Connect with us

Hassan

ಪಶು ಔಷಧಿ ಆಸ್ಪತ್ರೆ ಸಮಸ್ಯೆ ಬಗ್ಗೆ ಸದನದಲ್ಲಿ ಗಮನ ಸೆಳೆದ ಶಾಸಕ ಸ್ವರೂಪ್ ಪ್ರಕಾಶ್

Published

on

ಹಾಸನ ಜಿಲ್ಲೆ ಎಂಟು ತಾಲೂಕುಗಳಿಗೆ ಕಳೆದ ಸೆಪ್ಟೆಂಬರ್‌ನಲ್ಲಿ
ಅಗತ್ಯ ಔಷಧಿಗಳನ್ನು ಸರಬರಾಜು ಮಾಡಲಾಗಿದೆ. ಜಿಲ್ಲೆಯ ಪಶು ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇರುವುದು ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಹಾಸನ ಜಿಲ್ಲೆಯಾದ್ಯಂತ ಇರುವ ಪಶು ಆಸ್ಪತ್ರೆಗಳಲ್ಲಿ ಔಷಧಿಕೊರತೆ ಇರುವುದು ನಿಜವೆ, ಪ್ರತಿಯೊಂದು ಪಶು ಆಸ್ಪತ್ರೆಗೆ ಕಳೆದ 6 ತಿಂಗಳಿಂದ ಸರಬರಾಜು ಮಾಡಿರುವ ಔಷಧಿಗಳ ವಿವರ ಕೇಳಿದ ಹಾಸನ ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ.
ಜಿಲ್ಲೆಯಲ್ಲಿ ಚರ್ಮಗಂಡು ಚರ್ಮಗಂಡು ರೋಗ ಕಾಣಿಸಿಕೊಂಡ ಹಿನ್ನೆಲೆ ಸದರಿ ರೋಗ ನಿಯಂತ್ರಣ ಮಾಡಲು ಹಾಗೂ ದಿನ ನಿತ್ಯದ ತುರ್ತು ಚಿಕಿತ್ಸೆಗೆ ಅವಶ್ಯವಿದ್ದ ಬೇವಿನ ಎಣ್ಣೆ, ಹೊಂಗೆ ಎಣ್ಣೆ ಮತ್ತು ಮಿನರಲ್ ಸಪ್ಲಿಮೆಂಟ್‌ಗಳನ್ನು ಜಿಲ್ಲೆಯ 8 ತಾಲೂಕುಗಳಿಗೆ ಕಳೆದ ಜೂನ್‌ನಲ್ಲೇ ಸರಬರಾಜು ಮಾಡಲಾಗಿದೆ ಎಂದರು.
ಜಾನುವಾರು ಆರೋಗ್ಯ ಶಿಬಿರಗಳಿಗೆ ಕಳೆದ ಅಕ್ಟೋಬರ್‌ನಲ್ಲಿ ಎಂಟೂ ತಾಲೂಕುಗಳಿಗೂ ಔಷಧಿ ವಿತರಿಸಲಾಗಿದೆ. ಜಿಲ್ಲಾ ಪಂಚಾಯತ್ ಅನುದಾನದಡಿ ಎರಡು ತ್ರೈಮಾಸಿಕದಲ್ಲಿ 90 ಲಕ್ಷ ರೂ. ಅನುದಾನದಲ್ಲಿ ಜಿಲ್ಲೆಯ ಎಲ್ಲಾ ಪಶು ವೈದ್ಯಕೀಯ ಸಂಸ್ಥೆಗಳ ದಿನ ನಿತ್ಯದ ಹಾಗೂ ತುರ್ತು ಚಿಕಿತ್ಸೆಗೆ ಅವಶ್ಯವಿರುವ ಔಷಧಿ ಖರೀದಿಸಲು ಅನುಮೋದನೆ ದೊರೆತಿದ್ದು, ಔಷಧಿಗಳ ಸರಬರಾಜಿಗೆ ಆದೇಶ ಸಹ ನೀಡಲಾಗಿದೆ ಎಂದು ಹೇಳಿದರು.
ಈ ಪೈಕಿ ಶೇ. 80 ರಷ್ಟು ಔಷಧಿ ಸರಬರಾಜಾಗಿದೆ. ಸದರಿ ಔಷಧಿಗಳನ್ನು ಡಿಸೆಂಬರ್ ಮೊದಲ ವಾರದಲ್ಲಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯ ಔಷಧಿ ಕೊರತೆ ಹಾಗೂ ಸಮರ್ಪಕ ಸಿಬ್ಬಂದಿ ವ್ಯವಸ್ಥೆ ಮಾಡಲು ಸರ್ಕಾರ ಕೈಗೊಂಡಿರುವ ಕ್ರಮಗಳೇನು ಎಂಬ ಶಾಸಕರ ಮತ್ತೊಂದು ಪ್ರಶ್ನೆಗೆ 2023-24 ನೇ ಸಾಲಿನಲ್ಲಿ ನಿಗದಿಯಾಗಿರುವ 1285 ಲಕ್ಷ ಅನುದಾನ ಹಾಗೂ ಜಿಪಂ ಲೆಕ್ಕ ಶೀರ್ಷಿಕೆಯಡಿ ನಿಗದಿಯಾಗಿರುವ ೫೬೪೭ ಲಕ್ಷ ಅನುದಾನದಲ್ಲಿ ರಾಜ್ಯದ ಎಲ್ಲಾ ಪಶುವೈದ್ಯ ಸಂಸ್ಥೆಗಳಿಗೆ ಔಷಧಿ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಖಾಲಿ ಇರುವ ಪಶು ವೈದ್ಯರ ಹುದ್ದೆಗಳಿಗೆ ಅಧಿಕ ಪ್ರಭಾರ ವ್ಯವಸ್ಥೆ ಮಾಡಿ ರೈತರಿಗೆ ತೊಂದರೆ ಆಗದ ರೀತಿಯಲ್ಲಿ ಸೇವೆ ನೀಡಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸರ್ಕಾರ, ಕಳೆದ ಜೂನ್ 30 ರಂದು ಕರ್ನಾಟಕ ಲೋಕಾ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಈ ಬಗ್ಗೆ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿದ್ದು, ಅದು ಇತ್ಯರ್ಥವಾದ ಕೂಡಲೇ ಆದ್ಯತೆ ಮೇರೆಗೆ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಹಾಗೆಯೇ ಹಾಸನ ಜಿಲ್ಲೆಗೆ 13 ಕಿರಿ ಪಶು ವೈದ್ಯಕೀಯ ಪರೀಕ್ಷಕರ ಹುದ್ದೆ ಭರ್ತಿ ಮಾಡಲಾಗಿದೆ. ಹಿರಿಯ ಪಶು ವೈದ್ಯಕೀಯ ಪರೀಕ್ಷಕರು ಮತ್ತು ಪಶು ವೈದ್ಯಕೀಯ ಪರೀಕ್ಷಕರ ಹುದ್ದೆಗಳನ್ನು ಮುಂಬಡ್ತಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಖಾಲಿ ಇರುವ ಡಿ ದರ್ಜೆ ಹುದ್ದೆಗಳಿಗೆ ಎದುರಾಗಿ ಜಿಲ್ಲೆಗೆ ಸಂಬಂಧಿಸಿದಂತೆ 141 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

Continue Reading
Click to comment

Leave a Reply

Your email address will not be published. Required fields are marked *

Hassan

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಪಂ ಕಛೇರಿ ಆವರಣದಲ್ಲಿ ಪಂಚನೌಕರರ ಸಂಘದಿಂದ ಅನಿರ್ಧಿಷ್ಠವಧಿ ಧರಣಿ ಆರಂಭ

Published

on

ಹಾಸನ: ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸದೆ, ಕೇವಲ ಎಲ್ಲಾ ಸಮಸ್ಯೆಗಳಿಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ನೇರ ಹೊಣೆಗಾರ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯತ್ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತ ಸದಸ್ಯರ ಒಕ್ಕೂಟದ ಪಂಚನೌಕರರ ಸಹಯೋಗದಲ್ಲಿ ಆರ್.ಡಿ.ಪಿ.ಆರ್. ಕುಟುಂಬದಿಂದ ಅನಿರ್ಧಿಷ್ಟವಧಿ ಧರಣಿ ಆರಂಭಸಿದರು.

ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಈ. ಕೃಷ್ಣೇಗೌಡ ಇದೆ ವೇಳೆ ಮಾತನಾಡಿ, ರಾಜ್ಯದ ಶೇಕಡ ೬೮ ರಿಂದ ೭೦ ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯಿತಿಗಳಿಂದ ಶೇಕಡ ೭೦ ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತಿ, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳು, ಗ್ರಾಮ ಪಂಚಾಯತಿಯ ಎಲ್ಲ ಸಿಬ್ಬಂದಿ ವರ್ಗ (ಪಂಚನೌಕರರು) ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸಿರುವುದಿಲ್ಲ ಎಂದರು. ಕೇವಲ ಎಲ್ಲಾ ಸಮಸ್ಯೆಗಳಿಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ನೇರ ಹೊಣೆಗಾರ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟವನ್ನು ಪ್ರಾರಂಭಿಸಿದ್ದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಹೋರಾಟ ನಡೆಸಿದರೂ ಸರ್ಕಾರ ಸಮಸ್ಯೆ ಗೆ ಸ್ಪಂದನೆ ಮಾಡಿಲ್ಲ ಹಾಗಾಗಿ ರಾಜ್ಯದ ಎಲ್ಲ ಜಿಪಂಗಳ ಮುಂದೆ ಪಿಡಿಓಗಳು, ಗ್ರಾಪಂ ಅದ್ಯಕ್ಷ, ಉಪಾದ್ಯಕ್ಷ ಸದಸ್ಯರು ಹಾಗು ಎಲ್ಲಾ ಸಿಬ್ಬಂದಿ ಗಳು ಇಂದಿನಿಂದ ಹೋರಾಟ ಆರಂಬಿಸಿದ್ದಾರೆ, ಹಾಸನ ಜಿಲ್ಲೆಯಲ್ಲೂ ಕೂಡ ಹೋರಾಟ ಬೆಂಬಲಿಸಿ ಅನಿರ್ದಿಷ್ಟ ಅವದಿ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.

ಸಂಘದ ಜಿಲ್ಲಾಧ್ಯಕ್ಷ ಮನೋಹನರ್ ಮಾಧ್ಯಮದೊಂದಿಗೆ ಮಾತನಾಡಿ, ಪಂಚನೌಕರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸದೆ, ಕೇವಲ ಎಲ್ಲಾ ಸಮಸ್ಯೆಗಳಿಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ನೇರ ಹೊಣೆಗಾರ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ದಿನ ಹೋರಾಟವನ್ನು ಪ್ರಾರಂಭಿಸಿದ್ದು ಈ ಕೆಳಗಿನ ಎಲ್ಲಾ ವೃಂದದ ಬೇಡಿಕೆಗಳು ಈಡೇರುವವರೆಗೆ ಈ ಹೋರಾಟ ಅನಿರ್ದಿಷ್ಟ ಅವದಿ ವರೆಗೆ ಮುಂದುವರೆಯುವುದು ಎಂದರು.

ಕಂಪ್ಯೂಟರ್ ಆಪರೇಟರ್ ಸಂಘದ ಜಿಲ್ಲಾಧ್ಯಕ್ಷೆ ಸವೀತ ಮಾತನಾಡಿ, ರಾಜ್ಯದ ಎಲ್ಲಾ ಪಂಚಾಯಿತ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತಿಕರಿಸಬೇಕು. ಏಳು ವರ್ಷ ಪೂರೈಸಿ ಕರ್ತವ್ಯ ನಿರ್ವಹಿಸುತ್ತಿರುವ ವಂಚಾಯತ ಅಭಿವೃದ್ಧಿ ಅಧಿಕಾರಿಗಳನ್ನು ಬೇರೆ ತಾಲೂಕಿಗೆ ವರ್ಗಾವಣೆ ಮಾಡುವ ನಿಯಮವನ್ನು ಕೈಬಿಡುವುದು ಹಾಗೂ ಜಿಲ್ಲೆಯಲ್ಲಿ ಸ್ವಹಿಚ್ಛೆ ಇಲ್ಲದ ಸಾರ್ವಜನಿಕ ಹಿತಾಸಕ್ತಿ ಹಿತದೃಷ್ಟಿ ತೋರದೆ ವರ್ಗಾವಣೆ ಮಾಡಬಾರದು ಮತ್ತು ವರ್ಗಾವಣೆ ನಿಯಮಗಳಲ್ಲಿ ಯಾವುದೇ ಬದಲಾವಣೆಗೆ ಮುನ್ನ ಸಂಘದ ಸಲಹೆಯನ್ನು ಪಡೆಯುವುದು. : ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯನ್ನು ಕೂಡಲೇ ಅಂತಿಮಗೊಳಿಸಿ, ಬಡ್ತಿ ನೀಡಲು ಕ್ರಮಕೈಗೊಳ್ಳಬೇಕು. ಗ್ರಾಮ ಪಂಚಾಯಿತಿಯ ಪಂಚ ನೌಕರುಗಳಿಗೆ ವೇತನ ಶ್ರೇಣಿ ಮತ್ತು ಸೇವಾ ಹಿರಿತನದ ವೇತನವನ್ನು ಜಾರಿ ಮಾಡಿ ಕಾರ್ಮಿಕ ಇಲಾಖೆಯ ವೇತನವನ್ನು ಹೊರತುಪಡಿಸಿ ಗ್ರಾಮೀಣಾಭಿವೃದ್ಧಿ ಮತ್ತು ವಂಚಾಯತ್ ರಾಜ್ ಇಲಾಖೆಯಿಂದಾನೆ ವೇತನ ನಿಗದಿಪಡಿಸಿ ನೌಕರರ ಖಾತೆಗಳಿಗೆ ಸಂಬಳವನ್ನು ಪಾವತಿ ಮಾಡಬೇಕೆಂದರು. ಸ್ವಚ್ಛತಗಾರಿಗೆ ಸ್ವಚ್ಛತೆ ಮಾಡುವಂತಹ ಸಂದರ್ಭದಲ್ಲಿ ಅಗತ್ಯ ವಸ್ತುಗಳನ್ನು ಪೂರೈಸಲು ಸರ್ಕಾರ ಆದೇಶ ಮಾಡುವುದು. ಗ್ರಾಮ ಪಂಚಾಯತ ಕರವಸೂಲಿಗಾರರು ಮತ್ತು ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ವೃಂದದಿಂದ ಸೇವೆ ಒಳಗಿನ ನೇರ ನೇಮಕಾತಿಗೆ ಎಸ್.ಡಿ.ಎ.ಎ. ವೃಂದಕ್ಕೆ ಪದೋನ್ನತಿ ಹೊದಲು ೭೫% ರಷ್ಟು ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಇದೆ ವೇಳೆ ಸಂಘದ ರಾಜ್ಯ ಮಾಜಿ ಉಪಾಧ್ಯಕ್ಷ ನಟರಾಜು, ತಾಲೂಕು ಅಧ್ಯಕ್ಷ ನಂಜಪ್ಪ, ಸಿ.ಎಸ್. ಶಿವಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

Hassan

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಕರಡಿಗಳು ಸಾವು

Published

on

HASSAN-BREAKING

ಹಾಸನ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಕರಡಿಗಳು ಸಾವು

ಆಹಾರ ಅರಸಿ ಕಾಡಿನಿಂದ ಬಂದು ರೈತರ ಜಮೀನಿನಲ್ಲಿ ಹಾದು ಹೋಗುತ್ತಿದ್ದಾಗ ಅವಘಡ

ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಕಲ್ಲುಸಾದರಹಳ್ಳಿ ಗ್ರಾಮದಲ್ಲಿ ಘಟನೆ

ಬಾರಿ ಮಳೆ ಗಾಳಿಗೆ ರೈತರ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ

ಆಹಾರ ಅರಸಿ ಬರುತ್ತಿದ್ದ ಮೂರು ಕರಡಿಗಳು

ಮೊದಲು ಓರ್ವ ರೈತನ ಜಮೀನಿನಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಗಂಡು ಕರಡಿ

ವಿದ್ಯುತ್ ಶಾಕ್‌ನಿಂದ ಒದ್ದಾಡಿ ಪ್ರಾಣ ಬಿಟ್ಟ ಕರಡಿ

ಕರಡಿ ಒದ್ದಾಡುವುದನ್ನು ಕಂಡು ಗಾಬರಿಯಿಂದ ಓಡಿದ ಮರಿ ಕರಡಿ ಹಾಗೂ ತಾಯಿ ಕರಡಿ

ನಂತರ ಪಕ್ಕದ ರೈತನ ಜಮೀನಿನಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಎರಡು ಕರಡಿಗಳು

ವಿದ್ಯುತ್ ಶಾಕ್‌ನಿಂದ ಮೃತಪಟ್ಟ ತಾಯಿ ಕರಡಿ ಹಾಗೂ ಮರಿ ಕರಡಿ

ಆರರಿಂದ-ಏಳು ವರ್ಷದ ಗಂಡು-ಹೆಣ್ಣು ಕರಡಿ ಹಾಗೂ ಒಂದು ವರ್ಷದ ಕರಡಿ ಮರಿ ಸಾವು

ತಮ್ಮ ಪ್ರಾಣ ಕಳೆದುಕೊಂಡು ರೈತರು ಪ್ರಾಣ ಉಳಿಸಿದ ಕರಡಿಗಳು

ಬೆಳಿಗ್ಗೆ ಜಮೀನಿನ ಬಳಿ ಬಂದ ರೈತರು

ಕರಡಿಗಳು ಸಾವನ್ನಪ್ಪಿರುವುದನ್ನು ಕಂಡು ಎಚ್ಚೆತ್ತ ಗ್ರಾಮಸ್ಥರು

ವಿದ್ಯುತ್ ತಂತಿ ತುಂಡಾಗಿ ಕರೆಂಟ್ ಶಾಕ್‌ನಿಂದಲೇ ಕರಡಿಗಳು ಮೃತಪಟ್ಟಿವೆ ಎಂದು ದೃಢಪಡಿಸಿಕೊಂಡ ರೈತರು

ಕೂಡಲೇ ಅರಣ್ಯ ಇಲಾಖೆ ಹಾಗೂ ವಿದ್ಯುತ್ ಇಲಾಖೆಗೆ ಮಾಹಿತಿ ನೀಡಿದ ರೈತರು

ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವಿದ್ಯುತ್ ಇಲಾಖೆ ಅಧಿಕಾರಿಗಳು

ಮೂರು ಕರಡಿಗಳ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ

Continue Reading

Hassan

₹30 ಲಕ್ಷ ವೆಚ್ಚದಲ್ಲಿ ಆಯುಷ್‌ ಆಸ್ಪತ್ರೆ ನಿರ್ಮಾಣ : ಶಾಸಕ ಸಿಮೆಂಟ್ ಮಂಜು

Published

on

 

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಬಡ ಹಾಗೂ ಮಧ್ಯಮ ವರ್ಗದ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆಯುಷ್ ಆಸ್ಪತ್ರೆಗಳ ನಿರ್ಮಾಣಕ್ಕೆ ಮುಂದಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ತಾಲೂಕಿನ ಕಸಬಾ ಹೋಬಳಿ ದೊಡ್ಡ ಕಣಗಾಲು ಗ್ರಾಮದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ಸುಮಾರು ₹30 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಆಯುಷ್ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಆಯುಷ್ ವೈದ್ಯ ಪದ್ಧತಿಯಿಂದ ಅಡ್ಡಪರಿಣಾಮವಿಲ್ಲದೆ ಚಿಕಿತ್ಸೆ ಪಡೆಯುವುದಾಗಿದೆ ಉಚಿತವಾಗಿ ಎಲ್ಲರೂ ಸೌಲಭ್ಯವನ್ನು ಪಡೆಯಬೇಕು. ನಮ್ಮ ಪುರಾತನ ಕಾಲದ ಆಯುರ್ವೇದವು ನಮ್ಮ ಆರೋಗ್ಯ ರಕ್ಷಣೆಗೆ ಸಹಕಾರಿ. ಆಯುರ್ವೇದದ ಕುರಿತು ಕೇಂದ್ರ ಸರ್ಕಾರ ಗ್ರಾಮೀಣ ಮಟ್ಟದಲ್ಲಿ ಈ ರೀತಿ ಯೋಜನೆಗಳ ಮೂಲಕ ಜನಸೇವೆ ಮಾಡಲು ಮುಂದಾಗಿರುವುದು ಅತ್ಯಂತ ಶ್ಲಾಘನೀಯ.

ಆಲೂರು ಸಕಲೇಶಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಶಿಕ್ಷಣಕ್ಕೆ, ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಎಂದು ಹಿತದೃಷ್ಟಿಯಿಂದ ಹಂತ ಹಂತವಾಗಿ ಎಲ್ಲಾ ಗ್ರಾಮಗಳಿಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಕಾರ್ಯಕ್ರಮ.ಇದರಿಂದ ಪ್ರತಿ ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದೊಡ್ಡಕಣಗಾಲು ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಶೋಭಾ, ಸದಸ್ಯೆ ಲತಾ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೂವಯ್ಯ, ತಾಲೂಕು ಬಿಜೆಪಿ ಅಧ್ಯಕ್ಷೆ ಉಮಾ ರವಿಪ್ರಕಾಶ್, ಖಜಾಂಚಿ ಹೇಮಂತ್, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಬಿಜೆಪಿ ಮುಖಂಡರಾದ ಅಜಿತ್, ಲೋಕೇಶ್, ಹನುಮಂತೇಗೌಡ, ಗಣೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾಕ್ಟರ್ ಮುಸಬೇರಿ, ಆಯುಷ್ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸತೀಶ್ ಮುಂತಾದವರು ಹಾಜರಿದ್ದರು.

Continue Reading

Trending

error: Content is protected !!