Connect with us

Mysore

ನನ್ನ ಬಳಿ ಯಾವ ಅಧಿಕಾರಿ ಬಂಧಿಲ್ಲ ಪಂ.ರಾಜೀವ್‌ ತಾರಾನಾಥ್‌

Published

on

ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಸಂಭಾವನೆಯಲ್ಲಿ ಕಮಿಷನ್‌ ವಿಚಾರಕ್ಕೆ ಸ್ಪಷ್ಟನೆ
ಮೈಸೂರು: ನಾಡಹಬ್ಬ ದಸರಾ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ನೀಡಲು ಅಂತಾರಾಷ್ಟ್ರೀಯ ಖ್ಯಾತಿಯ ಸರೋದ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರನ್ನು ಅಹ್ವಾನಿಸಿದ ದಸರಾ ಅಧಿಕಾರಿಗಳು ಸಂಭಾವನೆಯಲ್ಲಿ ಕಮಿಷನ್‌ಗೆ ಬೇಡಿಕೆ ಇಟ್ಟರೆಂದು ಜಿಲ್ಲಾಡಳಿತ ಮತ್ತು ಸರ್ಕಾರದ ಮುಜಾಗರಕ್ಕೆ ಕಾರಣವಾಗಿದ್ದ ವಿಷಯಕ್ಕೆ ಪಂಡಿತ್‌ ರಾಜೀವ್‌ ತಾರಾನಾಥ್‌ ಸ್ಪಷ್ಟನೆ ನೀಡಿದ್ದಾರೆ.
ನನ್ನ ಬಳಿ ಯಾವುದೇ ಅಧಿಕಾರಿಗಳು ಮತ್ತು ಸಮಿತಿಗೆ ಸಂಬಂಧಪಟ್ಟ ಯಾರು ಹಣದ ಬೇಡಿಕೆ ಇಟ್ಟಿಲ್ಲ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಹೇಳಿದ್ದಾರೆ.
ದಸರಾ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಸರೋದ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರನ್ನು ಅಹ್ವಾನಿಸಿದ ಅಧಿಕಾರಿಗಳು ಸಂಭಾವನೆಯಲ್ಲಿ ಬೇಡಿಕೆ ಇಟ್ಟಿದ್ದು ಸ್ವತಃ ಅವರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂಬಿತ್ಯಾದಿಯಾಗಿ ಸ್ಥಳೀಯ ಪತ್ರಿಕೆಯೊಂದರಲ್ಲಿ ವರದಿ ಪ್ರಕಟವಾಗಿದ್ದು, ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ ಸೂಚನೆಯಂತೆ ದಸರಾ ಸಾಂಸ್ಕೃತಿಕ ಉಪ ಸಮಿತಿಯ ಉಪ ವಿಶೇಷಧಿಕಾರಿ ಕೆ.ಎಂ.ಗಾಯತ್ರಿ, ಕಾರ್ಯದರ್ಶಿ ಡಾ.ಎಂ.ಡಿ.ಸುದರ್ಶನ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್‌.ಮಲ್ಲಿಕಾರ್ಜುನಸ್ವಾಮಿ ಖುದ್ದಾಗಿ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರನ್ನು ಸ್ವಗೃಹದಲ್ಲಿ ಬೇಟಿಯಾಗಿದ್ದಾರೆ.
ಈ ಸಂದರ್ಭದಲ್ಲಿ ತಾರಾನಾಥ್‌ ಅವರು, ನನ್ನ ಬಳಿ ಯಾವುದೇ ಅಧಿಕಾರಿಗಳು ಹಾಗೂ ಸಮಿತಿಗೆ ಸಂಬಂಧಪಟ್ಟ ಯಾರು ಹಣದ ಬೇಡಿಕೆ ಇಟ್ಟಿಲ್ಲ. ಜೊತೆಗೆ ಈ ಕುರಿತು ನಾನು ಯಾವುದೇ ಪತ್ರಿಕೆಗಳಿಗೆ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅರಮನೆ ವೇದಿಕೆಯಲ್ಲಿ ಸರೋದ್‌ ವಾದನ ಕಾರ್ಯಕ್ರಮ ಪ್ರಸ್ತುತ ಪಡಿಸಿಲು ರಾಜೀವ್‌ ತಾರಾನಾಥ್‌ ಅವರನ್ನು ಸಮಿತಿಯು ನೇರವಾಗಿ ಸಂಪರ್ಕಿಸಿ ವಿನಂತಿಸಿತ್ತು. ಕಲಾವಿದರ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿಯೂ ಅವರ ಹೆಸರನ್ನು ಸೇರಿಸಿಕೊಳ್ಳಲಾಗಿತ್ತು. ಆದರೆ, ನಂತರದ ದಿನಗಳಲ್ಲಿ ಅವರ ಆರೋಗ್ಯದಲ್ಲಿ ವ್ಯತ್ಯಾಸವಾದ ಕಾರಣ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ತದನಂತರ ಅ.21ರಂದು ಮೈಸೂರು ಅರಮನೆ ಪ್ರಧಾನ ವೇದಿಕೆಯಲ್ಲಿ ಒಂದು ಗಂಟೆ ಅವಧಿಯ ಕಾರ್ಯಕ್ರಮ ಪಸ್ತುತಪಡಿಸಲು ಒಪ್ಪಿಗೆ ಕೊಟ್ಟ ಕಾರಣ ಸರೋದ್‌ ವಾದನ ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ.
ದಸರಾ ಮಹೋತ್ಸವದ ಹಿನ್ನಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರಮನೆ ವೇದಿಕೆ ಒಳಗೊಂಡಂತೆ ಇತರೆ ವೇದಿಕೆಗಳಲ್ಲಿ ಕಾರ್ಯಕ್ರಮ ಪ್ರಸ್ತುತ ಪಡಿಸುತ್ತಿರುವ ಕಲಾವಿದರಿಗೆ ಯಾವುದೇ ವ್ಯಕ್ತಿಯಿಂದ ನೇರವಾಗಿ ಅಥವಾ ದೂರವಾಣಿ ಮೂಲಕ ಹಣದ ಬೇಡಿಕೆ ಇಟ್ಟಲ್ಲಿ ತಕ್ಷಣ ಸಮಿತಿಯ ವಿಶೇಷಾಧಿಕಾರಿ ಕೆ.ಎಂ.ಗಾಯತ್ರಿ ಮೊ.ಸಂ.9448083000 ಮತ್ತು ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್‌‍.ಸುಬ್ರಹಣ್ಯ ಮೊ.ಸಂ.9448882766, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್‌.ಮಲ್ಲಿಕಾರ್ಜುನ್‌ ಮೊ.ಸಂ.9916600027 ಮತ್ತು ಉಪ ಸಮಿತಿ ಕಾರ್ಯದರ್ಶಿ ಡಾ.ಎಂ.ಡಿ.ಸುದರ್ಶನ್‌ ಮೊ.ಸಂ.9448244340 ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ.

ಮೈಸೂರು: ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಮಾಡಿರುವ ಯಾರೇ ಆಗಿದ್ದರೂ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹೇವಪ್ಪ ಸೂಚಿಸಿದ್ದಾರೆ.
ಖ್ಯಾತ ಸರೋದ್‌ ವಾದಕ ರಾಜೀವ್‌ ತಾರಾನಾಥ್‌ ಅವರ ಬಳಿಯಲ್ಲಿ ದಸರಾ ಕಾರ್ಯಕ್ರಮ ನೀಡಲು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು, ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಮಾಡಿರುವ ಯಾರೇ ಆಗಿದ್ದರೂ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ. ಸಾಂಸ್ಕೃತಿಕ ಮಹತ್ವವನ್ನು ಹಾಳು ಮಾಡುವ ಇಂತಹ ಸಂಗತಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ. ನಾಡಹಬ್ಬ ದಸರಾದಲ್ಲಿ ಇಂತಹ ಘಟನೆಗಳು ಕಂಡು ಬಂದಲ್ಲಿ ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಅವರು ತಿಳಿಸಿದ್ದಾರೆ.

ನನ್ನ ಬಳಿ ಯಾವ ಅಧಿಕಾರಿ ಬಂಧಿಲ್ಲ ಪಂ.ರಾಜೀವ್‌ ತಾರಾನಾಥ್‌ ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಸಂಭಾವನೆಯಲ್ಲಿ ಕಮಿಷನ್‌ ವಿಚಾರಕ್ಕೆ ಸ್ಪಷ್ಟನೆ

Continue Reading
Click to comment

Leave a Reply

Your email address will not be published. Required fields are marked *

Mysore

ಜೂಜಾಡುತ್ತಿದ್ದ ನಾಲ್ವರ ಬಂಧನ

Published

on

ಮೈಸೂರು: ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ ಒಟ್ಟು 12.5 ಸಾವಿರ ರೂ ನಗದು ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರ 2ನೇ ಹಂತದ ಜೆ.ಬಿ. ಪ್ಯಾರಡೈಸ್ನ ಕೊಠಡಿಯೊಂದರಲ್ಲಿ ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಡುತ್ತಿದ್ದರು.

ಇದರ ಬಗ್ಗೆ ಜನವರಿ 14 ರಂದು ನಗರದ ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿ.ಸಿ ಬಿ.ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ವಿ ಜಯನಗರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ.

Continue Reading

Mysore

ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡುತ್ತಿದ್ದ ನಾಲ್ವರ ಬಂಧನ.

Published

on

ಮೈಸೂರು: ವಿವಿಧ ಕಂಪನಿಗೆ ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡಿಕೊಂಡು ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ. ಒಟ್ಟು 127 ಸಿಲಿಂಡರ್ ಗಳು 79 ರಾಡುಗಳು, 2 ಡಿಜಿಟಲ್ ಯಂತ್ರಗಳು ಹಾಗೂ 1 ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ನಗರದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯ ಜಮೀನಿನಲ್ಲಿ ನಿರ್ಮಾಣ ಮಾಡಿರುವ ಶೆಡ್ ನಲ್ಲಿ ಅಕ್ರಮವಾಗಿ ವಿವಿಧ ಕಂಪನಿಗಳಿಗೆ ಅಡುಗೆ ಅನಿಲ ಸಿಲಿಂಡರ್ ಗಳನ್ನು ಉಪಯೋಗಿಸಿಕೊಂಡು ಯಾವುದೇ ಅಧಿಕೃತ ರಹದಾರಿ ಮತ್ತು ಖರೀದಿ ಮಾಡಿರುವ ಬಿಲ್ ಇಲ್ಲದೆ.

ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾರೆ ಎಂದು ಜನವರಿ 11 ರಂದು ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ. ಸಿ.ಸಿ.ಬಿ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

Continue Reading

Mysore

ಮಾದಕವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತದ್ದ ಪೆಡ್ಲರ್ ಬಂಧನ

Published

on

ಮೈಸೂರು ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಪ್ರಯತ್ನಿಸಿದ ಪೆಡ್ಲರ್ ನನ್ನು ಸಿ.ಸಿ.ಬಿ ಘಟಕದ ಪೊಲೀಸರು ಬಂಧಿಸಿ ಒಟ್ಟು 20. ಸಾವಿರ ರೂ ಮೌಲ್ಯದ 6 ಗ್ರಾಂ 600 ಮಿಲಿ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣಿಗಿರಿ ಹಳೇ ಆರ್.ಟಿ.ಒ. ಅಫೀಸ್ ಹತ್ತಿರ ಇರುವ ತ್ರಿವೇಣೆ ಪಾರ್ಕ್ ಬಳಿ. ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಒಬ್ಬ ಪೆಡ್ಲರ್ ನಿಂತಿದ್ದಾನೆಂದು ಜನವರಿ 7 ರಂದು ನಗರದ ಸಿ.ಸಿ.ಬಿ. ಘಟಕದ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ.

ಸಿ.ಸಿ.ಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.

Continue Reading

Trending

error: Content is protected !!