Connect with us

Kodagu

ನೆಲಜಿ, ಕುಂಜಿಲ ಗ್ರಾಮದಲ್ಲಿ ಹುಲಿ ಹೆಜ್ಜೆಗುರುತು ಪತ್ತೆ -ಜನರಲ್ಲಿ ಆತಂಕ

Published

on

ನಾಪೋಕ್ಲು :ನಾಪೋಕ್ಲು ಸಮೀಪದ ನೆಲಜಿ ಮತ್ತು ಕುಂಜಿಲ ಗ್ರಾಮದ ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷಗೊಂಡು ಜನರಲ್ಲಿ ಆತಂಕ ಸೃಷ್ಟಿಸಿದೆ.

ನೆಲಜಿ ಗ್ರಾಮದ ಅಚ್ಚಾಂಡಿರ ಹಾಗೂ ಕಲ್ಯಾಟಂಡ ಕುಟುಂಬಸ್ಥರ ತೋಟದಲ್ಲಿ ಮಂಗಳವಾರ ಬೆಳಗ್ಗೆ ಕಾರ್ಮಿಕರು ಕೆಲಸ ಮಾಡುತ್ತಿರುವ ಸಂದರ್ಭ ಕಾಡು ಕುರಿಯನ್ನು ಹುಲಿಯೊಂದು ಅಟ್ಟಿಸಿಕೊಂಡು ಹೋಗುತ್ತಿರುವ ದೃಶ್ಯ ಗೋಚರಿಸಿದೆ ಎನ್ನಲಾಗಿದೆ

ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಹುಲಿ ಹೆಜ್ಜೆ ಗುರುತು ಸ್ಪಷ್ಟವಾಗಿ ಕಾಣದ ಕಾರಣ ಶಂಕೆ ವ್ಯಕ್ತವಾಗಿದ್ದು ತೋಟದಲ್ಲಿ ಸ್ಥಳಗುರುತಿಸಿ ಸಿಸಿ ಕ್ಯಾಮೆರಾ ಅಳವಡಿಸಿ ಹುಲಿಯ ಚಲನವಲನ ಪತ್ತೆಗೆ ಪ್ರಯತ್ನಿಸುವುದಾಗಿ ವಲಯ ಅರಣ್ಯಾಧಿಕಾರಿ ಸುರೇಶ್ ಮಾಹಿತಿ ನೀಡಿದ್ದಾರೆ.

ನೆಲಜಿ ಮತ್ತು ಕುಂಜಿಲ ಎರಡು
ಗ್ರಾಮಗಳ ಜನರು ಎಚ್ಚರಿಕೆಯಲ್ಲಿರುವಂತೆ ಅರಣ್ಯಾಧಿಕಾರಿ ಸುರೇಶ್ ಮನವಿ ಮಾಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Kodagu

ತಾಯಿಯ ಮರಣ – ಮನನೊಂದು ಯುವಕ ನೇಣಿಗೆ ಶರಣು

Published

on

ವಿರಾಜಪೇಟೆ: ತಾಯಿಯ ಅಕಾಲಿಕ ಮರಣ ನೆನೆದು ಮನನೊಂದ ಯುವಕ ನೇಣಿಗೆ ಶರಣಾದ ಘಟನೆ ನಗರದ ಮೈಕ್ರೋ ಸ್ಟೇಷನ್ ಚಿಕ್ಕಪೇಟೆಯಲ್ಲಿ ನಡೆದಿದೆ.
ವಿರಾಜಪೇಟೆ ನಗರದ ಚಿಕ್ಕಪೇಟೆ ಮೈಕ್ರೋ ಸ್ಟೇಷನ್ ನಿವಾಸಿ ದಿವಂಗತ ಮೋಹನ್ ಕುಮಾರ್ ಮತ್ತು ಪಟ್ಟು ದಂಪತಿಗಳ ಪುತ್ರ ಕ್ಯಾಟರಿಂಗ್ ಕೆಲಸ ಮಾಡುತಿದ್ದ ಎಸ್.ಎಂ. ಮಧುಸೂದನ್ (24) ನೇಣಿಗೆ ಶರಣಾದ ವ್ಯಕ್ತಿ.


ಚಿಕ್ಕ ಪೇಟೆ ಮೈಕ್ರೋ ಸ್ಟೇಷನ್ ನಿವಾಸಿಯಾಗಿದ್ದ ದಿವಂಗತ ಮೋಹನ್ ಕುಮಾರ್ ಅವರಿಗೆ ೦೬ ಮಂದಿ ಮಕ್ಕಳು. ಪೈಕಿ ಇರ್ವರು ಪುತ್ರಿಯರು, ಮತ್ತು ನಾಲ್ಕು ಮಂದಿ ಪುತ್ರರು. ಮೃತನಾದ ಯುವಕ ಐದನೆಯವನು. ಕೆಲವು ತಿಂಗಳ ಹಿಂದೆ ಮೃತನ ತಾಯಿ ಪಟ್ಟು ವಯೋ ಸಹಜ ಕಾಯಿಲೆಗೆ ತುತ್ತಾಗಿ ಮರಣ ಹೊಂದಿದ್ದರು. ತಾಯಿಯ ಅಕಾಲಿಕ ಮರಣ ಯುವಕನ ಮೇಲೆ ಗಾಢವಾದ ಪ್ರಭಾವ ಬೀರಿತು. ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆಾ.೨೫ ರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಕೋಣೆಯ ಮೇಲ್ಚಾವಣಿಗೆ ಬಟ್ಟೆ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಅಣ್ಣ ಮಂಜುನಾಥ್ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

Kodagu

ಪ್ರಿಯಕರರೊಂದಿಗೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ- ಸವಾಲಾಗಿದ್ದ ಪ್ರಕರಣ ಬಯಲು ಮಾಡಿದ ಕೊಡಗು ಪೊಲೀಸರು | ಮೂವರು ಆರೋಪಿಗಳ ಬಂಧನ

Published

on

ಮಡಿಕೇರಿ : ವ್ಯಕ್ತಿಯೋರ್ವರನ್ನು ಹತ್ಯೆಗೈದು ದೇಹವನ್ನು ಸುಟ್ಟ ಘಟನೆಗೆ ಸಂಬಂಧಪಟ್ಟಂತೆ ಕೊಡಗು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತವ್ಯಕ್ತಿಯ ಎರಡನೇ ಪತ್ನಿ ಹಾಗೂ ಆಕೆಯ ಇಬ್ಬರು ಪ್ರಿಯಕರರೇ ಕೊಲೆ ಮಾಡಿರುವ ಆರೋಪದಡಿ ಬಂಧಿತರಾದವರು.
ಪೊಲೀಸರ ತನಿಖೆಯಲ್ಲಿ ಹೈದರಾಬಾದ್ ನ ರಮೇಶ್ ಕುಮಾರ್ (54) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮೃತ ರಮೇಶ್‌ ಕುಮಾರ್‌ ನ ಎರಡನೇ ಹೆಂಡತಿ, ತೆಲಂಗಾಣ ರಾಜ್ಯದ ಯಾದ್ರಾದಿ ಜಿಲ್ಲೆಯ, ಬೆಂಗಳೂರಿನಲ್ಲಿ ವಾಸವಿದ್ದ ನಿಹಾರಿಕಾ ಪಿ (29), ಹರಿಯಾಣ ರಾಜ್ಯದ ಕಾರ್ನಲ್‌ ಗರುಂದದ ಅಂಕೂರ್‌ ರಾಣ (28) ಆಂದ್ರಪ್ರದೇಶದ ಕಡಪ ಜಿಲ್ಲೆಯ ನಿಖಿಲ್‌ ಮೈರೆಡ್ಡಿ (28) ಎಂಬುವವರನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಲಾದ ಮರ್ಸಿಡಿಸ್‌ ಬೆನ್ಜ್‌ ಕಾರು ಹಾಗೂ ಮೊಬೈಲ್‌ ವಶಕ್ಕೆ ಪಡೆಯಲಾಗಿದೆ.
ಈ ಕುರಿತು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್ ಕೆ, ಅ.8 ರಂದು ಸುಂಟಿಕೊಪ್ಪ ಪೊಲೀಸ್ ಠಾಣಾ ಸರಹದ್ದಿನ ಪನ್ಯ ಎಸ್ಟೇಟ್ ಎಂಬಲ್ಲಿ ಸಂದೇಶ್ರವರ ಕಾಫಿ ತೋಟದಲ್ಲಿ ಅರ್ದಂಬರ್ಧ ಬೆಂದಿರುವ ಗಂಡಸಿನ ಶವವನ್ನು ಕಾಫಿ ತೋಟದ ಕೆಲಸಗಾರರು ನೋಡಿದ್ದು, ತೋಟದ ಮಾಲಿಕರು ನೀಡಿದ ದೂರಿನ ಮೇರೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ. ಇದೊಂದು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದು, ಅರ್ಧ ಸುಟ್ಟು ಕರಕಲಾಗಿರುವ ಮೃತದೇಹ ಯಾರೆಂಬುದು ಗೊತ್ತಿಲ್ಲದೇ ಇದ್ದು, ಪ್ರಕರಣದ ಪತ್ತೆ ಪೊಲೀಸರಿಗೆ ಸವಾಲಾಗಿತ್ತು ಎಂದು ಮಾಹಿತಿ ನೀಡಿದರು.


ತಂಡವು ತಾಂತ್ರಿಕ ಮತ್ತು ವೈಜ್ಞಾನಿಕ ರೀತಿಯಲ್ಲಿ ಮಾಹಿತಿ ಸಂಗ್ರಹಿಸಿ ಸುಮಾರು 500 ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳ ಪರೀಶಿಲನೆ ಮುಖಾಂತರ ಸಂಚರಿಸಿದಂತ ವಾಹನಗಳ ಪರಿಶೀಲನೆ, ಮೊಬೈಲ್ ಕರೆಗಳ ಜಾಡನ್ನು ಹಿಡಿದು ಸತತ 10 ದಿನಗಳವರೆಗೆ ಮಾಹಿತಿ ಸಂಗ್ರಹಣೆ ಕಾರ್ಯಚರಣೆ ನಡೆಸಿ, ಅಕ್ಕಪಕ್ಕದ ಜಿಲ್ಲೆಗಳಲ್ಲಿ ಕಾಣೆಯಾದ ವ್ಯಕ್ತಿಗಳ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಕೊನೆಯದಾಗಿ ಕೃತ್ಯಕ್ಕೆ ಬಳಸಿರಬಹುದಾದ ಸಂಶಾಯಸ್ಪದ ಕಾರಿನ ಮಾಹಿತಿ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಯು ನಿಹಾರಿಕ ಮೃತ ರಮೇಶ್ ಕುಮಾರ್‌ನನ್ನು ವಿವಾಹವಾಗಿದ್ದು, ನಿಹಾರಿಕಾಳು ಆಸ್ತಿ ಮಾರಾಟದಲ್ಲಿ 8 ಕೋಟಿ. ಹಣ ಪಡೆಯುವ ಉದ್ದೇಶದಿಂದ, ನಿಹಾರಿಕಾಳ ಮತ್ತೊಬ್ಬ ಬಾಯ್ ಫ್ರೆಂಡ್ ಹರಿಯಾಣ ಮೂಲದ ಅಂಕುರ್ ರಾಣ ಎಂಬಾತನನ್ನು ಅ.೧ ರಂದು ಹೈದರಾಬಾದ್‌ ಬರಲು ತಿಳಿಸಿ ಅ.3ರಂದು ನಿಹಾರಿಕಳು ರಮೇಶ್‌ ಕುಮಾರ್‌ನನ್ನು ಬರಲು ತಿಳಿಸಿ, ಕಾರಿನಲ್ಲಿ ಡ್ರಾಪ್ ಮಾಡುವ ನೆಪದಲ್ಲಿ ರಮೇಶ್‌ ಕುಮಾರ್‌ನ ಕಾರಿನಲ್ಲಿ ಹೊರಟು ಉಪ್ಪಲ್-ಭುವನಗಿರಿ ನಡುವಿನ ಹೆದ್ದಾರಿಯ ಬಳಿ ಕಾರನ್ನು ಬದಿಗೆ ನಿಲ್ಲಿಸಿ ಇಬ್ಬರೂ ಸೇರಿ ಕೊಲೆ ಮಾಡಿದ್ದಾರೆ. ನಂತರ ಬೆಂಗಳೂರಿನ ಹೊರಮಾವು ಎಂಬಲ್ಲಿಗೆ ತನ್ನ ಬಾಯ್ ಫ್ರೆಂಡ್ ನಿಖಿಲ್ ಬಳಿ ಬಂದು ವಿಚಾರ ತಿಳಿಸಿ ಶವವನ್ನು ಯಾರಿಗೂ ಸಿಗದಂತೆ ನಾಶ ಮಾಡುವ ಉದ್ದೇಶದಿಂದ ಸುಂಟಿಕೊಪ್ಪ ಬಳಿ ಪನ್ನ ಎಸ್ಟೇಟ್ ಬಳಿ ತಂದು ಯಾರಿಗೂ ಗೊತ್ತಾಗದಂತೆ ಬೆಂಕಿ ಹಚ್ಚಿ ಕಾರಿನೊಂದಿಗೆ ತೆರಳಿದ್ದಾರೆಂದು ಘಟನೆಯ ಹಿನ್ನೆಲೆಯ ಬಗ್ಗೆ ಎಸ್ಪಿ ತಿಳಿಸಿದರು.
ಪ್ರಕರಣದ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಅಂಕುರ್ ರಾಣ ಪತ್ತೆಗೆ ವಿಶೇಷ ತಂಡ ರಚಿಸಿದ್ದು, ಪೊಲೀಸರು ಹರಿದ್ವಾರಕ್ಕೆ ತೆರಳಿ ಮಿಂಚಿನ ಕಾರ್ಯಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದುಕೊಂಡು ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

Continue Reading

Kodagu

ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

Published

on

ಮಡಿಕೇರಿ : ಕೊಡಗು ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಈ ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತು) ಕಾಯಿದೆ, 1977 ರನ್ವಯ ಭರ್ತಿ ಮಾಡಲು ಷರತ್ತುಗಳನ್ವಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 14 ರ ಸಂಜೆ 5.30 ಗಂಟೆಗೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಜಿಲ್ಲಾಧಿಕಾರಿ ಕಚೇರಿ, ಮಡಿಕೇರಿ ಇಲ್ಲಿಗೆ ಸಲ್ಲಿಸಬೇಕು.


ಷರತ್ತುಗಳು: ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಜಿಲ್ಲಾ ಬಾರ್ ಅಸೋಸಿಯೇಷನಲ್ಲಿ ನೋಂದಾಯಿಸಿರಬೇಕು. ಅಭ್ಯರ್ಥಿಯು ಕನಿಷ್ಠ 10 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು. ಸರ್ಕಾರಿ ನೌಕರರಾಗಿರಬಾರದು. ಸರ್ಕಾರದ ಯಾವುದೇ ಪೂರ್ಣ ಅಥವಾ ಅರೆಕಾಲಿಕ ಹುದ್ದೆಗಳಲ್ಲಿ ಇರಬಾರದು. ಯಾವುದೇ ನಿಗಮ ಮಂಡಳಿ ಮತ್ತು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದಲ್ಲಿ ಕಾನೂನು ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರಬಾರದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ

Continue Reading

Trending

error: Content is protected !!