Connect with us

State

ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ, ಕೂಗಿದ್ದರೆ ಪೊಲೀಸರು ಕ್ರಮ ತಗೋತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

Published

on

ಬೆಂಗಳೂರು, ಫೆ. 28: “ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ಪೊಲೀಸರು ಅವರನ್ನು ಒದ್ದು ಒಳಗೆ ಹಾಕುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಹಿಮಾಚಲ ಪ್ರದೇಶಕ್ಕೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು.

ನಿನ್ನೆ ವಿಧಾನಸೌಧದಲ್ಲಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು

“ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿಯವರು ಇದನ್ನು ತಿರುಚುತ್ತಿದ್ದಾರೆ. ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಈ ರೀತಿ ಮಾಡುತ್ತಿದ್ದಾರೆ.

ಈ ವಿಚಾರವಾಗಿ ತನಿಖೆ ಮಾಡುವಂತೆ ನಾವು ಸೂಚಿಸಿದ್ದೇವೆ. ತನಿಖೆ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಸುಳ್ಳು ಹಬ್ಬಿಸಿದ್ದರೆ, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.”

ಹಿಮಾಚಲ ಪ್ರದೇಶಕ್ಕೆ ವೀಕ್ಷರಾಗಿ ತೆರಳುತ್ತಿರುವ ಬಗ್ಗೆ ಕೇಳಿದಾಗ, “ನಾನು ಅಲ್ಲಿಗೆ ಹೋಗುವ ಬಗ್ಗೆ ಕಾಂಗ್ರೆಸ್ ಪಕ್ಷ ನನಗೆ ಸೂಚನೆ ನೀಡಿದ್ದು, ಅದರಂತೆ ತೆರಳುತ್ತಿದ್ದೇನೆ. ಎರಡು ಮೂರು ರಾಜ್ಯಗಳಲ್ಲಿ ಸರ್ಕಾರ ಕೆಡವಲು ಬಿಜೆಪಿ ಆತುರದಲ್ಲಿದೆ. ಪ್ರಜಾಪ್ರಭುತ್ವದಲ್ಲಿ ಬಲಿಷ್ಠ ವಿರೋಧ ಪಕ್ಷ ಇರಬೇಕು. ಈ ದೇಶದಲ್ಲಿ ಕೆಟ್ಟ ಸಂಪ್ರದಾಯವನ್ನು ಬಿಜೆಪಿ ಪಾಲಿಸುತ್ತದೆ. ನಮ್ಮ ಪಕ್ಷದ ಎಲ್ಲಾ ಶಾಸಕರು ನಮ್ಮ ಜತೆಯೇ ಇರುತ್ತಾರೆ. ಪಕ್ಷಕ್ಕೆ ನಿಷ್ಠರಾಗಿ ಇರುತ್ತಾರೆ ಎಂಬ ನಂಬಿಕೆ ನನಗಿದೆ” ಎಂದು ತಿಳಿಸಿದರು.

Continue Reading
Click to comment

Leave a Reply

Your email address will not be published. Required fields are marked *

Special

Kisan Tractor Yojana : ಸರ್ಕಾರದಿಂದ ರೈತರಿಗೆ ಅರ್ಧ ಬೆಲೆಗೆ ಹೊಸ ಟ್ರಾಕ್ಟರ್

Published

on

ರೈತರ ಕೃಷಿ ಕೆಲಸವನ್ನು ಸುಲಭಗೊಳಿಸುವ ಹಾಗೂ ಯಾಂತ್ರೀಕರಣವನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರವು Kisan Tractor Yojana ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಅರ್ಹ ರೈತರಿಗೆ ಹೊಸ ಟ್ರಾಕ್ಟರ್ ಖರೀದಿಗೆ ಶೇಕಡಾ 50ರಷ್ಟು ಸಹಾಯಧನ (ಸಬ್ಸಿಡಿ) ನೀಡಲಾಗುತ್ತದೆ. ಇದರಿಂದ ಕಡಿಮೆ ಆದಾಯ ಹೊಂದಿರುವ ಸಣ್ಣ ಹಾಗೂ ಅಲ್ಪಭೂಧರ ರೈತರು ಕೂಡ ಆಧುನಿಕ ಟ್ರಾಕ್ಟರ್‌ಗಳನ್ನು ಖರೀದಿಸಲು ಸಾಧ್ಯವಾಗುತ್ತದೆ.

ಯೋಜನೆಯ ಉದ್ದೇಶ:
ಈ ಯೋಜನೆಯ ಮುಖ್ಯ ಉದ್ದೇಶ ಕೃಷಿಯಲ್ಲಿ ಮಾನವ ಶ್ರಮದ ಅವಲಂಬನೆಯನ್ನು ಕಡಿಮೆ ಮಾಡಿ, ಉತ್ಪಾದಕತೆಯನ್ನು ಹೆಚ್ಚಿಸುವುದಾಗಿದೆ. ಟ್ರಾಕ್ಟರ್ ಬಳಕೆಯಿಂದ ಬಿತ್ತನೆ, ಹೊಲ ಉಳುವುದು,ಸಾಗಣೆ ಮುಂತಾದ ಕೆಲಸಗಳು ವೇಗವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ಮುಗಿಯುತ್ತವೆ. ಇದರಿಂದ ರೈತರ ಸಮಯವೂ ಉಳಿಯುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:
1. ಅರ್ಜಿದಾರರು ಭಾರತೀಯ ನಾಗರಿಕರಾಗಿರಬೇಕು.
2. ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
3. ಒಂದು ಕುಟುಂಬಕ್ಕೆ ಒಂದೇ ಸಬ್ಸಿಡಿ.
4. ಈ ಹಿಂದೆ ಯಾವುದೇ ಟ್ರ್ಯಾಕ್ಟರ್‌ನ ಸಬ್ಸಿಡಿ ಪಡೆದಿರಬಾರದು.
5. ಅರ್ಜಿದಾರರು ಮೂಲ ಭೂ ದಾಖಲೆಗಳನ್ನು ಹೊಂದಿರಬೇಕು.

ಅಗತ್ಯ ದಾಖಲೆಗಳು:
1. ಆಧಾರ್ ಕಾರ್ಡ್
2. ಭೂಮಿ ದಾಖಲೆ (RTC / ಪಹಣಿ)
3. ಬ್ಯಾಂಕ್ ಪಾಸ್‌ಬುಕ್
ಪಾಸ್‌ಪೋರ್ಟ್ ಗಾತ್ರದ ಫೋಟೋ

ಅರ್ಜಿಸುವ ವಿಧಾನ:
ರೈತರು ಈ ಅರ್ಜಿಯನ್ನು ಆನ್‌ಲೈನ್‌ ಅಥವಾ ಆಫ್ ಲೈನ್ ಮೂಲಕ ಸಲ್ಲಿಸಬಹುದು. ಮೊದಲು,ಕೃಷಿ ಯಾಂತ್ರಿಕರಣ ಪೋರ್ಟಲ್ agrimachinery.nic.in ಗೆ ಭೇಟಿ ನೀಡಿ, ಅಗತ್ಯ ಮಾಹಿತಿಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಿ.
ಆಫ್ ಲೈನ್ ನಲ್ಲಿ, ಸಮೀಪದ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Kisan Tractor Yojana ರೈತರ ಬದುಕಿಗೆ ಬದಲಾವಣೆ ತರುವಂತಹ ಮಹತ್ವದ ಯೋಜನೆಯಾಗಿದ್ದು, ಹೆಚ್ಚಿನ ವೆಚ್ಚದ ಟ್ರ್ಯಾಕ್ಟರ್ ಖರೀದಿಸಲು ಹಿಂಜರಿಯುತ್ತಿದ್ದ ರೈತರಿಗೆ ಇದೊಂದು ಸದವಕಾಶವಾಗಿದೆ. ರೈತರು ಇದರ ಸದುಪಯೋಗ ಪಡೆಯಬೇಕು.

Continue Reading

National

ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಕೇಂದ್ರಕ್ಕೆ ಎಚ್‌ಡಿಡಿ ಮನವಿ

Published

on

ನವದೆಹಲಿ: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು, ರಾಜ್ಯಸಭೆಯಲ್ಲಿ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯಸಭೆಯಲ್ಲಿ ಇಂದು ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಭಾಗವಹಿಸಿ ಮಾಜಿ ಪ್ರಧಾನಿಗಳು ಮಾತನಾಡಿದರು.

 

ಈ ವೇಳೆ ರಾಜ್ಯದ ಹಲವು ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯಸಭೆಯ ಹಿರಿಯ ಸದಸ್ಯರೂ ಆಗಿರುವ ಮಾಜಿ ಪ್ರಧಾನಿಗಳು ಕೇಂದ್ರ ಸರ್ಕಾರಕ್ಕೆ ಕೈಮುಗಿದು ವಿನಂತಿ ಮಾಡಿಕೊಂಡಿದ್ದಾರೆ.

ತಮ್ಮ ಸಂಕ್ಷಿಪ್ತ ಭಾಷಣದಲ್ಲಿ ರಾಜ್ಯದ ನೀರಾವರಿ ಬಿಕ್ಕಟ್ಟನ್ನು ಎಳೆಎಳೆಯಾಗಿ ಬಿಡಿಸಿಟ್ಟ ಅವರು, ನನ್ನ ರಾಜ್ಯಸಭಾ ಅವಧಿ ಮುಂದಿನ ತಿಂಗಳಲ್ಲಿ ಮುಗಿಯಲಿದೆ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಹಿತಕಾಯಿರಿ, ನಾವೆಲ್ಲರೂ ಮನುಷ್ಯರು. ಮಳೆ ಬಿದ್ದರೆ ನೀರು, ಇಲ್ಲವಾದರೆ ಇಲ್ಲ. ಈ ಸದನದ ಎಲ್ಲಾ ಸದಸ್ಯರು ಕರ್ನಾಟಕದ ರಕ್ಷಣೆ ಮಾಡಬೇಕು ಎಂಬುದಾಗಿ ನಾನು ಕೈ ಮುಗಿದು ಬೇಡುತ್ತೇನೆ ಎಂದು ಮನವಿ ಮಾಡಿದ್ದಾರೆ.

ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳ ಜೊತೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ. ಕರ್ನಾಟಕ ರಾಜ್ಯಕ್ಕೆ ನೀರಿನದ್ದೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆಯಲ್ಲಿ ಆಂಧ್ರಪ್ರದೇಶ, ಇನ್ನೊಂದು ಕಡೆಯಲ್ಲಿ ಗೋವಾದಿಂದ ತೊಂದರೆ ಎದುರಿಸುತ್ತಿದೆ. ನಾನು ಜೀವನದ ಕೊನೆಗಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಬೇಕು. ನಾನು ನಿಮ್ಮ (ಎನ್‌ಡಿಎ) ಜೊತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜೊತೆಗೇ ಇರುತ್ತೇವೆ. ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಏಕೈಕ ಮನವಿ ಎಂದು ಹೇಳಿದ್ದಾರೆ.

ಇದೇ ವೇಳೆ ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕ ಜೊತೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಮಾಜಿ ಪ್ರಧಾನಿಗಳು, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಬಗ್ಗೆ ನಾನು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂಬ ಅಂಶವನ್ನು ಉಲ್ಲೇಖ ಮಾಡಿದ್ದಾರೆ.

ಮೋದಿ ಅವರನ್ನು ವಿನಾಕಾರಣ ಟೀಕೆ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದ್ದು, ಜನರ ಆದಾಯ ಹೆಚ್ಚಳ ಆಗುತ್ತಿದೆ ಹಾಗೂ ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಹೇಳಿದ್ದಾರೆ.

Continue Reading

State

ಸಂಸತ್ತಿನಲ್ಲಿ‌ ವಿಪಕ್ಷ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ಆತಂಕಕಾರಿ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ

Published

on

ಬೆಂಗಳೂರು: ಸಂಸತ್ತಿನಲ್ಲಿ‌ ವಿಪಕ್ಷ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿರುವ ಆಡಳಿತ ಪಕ್ಷದ ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು,  ರಾಹುಲ್ ಗಾಂಧಿಯವರು ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಣೆಯವರ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಎಂಬ ಪುಸ್ತಕದಲ್ಲಿನ ವಿಷಯಗಳನ್ನು ಉಲ್ಲೇಖಿಸಿ  ರಾಷ್ಟ್ರೀಯ ಭದ್ರತೆಯ ಕುರಿತು ಕೆಲವು ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದರು. ಈ ಪುಸ್ತಕವು 2024ರಲ್ಲೇ ಬಿಡುಗಡೆಯಾಗಬೇಕಿತ್ತು, ಆದರೆ ಕೇಂದ್ರ ಸರ್ಕಾರ ಇದರ ಬಿಡುಗಡೆಗೆ ತಡೆಯೊಡ್ಡಿರುವ ಕಾರಣಕ್ಕೆ ಇನ್ನೂ ಪ್ರಕಟವಾಗಿಲ್ಲ. ಇತ್ತೀಚಿನ ಕಾರವಾನ್ ಮ್ಯಾಗಜೀನ್‌ನ ಲೇಖನದಲ್ಲಿ ಈ ಪುಸ್ತಕದ ಕೆಲವು ಬರಹಗಳನ್ನು ಉಲ್ಲೇಖಿಸಲಾಗಿದೆ ಎಂದಿದ್ದಾರೆ.

ಜನರಲ್ ನರವಣೆಯವರು ಕಾರವಾನ್‌‌ ನ ಲೇಖನದಲ್ಲಿ ಪ್ರಕಟಗೊಂಡಿರುವ ವಿಚಾರಗಳು ತಮ್ಮದಲ್ಲ ಎಂದು ಅಲ್ಲಗಳೆದಿಲ್ಲ. ಬದಲಿಗೆ, ತಮ್ಮ ಪುಸ್ತಕ ಬಿಡುಗೆಯಾಗಲು ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದೇನೆ ಎಂದು ಸಾರ್ವಜನಿಕವಾಗಿ ಹೇಳಿದ್ದಾರೆ. ನರವಣೆಯವರ ಬರಹಗಳಲ್ಲಿ ತಪ್ಪುಗಳಿದ್ದರೆ ಅಥವಾ ಅಸತ್ಯದಿಂದ ಕೂಡಿದ್ದರೆ ಕೇಂದ್ರ ಸರ್ಕಾರವು ಪುಸ್ತಕದ ಪ್ರಕಟಣೆಗೆ ಅನುಮತಿ ನೀಡಬಾರದಿತ್ತು. ಆದರೆ ಕೇಂದ್ರ ಸರ್ಕಾರದ ಮೌನವು ನರವಣೆ ಅವರು ಹೇಳಲು ಹೊರಟಿರುವ ಸತ್ಯವನ್ನು ಅಡಗಿಸುವ ದುಷ್ಟ ಆಲೋಚನೆಯಿಂದ ಕೂಡಿದೆ ಎಂಬುದನ್ನು ತೋರುತ್ತದೆ ಎಂದು ಕೇಂದ್ರದ ನಡೆಯನ್ನು ವ್ಯಂಗ್ಯ ಮಾಡಿದ್ದಾರೆ.

2020ರಲ್ಲಿ ಚೀನಾ ಗಡಿಯಲ್ಲಿ ನಡೆದ ಘರ್ಷಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ದಿಟ್ಟ ಹಾಗೂ ಸ್ಪಷ್ಟ ನಿರ್ಧಾರವನ್ನು ತೆಗೆದುಕೊಳ್ಳಲು ವಿಫಲವಾಯಿತು ಎನ್ನುವ ಮಾಹಿತಿ ಈ ಪುಸ್ತಕದಲ್ಲಿದೆ. ಸರ್ಕಾರದ ಈ ದ್ವಂದ್ವ ನಿಲುವಿನಿಂದ ಸೇನಾಪಡೆಗಳು ಎರಡು ರಾಷ್ಟ್ರಗಳ ನಡುವಿನ ರಾಜಕೀಯ ಸಂದಿಗ್ಧತೆಯನ್ನು ಕೂಡ ನಿಭಾಯಿಸಬೇಕಾಯಿತು. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಲ್ಲಿನ ರಾಜಕೀಯ ನಾಯಕತ್ವದ ವೈಫಲ್ಯ ಮತ್ತು ರಾಷ್ಟ್ರೀಯ ಭದ್ರತೆಯಂತಹ ಗಂಭೀರ ವಿಚಾರಗಳಲ್ಲಿ ಸ್ಪಷ್ಟ ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ಇರುವ ಅಸಾಮರ್ಥ್ಯವನ್ನು ತೋರಿಸುತ್ತದೆ.  ಇಂತಹ ವಿಷಯಗಳು ಸಂಸತ್ತಿನಲ್ಲಿ ಚರ್ಚೆಗೆ ಒಳಪಡಬೇಕು ಎಂಬುದರಲ್ಲಿ‌ ಅನುಮಾನವೇ ಇಲ್ಲ ಎಂದು ಆರೋಪ ಮಾಡಿದ್ದಾರೆ.

ಜನರ ಪರವಾಗಿ ಪ್ರಶ್ನೆಗಳನ್ನು ಕೇಳುವುದು ಜವಾಬ್ದಾರಿಯುತ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿಯವರ ಕರ್ತವ್ಯವಾಗಿದೆ. ಅದನ್ನು ಅವರು ಮಾಡಿದ್ದಾರೆ. ರಾಹುಲ್ ಗಾಂಧಿಯವರು ಭಾರತದ ಅಥವಾ ನಮ್ಮ ಸೇನಾಪಡೆಗಳ ವಿರುದ್ಧ ಮಾತನಾಡಿಲ್ಲ. ಹೀಗಿದ್ದರೂ ಅವರ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು, ಸತತ ಎರಡು ದಿನಗಳ ಕಾಲ ಸಂಸತ್ತನ್ನು ಸ್ಥಗಿತಗೊಳಿಸಿ, ಎಂಟು ವಿರೋಧ ಪಕ್ಷದ ಸದಸ್ಯರನ್ನು ಅಮಾನತುಗೊಳಿಸಿ ಮತ್ತು ರಾಷ್ಟ್ರಪತಿಯ ಭಾಷಣದ ಮೇಲೆ ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶವನ್ನೇ ನಿರಾಕರಿಸಿರುವುದು ಪ್ರಜಾಪ್ರಭುತ್ವದ ಕತ್ತು ಹಿಸುಕಿದ ಕ್ರಮವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಷ್ಟ್ರೀಯ ಭದ್ರತೆಯಂತಹ ಗಂಭೀರ ವಿಚಾರಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ಮತ್ತು ರಾಜಕೀಯ ಪರಿಣಾಮಗಳನ್ನು ಎದುರಿಸುವ ಬದ್ಧತೆಯನ್ನು ತೋರ್ಪಡಿಸುವಂತಿರಬೇಕು. ಆದರೆ ಮೋದಿ ಸರ್ಕಾರವು ಒತ್ತಡ ತಂತ್ರದ ಮೂಲಕ ಎದುರಾಳಿಗಳ ಧ್ವನಿಯನ್ನೇ ಹತ್ತಿಕ್ಕಲು ಹೊರಟಿದೆ. ಇಲ್ಲಿ‌ ಜನರಿಂದ ಮುಚ್ಚಿಡುವಂತಹ ವಿಷಯಗಳು ಇಲ್ಲದಿದ್ದರೆ ಚರ್ಚೆಯನ್ನು ನಿರಾಕರಿಸುತ್ತಿರುವುದು ಯಾಕೆ? ರಾಷ್ಟ್ರೀಯ ಹಿತಾಸಕ್ತಿಯನ್ನು ಸಂಪೂರ್ಣವಾಗಿ ರಕ್ಷಿಸಲಾಗಿದ್ದರೆ, ಸಂಸತ್ತಿನ ಪರಾಮರ್ಶೆಗೆ ಒಳಪಡಲು ಯಾಕೆ ಭಯ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯ ದೇಶ ಮೊದಲು, ಧರ್ಮ ಮೊದಲು ಇವೆಲ್ಲ ಬೊಗಳೆ ಭಾಷಣದ ಸರಕುಗಳಷ್ಟೆ. ಮೌನ, ಪಲಾಯನ ಮತ್ತು ಶರಣಾಗತಿಗಳನ್ನು ಸಂಘಪರಿವಾರ ಬಿಜೆಪಿ ನಾಯಕರಿಗೆ ಧಾರೆಯೆರೆದು ಕಳಿಸಿದೆ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ ಎಂದು ಟೀಕಿಸಿದ್ದಾರೆ.

Continue Reading

Trending

error: Content is protected !!