Chamarajanagar
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ವತಿಯಿಂದ ಸಾರ್ವಜನಿಕ ಕುಂದು ಕೊರತೆ ದೂರು ಸ್ವೀಕಾರ ಕಾರ್ಯಕ್ರಮ ನಡೆಯಿತು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ವತಿಯಿಂದ ಸಾರ್ವಜನಿಕ ಕುಂದು ಕೊರತೆ ದೂರು ಸ್ವೀಕಾರ ಕಾರ್ಯಕ್ರಮ ನಡೆಯಿತು.
ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾದ ದೂರು ಸ್ವೀಕಾರ ಕಾರ್ಯಕ್ರಮ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಿತು.
ತಾಲೂಕಿನ ಸಾರ್ವಜನಿಕರಿಂದ ಒಟ್ಟು ನಾಲ್ಕು ದೂರುಗಳು ದಾಖಲಾದವು. ಅದರಲ್ಲಿ ಎರಡು ಕಂದಾಯ ಇಲಾಖೆ ಸಂಬಂಧಪಟ್ಟಂತೆ ಮತ್ತು ಒಂದು ದೂರು ಪಟ್ಟಣ ಪಂಚಾಯಿತಿ ಮತ್ತು ಒಂದು ದೂರು ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಸಂಬಂಧಪಟ್ಟಂತೆ ದೂರುಗಳನ್ನು ದಾಖಲಿಸಲಾಯಿತು.
ಲೋಕಾಯುಕ್ತ ವಿಭಾಗದ ಇನ್ಸ್ಪೆಕ್ಟರ್ ಟಿ ಆರ್ ಶಶಿಕುಮಾರ್ ಮಾತನಾಡಿ ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರಿಂದ ಮತ್ತು ರೈತ ರಿಂದ ಯಾವುದೇ ದೂರುಗಳು ದಾಖಲಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಸಾರ್ವಜನಿಕ ಕೆಲಸಗಳಿಗೆ ಅನಗತ್ಯ ಹುಳ ವಿಳಂಬ ಮಾಡದೆ ಮತ್ತು ಯಾವುದೇ ಸಭೆ ಹೇಳದ ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ನಿಗದಿತ ಅವಧಿ ಒಳಗೆ ಮುಗಿಸಿಕೊಡಬೇಕು ಎಂದು ಹೇಳಿದರು.
ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ಲೋಕಾಯುಕ್ತ ಇಲಾಖೆಯ ಶಕುಂತಲಾ, ಗುರುಪ್ರಸಾದ್ ,ಕೃಷ್ಣೇಗೌಡ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
Chamarajanagar
ತಲೆಯಲ್ಲಿ ಕೂದಲಿಲ್ಲ ಎಂದು ನಿಂದಿಸಿದ ಪತ್ನಿ: ಮನನೊಂದ ಪತಿ ಆತ್ಮ*ಹತ್ಯೆ

ಚಾಮರಾಜನಗರ: ತಲೆಯಲ್ಲಿ ಕೂದಲು ಇಲ್ಲದ ಕಾರಣಕ್ಕೆ ಪತ್ನಿ ಕಿರುಕುಳ ನೀಡಿದ್ದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಉಡಿಗಾಲ ಗ್ರಾಮದ ನಿವಾಸಿ ಪರಶಿವಮೂರ್ತಿ (32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಪರಶಿವಮೂರ್ತಿಗೆ ತಲೆಯಲ್ಲಿ ಕೂದಲು ಕಡಿಮೆ ಇದ್ದು, ಕೂದಲು ನಾಟಿ ಮಾಡಿಸಿಕೊಳ್ಳುವಂತೆ ಪತ್ನಿ ಒತ್ತಾಯಿಸುತ್ತಿದ್ದಳು ಬೋಳು ತಲೆ ಎಂದು ಪದೇಪದೇ ನಿಂದಿಸುತ್ತಿದ್ದಳು. ಇದರಿಂದ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆ ಮಾಹಿತಿ ತಿಳಿದ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chamarajanagar
ಸಾಮಾಜಿಕ ಭದ್ರತಾ ಯೋಜನೆಗಳ ಮೆಗಾ ಲಾಗಿನ್ ಕಾರ್ಯಕ್ರಮ

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಹಾಗೂ ಭೀಮನಬೀಡು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಎಂಬ ಎರಡು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು ಪಿ ಎಮ್ ಎಸ್ ಬಿ ವೈ ಯೋಜನೆಗೆ 271 ಖಾತೆದಾರರು ಹಾಗೂ ಪಿ ಎಂ ಜೆ ಜೆ ಬಿ ವೈ ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ ಅರ್ಜಿಗಳನ್ನು ಬರೆವುದರ ಮೂಲಕ ನೋಂದಣಿ ಮಾಡಿಸಿದರು.
ಈ ಸಂದರ್ಭದಲ್ಲಿ
ಮಹದೇವೇಗೌಡ
ಧಾನ್ ಫೌಂಡೇಶನ್ ಸಿ ಎಫ್ ಎಲ್ ಗೋವಿಂದರಾಜು
ಆರ್ಥಿಕ ಸಹಾಯಕರು ವಸಂತ ಜ್ಯೋತಿ ಮತ್ತು ಮಮತಾ
ಪಂಚಾಯಿತಿ ಸದಸ್ಯರು ಸ್ವಾಮಿ. ಮತ್ತು ಸಿಬ್ಬಂದಿಗಳು ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು

-
Chamarajanagar21 hours ago
ಕಾಂಗ್ರೆಸ್ ಗೆ ಭರ್ಜರಿ ಗೆಲುವು
-
Uncategorized20 hours ago
ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ: ಪುಂಡಾನೆ ಸೆರೆ ಹಿಡಿದ ಕ್ಯಾಪ್ಟನ್ ಪ್ರಶಾಂತ್ ಅಂಡ್ ಟೀಮ್
-
Chamarajanagar22 hours ago
ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಮೃತ
-
Chikmagalur23 hours ago
ಹತ್ತು ಲಕ್ಷ ಮೌಲ್ಯದ 11 ಬೈಕ್ ಕದ್ದಿದ್ದ ಕಳ್ಳನ ಬಂಧನ
-
National - International13 hours ago
ಪಾಕ್ನ 90 ಮಂದಿ ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದ ಬಲೂಚ್ ಲಿಬರೇಶನ್ ಆರ್ಮಿ
-
Chamarajanagar16 hours ago
ತಲೆಯಲ್ಲಿ ಕೂದಲಿಲ್ಲ ಎಂದು ನಿಂದಿಸಿದ ಪತ್ನಿ: ಮನನೊಂದ ಪತಿ ಆತ್ಮ*ಹತ್ಯೆ
-
Mandya18 hours ago
ಮಳವಳ್ಳಿ ವಸತಿ ಶಾಲೆಯ ದುರ್ಘಟನೆ : ಎಚ್ಡಿಕೆ ಕಳವಳ
-
Kodagu15 hours ago
ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಮೃ*ತ