Connect with us

State

ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ.: ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಜನವರಿ, 29: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ.
ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಜೆಡಿ ಎಸ್. ಮುಖಂಡ ಹೆಚ್.ಡಿ.ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ. ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದಾರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದರು.

ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಘೋಷಣೆ ಕೂಗುತ್ತಿರುವ ಬಗ್ಗೆ ಮಾತನಾಡಿ, ಅವರಿಗೆ ನನ್ನ ಬಗ್ಗೆ ಮಾತನಾಡಲು ಬೇರೆನಿದೆ, ಅದಕ್ಕೆ ಈ ರೀತಿ ಹೇಳುತ್ತಾರೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

Politics

ಬೆಂಗಳೂರು- ಪುಣೆ- ಮುಂಬೈ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್| ಎಚ್‌ಡಿಕೆ, ಜೋಶಿ ಸ್ಪಂದನೆ: ಎಂ.ಬಿ.ಪಾಟೀಲ್‌

Published

on

ಬೆಂಗಳೂರು: ಕೇಂದ್ರ ಬಜೆಟ್ ಮಂಡನೆಯಾದ ತಕ್ಷಣ ನಾನು ಬೆಂಗಳೂರು- ಪುಣೆ- ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ಅಗತ್ಯವಾಗಿದೆ ಎಂದು ಹೇಳಿದ್ದೆ.  ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರು ಈ ಬಗ್ಗೆ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರೊಂದಿಗೆ ಚರ್ಚಿಸಿರುವುದಕ್ಕೆ ಧನ್ಯವಾದ ಹೇಳುತ್ತೇನೆ. ಇದರಲ್ಲಿ ರಾಜಕೀಯವೇನೂ ಇಲ್ಲ. ಇದು ಕೇವಲ ಭೇಟಿಗೆ ಮಾತ್ರ ನಿಲ್ಲದೆ, ತಾರ್ಕಿಕ ಅಂತ್ಯ ಕಾಣುವಂತೆ ಮಾಡಬೇಕು ಎಂದು ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು,  ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು ಹಾಗೂ ಆರ್ಥಿಕ ರಾಜಧಾನಿ ಮುಂಬಯಿ ನಡುವೆ ಅತ್ಯುತ್ತಮ ಸಂಪರ್ಕ ವ್ಯವಸ್ಥೆ ಬರಬೇಕು. ಇದರಿಂದ ಮಧ್ಯ ಮತ್ತು ಉತ್ತರ ಕರ್ನಾಟಕ ಹಾಗೂ ಪಶ್ಚಿಮ ಮಹಾರಾಷ್ಟ್ರದ ಭಾಗಗಳಿಗೆ ಅಪಾರ ಲಾಭವಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರಕಾರದ ಬಜೆಟ್‌ ನಲ್ಲಿ ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಚೆನ್ನೈ ಸೇರಿದಂತೆ 7 ಹೈಸ್ಪೀಡ್ ರೈಲು ಕಾರಿಡಾರ್ ಘೋಷಿಸಿದ್ದಾರೆ. ಇದು ಸ್ವಾಗತಾರ್ಹ. ಆದರೆ ಈ ಎರಡೂ ಯೋಜನೆಗಳಿಂದ ರಾಜ್ಯಕ್ಕೆ ಹೆಚ್ಚಿನ ಪ್ರಯೋಜನವಿಲ್ಲ. ಬೆಂಗಳೂರು-ಪುಣೆ-ಮುಂಬೈ ಮಧ್ಯೆ ಇಂತಹ ಯೋಜನೆ ಬಂದರೆ ತುಮಕೂರು, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಸಾಂಗ್ಲಿ, ಕೊಲ್ಲಾಪುರ ಹೀಗೆ ಹಲವು ಪ್ರದೇಶಗಳಿಗೆ ಪ್ರಯೋಜನವಾಗಿ, ಆರ್ಥಿಕ ಮತ್ತು ಕೈಗಾರಿಕಾ ಪ್ರಗತಿ ಸಾಧ್ಯವಾಗಲಿದೆ ಎಂದು ಬಜೆಟ್ ದಿನವೇ ಹೇಳಿದ್ದೆ. ಈಗ ಆ ನಿಟ್ಟಿನಲ್ಲಿ ಇಬ್ಬರೂ ಕೇಂದ್ರ ಸಚಿವರು ಕಾರ್ಯಪ್ರವೃತ್ತರಾಗಿರುವುದು ಸ್ವಾಗತಾರ್ಹ ಕ್ರಮ ಎಂದು ತಿಳಿಸಿದ್ದಾರೆ.

ಕುಮಾರಸ್ವಾಮಿ ಮತ್ತು ಜೋಶಿ ಈ ವಿಚಾರದ ಬಗ್ಗೆ ಗಮನ ಹರಿಸಿರುವುದು ಒಳ್ಳೆಯದು. ಇಂತಹ ವಿಚಾರಗಳಲ್ಲಿ ನಾವು ರಾಜಕೀಯ ಮಾಡಬಾರದು. ಯೋಜನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್, ರೈಲು ಸಚಿವ ಅಶ್ವಿನಿ ವೈಷ್ಣವ್, ವಿ.ಸೋಮಣ್ಣ ಅವರಿಗೆ ಪತ್ರ ಬರೆಯಲಾಗಿದೆ ಎಂದು ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.

ನಾಲ್ಕು ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿರುವ ಲಿಂಗಾಯತ ಶಾಸಕರ ಸಭೆ ನಡೆದಿದ್ದು ಇದು ಶಕ್ತಿ ಪ್ರದರ್ಶನವೇನೂ ಅಲ್ಲ. ಅಶೋಕ ಪಟ್ಟಣ ಹಾಗೂ ಬಿ.ಆರ್. ಪಾಟೀಲ್‌ ಈ ಸಭೆ ಕರೆದಿದ್ದರು. ಸಮುದಾಯದ ಹಿತಾಸಕ್ತಿ ಬಗ್ಗೆ ಅಲ್ಲಿ ಚರ್ಚೆ ನಡೆಯಿತಷ್ಟೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನಾವು ಆಗಿಂದಾಗ್ಗೆ ಹೀಗೆ ಸಭೆ ಸೇರುತ್ತಲೇ ಇರುತ್ತೇವೆ. ಬೇರೆಬೇರೆ ಸಮುದಾಯಗಳ ಶಾಸಕರೂ ಸಭೆ ಮಾಡುತ್ತಾರೆ. ಆದರೆ ನಮ್ಮ ಸಭೆಯನ್ನು ಮಾತ್ರ ಲಿಂಗಾಯತರ ಶಕ್ತಿ ಪ್ರದರ್ಶನ ಎಂದು ಬಿಂಬಿಸುವುದು ಸರಿಯಲ್ಲ ಎಂದು ಪ್ರತಿಪಾದಿಸಿದ್ದಾರೆ.

1989ರಲ್ಲಿ ಲಿಂಗಾಯತರ ಬೆಂಬಲದಿಂದ ಕಾಂಗ್ರೆಸ್ 178 ಕಡೆ ಗೆದ್ದು, ಐತಿಹಾಸಿಕ ಸಾಧನೆ ಮಾಡಿತ್ತು. ಈಗಲೂ ಕಾಂಗ್ರೆಸ್ ನಲ್ಲಿ‌ 34 ಲಿಂಗಾಯತ ಶಾಸಕರಿದ್ದೇವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯ ಕಾಂಗ್ರೆಸ್ಸಿಗೆ ವೋಟ್ ಹಾಕಿದೆ. ಹೀಗಾಗಿ ಸರಕಾರದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಬೇಕು ಎನ್ನುವುದರಲ್ಲಿ ತಪ್ಪೇನಿಲ್ಲ. ಆದರೆ ನಾವು ಇನ್ನೊಂದು ಸಮುದಾಯದ ಪಾಲನ್ನು ಕಿತ್ತುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

 

ಈ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮನರೇಗಾ ಯೋಜನೆಯನ್ನು ಬಿಜೆಪಿ ನಾಯಕರಾದ ಆಡ್ವಾಣಿ, ನಿತಿನ್ ಗಡ್ಕರಿ ಮತ್ತು ನಿರ್ಮಲಾ ಸೀತಾರಾಮನ್ ಅವರೇ ಹೊಗಳಿದ್ದರು. ಈಗ ಮೋದಿ ಸರ್ಕಾರ ಇದನ್ನು ಹಾಳು ಮಾಡಿದ್ದು, ಯೋಜನೆಯ ಹೆಸರನ್ನು ವಿಬಿ-ಜಿ ರಾಮ್ ಜಿ ಎಂದು ಬದಲಿಸಿದೆ. ಬಿಜೆಪಿ ಸಂಸದರೇ ಈ ಬಗ್ಗೆ ಧ್ವನಿ ಎತ್ತಿ, ತಮ್ಮ ಬೆಲೆ ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Continue Reading

State

ಅಕ್ರಮ ಹಣ ವರ್ಗಾವಣೆ ಕೇಸ್‌: ಶಾಸಕ ಸತೀಶ್ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌

Published

on

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ‌ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ  ವೈದ್ಯಕೀಯ ಜಾಮೀನು ಮಂಜೂರು ಮಾಡಲಾಗಿದೆ ಎಂದು ಹೈಕೋರ್ಟ್‌ ಹೇಳಿದೆ.

ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೈಕೋರ್ಟ್‌ ತಿಳಿಸಿದೆ.

ಲಿವರ್ ಕಸಿ ಬಗ್ಗೆ ಎರಡು ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು‌ ಕೋರ್ಟ್‌ ನಿರ್ದೇಶನ ನೀಡಿದೆ.

ಪ್ರಾಸಿಕ್ಯೂಷನ್ ಸಾಕ್ಷ್ಯದ ಮೇಲೆ ಪ್ರಭಾವ ಬೀರಬಾರದು. ವಿಚಾರಣಾ ನ್ಯಾಯಾಲಯ ವಿಚಾರಣೆಗೆ ತೊಂದರೆ ಉಂಟು ಮಾಡಬಾರದು. ಐದು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಒಂದು ಭದ್ರತಾ ಖಾತರಿ ಒದಗಿಸಬೇಕು ಎಂದು ಹೈಕೋರ್ಟ್‌ ಷರತ್ತು ವಿಧಿಸಿದೆ.

Continue Reading

State

ನೀರಾವರಿ ಬಗ್ಗೆ ಕೇಂದ್ರಕ್ಕೆ ಎಚ್‌ಡಿಡಿ ಮನವಿ| ಯೋಜನೆ ಜಾರಿ ಮಾಡಿದರೆ ಸಂತಸ: ಕೆ.ಎಂ.ಶಿವಲಿಂಗೇಗೌಡ

Published

on

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ಜಾರಿ ಮಾಡಿಸಿದರೆ ಸಂತಸವಾಗುತ್ತದೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ತಿಳಿಸಿದ್ದಾರೆ.

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಕೇಳಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ರಾಜ್ಯಸಭೆಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ದೇವೇಗೌಡರು ಭಾವನಾತ್ಮಕವಾಗಿ ಮಾತನಾಡಿದ್ದಾರೆ. ರಾಜ್ಯದ ನೀರಾವರಿ ಯೋಜನೆ ಬಗ್ಗೆ ಮಾತಾಡಿದ್ದನ್ನು ಸ್ವಾಗತಿಸುವೆ ಎಂದಿದ್ದಾರೆ.

ಎಚ್. ಡಿ.ದೇವೇಗೌಡರು ಆಡಳಿತ ಪಕ್ಷದೊಂದಿಗೆ ಮೈತ್ರಿಯಲ್ಲಿದ್ದಾರೆ. ಕೇಂದ್ರ ಸರ್ಕಾರದ ಜೊತೆ ಮಾತನಾಡಿ, ನೀರಾವರಿ ಯೋಜನೆಗಳಿಗೆ ಅನುಮತಿ ನೀಡಿಸಬೇಕು. ರಾಜ್ಯದ ನೀರಾವರಿ ಯೋಜನೆಗಳನ್ನು ಜಾರಿ ಮಾಡಿಸಿದರೆ ಸಂತಸವಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ  ವಿಧಾನಸಭೆ ಕಲಾಪದಲ್ಲಿ ಬುಧವಾರ ವಿಪಕ್ಷ ಬಿಜೆಪಿ ವಿರುದ್ದ ಏಕವಚನದಲ್ಲಿ ಮಾತನಾಡಿದ ವಿಚಾರ ಬಗ್ಗೆ ಮಾತನಾಡಿದ ಅವರು, ನಿನ್ನೆ ಸದನದಲ್ಲಿ ಅಹಿತಕರ ಘಟನೆ ನಡೆಯಿತು. ವಿಪಕ್ಷ ಸದಸ್ಯರು ಪ್ರತಿಭಟನೆ ಮಾಡುತಿದ್ದರು. ಈ ವೇಳೆ ನನಗೆ ಮಾತನಾಡಲು ಅವಕಾಶ ನೀಡಿದರು. ಆಗ ನನ್ನ ಮೇಲೆ ವೈಯಕ್ತಿಕ ನಿಂದನೆ ಮಾಡಿದರು.  ಹೀಗಾಗಿ ಬಿರುಸಿನಿಂದ ಮಾತನಾಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Continue Reading

Trending

error: Content is protected !!