Connect with us

Mysore

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಿ ಪಾಲಿಕೆ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಮಹಾನಗರ ಪಾಲಿಕೆ ಮುಂಭಾಗ ಪ್ರತಿಭಟನೆ

Published

on

ಮೈಸೂರು: ಮೈಸೂರಿನಲ್ಲಿರುವ ಎಲ್ಲಾ ಅಂಗಡಿ, ಮುಂಗಟ್ಟು, ವ್ಯಾಪಾರ ಮಳಿಗೆಗಳು, ಮಾಲ್‌ಗಳು, ಖಾಸಗಿ ಕಚೇರಿಗಳು, ಶಾಲಾ-ಕಾಲೇಜು ಜಾಹೀರಾತು ಫಲಕ, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಿ ಪಾಲಿಕೆ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಮಹಾನಗರ ಪಾಲಿಕೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡ ಭಾಷೆಯೇ ಸಾರ್ವಭೌಮ ಭಾಷೆ. ಕನ್ನಡ ನಾಡಿನಲ್ಲಿ ಮೊದಲು ಕನ್ನಡ ಭಾಷೆಯನ್ನು ಪ್ರಧಾನವಾಗಿ ಬಳಸಬೇಕು, ಕನ್ನಡದಲ್ಲೇ ವ್ಯವಹರಿಸಬೇಕು. ಶಿವಮೊಗ್ಗ ಮಹಾನಗರ ಪಾಲಿಕೆ ಮಾದರಿಯಲ್ಲಿ ನಗರದ ಎಲ್ಲಾ ಅಂಗಡಿ, ಉದ್ದಿಮೆ ನಾಮಫಲಕ ಮತ್ತು ಜಾಹೀರಾತು ಫಲಕಗಳಲ್ಲಿ ಕಡ್ಡಾಯವಾಗಿ ಶೇ.೬೦ ಭಾಗ ಕನ್ನಡ ಭಾಷೆ ಪ್ರಧಾನವಾಗಿ ಬಳಸಬೇಕು. ಈ ನಿಯಮ ಉಲ್ಲಂಘಿಸಿದರೆ ಉದ್ದಿಮೆಗಳ ಪರವಾನಗಿ ರದ್ದುಪಡಿಸಲಾಗುತ್ತದೆ ಎಂದು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.


ಕನ್ನಡ ಬಳಸದ ಮಳಿಗೆಗಳಿಗೆ ನೋಟಿಸ್ ಜಾರಿ ಮಾಡಿ, ಒಂದು ತಿಂಗಳ ಕಾಲಾವಕಾಶ ನೀಡಬೇಕು. ನಂತರವೂ ಅವರು ಕನ್ನಡ ಬಳಸದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಪಾಲಿಕೆ ಆದೇಶ ಹೊರಡಿಸದಿದ್ದರೆ ಮತ್ತೆ ಬೀದಿಗಿಳಿದು ಕನ್ನಡ ಬಳಸದ ನಾಮಫಲಕಗಳಿಗೆ ಮಸಿ ಬಳಿಯಲಾಗುವುದೆಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಕೃಷ್ಣಯ್ಯ.ಸಿ.ಎಚ್, ಗೋಲ್ಡ್ ಸುರೇಶ್, ಡಾ.ಶಾಂತರಾಜೇ ಅರಸ್, ಪ್ರಭುಶಂಕರ್ ಪ್ರಜೀಶ್.ಪಿ, ಸುನಿಲ್ ಅಗರ್ವಾಲ್, ಶಿವಲಿಂಗಯ್ಯ, ರವಿ ಒಲಂಪಿಯ, ಹನುಮಂತಯ್ಯ, ಶಿವನಾಯಕ್, ಅಂಬಾ ಅರಸ್, ಲಕ್ಷ್ಮಿ, ಭಾಗ್ಯಮ್ಮ, ನೇಹಾ, ಮಂಜುಳಾ, ಪದ್ಮ, ಶುಭಶ್ರೀ, ಗೀತಾ ಗೌಡ, ಪುಷ್ಪವತಿ, ಮಂಜುಳಾ, ಜ್ಯೋತಿ, ಇಂದಿರಾ, ಎಳನೀರು ರಾಮಣ್ಣ, ದರ್ಶನ್ ಗೌಡ, ರಾಧಾಕೃಷ್ಣ, ಆನಂದ, ಮಹದೇವ ಸ್ವಾಮಿ, ರವೀಶ್, ಪ್ರಭಾಕರ, ರಮೇಶ್, ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mysore

ನಂಜನಗೂಡು ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ನೂತನ ಪಶು ಸಂಗೋಪನೆಯ ಆಸ್ಪತ್ರೆಯನ್ನು ಸಚಿವ ಕೆ ವೆಂಕಟೇಶ್ ,ಮತ್ತು ನಂಜನಗೂಡು ಕ್ಷೇತ್ರದ ಜನಪ್ರಿಯ ಶಾಸಕರಾದ ದರ್ಶನ್ ರವರುಗಳು ಉದ್ಘಾಟಿಸಿದರು.

Published

on

ನಂಜನಗೂಡು ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ನೂತನ ಪಶು ಸಂಗೋಪನೆಯ ಆಸ್ಪತ್ರೆಯನ್ನು ಸಚಿವ ಕೆ ವೆಂಕಟೇಶ್ ,ಮತ್ತು ನಂಜನಗೂಡು ಕ್ಷೇತ್ರದ ಜನಪ್ರಿಯ ಶಾಸಕರಾದ ದರ್ಶನ್ ರವರುಗಳು ಉದ್ಘಾಟಿಸಿದರು.

ಬಳಿಕ ಸಚಿವ ವೆಂಕಟೇಶ್ ಮಾತನಾಡಿ ಗ್ರಾಮೀಣ ಭಾಗದಲ್ಲಿ ಅತೀ ಹೆಚ್ಚು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರುಗಳನ್ನು ಸಾಕುತ್ತಿದ್ದು ಅದರಲ್ಲೇ ಜೀವನ ಸಾಗಿಸುತ್ತಾರೆ ಈ ಗ್ರಾಮದಿಂದ ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಲು ಸುಮಾರು 20 ಕಿ ಮೀ ದೂರ ಹೋಗಬೇಕಾದ ದೃಷ್ಟಿಯಿಂದ ಈ ಕ್ಷೇತ್ರದ ಶಾಸಕರು ಒತ್ತಾಡದ ಮೇರೆಗೆ ಈ ಗ್ರಾಮಕ್ಕೆ ಪಶು ಸಂಗೋಪನೆ ಆಸ್ಪತ್ರೆಗೆ ಅನುದಾನ ನೀಡಲಾಗಿದೆ ಪ್ರತಿಯೊಬ್ಬ ರೈತರು ಸದ್ದುಪಯೋಗ ಪಡೆದುಕೊಳ್ಳಿ ಎಂದರಲ್ಲದೆ ನಮ್ಮ ಸರ್ಕಾರದಿಂದ ಜಾನುವಾರುಗಳು ಸಾವನ್ನಾಪ್ಪಿದರೆ 10 ಸಾವಿರ ಪರಿಹಾರ ನೀಡಲಾಗುತ್ತಿದೆ ಕುರಿ ಸಾವನ್ನಾಪ್ಪಿದರೆ 5 ಸಾವಿರ ಪರಿಹಾರವನ್ನು ನಮ್ಮ ಸರ್ಕಾರ ನೀಡುತ್ತಿದೆ ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಮತ್ತೊಂದು ಆಸ್ಪತ್ರೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿಯಾಗಬೇಕಿದೆ ಕಾಡಾಂಚಿನ ಗ್ರಾಮದಲ್ಲಿ ರೈತರು ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಲು ತುಂಭಾ ತೊಂದರೆಯಾಗಿರುವ ಬಗ್ಗೆ ನನಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸಚಿವರ ಗಮನಕ್ಕೆ ತಂದು ಆಸ್ಪತ್ರೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಕ್ಷೇತ್ರದ ಅಭಿವೃದ್ಧಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಿವಕುಮಾರ್,
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಅದ್ಯಕ್ಷರಾದ ಕೆ ಜಿ ಮಹೇಶ್, ಶ್ರೀಕಂಠನಾಯಕ,ಗ್ರಾ ಪಂ ಅದ್ಯಕ್ಷ ಹರೀಶ್ ಕುಮಾರ್, ಸದಸ್ಯ ಕೃಷ್ಣಮೂರ್ತಿ,ಮಹದೇವು,ನಿಂಗಮಣಿ,ಮುಖಂಡರುಗಳಾದ ದೊರೆಸ್ವಾಮಿ ನಾಯಕ,ಸೇರಿದಂತೆ ಪ್ರಮುಖರು ಹಾಜರಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading

Mysore

ಕಳ್ಳಿಮುದ್ದನಹಳ್ಳಿ ಸಣ್ಣ ಜವರಯ್ಯ ನಿಧನ 

Published

on

ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ
ಸಾಲಿಗ್ರಾಮ : ತಾಲೂಕಿನ ಕಳ್ಳಿಮುದ್ದನಹಳ್ಳಿ ಗ್ರಾಮದ ಸಣ್ಣ ಜವರಯ್ಯ (74 ವರ್ಷ ) ನಿಧಾನರಾದರು.

ಮೃತರು, ಪತ್ನಿ, ದಲಿತ ಸಂಫರ್ಷ ಸಮಿತಿ (ಅಂಭೇಡ್ಕರ್ ವಾದ)  ಸಂಘಟನೆಯ ಜಿಲ್ಲಾ ಸಂಚಾಲಕ ಚಂದ್ರು, ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ, ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಸ್ವಗ್ರಾಮದಲ್ಲಿ ನೆರವೇರಿತು.

ಎಸ್ ಸಿ ಘಟಕದ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂಠಿ ಕುಮಾರ್, ಪತ್ರಕರ್ತರಾದ ಎಸ್ ಬಿ ಹರೀಶ್,ಲಕ್ಕಿಕುಪ್ಪೆ ರಮೇಶ್, ರಾಂಪುರ ಲೋಕೇಶ್ ಸಂತಾಪ ಸೂಚಿಸಿದ್ದಾರೆ.

Continue Reading

Mysore

ಟ್ರ್ಯಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Published

on

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ

ಸಾಲಿಗ್ರಾಮ : ಟ್ರ್ಯಾಕ್ಟರ್ ಮಗುಚಿ ಬಿದ್ದ ಪರಿಣಾಮ ಚಾಲಕ  ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ಹಳೆ ಮಿರ್ಲೆ ಗ್ರಾಮದಲ್ಲಿ  ನಡೆದಿದೆ.


ಘಟನೆಯಲ್ಲಿ ಗ್ರಾಮದ ಕುಮಾರ್ ಎಂಬುವರ‌ ಪುತ್ರ ಮನೋಜ್ (23) ಎಂಬಾತನೇ ಮೃತಪಟ್ಟವನಾಗಿದ್ದಾನೆ.
ಮೃತ ಮನೋಜ್ ಜಮೀನು ಒಂದನ್ನು ಉಳುಮೆ ಮಾಡಲು ಚಾಮರಾಜ ನಾಲೆಯ ಏರಿಯ ಮೇಲೆ ಹೋಗುತ್ತಿದ್ದಾಗ ಆಕ್ಮಸಿಕವಾಗಿ ಟ್ಯಾಕ್ಟರ್ ಜಮೀನಿಗೆ ಉರುಳಿ, ಈ ಅವಘಡ ಸಂಭವಿಸಿದೆ.


ಘಟನೆ ನಡೆದ ತಕ್ಷಣವೇ ಮಗುಚಿ ಬಿದ್ದ ಟ್ಯಾಕ್ಟರ್ ನ ಅಡಿಯಲ್ಲಿ ಸಿಲುಕಿದ್ದ ಮನೋಜ್ ನನ್ನ ಮೇಲಕ್ಕೆ ಎತ್ತಿ ಹೆಚ್ಚಿನ ಚಿಕಿತ್ಸೆಗಾಗಿ ಕೆ.ಆರ್.ನಗರ ಆಸ್ವತ್ರೆಗೆ ಕರೆತಂದರು ಯಾವುದೇ ಪ್ರಯೋಜನವಾಗಲಿಲ್ಲ.
ಘಟನೆಯ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Trending

error: Content is protected !!