Connect with us

State

ನಿರ್ಮಲಾ ಸೀತಾರಾಮನ್ ಎನ್ ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್ ಮಂಡಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

Published

on

ಬೆಂಗಳೂರು, ಜು.23

“ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್ ಡಿಎ ಸರ್ಕಾರ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದಾಗಿದೆ. ಕರ್ನಾಟಕಕ್ಕೆ ಯಾವುದೇ ನೆರವು ನೀಡದೆ ಅವರ ಮೇಲಿದ್ದ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೇಂದ್ರ ಬಜೆಟ್ ವಿಚಾರವಾಗಿ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಈ ಬಜೆಟ್ ನಲ್ಲಿ ನಿರ್ಮಲಾ ಸೀತರಾಮನ್ ಅವರು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲು ಬಿಹಾರ ಹಾಗೂ ಆಂಧ್ರ ಪ್ರದೇಶಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಇದು ಅತ್ಯಂತ ನಿರಾಶಾದಾಯಕ ಬಜೆಟ್. ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ದೇಶವನ್ನು ಒಂದಾಗಿ ನೋಡಿಲ್ಲ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳನ್ನು ಕಡೆಗಣಿಸಿದ್ದಾರೆ. ಇದು ಕೇವಲ ಬಿಜೆಪಿ ಹಾಗೂ ಎನ್ ಡಿಎ ಮೈತ್ರಿಕೂಟ ಪಕ್ಷಗಳ ಆಡಳಿತ ರಾಜ್ಯಗಳಿಗೆ ನೆರವು ನೀಡುವ ಬಜೆಟ್ ಆಗಿದೆ. ಈ ಬಜೆಟ್ ನಲ್ಲಿ ತಾರತಮ್ಯ ಹೆಚ್ಚಾಗಿದೆ. ಇದು ಖಂಡನೀಯ” ಎಂದು ಟೀಕಿಸಿದರು.

“ಪ್ರಧಾನಮಂತ್ರಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆ ನಾನು ಬಹಳಷ್ಟು ವಿಶ್ವಾಸ ಇಟ್ಟುಕೊಂಡಿದ್ದೆ. ಇಡೀ ವಿಶ್ವ ಭಾರತವನ್ನು ಬೆಂಗಳೂರಿನ ಮೂಲಕ ನೋಡುತ್ತಿದೆ. ಬೆಂಗಳೂರು ಹಾಗೂ ಕರ್ನಾಟಕ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡಿ ಜಾಗತಿಕ ಮಟ್ಟದಲ್ಲಿ ತನ್ನದೇ ಚಾಪು ಮೂಡಿಸಿದೆ. ಹೀಗಾಗಿ ಪ್ರಧಾನಮಂತ್ರಿಗಳು ಬೆಂಗಳೂರಿಗೆ ಮೂಲಸೌಕರ್ಯ ನೆರವು ಹಾಗೂ ಕರ್ನಾಟಕಕ್ಕೆ ಸಹಾಯ ಮಾಡುವ ಭರವಸೆ ಇಟ್ಟುಕೊಂಡಿದ್ದೆ. ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದು, ತಮ್ಮ ರಾಜ್ಯಕ್ಕೆ ಆದ್ಯತೆ ನೀಡುತ್ತಾರೆ. ಕರ್ನಾಟಕದ ಹಿತ ರಕ್ಷಣೆ ಮಾಡುತ್ತಾರೆ, ಬಾಕಿ ಇರುವ ಯೋಜನೆಗಳಿಗೆ ಅನುದಾನ ನೀಡುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

Continue Reading

State

ಮೆಟ್ರೋ ದರ ಏರಿಕೆ: ಹೈಕ್‌ ಸಿದ್ದರಾಮಯ್ಯ ಎಂದು ಜರಿದ ಬಿಜೆಪಿ

Published

on

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಬಿಎಂಆರ್‌ಸಿಎಲ್‌ ಅಣಿಯಾಗಿರುವಾಗಲೇ ರಾಜ್ಯ ಬಿಜೆಪಿ, ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಬಿಜೆಪಿ ಇನ್ನುಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೈಕ್‌ ಸಿದ್ದರಾಮಯ್ಯ ಎಂದು ಕರೆಯಬೇಕು ಜರಿದಿದೆ.

ರಾಜ್ಯದಲ್ಲಿ ಸಾರಿಗೆ ನಿಗಮಗಳಿಗೆ ಐಸಾ ಐಸಾ ಯೋಜನೆ ಕೊಟ್ಟು ಬಸ್‌ಗಳನ್ನು ತಳ್ಳುವಂತೆ ಮಾಡಿರುವ ಭ್ರಷ್ಟ ಸಿದ್ದರಾಮಯ್ಯ ಅವರು ಇದೀಗ ಎಲ್ಲಾ ಹೈಕ್‌ ಹೈಕ್‌ ಎನ್ನುತ್ತಾ 48% ಮೆಟ್ರೋ ಪ್ರಯಾಣ ದರವನ್ನು ಏರಿಕೆ ಮಾಡುವ ಮೂಲಕ ಹೈಕ್‌ ರಾಮಯ್ಯ ಎನಿಸಿಕೊಂಡಿದ್ದಾರೆ.

ಬಸ್‌ ಪ್ರಯಾಣವೂ ದುಬಾರಿ ಮೆಟ್ರೋ ಬಲು ದುಬಾರಿ ಆಗಿದೆ. ಜನರಿಗೆ ಅಕ್ಕಿಯನ್ನೂ ಕೊಡುತ್ತಿಲ್ಲ, ಗೃಹ ಲಕ್ಷ್ಮಿ ಹಣವನ್ನು ನೀಡುತ್ತಿಲ್ಲ. ದುಡಿದು ತಿನ್ನೋಣ ಎಂದರೆ ಎಲ್ಲಾ ದರವನ್ನು ಏರಿಕೆ ಮಾಡಿ ಬಡವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದೆ ರಾಜ್ಯ ಕಾಂಗ್ರೆಸ್‌ ಸರಕಾರ ಎಂದು ಬಿಜೆಪಿ ಕಿಡಿಕಾರಿದೆ.

https://x.com/BJP4Karnataka/status/1880571971219644629

Continue Reading

State

ಪರಿಶಿಷ್ಟರ ಹಣವು ಸಾಮಾಜಿಕ ಹೂಡಿಕೆಯಾಗಬೇಕೇ ಹೊರತು, ಸಾಮಾಜಿಕ ಖರ್ಚಾಗಬಾರದು: ಡಾ. ಎಚ್‌.ಸಿ.ಮಹದೇವಪ್ಪ

Published

on

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ವಿಧಾನಸೌಧದ ಕೊಠಡಿ ಸಂಖ್ಯೆ 334 ರಲ್ಲಿ SCSP ನೋಡಲ್ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದೆರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ನಿಗದಿತ ಅವಧಿಯ ಒಳಗಾಗಿ SCSP ಅನುದಾನವನ್ನು ಬಳಸಿಕೊಂಡು ಪರಿಶಿಷ್ಟರ ಅಭಿವೃದ್ಧಿಗೆ flag ship ಯೋಜನೆಗಳನ್ನು ರೂಪಿಸಬೇಕೆಂದು ಸೂಚಿಸಿದರು.

ಸಹಕಾರಿ ವಲಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರಿಶಿಷ್ಟರ ನೊಂದಾವಣೆ ಮಾಡಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಮುಖ್ಯವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ SCSP ಹಣವನ್ನು ಪಡೆಯುವ ಇಲಾಖೆಗಳು ಸುಮ್ಮನೇ ಹಣ ಖರ್ಚು ಮಾಡದೇ ಸೂಕ್ತ ರೀತಿಯಲ್ಲಿ ಯೋಜನೆಗಳನ್ನು ಮಾಡುವ ಮೂಲಕ ಪರಿಶಿಷ್ಟ ಸಮುದಾಯದ ಹಣ ಸದ್ಬಳಕೆಯತ್ತ ಗಮನ ಹರಿಸಬೇಕೆಂದು ತಿಳಿಸಿದರು.

ಅಧಿಕಾರಿಗಳು ಮೌಲ್ಯಮಾಪನದ ಕಡೆ ಹೆಚ್ಚು ಗಮನ ಹರಿಸಿ, ವಸತಿ ಇಲ್ಲದ ಜನರು ಎಷ್ಟು ಮಂದಿ ಇದ್ದಾರೆ, ಕೃಷಿಯಲ್ಲಿ ತೊಂದರೆ ಅನುಭವಿಸುತ್ತಿರುವ ಪರಿಶಿಷ್ಟ ಸಮುದಾಯದವರು ಎಷ್ಟು ಮಂದಿ ಇದ್ದಾರೆ ಮತ್ತು ಯಾರಿಗೆಲ್ಲಾ ನಾವು ಉದ್ಯಮಗಳನ್ನು ಮಾಡಲು, ಕೌಶಲ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂಬುದರ ಕುರಿತು ಅಧಿಕಾರಿ ಮಿತ್ರರು ನೇರವಾಗಿ ಜನರ ಬಳಿ ಹೋಗಿ ವಾಸ್ತವಗಳನ್ನು ಅರಿಬೇಕೆಂದು ತಿಳಿಸಿದರು.

ಇನ್ನು ಪರಿಶಿಷ್ಟ ಸಮುದಾಯದವರಿಗೆ ಮನೆ ಕಟ್ಟಲು 5 ಲಕ್ಷ ರೂಪಾಯಿಯ unit fund ಅನ್ನು ನಿಗದಿಗೊಳಿಸುವ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚಿಸುವುದಾಗಿ ಹೇಳಿದರು.

ಉನ್ನತ ಶಿಕ್ಷಣ ಮಾಡುತ್ತಿರುವ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ಅವರಿಗೆ ಬರಬೇಕಾದ ವಿದ್ಯಾರ್ಥಿ ವೇತನವನ್ನು ನಿಗದಿತ ಸಮಯಕ್ಕೆ ಕಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವ ಸಂದರ್ಭದಲ್ಲಿ ಕೆಲವೊಂದು ಗೊಂದಲ ಉಂಟಾಗಿದ್ದು, ಈ ಗೊಂದಲವನ್ನು ಶೀಘ್ರದಲ್ಲಿ ಪರಿಹಾರ ಮಾಡುವುದಾಗಿ ಅಧಿಕಾರಿಗಳು ತಿಳಿಸಿದರು.

ಇನ್ನು ಸರ್ಕಾರದ ಎಲ್ಲಾ ಇಲಾಖೆಗಳೂ ಕೂಡಾ ಪರಿಶಿಷ್ಟರ ಹಣವನ್ನು ಸಾಮಾಜಿಕ ಖರ್ಚು ( Social Expenditure) ಎಂದು ಭಾವಿಸದೇ ಅದನ್ನು ಸಾಮಾಜಿಕ ಹೂಡಿಕೆ ( Social Investment ) ಆಗಿ ವಿನಿಯೋಗಿಸಿದರೆ ಮಾತ್ರ ಪರಿಶಿಷ್ಟರ ಏಳಿಗೆ ಸಾಧ್ಯ ಎಂಬುದಾಗಿ ತಿಳಿದರು.

ನಿಗದಿತ ಅವಧಿಯಲ್ಲಿ ಹಣ ಖರ್ಚು ಮಾಡದೇ SCSP/TSP ಕಾಯ್ದೆಯ ಆಶಯಗಳನ್ನು ಮರೆತು, ನಿಯಮಬಾಹಿರವಾಗಿ ವರ್ತಿಸಿದರೆ ಮತ್ತು ಅನುದಾವನ್ನು ಬಳಸುವಲ್ಲಿ ನಿರ್ಲಕ್ಷ್ಯ ತೋರಿದರೆ ಸಮಾಜ ಕಲ್ಯಾಣ ಇಲಾಖೆಯು ಸಿಂಗಲ್ ವಿಂಡೋ ಏಜೆನ್ಸಿ ಮೂಲಕ ಖರ್ಚಾಗದ ಹಣವನ್ನು ಹಿಂಪಡೆದು, ಪರಿಶಿಷ್ಟ ಸಮುದಾಯಗಳಿಗೆ ಪೂರಕ ಯೋಜನೆಗಳನ್ನು ನೀಡಲಿದೆ ಎಂಬ ಸಂಗತಿಯನ್ನು ಪ್ರಮುಖವಾಗಿ ತಿಳಿಸಿದರು.

Continue Reading

State

ಬಿ.ಎಸ್‌ ಯಡಿಯೂರಪ್ಪ ಸಿಎಂ ಆಗಲು ರಮೇಶ್‌ ಜಾರಕಿಹೊಳಿ ಕಾರಣ: ಯತ್ನಾಳ್‌ ಟಾಂಗ್‌

Published

on

ವಿಜಯಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಸತೀಶ್‌ ಜಾರಕಿಹೊಳಿ ಕಾರಣ. ಅವರು ಕಾಂಗ್ರೆಸ್‌ ಪಕ್ಷದಿಂದ 17 ಜನ ಶಾಸಕರನ್ನು ಕರೆದುಕೊಂಡು ಬರದೇ ಹೋಗಿದ್ದರೇ ಯಡಿಯೂರಪ್ಪ ಸಿಎಂ ಆಗಲು ಆಗುತ್ತಿರಲಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಟಾಂಗ್‌ ಕೊಟ್ಟಿದ್ದಾರೆ.

ಬಿಎಸ್‌ವೈ ಮುಖ್ಯಮಂತ್ರಿಯಾಗಿ, ನೀವೆಲ್ಲಾ ಇಷ್ಟು ದುಡ್ಡು ಮಾಡಲು ರಮೇಶ್‌ ಜಾರಕಿಹೊಳಿಯೇ ಕಾರಣ. ನಿಮ್ಮ ಸಂಪಾದನೆ ಬಗ್ಗೆ ಇಡೀ ಜಗತ್ತಿಗೆ ಗೊತ್ತಿದೆ ಎಂದು ಯತ್ನಾಳ್‌ ಬಾಂಬ್‌ ಹಾಕಿದ್ದಾರೆ.

ರಮೇಶ್‌ ಜಾರಕಿಹೊಳಿ ಅವರು ಎಸ್‌ಟಿ ಸಮುದಾಯದ ನಾಯಕ. ಅವರನ್ನು ಹಗುರವಾಗಿ ಕಾಣುವುದು ಬೇಡ. ಸಚಿವರಾಗಿಯೂ ಉತ್ತಮ ಕೆಲಸ ಮಾಡುತ್ತಿದ ಜಾರಕಿಹೊಳಿ ಅವರನ್ನು ಬಲಿಕೊಟ್ಟವರು ಯಾರು? ಎಂದು ಬಿವೈವಿ ಅವರನ್ನು ಪ್ರಶ್ನಿಸಿದ್ದಾರೆ.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಒಳ್ಳೆಯ ನಾಯಕ ಅಧ್ಯಕ್ಷನಾಗಬೇಕಾಗದೇ ಚುನಾವಣೆ ಮೂಲಕ ಆಯ್ಕೆಯಾಗಬೇಕು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಚುನಾವಣೆಗೆ ನಿಲ್ಲುವುದಕ್ಕೆ ಎಲ್ಲರಿಗೂ ಮುಕ್ತ ಸ್ವಾತಂತ್ರ್ಯವಿದೆ. ವಿಜಯೇಂದ್ರ ಅವರು ಸ್ಪರ್ಧೆ ಮಾಡಲಿ, ಸಾಮಾನ್ಯ ಕಾರ್ಯಕರ್ತರು ಸ್ಪರ್ಧೆ ಮಾಡಲಿ. ಚುನಾವಣೆ ಪ್ರಕಟಗೊಂಡ ಬೆನ್ನಲ್ಲೇ ನಾವು ಏನೋ ಪ್ರಕಟಣೆ ಮಾಡುವುದಿದೆ. ಅದನ್ನು ಮಾಡುತ್ತೇವೆ. ಯಾವುದೇ ಕಾರಣಕ್ಕೂ ಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ. ಕಲುಷಿತ ವ್ಯಕ್ತಿಗಳಿಂದ ಬಿಜೆಪಿ ಮುಕ್ತ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಯತ್ನಾಳ್‌ ಹೇಳಿದರು.

Continue Reading

Trending

error: Content is protected !!