿದೆ. ಪಾದಯಾತ್ರೆಯ ಮೂಲಕ ತೆರಳುತ್ತಿರುವ ಭಕ್ತಾದಿಗಳು ಅರಣ್ಯ ಪ್ರದೇಶ ಮೂಲಕ ಪಾದಯಾತ್ರೆ ಮಾಡುವ ಬದಲು ಮುಖ್ಯ ರಸ್ತೆಯ ಮೂಲಕ ಪಾದಯಾತ್ರೆ ಮಾಡಿದರೆ ಸುರಕ್ಷತೆ ಇರಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಲಕ್ಷಾಂತರ ಭಕ್ತಾದಿಗಳು ಅರಣ್ಯದಲ್ಲಿ ಪಾದಯಾತ್ರೆ ಮಾಡುತ್ತಾರೆಂಬ ಮಾಹಿತಿ ಇದ್ದರು ಇನ್ನು ಸಮರ್ಪಕವಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜಿಸದೆ ಇರುವುದರಿಂದ ಮತ್ತೊಮ್ಮೆ ಚಿರತೆ ದಾಳಿ ನಡೆಸಿದೆ ಎಂದು ಪ್ರಜ್ಞಾವಂತ ನಾಗರಿಕರು ಆರೋಪಿಸಿದ್ದಾರೆ. ಇನ್ನು ಮುಂದಾದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನಗಸ್ತು ಮಾಡುವ ಮೂಲಕ ಭಕ್ತಾದಿಗಳಿಗೆ ಸುರಕ್ಷತೆ ಒದಗಿಸುವಂತೆ ಮನವಿ ಮಾಡಿದ್ದಾರೆ.
Chamarajanagar
ಮುತ್ತಿಗೆ ಗ್ರಾಮದಲ್ಲಿ ಹಾವು ಪತ್ತೆ: ಸ್ನೇಕ್ ಚಾಂಪು ತಂಡದಿಂದ ಸುರಕ್ಷಿತವಾಗಿ ಹಿಡಿತ
ಚಾಮರಾಜನಗರ: ತಾಲೂಕಿನ ಮುತ್ತಿಗೆ ಗ್ರಾಮದ ಕೆಂಪೇಗೌಡ ಅವರ ಮನೆಯಲ್ಲಿ ಹಾವು ಕಾಣಿಸಿಕೊಂಡ ಘಟನೆ ಇಂದು ಸಂಭವಿಸಿದೆ.
ಮನೆಯೊಳಗೆ ಹಾವು ಇರುವುದನ್ನು ಗಮನಿಸಿದ ಕುಟುಂಬದವರು ಆತಂಕಗೊಂಡು ತಕ್ಷಣ ಚಾಮರಾಜನಗರದ ಸ್ನೇಕ್ ಚಾಂಪು ಅವರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಸ್ನೇಕ್ ಚಾಂಪು ತಂಡದವರು ಸ್ಥಳಕ್ಕೆ ಧಾವಿಸಿ, ಹಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು. ಈ ಕಾರ್ಯಾಚರಣೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಗೋ ಮಹದೇವಸ್ವಾಮಿ ಮಾತನಾಡಿ, ನಮ್ಮ ಗ್ರಾಮದೊಳಗೆ ಅಥವಾ ಸುತ್ತಮುತ್ತ ಎಲ್ಲಿಯಾದರೂ ಹಾವು ಕಂಡುಬಂದರೆ ಭಯಪಡದೇ ತಕ್ಷಣ ತಿಳಿಸಿ. ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಜನರ ಪ್ರಾಣ ರಕ್ಷಿಸುವುದು ನಮ್ಮ ಸಮಾಜ ಸೇವೆಯ ಭಾಗ ಎಂದು ತಿಳಿಸಿದರು.
Chamarajanagar
ಕೌಶಲ್ಯಾಧಾರಿತ ತರಬೇತಿಗೆ ಹೆಚ್ಚು ಆದ್ಯತೆ ನೀಡಿ: ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ
ಸಿಇಟಿ ಆನ್‌ಲೈನ್ ಉಚಿತ ತರಬೇತಿ, ಪುಸ್ತಕ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ
ಚಾಮರಾಜನಗರ: ಪ್ರಸ್ತುತ ದಿನಮಾನಗಳಲ್ಲಿ ಸಮಾಜದಲ್ಲಿ ಏನಾದರೂ, ಬದಲಾವಣೆ ಕಾಣುವಂತಾಗಿದ್ದರೆ ಅದು ಶಿಕ್ಷಣದಿಂದ ಮಾತ್ರ ಎಂದು ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ಸಿಇಟಿ ಉಚಿತ ಆನ್‌ಲೈನ್ ತರಬೇತಿ ಹಾಗೂ ಎಂಎಸ್‌ಐಎಲ್ ವತಿಯಿಂದ ಸಿಇಟಿ ಪುಸ್ತಕ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಮ್ಮ ಕುಟುಂಬದಲ್ಲಿ ಸಹೋದರರು ಶಿಕ್ಷಣಕ್ಕೆ ಆದ್ಯತೆ ಕೊಡಲಿಲ್ಲ, ನಾನು ಮಾತ್ರ ಓದಲೇಬೇಕು ಎಂಬ ಹಠತೊಟ್ಟು, ಉನ್ನತ ಶಿಕ್ಷಣ ಪಡೆಯುವ ಮೂಲಕ ಇಂದು ಉನ್ನತಮಟ್ಟದಲ್ಲಿ ನಿಂತಿದ್ದೇನೆ. ಇದಕ್ಕೆಲ್ಲ ಶಿಕ್ಷಣ ಕಾರಣ ಎಂದರು. ಇಂದು ವೈದ್ಯಕೀಯ ಶಿಕ್ಷಣ, ಎಂಜಿನಿಯರಿಂಗ್ ಪ್ರವೇಶ ಪಡೆಯಬೇಕಾದರೆ ಸಿಇಟಿ. ನೀಟ್, ಜೆಇಇ ತರಬೇತಿ ಪಡೆಯಲೇಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳು ಕೇವಲ ಶಿಕ್ಷಣ ಪಡೆದರೆ ಸಾಲದು, ವಿವಿಧ ಕೌಶಲ್ಯಾಧಾರಿತ ತರಬೇತಿ ಪಡೆಯಬೇಕು, ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾವಸಾಹತು ಪ್ರದೇ಼ಶ಼ದಲ್ಲಿ ವಿವಿಧ ಪ್ರತಿಷ್ಠಿತ ಕೈಗಾರಿಕೆಗಳು ಸ್ಥಾಪನೆಯಾಗಿದ್ದು, ತರಬೇತಿಗೆ ತಕ್ಕ ಉದ್ಯೋಗಪಡೆಯಬಹುದಾಗಿದೆ ಎಂದರು.

ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಮಾತನಾಡಿ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಬಹುತೇಕ ವ್ಯಾಸಂಗ ಮಾಡುವವರು ಬಡವರ್ಗದ ವಿದ್ಯಾರ್ಥಿಗಳೇ ಆಗಿದ್ದಾರೆ, ಸರ್ಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಪಡೆದುಕೊಂಡು, ತಾವು ಅಂದುಕೊಂಡ ಗುರಿಮುಟ್ಟಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಜಯಕುಮಾರ್, ನಾರಾಯಣ, ಕೇಶವನ್, ನಿವೃತ್ತ ಪ್ರಾಂಶುಪಾಲ ಸೋಮಣ್ಣ, ಸಂಪನ್ಮೂಲವ್ಯಕ್ತಿಗಳಾದ ಮಾದೇಶ್, ದೀಪಕ್, ಮಲ್ಲಿಕಾರ್ಜುನ್, ಚೂಡಾ ಸದಸ್ಯ ರಾಜೇಂದ್ರ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎ.ಎಸ್.ಗುರುಸ್ವಾಮಿ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.
-
Mysore22 hours agoರಾಜ್ಯದಲ್ಲಿ ಯತೀಂದ್ರ ಸೇಲ್ಸ್ ಟ್ಯಾಕ್ಸ್ ಕಡ್ಡಾಯ: ಪ್ರತಾಪ್ ಸಿಂಹ ಆರೋಪ
-
Hassan12 hours agoಜನತೆಯ ಪ್ರೀತಿಗೆ ಮನಸೋತ ಡಿಸಿ ಕೆ.ಎಸ್. ಲತಾ ಕುಮಾರಿ
-
Mysore12 hours ago5 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಚಾಲನೆ: ರಸ್ತೆ ಡಾಂಬರೀಕರಣ_ಬಾಗೂರು ಅಣೆಕಟ್ಟು ಅಭಿವೃದ್ಧಿಗೆ ಗುದ್ದಲಿ ಪೂಜೆ
-
Mandya16 hours agoಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು :ಡಾ. ಬಿ.ವಿ. ನಂದೀಶ್
-
Kodagu15 hours agoಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಬಿ.ಬಿ.ಹೇಮಲತಾ
-
Chikmagalur15 hours agoಮುಳ್ಳಯ್ಯನಗಿರಿ ದೇವಸ್ಥಾನದ ಕಾಮಗಾರಿ: ಸೀತಾಳಯ್ಯನ ಗಿರಿಯಿಂದ ಮುಳ್ಳಯ್ಯನಗಿರಿಗೆ ತೆರಳುವ ಮಾರ್ಗದಲ್ಲಿ ತಾತ್ಕಾಲಿಕ ನಿರ್ಬಂಧ
-
Hassan14 hours agoಕ್ಷುಲ್ಲಕ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ
-
National15 hours agoಪಿಎಂ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹೊತ್ತೊಯ್ದಿರುವುದು ಪ್ರಚೋದನಕಾರಿ ನೀತಿ: ಪ್ರಹ್ಲಾದ್ ಜೋಶಿ
