Connect with us

State

ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ: ಡಿಸಿಎಂ ಡಿ.ಕೆ. ಶಿವಕುಮಾರ್

Published

on

ಬೇರೆಯವರು ನಮ್ಮ ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ “ಮಂತ್ರಾಕ್ಷತೆ” ಮಾಡಿ ಹಂಚುತ್ತಿದ್ದಾರೆ. ಆದರೆ ಜನರ ಹಸಿವಿಗೆ “ಅನ್ನಭಾಗ್ಯ”ವೇ ಮಂತ್ರಾಕ್ಷತೆ, ನಿರುದ್ಯೋಗಕ್ಕೆ “ಯುವನಿಧಿ”ಯೇ ಮಂತ್ರಾಕ್ಷತೆ, ಮಹಿಳೆಯರ ಕಷ್ಟಕ್ಕೆ “ಗೃಹಲಕ್ಷ್ಮಿ”ಯೇ ಮಂತ್ರಾಕ್ಷತೆ, ಮಹಿಳೆಯರ ಪ್ರಯಾಣಕ್ಕೆ “ಶಕ್ತಿ”ಯೇ ಮಂತ್ರಾಕ್ಷತೆ, ಮನೆಯ ಬೆಳಕಿಗೆ “ಗೃಹಜ್ಯೋತಿ”ಯೇ ಮಂತ್ರಾಕ್ಷತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು.

ಕೆ.ಆರ್ ಪುರದ ಐಟಿಐ ಕ್ರೀಡಾಂಗಣದಲ್ಲಿ ಬುಧವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

“ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಗೃಹಜ್ಯೋತಿ ಯೋಜನೆ ಮೂಲಕ ಫಲಾನುಭವಿಗಳಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿವೆ. ಸುಮಾರು ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2 ಸಾವಿರ ರೂಪಾಯಿ ಸಿಗುತ್ತಿದೆ. ಕೆಲವು ತಾಂತ್ರಿಕ ದೋಷಗಳಿಂದ ಕೆಲವರಿಗೆ ಹಣ ತಲುಪಿಲ್ಲ. ಆ ತಾಂತ್ರಿಕ ತೊಡಕುಗಳನ್ನು ನಿವಾರಿಸಿ ಶೀಘ್ರವಾಗಿ ಅವರಿಗೂ ಹಣ ನೀಡಲಾಗುವುದು. ಇಲ್ಲಿರುವ ಕೌಂಟರ್ ಗಳಲ್ಲಿ ಈ ಯೋಜನೆ ಸಿಗದವರು ಕೂಡ ತಾಂತ್ರಿಕ ಸಮಸ್ಯೆ ಬಗೆಹರಿಸಿಕೊಂಡು ಫಲಾನುಭವಿಯಾಗಬಹುದು.

ರಾಜಕಾರಣ ಮುಖ್ಯವಲ್ಲ, ನಿಮ್ಮ ಬದುಕು ಮುಖ್ಯ

ಈ ವಿಧಾನಸಭೆ ಕ್ಷೇತ್ರದಲ್ಲಿ ನಾವು ಸೋತಿದ್ದರೂ ನಿಮ್ಮ ಮೇಲೆ ವಿಶ್ವಾಸ ಇಟ್ಟು ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಅಹವಾಲು ಸ್ವೀಕಾರ ಮಾಡುತ್ತಿದ್ದೇವೆ.

ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕೊಡಬೇಕು ಎಂದು ಅಧಿಕಾರಿಗಳನ್ನು ಕರೆದುಕೊಂಡು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ.

ನಮಗೆ ರಾಜಕಾರಣ ಮುಖ್ಯ ಅಲ್ಲ. ನಿಮ್ಮ ಬದುಕು ಮುಖ್ಯ. ನಿಮ್ಮ ಬದುಕು ಹಸನಾಗಿಸಲು ನಾವು ಕೆಲಸ ಮಾಡುತ್ತೇವೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು.

ಕಳೆದ ಸರ್ಕಾರದ ಪಾಠ ಪುನರಾವರ್ತನೆ ಆಗಿದೆ:

ಅನುದಾನ ಬಿಡುಗಡೆ ವಿಚಾರದಲ್ಲಿ ಕಳೆದ ಸರ್ಕಾರ ಕಲಿಸಿದ ಪಾಠ ಈಗ ಪುನರಾವರ್ತನೆಯಾಗಿದೆ. ಆದರೂ ಅದನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇವೆ.

ಈ ಭಾಗದ ಶಾಸಕರಾದ ಭೈರತಿ ಬಸವರಾಜು ಹಾಗೂ ಮಹದೇವಪುರದ ಶ್ರೀಮತಿ ಮಂಜುಳಾ ಅರವಿಂದ ಲಿಂಬಾವಳಿ ಅವರು ಕುಡಿಯುವ ನೀರು, ಸಂಚಾರ ದಟ್ಟಣೆ, ರಾಜಕಾಲುವೆ, ಮಳೆ ನೀರುಗಾಲುವೆ, ಕಸ ವಿಲೇವಾರಿ ವಿಚಾರವಾಗಿ ಗಮನ ಸೆಳೆದಿದ್ದಾರೆ.

ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಲು ಬೆಂಗಳೂರಿನ ಹೊರವಲಯದಲ್ಲಿ ನಾಲ್ಕು ಕಡೆ ಜಾಗಗಳನ್ನು ಗುರುತಿಸಲು ತೀರ್ಮಾನಿಸಲಾಗಿದೆ. ಕಸವನ್ನು ಗುಡ್ಡೆ ಹಾಕಿಕೊಂಡರೆ ಸಮಸ್ಯೆ ಬಗೆಹರಿಯುವುದಿಲ್ಲ. ಹೀಗಾಗಿ ಅವುಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ರಾಜಕಾಲುವೆ ಹೂಳೆತ್ತುವ ವಿಚಾರದಲ್ಲಿ NGT ಆದೇಶ ಪಾಲನೆ ಮಾಡಬೇಕಿದೆ. ಆ ಆದೇಶದ ಪ್ರಕಾರ ರಾಜಕಾಲುವೆ ಪಕ್ಕ 50 ಮೀಟರ್ ಜಾಗದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ಹೀಗಾಗಿ ರಾಜಕಾಲುವೆ ಪಕ್ಕದ ಜಾಗವನ್ನು ಸರ್ಕಾರ ವಶಪಡಿಸಿಕೊಂಡು ಅಲ್ಲಿ ರಸ್ತೆ ನಿರ್ಮಾಣ ಮಾಡುವ ಯೋಜನೆ ಇದೆ. ಇದರಿಂದ ರಾಜಕಾಲುವೆ ಹೂಳೆತ್ತಲು ಸಹಕಾರಿ ಆಗುತ್ತದೆ. ಜತೆಗೆ ಸ್ಥಳೀಯ ನಾಗರೀಕರ ಸಂಚಾರಕ್ಕೆ ಹೊಸ ರಸ್ತೆ ಸಿಕ್ಕಂತಾಗುತ್ತದೆ.

ನಿಮ್ಮ ಮನೆ ಬಾಗಿಲಿಗೆ ಆಸ್ತಿ ದಾಖಲೆ ಪತ್ರ ವಿತರಣೆ:

ಇನ್ನು ಅನೇಕರು ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿಯಲ್ಲಿ ಪೂರ್ಣ ಪ್ರಮಾಣದ ಆಸ್ತಿಯ ತೆರಿಗೆ ಪಾವತಿ ಮಾಡುತ್ತಿಲ್ಲ. ಹೀಗಾಗಿ ನಾವು ಎಲ್ಲಾ ಆಸ್ತಿಗಳ ಸಮೀಕ್ಷೆ ಮಾಡುತ್ತಿದ್ದೇವೆ.

ನಮ್ಮ ಸ್ವತ್ತು ಯೋಜನೆ ಮೂಲಕ ಮುಂದಿನ ಒಂದು ವರ್ಷದ ಒಳಗಾಗಿ ನಿಮ್ಮ ಮನೆ ಬಾಗಿಲಿಗೆ ನಿಮ್ಮ ಆಸ್ತಿ ದಾಖಲೆಗಳನ್ನು ಉಚಿತವಾಗಿ ನೀಡುವ ಕೆಲಸ ಮಾಡುತ್ತೇವೆ. ಈ ವಿಚಾರವಾಗಿ ಯಾರೊಬ್ಬರೂ ಯಾರಿಗೂ ಒಂದು ರೂಪಾಯಿ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ದೂರು ನೀಡಿ.”

ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ನಿಮ್ಮ ಸಮಸ್ಯೆಗಳ ಬಗ್ಗೆ ಅಹವಾಲು ನೀಡಿ. ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳುತ್ತೇನೆ.

State

ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ: ಆರೋಪಿ ರನ್ಯಾರಾವ್‌ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Published

on

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಎ1 ಆರೋಪಿ ರನ್ಯಾರಾವ್‌ ಹಾಗೂ ಎ2 ಆರೋಪಿ ತರುಣ್ ರಾಜ್ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಹೈಕೋರ್ಟ್‌ನ ಏಕಸದಸ್ಯ ಪೀಠವೂ ಆದೇಶ ಹೊರಡಿಸಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ನಟಿ ರನ್ಯಾರಾವ್‌ ಹಾಗೂ ಆಪ್ತ ತರುಣ್ ರಾಜ್ ಜಾಮೀನು ಕೋರಿ ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆಯನ್ನು ಇಂದು(ಏಪ್ರಿಲ್‌.26) ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಏಕಸದಸ್ಯ ಪೀಠವೂ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿದೆ.

ನಟಿ ರನ್ಯಾರಾವ್‌ ಅವರ ಜಾಮೀನು ಅರ್ಜಿ ಇಲ್ಲಿಯವರೆಗೆ 2 ಬಾರಿ ವಜಾ ಆಗಿದೆ. ಹೀಗಾಗಿ ಇನ್ನೂ ಮುಂದಿನ ಒಂದು ವರ್ಷಗಳ ಕಾಲ ರನ್ಯಾರಾವ್ ಖಾಯಂ ವಿಳಾಸ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರಬೇಕಾಗುತ್ತದೆ.

Continue Reading

State

ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Published

on

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್‌ ಅವರು ನಿಧನರಾಗಿದಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ ಎಂದಿದ್ದಾರೆ.

ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು. ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಗೆ ದೀರ್ಘ ಕಾಲ ಅಧ್ಯಕ್ಷರಾಗಿ ಮತ್ತು ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ ಡಾ.ಕಸ್ತೂರಿ ರಂಗನ್ ಅವರು ಸಲ್ಲಿಸಿದ ಸೇವೆಯಿಂದಾಗಿ ಭಾರತ ಇಂದು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದು ಹೇಳಿದ್ದಾರೆ.

ಡಾ.ಕಸ್ತೂರಿ ರಂಗನ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Continue Reading

State

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ಪ್ರಕರಣ: ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಆರ್‌.ಅಶೋಕ್‌

Published

on

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ, ಹಕ್ಕುಗಳಿಗೆ ಚ್ಯುತಿ ತಂದ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿ, ನಾಗರೀಕರ ಸಂವಿಧಾನದತ್ತ ಹಕ್ಕುಗಳು ಹಾಗು ಘನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ, ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಏಪ್ರಿಲ್.23 ರಂದು, ರಾಜ್ಯಾದ್ಯಂತ ಹಲವಾರು ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಭಯಭೀತ ಧಾರ್ಮಿಕ ಚಿಹ್ನೆಗಳಾದ ಜನಿವಾರ (ಯಜ್ಞೋಪವೀತ), ಶಿವದಾರ ಇತ್ಯಾದಿಗಳನ್ನು ತೆಗೆದುಹಾಕಲು ಒತ್ತಾಯಿಸಿ ಕರ್ನಾಟಕ ಸರ್ಕಾರವು ವೈಯಕ್ತಿಕ ನಂಬಿಕೆಗಳ ಉಲ್ಲಂಘನೆಯ ಘಟನೆಗಳ ಬಗ್ಗೆ ನಾನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.

ಇಂತಹ ಕಾನೂನುಬಾಹಿರ ಮತ್ತು ತಾರತಮ್ಯದ ಅಭ್ಯಾಸಗಳಿಂದ ಭವಿಷ್ಯವು ಅಪಾಯಕ್ಕೆ ಸಿಲುಕಬಾರದು ಎಂದು ನಾಗರಿಕರ, ವಿಶೇಷವಾಗಿ ಯುವಕರ ಹಕ್ಕುಗಳು ಮತ್ತು ಘನತೆಯನ್ನು ಕಾಪಾಡಲು ತ್ವರಿತ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ನಾನು ಆಯೋಗಕ್ಕೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

Continue Reading

Trending

error: Content is protected !!