Deficiency
ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ – ಅಪಾರ ನಷ್ಟ
ನಾಪೋಕ್ಲು : ನಾಪೋಕ್ಲು ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲಜಿ ಗ್ರಾಮದಲ್ಲಿ ಬೆಳೆಗಾರರ
ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಅಪಾರ ಪ್ರಮಾಣದಲ್ಲಿ ಬೆಳೆದಿದ್ದ ಬೆಳೆಗಳನ್ನು ತುಳಿದು ನಾಶಪಡಿಸಿ ನಷ್ಟ
ಉಂಟು ಮಾಡಿದೆ.
ನೆಲಜಿ ಗ್ರಾಮದ ನಿವಾಸಿ ಎಂ.ಎA ಶಾರದ ಎಂಬುವವರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ತೋಟದಲ್ಲಿ ಬೆಳೆದಿದ್ದ ಕಾಫಿ,
ತೆಂಗು, ಬಾಳೆ ಸೇರಿದಂತೆ ಇನ್ನಿತರ ಫಸಲು ಭರಿತ ಗಿಡಗಳನ್ನು ತುಳಿದು ನಾಶಪಡಿಸಿ ಅಪಾರ ನಷ್ಟಉಂಟು ಮಾಡಿದೆ.
ಕಳೆದ ಕೆಲವು ದಿನಗಳ ಹಿಂದೆ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಯ್ಯಂಡಾಣೆ, ಚೇಲಾವರ,
ಮರಂದೋಡ ಹಾಗೂ ಕಕ್ಕಬ್ಬೆ, ಕುಂಜಿಲ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ತೋಟಗಳಿಗಲ್ಲಿ ದಾಂಧಲೆ ನಡೆಸಿ
ಬೆಳೆಗಾರರು ಕಷ್ಟಪಟ್ಟು ಬೆಳೆದಿದ್ದ ಬೆಳೆಗಳನ್ನು ತುಳಿದು ನಾಶಪಡಿಸಿ ನಷ್ಟ ಅನುಭವಿಸುವಂತೆ ಮಾಡಿತ್ತು. ಈಗ
ಕಾಡಾನೆಗಳು ನೆಲಜಿ ಗ್ರಾಮ ವ್ಯಾಪ್ತಿಯಲ್ಲಿ ಗೋಚರಿಸಿದ್ದು ಜನರು ನಡೆದಾಡಲು ಭಯಪಡುವ ಪರಿಸ್ಥಿತಿ ಉದ್ಭವವಾಗಿದೆ.
ಸಂಬAಧಪಟ್ಟ ಅರಣ್ಯ ಇಲಾಖೆಯವರು ತಕ್ಷಣ ಕಾಡಾನೆಗಳನ್ನು ಕಾಡಿಗಟ್ಟುವ ಅಥವಾ ಹಿಡಿದು ಸ್ಥಳಾಂತರಿಸಲು ಕ್ರಮ
ಕೈಗೊಳ್ಳಬೇಕು. ನಷ್ಟ ಅನುಭವಿಸಿದ ಬೆಳಗಾರರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು
ಒತ್ತಾಯಿಸಿದ್ದಾರೆ.
Deficiency
ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಮತ್ತು ಪ್ರತ್ಯಕ್ಷಿತೆ ಕಾರ್ಯಕ್ರಮ
ಸಾಲಿಗ್ರಾಮ : ತೆಂಗಿನ ಬೆಳೆ ಕೀಟ ನಿಯಂತ್ರಣ ತರಬೇತಿ ತೋಟಗಾರಿಕೆ ಇಲಾಖೆ ಹಾಗು ತೋಟಗಾರಿಕೆ ಮಹಾವಿದ್ಯಾಲಯ ಇವರ ಸಹ ಬಾಗಿತ್ವದಲ್ಲಿ ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಮತ್ತು ಪ್ರತ್ಯಕ್ಷಿತೆ ಕಾರ್ಯಕ್ರಮ ವನ್ನು ಮಿರ್ಲೆ ಹೋಬಳಿಯ ಎಲೆಮುದ್ದನಹಳ್ಳಿ ಕೊಪ್ಪಲು ಗ್ರಾಮದ ರೈತ ಪುಟ್ಟಸ್ವಾಮಿಗೌಡ ಅವರ ತೆಂಗಿನತೋಟದಲ್ಲಿ ಅಕ್ಟೋಬರ್ 31 ರ ಮಂಗಳವಾರ ಬೆಳ್ಳಿಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಟಿ. ಎಸ್. ಭಾರತಿ ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಡಿ. ರವಿಶಂಕರ್ ನೆರವೇರಿಸಳಲಿದ್ದು, ಮುಖ್ಯ ಅತಿಥಿಗಳಾಗಿ ತೋಟಗಾರಿಕೆ ಉಪ ನಿರ್ದೇಶಕ ಡಾ: ಮಂಜುನಾಥ್ ಅಂಗಡಿ,ಡಾ : ಸುದರ್ಶನ್, ಡಾ : ಮುತ್ತು ರಾಜ್, ಭಾಗವಹಿಸಲಿದ್ದಾರೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೆಂಗಿನ ಬೆಲೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಪಡೆದುಕೊಳ್ಳುವಂತೆ ಕೊರಿದ್ದಾರೆ.

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
Deficiency
ಅಧಿಕಾರಿಗಳು ಹಣ ಮಾಡೋದು ಒಂದೇ ದಾರಿಯಲ್ಲ ರೈತರ ಜೊತೆ ಸರಿಯಾಗಿ ನಡೆದುಕೊಳ್ಳಬೇಕು
ಹುಣಸೂರು : ಅಧಿಕಾರಿಗಳು ಹಣ ಮಾಡೋದು ಒಂದೇ ದಾರಿಯಲ್ಲ ರೈತರ ಜೊತೆ ಸರಿಯಾಗಿ ನಡೆದುಕೊಳ್ಳಬೇಕು ಎಂದು ಕೆಲವರು ಆರೋಪಿಸಿದರೆ, ಕೆಲವರು ಸಣ್ಣ ಪುಟ್ಟ ರೈತರ ಮೇಲೆ ನಡೆಯುವ ತೊಂದರೆಗಳನ್ನು ಪ್ರಶ್ನೆಸಿದರೆ ಆ ರೈತರಿಗೆ ಅಧಿಕಾರಿಗಳು ಮಾನಸಿಕವಾಗಿ ತೊಂದರೆ ನೀಡುತ್ತಾರೆ ಆದರೆ ಈಗ ರೈತನಿಗೆ ಶೂ ನಲ್ಲಿ ಹೊಡೆಯಲು ಮುಂದಾಗಿರೋ ಅಧಿಕಾರಿಗೆ ಏನು ಕ್ರಮ ಕೈಗೊಳ್ಳಬೇಕು ಎಂದು ರೈತರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಸಭೆಯಲ್ಲಿ ಹೊರಹಾಕಿದ್ದು ಹೀಗೆ.
ಅವರು ಹುಣಸೂರು ತಾಲೂಕಿನ ಚಿಲ್ಕುಂದ ಗ್ರಾಮದ ತಂಬಾಕು ಮಂಡಳಿಯ ರೈತ ಭವನದಲ್ಲಿ ಪ್ಲಾಟ್ ಫಾರಂ ನಂಬರ್ 62ರ ಹರಾಜು ಅಧೀಕ್ಷಕ ಬ್ರಿಜ್ ಭೂಷಣ್ ವಿರುದ್ಧ ರೈತರು ಸೋಮವಾರ ಸಭೆ ಸೇರಿ ಚರ್ಚಿಸಿ ನಿರ್ಣಯ ಕೈಗೊಂಡು ತಂಬಾಕು ಮಂಡಳಿಯ ಅಧಿಕಾರಿ ಒಬ್ಬ ತಂಬಾಕು ರೈತನಿಗೆ ಶೂ ನಿಂದ ಹೊಡೆಯಲು ಮುಂದಾಗಿರುವುದು ರೈತ ಕುಲಕ್ಕೆ ಅವಮಾನ ಆ ಅಧಿಕಾರಿಯನ್ನು ಕರ್ನಾಟಕ ರಾಜ್ಯದಿಂದ ವರ್ಗಾವಣೆ ಮಾಡಬೇಕು, ಹಾಗೂ ಆತ ಸಭೆಯಲ್ಲಿ ಕ್ಷಮೆ ಕೇಳಬೇಕು ಜೊತೆಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳು ವಿಚಾರಣೆ ಕೈಗೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನ ಕೈಗೊಂಡು ಈ ನಿರ್ಣಯವನ್ನು ಸಭೆಯಲ್ಲಿ ಸರ್ವ ಸದಸ್ಯರಿಂದ ಒಪ್ಪಿಗೆ ಪಡೆದ ಗೊಬ್ಬರ ಕಮಿಟಿಯ ಅಧ್ಯಕ್ಷ ಅಣ್ಣೂರು ಕಾಳೇಗೌಡ ಈ ನಿರ್ಣಯವನ್ನು ಓದಿ ತಿಳಿಸಿದರು.
ಈ ನಿರ್ಣಯದ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಲು ಆರ್.ಎಂ. ಓ ಲಕ್ಷ್ಮಣ್ ರಾವ್ ರವರಿಗೆ ನೀಡಿದರು. ಕಾರ್ಯಕ್ರಮದಲ್ಲಿ ತಂಬಾಕು ಮಂಡಳಿಯ ಉಪಾಧ್ಯಕ್ಷ ಬಸವರಾಜಪ್ಪ, ಸದಸ್ಯರಾದ ವಿಕ್ರಂ ಗೌಡ ,ದಿನೇಶ್ , ಗೊಬ್ಬರ ಕಮಿಟಿಯ ಉಪಾಧ್ಯಕ್ಷ ಮಂಜುನಾಥ್ ಕೆರೆಗೋಡು, ಕಾರ್ಯದರ್ಶಿ ಮರಿಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಡಿಎಸ್ಎಸ್ ಸಂಚಾಲಕ ರಾಮಕೃಷ್ಣ ಅತ್ತಿಕುಪ್ಪೆ, ಪ್ರಭಾಕರ್, ಮೋದೂರು ಶಿವಣ್ಣ, ದೇವರಾಜ್, ಉಂಡವಾಡಿ ಚಂದ್ರೇಗೌಡ, ರವಿಕುಮಾರ್, ನವೀನ್, ಅಗ್ರಹಾರ ರಾಮೇಗೌಡ ಸೇರಿದಂತೆ ಸಾವಿರಾರು ರೈತರು ಭಾಗವಹಿಸಿದ್ದರು.

Chikmagalur
ಧಾರಾಕಾರ ಮಳೆಗೆ ಎರಡು ಮನೆಗಳಿಗೆ ಹಾನಿ
ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ಪಶ್ಚಿಮ ಘಟಕ್ಕೆ ಹೊಂದಿಕೊಂಡಂತೆ ಇರುವ ಮಲೆನಾಡಿನ ಪ್ರದೇಶಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮೂಡಿಗೆರೆ ತಾಲೂಕಿನಲ್ಲಿ ಎರಡು ಮನೆಗಳು ಕುಸಿದಿವೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಚಿನ್ನಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣಜೂರು ಗ್ರಾಮದಲ್ಲಿ ದಿನೇಶ್ ಎಂಬುವವರು ಮನೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಕುಸಿದಿದೆ. ಹಾಗೆಯೇ ಬಾಳೂರು ಹೋಬಳಿ ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗೂರು ಗ್ರಾಮದಲ್ಲಿ ಮನೆಯೊಂದು ಕುಸಿದಿದೆ.
ಮೇಗೂರು ಗ್ರಾಮದ ರಾಮಯ್ಯ ಎಂಬುವವರ ಮನೆ ಮಳೆಯಿಂದಾಗಿ ಕುಸಿದು ಬಿದ್ದಿದೆ. ಮನೆಯ ಗೋಡೆ ಮತ್ತು ಮೇಲ್ಚಾವಣಿ ಬಹುತೇಕ ಕುಸಿದು ಬಿದ್ದಿದೆ. ಈ ಸಮಯದಲ್ಲಿ ಮನೆಯವರು ಒಳಗಡೆಯೇ ಇದ್ದರು ಎಂದು ತಿಳಿದುಬಂದಿದ್ದು. ಮನೆಯವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಕಂದಾಯ ಮತ್ತು ಗ್ರಾಮ
ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅವರ ಮನೆಗೆ ತಾತ್ಕಾಲಿಕ ರಕ್ಷಣೆಗಾಗಿ ಟಾರ್ಪಲ್ ಹೊದಿಸಲು ವ್ಯವಸ್ಥೆ ಮಾಡಿದ್ದು. ಕುಟುಂಬದವರನ್ನು ಪಕ್ಕದ ಮನೆಗೆ ಸ್ಥಳಾಂತರಿಸಲಾಗಿದೆ.
-
Hassan2 hours agoಬೈರಾಪುರ-ಚನ್ನಪುರ- ಮಗ್ಗೆ ರಸ್ತೆ ತಾತ್ಕಾಲಿಕ ಬಂದ್: ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಸೂಚನೆ
-
Special3 hours agoಕರ್ನಾಟಕ ಕುಕ್ಕುಟ ಸಂಜೀವಿನಿ ಯೋಜನೆ: ಮಹಿಳೆಯರಿಗೆ ಉಚಿತ ಕೋಳಿ ಮರಿ, ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ
-
Hassan21 hours agoಒಳ್ಳೆಯ ಕೆಲಸ ಬ್ಯಾಂಕ್ ಠೇವಣಿಯಂತೆ; ಸಮಯ ಬಂದಾಗ ಫಲ ನೀಡುತ್ತದೆ: ರವಿಕುಮಾರ್ ಬಲ್ಲೇನಹಳ್ಳಿ
-
State22 hours agoಡಾ.ಜಿ.ಪರಮೇಶ್ವರ್ ಈ ರಾಜ್ಯದ ಸಿಎಂ ಆಗಲಿ ಎಂಬುದು ನನ್ನ ವೈಯಕ್ತಿಕ ಆಸೆ: ವಿ.ಸೋಮಣ್ಣ
-
Hassan19 hours agoರೋಟರಿ ಬೆಂಗಳೂರು ದಕ್ಷಿಣದಿಂದ MCE ಕಾಲೇಜಿನ 51 ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ
-
Kodagu21 hours agoಅನಧಿಕೃತ ಹೋಸ್ಟೇಗಳಿಗೆ ಕಡಿವಾಣ ನಿಟ್ಟಿನಲ್ಲಿ ವಾರ್ಡ್ವಾರ್ ಸಮಿತಿ ರಚನೆ: 15 ದಿನಗಳೊಳಗೆ ಪೊಲೀಸರಿಂದ ದಲ್ಲಾಳಿಗಳ ವಿರುದ್ದ ಕ್ರಮ
-
State17 hours agoರಾಹುಲ್, ಖರ್ಗೆ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಹೈಕಮಾಂಡೇ: ಬಿ.ವೈ.ವಿಜಯೇಂದ್ರ
-
Mandya20 hours agoವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು
