Connect with us

Chamarajanagar

ನಾಡಪ್ರಭು ಕೆಂಪೇಗೌಡ ವೃತ್ತ ಎಂದು ನಾಮಕರಣ ಮಾಡಲು ಅನುಮೋದನೆ…..

Published

on

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಂ.ಎಂ ಹಿಲ್ಸ್ ರಸ್ತೆ ರಾಮಪುರ ರಸ್ತೆ, ಎಲ್ಲೇಮಾಳ ರಸ್ತೆಯ ವೃತ್ತವನ್ನು ಹಿಂದಿನ ನಡಾವಳಿಯಂತೆ ನಾಡಪ್ರಭು ಕೆಂಪೇಗೌಡ ವೃತ್ತ ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದರು.

ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

ಪಟ್ಟಣದ ಪೆಟ್ರೋಲ್ ಬಂಕ್ ಮುಂಭಾಗದ ರಾಮಾಪುರ ರಸ್ತೆ, ಎಲ್ಲೇಮಾಳ ರಸ್ತೆಯ ವೃತ್ತಕ್ಕೆ ನಾಡಪ್ರಭು ಕೆಂಪೇಗೌಡ ವೃತ್ತವನಾಗಿ ಮಾಡಲು ಜುಲೈ 30, 2022 ರಂದು ನಡೆದ ಕೌನ್ಸಿಲ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅದರಂತೆ ಕ್ರಮವಹಿಸಲು ಈ ಸಭೆಯಲ್ಲೂ ಸಹ ಅನುಮೋದನೆ ನೀಡಲಾಗಿದೆ. ವೃತ ನಾಮಕರಣ ಮಾಡಲು ಮುಂದಿನ ಕ್ರಮ ಕೈಗೊಳ್ಳವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ಗುರುಪ್ರಸಾದ್, ಮುಖ್ಯಾಧಿಕಾರಿ ಮಹೇಶ್ ಕುಮಾರ್ ಪಟ್ಟಣ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Chamarajanagar

ಜೂ. 19ಕ್ಕೆ ಚಾಮರಾಜನಗರ ವಿಶ್ವವಿದ್ಯಾನಿಲಯದ ಆವರಣದಲ್ಲಿ ಉದ್ಯೋಗ ಮೇಳ

Published

on

ಚಾಮರಾಜನಗರ: ಚಾಮರಾಜನಗರ ವಿಶ್ವವಿದ್ಯಾನಿಲಯ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಜಿಲ್ಲಾ ಕೌಶಾಲ್ಯಾಭಿವೃದ್ದಿ ಕೇಂದ್ರ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಜೂನ್. 19ರಂದು ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ಚಾಮರಾಜನಗರ ವಿಶ್ವವಿದ್ಯಾನಿಲಯದ ಆವರಣದಲ್ಲಿ ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ 15ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿವೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಡಿಪ್ಲೋಮೊ, ಯಾವುದೇ ಟ್ರೇಡಿನ ಐಟಿಐ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ಸ್ವ ವಿವರ ಅಂಕಪಟ್ಟಿಗಳ ಮೂಲ ಹಾಗೂ ಜೆರಾಕ್ಸ್ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

ಉದ್ಯೋಗ ಮೇಳದ ಹೆಚ್ಚಿನ ವಿವರಗಳಿಗಾಗಿ ಮೊ.ಸಂ. 8970932547, 9743904790 ಮತ್ತು 08226-224430 ಸಂಪರ್ಕಿಸಬಹುದು.


ಉದ್ಯೋಗ ಮೇಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ.ಆರ್. ಗಂಗಾಧರ್ ಅವರು ವಹಿಸುವರು. ಕುಲ ಸಚಿವರಾದ ಆರ್. ಲೋಕನಾಥ್, ಪ್ರೊ. ಜಿ.ವಿ. ವೆಂಕಟರಮಣ (ಮೌಲ್ಯಮಾಪನ) ಅವರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Continue Reading

Chamarajanagar

ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಇ- ಸ್ವತು ಮಾಡಲು 20 ಸಾವಿರ ರೂ. ಲಂಚ ಸ್ವೀಕರಿಸಿದ ನೌಕರ

Published

on

ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯತಿಯಲ್ಲಿ ಇ ಸ್ವತು ಮಾಡಲು 20, ಸಾವಿರ ಲಂಚ ಸ್ವೀಕರಿಸಿದ ನೌಕರನ ಲಂಚವತಾರ ಬಟ್ಟಾಬಯಲಾಗಿದೆ.

ಈ ಘಟನೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಾಮೂಹಿಕ ನಾಯಕತ್ವದ ವತಿಯಿಂದ ಶಿವಪುರ ಗ್ರಾಮ ಪಂಚಾಯತಿಯ ಮುಂದೆ ಪ್ರತಿಭಟನೆ ಮಾಡಲಾಯಿತು.

ಪಂಚಾಯಿತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಪಂಚಾಯಿತಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಪ್ರತಿಭಟನೆ ನಡೆಯಿತು.

ಪಂಚಾಯತಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಗ್ರಾಮ ಪಂಚಾಯಿತಿ ನೌಕರನಾದ ಮಾರಾಶೆಟ್ಟಿ ಎಂಬ ವ್ಯಕ್ತಿಯು ಶಿವಪುರ ಗ್ರಾಮದ ಮಹೇಶ್ ಎಂಬುವವರ ಬಳಿ ಇ-ಸ್ವತ್ತು ಮಾಡಿಕೊಡುವುದಕ್ಕೆ 20 ಸಾವಿರ ರೂಗಳನ್ನು ಲಂಚದ ರೂಪದಲ್ಲಿ ತೆಗೆದುಕೊಂಡಿದ್ದು ಅದರಲ್ಲಿ ಇ-ಸ್ವತ್ತು ಹಾಗೂ ವಿವಿಧ ಬಿಲ್ ಸೇರಿ 10300 ರೂ ಮಾತ್ರ ಖರ್ಚಗಿದ್ದು ಇನ್ನೂ 9700 ರೂಗಳನ್ನು ತೆಗೆದುಕೊಂಡ ಪಂಚಾಯಿತಿ ನೌಕರ ಮಾರಾಶೆಟ್ಟಿ ಅವರಿಂದ ಹಣ ನೀಡಿದ್ದ ಮಹೇಶ್ ಎಂಬುವವರಿಗೆ ರೈತ ಸಂಘಟನೆ ವತಿಯಿಂದ ದುಡ್ಡನ್ನು ವಾಪಸ್ ಕೊಡಿಸಲಾಯಿತು.

Continue Reading

Chamarajanagar

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

Published

on

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಂಗನೂರು ಗ್ರಾಮದಲ್ಲಿ ಇಂದು 2 ಕೋಟಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಎ ಆರ್. ಕೃಷ್ಣ ಮೂರ್ತಿ

ಉಪ್ಪಾರ, ಕುರುಬ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಬೀದಿಗಳಲ್ಲಿ ಸೀಮೆಂಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಗೆ 20 ಲಕ್ಷ ರೂಪಾಯಿ ವೆಚ್ಚದ ಕಟ್ಟಡ ಶಂಕುಸ್ಥಾಪನೆಗೆ ಗುದ್ದಲಿ ಪೂಜೆ ನೆರವೇರಿಸಿದೆನು.

ಗ್ರಾಮದ ಹೊಂಗನೂರು ಹಿರಿಕೆರೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಲ್ಲವತ್ತ ಸೇನೆಕೆರೆ ಅಭಿವೃದ್ಧಿಗಾಗಿ ಸುಮಾರು 19 ಕೋಟಿ ವೆಚ್ಚದ ಕಾಮಗಾರಿಗೆ ಮುಂದಿನ ವಾರ ಶಂಕುಸ್ಥಾಪನೆ ನೆರವೇರಿಸುವುದಾಗಿ ತಿಳಿಸಿದ್ದಾರೆ

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ರೂಪ ಮೋಹನ್, ಉಪಾಧ್ಯಕ್ಷರಾದ ನವೀನ್ ಕುಮಾರ್, ಜಿಲ್ಲಾ ಗ್ಯಾರೆಂಟಿ ಸಮಿತಿ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರುಗಳು‚ ಮಾಜಿ ಮತ್ತು ಹಾಲಿ ಸದಸ್ಯರುಗಳು, ಗ್ರಾಮದ ಎಲ್ಲಾ ಕೋಮಿನ ಯಜಮಾನರು, ವಿದ್ಯಾರ್ಥಿಗಳು, ರೈತರು, ಮಹಿಳೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

Continue Reading

Trending

error: Content is protected !!