Connect with us

Mysore

ನಾಯಕ ನೌಕರರ ಸಂಘ ಮತ್ತು ವಾಲ್ಮೀಕಿ ನಾಯಕರ ಸಂಘದ ವತಿಯಿಂದ ಅಭಿನಂದನಾ ಸಮಾರಂಭ

Published

on

ಪರಿಶಿಷ್ಟ ಪಂಗಡದವರಿಗೆ ಶೇ.೭.೫ರಷ್ಟು ಮೀಸಲಾತಿ ಸೌಲಭ್ಯ ನೀಡುವಂತೆ ಮುಖ್ಯಮಂತ್ರಿಗಳಿಗೆ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಗಿದ್ದು ಶೀಘ್ರದಲ್ಲೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದಾರೆ ಎಂದು ಹೆಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್‌ ಚಿಕ್ಕಮಾಧು ಹೇಳಿದರು.

ಕೆ ಆರ್ ನಗರ ಪಟ್ಟಣದ ನಾಯಕ ವಾಲ್ಮೀಕಿ ಸಮುದಾಯ ಭವನದಲ್ಲಿ ನಾಯಕ ನೌಕರರ ಸಂಘ ಮತ್ತು ವಾಲ್ಮೀಕಿ ನಾಯಕರ ಸಂಘದ ವತಿಯಿಂದ ನಡೆದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಸಮಾಜದ ಎಲ್ಲರಿಗೂ ಎಸ್‌ಟಿ ಪ್ರಮಾಣ ಪತ್ರ ಕೊಡಿಸಲು ಬೇಕಾಗಿರುವ ಕಾನೂನು ತೊಕಡುಗಳನ್ನು ಸರಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ನನ್ನ ಪೂಜ್ಯ ತಂದೆಯವರಾದ ಚಿಕ್ಕಮಾಧುರವರ ನಿಧನದ ನಂತರ ರಾಜಕೀಯ ಅಧಿಕಾರ ಪಡೆಯಲು ಮತ್ತು ಕೋಟೆ ಕ್ಷೇತ್ರದಿಂದ ಶಾಸಕನಾಗಲು ಡಿ.ರವಿಶಂಕರ್‌ರವರ ಸಹಕಾರ ಬಹಳ ಪ್ರಮುಖವಾದ್ದದ್ದು ಶಾಸಕ ಡಿ.ರವಿಶಂಕರ್‌ರವರ ಜೊತೆ ನಮ್ಮ ಸಮುದಾಯದ ಮುಖಂಡರು ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿ ಹೆಚ್.ಡಿ.ಕೋಟೆ ಕ್ಷೇತ್ರದಿಂದ ಸ್ಪರ್ದಿಸಲು ಅವಕಾಶ ಕಲ್ಪಿಸಿದ್ದನ್ನು ಮರೆಯಲು ಸಾಧ್ಯವಿಲ್ಲ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸೇರಿದಂತೆ ಹಿಂದುಳಿದ ವರ್ಗಗಳ ಏಳಿಗೆಗಾಗಿ ದುಡಿಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಮುದಾಯದವರು ಬೆಂಬಲ ನೀಡಬೇಕು ಎಂದು ಕೋರಿದ ಅನಿಲ್‌ಚಿಕ್ಕಮಾಧು ಮುಖ್ಯಮಂತ್ರಿಗಳ ಹಾದಿಯಲ್ಲೇ ನಡೆಯುತ್ತಿರುವ ಶಾಸಕ ಡಿ.ರವಿಶಂಕರ್‌ರವರಿಗೆ ಎಲ್ಲಾ ರೀತಿಯ ಸಹಕಾರ ಮತ್ತು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಡಿ.ರವಿಶಂಕರ್ ಮಾತನಾಡಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ನಾಯಕ ಸಮಾಜದ ನಾಯಕರಾಗಿದ್ದ ಚಿಕ್ಕಮಾಧುರವರ ನಿಧನದ ನಂತರ ಅನಿಲ್‌ಚಿಕ್ಕಮಾಧುರವರಿಂದ ನಾಯಕತ್ವ ಬಯಸಿರುವ ಸಮುದಾಯಕ್ಕೆ ಮುಂದಿನ ದಿನಗಳಲ್ಲಿ ಅನುಕೂಲವಾಗಲಿದೆ ಎಂದು ತಿಳಿಸಿದರು.

ಶಾಸಕ ಅನಿಲ್‌ಚಿಕ್ಕಮಾಧುರವರಿಗೆ ಸರ್ಕಾರ ಉತ್ತಮವಾದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಿದ್ದು ಆನಂತರ ಸಚಿವರನ್ನಾಗಿಯೂ ಮಾಡಲಿದೆ ಎಂದು ಮಾಹಿತಿ ನೀಡಿದರು.

ಕೆ.ಆರ್.ನಗರ ತಾಲೂಕು ಅಧ್ಯಕ್ಷ ನರಸಿಂಹ ನಾಯಕ, ಸಾಲಿಗ್ರಾಮ ತಾಲೂಕು ಅಧ್ಯಕ್ಷ ಮಾದನಾಯಕ, ನೌಕರರ ಸಂಘದ ಅಧ್ಯಕ್ಷ ಜಿ.ಕೆ.ಸಿದ್ದೇಶ್ವರಪ್ರಸಾದ್, ಲೋಕೋಪಯೋಗಿ ಇಲಾಖೆಯ ಎಇಇ ಸುಮಿತ, ಶಿಕ್ಷಣ ಸಂಯೋಜಕರಾದ ದಾಸಪ್ಪ, ಕಿರಣ್‌ಕುಮಾರ್, ಸಂಘದ ಕಾರ್ಯದರ್ಶಿ ಪರಮೇಶ್, ಟಿಎಪಿಸಿಎಂಎಸ್ ನಿರ್ದೇಶಕ ತೋಟಪ್ಪನಾಯಕ, ಪುರಸಭೆ ಸದಸ್ಯ ಶಿವುನಾಯಕ್, ಮುಖಂಡರಾದ ಕಲ್ಲಹಳ್ಳಿಶ್ರೀನಿವಾಸ್, ರಾಜನಾಯಕ, ಮಹದೇವನಾಯಕ, ಸಿದ್ದನಾಯಕ, ಲೋಹಿತ್, ಜ್ಯೋತಿಕುಮಾರ್, ಕೆ.ವಿ.ರಮೇಶ್, ಮುಖಂಡ ಚುಂಚನಕಟ್ಟೆ ಮಣಿಕಂಠ,ತಂದ್ರೆಗಿರೀಶ್,ವೆಂಕಟೇಶ್, ಮತ್ತಿತರರು ಹಾಜರಿದ್ದರು.

 

ವರದಿ : ಹರೀಶ್ ಸಾಲಿಗ್ರಾಮ

Continue Reading
Click to comment

Leave a Reply

Your email address will not be published. Required fields are marked *

Mysore

ಜೂಜಾಡುತ್ತಿದ್ದ ನಾಲ್ವರ ಬಂಧನ

Published

on

ಮೈಸೂರು: ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ ಒಟ್ಟು 12.5 ಸಾವಿರ ರೂ ನಗದು ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರ 2ನೇ ಹಂತದ ಜೆ.ಬಿ. ಪ್ಯಾರಡೈಸ್ನ ಕೊಠಡಿಯೊಂದರಲ್ಲಿ ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಡುತ್ತಿದ್ದರು.

ಇದರ ಬಗ್ಗೆ ಜನವರಿ 14 ರಂದು ನಗರದ ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿ.ಸಿ ಬಿ.ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ವಿ ಜಯನಗರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ.

Continue Reading

Mysore

ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡುತ್ತಿದ್ದ ನಾಲ್ವರ ಬಂಧನ.

Published

on

ಮೈಸೂರು: ವಿವಿಧ ಕಂಪನಿಗೆ ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡಿಕೊಂಡು ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ. ಒಟ್ಟು 127 ಸಿಲಿಂಡರ್ ಗಳು 79 ರಾಡುಗಳು, 2 ಡಿಜಿಟಲ್ ಯಂತ್ರಗಳು ಹಾಗೂ 1 ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.


ನಗರದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯ ಜಮೀನಿನಲ್ಲಿ ನಿರ್ಮಾಣ ಮಾಡಿರುವ ಶೆಡ್ ನಲ್ಲಿ ಅಕ್ರಮವಾಗಿ ವಿವಿಧ ಕಂಪನಿಗಳಿಗೆ ಅಡುಗೆ ಅನಿಲ ಸಿಲಿಂಡರ್ ಗಳನ್ನು ಉಪಯೋಗಿಸಿಕೊಂಡು ಯಾವುದೇ ಅಧಿಕೃತ ರಹದಾರಿ ಮತ್ತು ಖರೀದಿ ಮಾಡಿರುವ ಬಿಲ್ ಇಲ್ಲದೆ.

ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾರೆ ಎಂದು ಜನವರಿ 11 ರಂದು ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ. ಸಿ.ಸಿ.ಬಿ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

Continue Reading

Mysore

ಮಾದಕವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತದ್ದ ಪೆಡ್ಲರ್ ಬಂಧನ

Published

on

ಮೈಸೂರು ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಪ್ರಯತ್ನಿಸಿದ ಪೆಡ್ಲರ್ ನನ್ನು ಸಿ.ಸಿ.ಬಿ ಘಟಕದ ಪೊಲೀಸರು ಬಂಧಿಸಿ ಒಟ್ಟು 20. ಸಾವಿರ ರೂ ಮೌಲ್ಯದ 6 ಗ್ರಾಂ 600 ಮಿಲಿ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.


ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣಿಗಿರಿ ಹಳೇ ಆರ್.ಟಿ.ಒ. ಅಫೀಸ್ ಹತ್ತಿರ ಇರುವ ತ್ರಿವೇಣೆ ಪಾರ್ಕ್ ಬಳಿ. ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಒಬ್ಬ ಪೆಡ್ಲರ್ ನಿಂತಿದ್ದಾನೆಂದು ಜನವರಿ 7 ರಂದು ನಗರದ ಸಿ.ಸಿ.ಬಿ. ಘಟಕದ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ.

ಸಿ.ಸಿ.ಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.

Continue Reading

Trending

error: Content is protected !!