Connect with us

Politics

ಪ್ರತಿಪಕ್ಷಗಳ ಧ್ವನಿ ಹತ್ತಿಕ್ಕುವ ಸರ್ವಾಧಿಕಾರಿ ಕೇಂದ್ರ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ : ಡಿ.ಕೆ. ಸುರೇಶ್ ವಾಗ್ದಾಳಿ

Published

on

“ಸರ್ವಾಧಿಕಾರಿ ಮನಸ್ಥಿತಿಯ ಕೇಂದ್ರ ಸರ್ಕಾರವು ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ” ಎಂದು ಲೋಕಸಭಾ ಸದಸ್ಯ ಡಿ.ಕೆ. ಸುರೇಶ್ ಅವರು ಕಿಡಿಕಾರಿದ್ದಾರೆ.

ಸಂಸತ್ ಭದ್ರತಾ ಲೋಪ ವಿಚಾರವಾಗಿ ಸಂಸತ್ತಿನಲ್ಲಿ ಚರ್ಚೆಗೆ ಆಗ್ರಹಿಸಿ ಗುರುವಾರ ಸದನದ ಬಾವಿಗೆ ಇಳಿದು ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಸುರೇಶ್ ಅವರು ಸೇರಿದಂತೆ ಮೂವರು ಸದಸ್ಯರನ್ನು ಅಮಾನತು ಮಾಡಲಾಯಿತು.

ಈ ವಿಚಾರವಾಗಿ ಕಾವೇರಿ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸುರೇಶ್ ಅವರು ಹೇಳಿದ್ದಿಷ್ಟು;

“ಪ್ರಜಾಪ್ರಭುತ್ವದ ದೇವಸ್ಥಾನದ ಒಳಗೆ ಅಕ್ರಮ ಪ್ರವೇಶದ ಮೂಲಕ ದಾಳಿ ಮಾಡಲಾಗಿದ್ದು, ಈ ಭದ್ರತಾ ವೈಫಲ್ಯ ಕುರಿತು ಪ್ರಧಾನಮಂತ್ರಿ ಹಾಗೂ ಕೇಂದ್ರ ಗೃಹಸಚಿವರು ಲೋಕಸಭೆಯಲ್ಲಿ ಉತ್ತರ ನೀಡಬೇಕು ಎಂದು ನಾವು ಆಗ್ರಹಿಸಿದೆವು. ಈ ಪ್ರಕರಣದ ತನಿಖೆಯಲ್ಲಿ ಪಾಸ್ ವಿತರಣೆ ಮಾಡಿದ ಸಂಸದರೂ ಸೇರಿದಂತೆ ಎಲ್ಲರನ್ನು ತನಿಖೆಗೆ ಒಳಪಡಿಸಬೇಕು ಎಂದು ವಿರೋಧ ಪಕ್ಷಗಳು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಆಗ್ರಹ ಮಾಡಿದೆವು.

ಪ್ರಜಾಪ್ರಭುತ್ವ ದೇವಾಲಯಕ್ಕೆ ರಕ್ಷಣೆ ಇಲ್ಲ. ಇನ್ನೂ ಬೇರೆಯವರಿಗೆ ರಕ್ಷಣೆ ನೀಡಲಾಗುತ್ತದೆಯೇ ಎಂದು ಧ್ವನಿ ಎತ್ತಿದ ಕಾರಣ, ಇಂದು ಮೂವರು ಸದಸ್ಯರು ಸೇರಿದಂತೆ ವಿರೋಧ ಪಕ್ಷಗಳ ಒಟ್ಟು 146 ಸಂಸತ್ ಸದಸ್ಯರನ್ನು ಅಮಾನತು ಮಾಡಲಾಗಿದೆ. ಆ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ವಿರೋಧ ಪಕ್ಷವನ್ನು ಹತ್ತಿಕ್ಕಲು ಮುಂದಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ.

ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿಗಳಾಗಲಿ, ಗೃಹಮಂತ್ರಿಗಳಾಗಲಿ ಲೋಕಸಭೆ ಒಳಗೆ ವಿಷಾದ ವ್ಯಕ್ತಪಡಿಸಿ ತಮ್ಮ ಅಭಿಪ್ರಾಯ ಹಾಗೂ ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಆ ಕೆಲಸ ಮಾಡದೆ ನಿಯಮಗಳನ್ನು ಗಾಳಿಗೆ ತೂರಿ ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುತ್ತಿರುವುದು ದುರ್ದೈವದ ಸಂಗತಿ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಅವರು ವಿರೋಧ ಪಕ್ಷಗಳಿಗೆ ಸೂಕ್ತ ಅವಕಾಶಗಳನ್ನು ನೀಡಬೇಕು. ಆದರೆ ನಮ್ಮ ಬಹುತೇಕ ಸದಸ್ಯರನ್ನು ಅಮಾನತು ಮಾಡಿ ಕೆಲವರನ್ನು ಸಮಿತಿ ಮುಂದೆ ಕಳುಹಿಸಿದ್ದಾರೆ. ಆಮೂಲಕ ವಿರೋಧ ಪಕ್ಷಗಳ ನಾಯಕರ ಮಾತನಾಡುವ ಹಕ್ಕನ್ನು ಕಸಿಯುತ್ತಿದ್ದಾರೆ. ಕೇಂದ್ರ ಸರ್ಕಾರ ವಿರೋಧ ಪಕ್ಷಗಳನ್ನು ಬೆದರಿಸುವ ತಂತ್ರಗಾರಿಕೆ ಮಾಡುತ್ತಿದೆ. ಇದನ್ನು ಖಂಡಿಸಿ ನಾವು ಸದನದ ಬಾವಿಗಿಳಿದು ಪ್ರತಿಭಟನೆಗೆ ಮುಂದಾದಾಗ ಸ್ಪೀಕರ್ ಅವರು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆ ಪ್ರತಿಯೊಬ್ಬ ಸದಸ್ಯನ ಹಕ್ಕು. ಅದನ್ನು ಮೊಟಕುಗೊಳಿಸಿ ನಮ್ಮನ್ನು ಸದನದಿಂದ ಹೊರಹಾಕಿದ್ದಾರೆ.

ಆಡಳಿತ ಪಕ್ಷ ತಮ್ಮ ಅನುಕೂಲಕ್ಕೆ ತಕ್ಕಂತೆ ಹೇಳಿಕೆ ನೀಡಿ, ಸಂಸತ್ತಿನ ಉಭಯ ಸದನಗಳ ಒಳಗೆ ಹಾಗೂ ಸದನದ ಹೊರಗೆ ನಮ್ಮ ಧ್ವನಿ ದಮನ ಮಾಡುವ ಪ್ರಯತ್ನ ಮಾಡಿದೆ. 75 ವರ್ಷಗಳ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜಿಪಿಯ ಮಹಾನ್ ನಾಯಕರಾದ ವಾಜಪೇಯಿ, ಅಡ್ವಾಣಿ, ಸುಷ್ಮಾ ಸ್ವರಾಜ್ ರಂತಹವರು ಸದನದ ಬಾವಿಗೆ ಇಳಿದು ಹೋರಾಟ ಮಾಡಿದ್ದಾರೆ. ಆದರೆ 75 ವರ್ಷಗಳ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ವಿರೋಧ ಪಕ್ಷಗಳ ಸದಸ್ಯರನ್ನು ಅಮಾನತು ಮಾಡಿರುವ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಸಲ್ಲುತ್ತದೆ.

ಕಾನೂನು ಎಲ್ಲರಿಗೂ ಒಂದೇ. ಇದೇ ವಿಚಾರದಲ್ಲಿ ವಿರೋಧ ಪಕ್ಷಗಳ ಸದಸ್ಯರು ಪಾಸ್ ನೀಡಿದ್ದರೆ ಈ ಸರ್ಕಾರ ಸುಮ್ಮನೇ ಕೂರುತ್ತಿತ್ತಾ? ಈ ಸರ್ಕಾರ ಪ್ರತಿ ಹಂತದಲ್ಲಿಯೂ ಯಾವ ರೀತಿ ಪ್ರತಿಫಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಈ ಸರ್ಕಾರ ಸರ್ವಾಧಿಕಾರಿ ಧೋರಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸದನದಲ್ಲಿ ವಿರೋಧ ಪಕ್ಷಗಳ ಅನುಪಸ್ಥಿತಿಯಲ್ಲಿ ಅವರು ಮಸೂದೆ ಮಾಡಿಕೊಳ್ಳುತ್ತಿದ್ದಾರೆ. 130 ಕೋಟಿ ಜನರ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಬೇಕು. ಅದಕ್ಕಾಗಿ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಹೋರಾಟ ಮಾಡುತ್ತಿವೆ.

ಆಡಳಿತ ಪಕ್ಷ ಈ ಪ್ರಕರಣದಲ್ಲಿ ವಿಷಯಾಂತರ ಮಾಡುತ್ತಿದೆ. ಈ ವಿಚಾರದಲ್ಲಿ ಹೇಳಿಕೆ ನೀಡುವಂತೆ ನಾವು ಹಕ್ಕೊತ್ತಾಯ ಮಾಡಿದ್ದೇವೆ. ಅದಕ್ಕೆ ಅವಕಾಶವನ್ನೇ ನೀಡುತ್ತಿಲ್ಲ. ಸಂಸತ್ ಅಧಿವೇಶನದಲ್ಲಿ ನಮ್ಮ ಧ್ವನಿಗೆ ಅವಕಾಶ ನೀಡದಿದ್ದರೆ, ಬೇರೆ ಸಮಯದಲ್ಲಿ ನಮ್ಮ ಮಾತನ್ನು ಯಾರು ಆಲಿಸುತ್ತಾರೆ. ಈ ಪ್ರಕರಣದಲ್ಲಿ ಏನಾಗಿದೆ ಎಂದು ದೇಶದ ಜನರಿಗೆ ಗೊತ್ತಾಗಬೇಕು

ಕರ್ನಾಟಕ ವಿಧಾನಸಭೆಯಲ್ಲಿ ಅನಾಮಿಕ ವ್ಯಕ್ತಿ ಪ್ರವೇಶ ಮಾಡಿದ್ದ ಬಗ್ಗೆ ಕುಮಾರಸ್ವಾಮಿ ಪ್ರಶ್ನೆ ಎತ್ತಿದ ವಿಚಾರವಾಗಿ ಕೇಳಿದಾಗ, “ಅವರು ಕೂಡ ವಿಧಾನಸಭೆಯಲ್ಲಿ ಸದಸ್ಯರಾಗಿದ್ದಾರೆ. ಅವರು ಆ ವಿಚಾರವನ್ನು ಎತ್ತಬೇಕಿತ್ತು. ವಿಧಾನಸಭೆಯಲ್ಲಿ ಭಯೋತ್ಪಾದಕರ ರೀತಿ ನುಗ್ಗಿ ಹೊಗೆ ಬಾಂಬ್ ದಾಳಿ ಮಾಡಿರಲಿಲ್ಲ. ಅವರು ಯಾವುದೇ ಆತಂಕ ಸೃಷ್ಟಿಸಿರಲಿಲ್ಲ. ಆದರೆ ಸಂಸತ್ತಿನ ಒಳಗೆ ಬರಬೇಕಾದರೆ ಒಂದು ಕಾಗದವನ್ನು ಒಳಗೆ ಬಿಡುವುದಿಲ್ಲ. ಇಂತಹ ಸಂದರ್ಭದಲ್ಲಿ ಸ್ಫೋಟಕ ವಸ್ತುಗಳನ್ನು ಒಳಗೆ ತರಲಾಗಿದೆ ಎಂದರೆ ಅದು ಭದ್ರತಾ ಲೋಪ. ಹೊಸ ಸಂಸತ್ ಭವನ ಕಟ್ಟಿದ್ದೇವೆ ಆಧುನಿಕ ತಂತ್ರಜ್ಞಾನ ಅಳವಡಿಸಿದ್ದೇವೆ ಯಾವುದೇ ಪರಿಸ್ಥಿತಿ ಬಂದರೂ ಸಂಸತ್ ಭವನ ಸುರಕ್ಷಿತ ಎಂದು ಹೇಳಿದ್ದರು. ಆದರೆ ಸದನ ನಡೆಯುತ್ತಿರುವಾಗ ಕೇವಲ ನಾಲ್ಕೈದು ಜನ ಅಕ್ರಮವಾಗಿ ನುಗ್ಗಿದ್ದಾರೆ. ಈ ಭದ್ರತಾ ವೈಫಲ್ಯದ ಬಗ್ಗೆ ನಾವು ಪ್ರಶ್ನೆ ಎತ್ತುತ್ತಿದ್ದೇವೆ. ಕುಮಾರಸ್ವಾಮಿ ಅವರು ಗಂಟೆಗೊಮ್ಮೆ ಮಾತನಾಡುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಕಾಂಗ್ರೆಸ್ ನಲ್ಲಿ ಅಜಿತ್ ಪವಾರ್ ನಂತಹ ನಾಯಕರು ಹುಟ್ಟಿಕೊಳ್ಳಲಿದ್ದು, ಈ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿಚಾರವಾಗಿ ಕೇಳಿದಾಗ, “ಭ್ರಮೆಯಲ್ಲಿರುವವರಿಗೆ ನಾವೇನು ಮಾಡಲು ಸಾಧ್ಯವಿಲ್ಲ. ಅವರು ಭ್ರಮಾಲೋಕದಲ್ಲಿ ತೇಲುತ್ತಿದ್ದಾರೆ. ಅಸ್ಥಿತ್ವ ಕಳೆದುಕೊಂಡವರು ಬೇರೆಯವರ ಆಶ್ರಯ ಪಡೆಯುವುದು ಸರ್ವೇ ಸಾಮಾನ್ಯ. ಅವರು ಆ ಪ್ರಕ್ರಿಯೆಯಲ್ಲಿದ್ದಾರೆ” ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಚರ್ಚೆ ನಡೆಯುತ್ತಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದರೆ ಸ್ವಾಗತಿಸುತ್ತೀರಾ ಎಂದು ಕೇಳಿದಾಗ, “ಕುಮಾರಸ್ವಾಮಿ ಅವರು ಎಲ್ಲೇ ಸ್ಪರ್ಧೆ ಮಾಡಿದರು ನಾನು ಸ್ವಾಗತಿಸುತ್ತೇನೆ. ನಾನು ಅವರ ಅವರ ಪತ್ನಿ ವಿರುದ್ಧ ಸ್ಪರ್ಧಿಸಿದ್ದೆ. ನಾನು ರಾಜಕಾರಣಕ್ಕೆ ಬರಲು ಹಾಗೂ ಲೋಕಸಭೆಗೆ ಬರಲು ಕುಮಾರಸ್ವಾಮಿ ಅವರೇ ಕಾರಣ. ಎಲ್ಲವನ್ನು ನಾನು ಸ್ವಾಗತಿಸುತ್ತೇನೆ” ಎಂದರು.

“ಸಂಸತ್ತಿನಲ್ಲಿ ವಿರೋಧ ಪಕ್ಷದ ಕೆಲಸ ವಿರೋಧ ಪಕ್ಷಗಳು ಮಾಡುತ್ತಿವೆ. ಅವರು ಅಧಿಕಾರಕ್ಕಾಗಿ ಎಲ್ಲಾ ಮೌಲ್ಯಗಳನ್ನು ಗಾಳಿಗೆ ತೂರಿ ಮೈತ್ರಿ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ಜನ ಏನು ತೀರ್ಮಾನ ಮಾಡಬೇಕೋ ಮಾಡುತ್ತಾರೆ. ತೀರ್ಮಾನ ಮಾಡುವ ಕಾಲ ಹತ್ತಿರವೇ ಇದೆ. ಕುಟುಂಬದವರಿಗೆ ಆಶೀರ್ವಾದ ಬೇಕಾಗಿದ್ದ ಹಿನ್ನೆಲೆಯಲ್ಲಿ ಅವರು ಪ್ರಧಾನಿ ಅವರನ್ನು ಭೇಟಿ ಮಾಡಿದ್ದಾರೆ” ಎಂದು ತಿರುಗೇಟು ನೀಡಿದರು.

Continue Reading
Click to comment

Leave a Reply

Your email address will not be published. Required fields are marked *

Politics

ಶಾಸಕ ಶಾಮನೂರು ಶಿವಶಂಕರಪ್ಪ ಕಚೇರಿಗೆ  ಬೆದರಿಕೆ‌ಪತ್ರ ಬರೆದ ಕಿಡಿಗೇಡಿಗಳು

Published

on

ದಾವಣಗೆರೆ.ಮಾ.೨೩; ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತದರಿ ಡಿ.ಕೆ‌ಶಿವಕುಮಾರ್ ಅವರಿಗೆ ಬೆದರಿಕೆ ಪತ್ರ ಬರೆದಿರುವ ಕಿಡಿಗೇಡಿಗಳು
ಶಾಸಕ ಶಾಮನೂರು ಶಿವಶಂಕರಪ್ಪನವರ ಕಚೇರಿಗೆ ಆ ಪತ್ರವನ್ನು ಹಾಕಿದ್ದಾರೆ ಎನ್ನುವುದು ತಡವಾಗಿ ಬೆಳಕಿಗೆ ಬಂದಿದೆ. ಶಾಮನೂರು ಶಿವಶಂಕರಪ್ಪನವರ ಆಪ್ತ ಸಹಾಯಕರು ನಗರದ ಬಡಾವಣೆ ಠಾಣೆಯಲ್ಲಿ ಬೆದರಿಕೆ ಪತ್ರದ ಕುರಿತು ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾ‌ರ್ ಅವರ ವಿರುದ್ಧ ಪತ್ರದ ಮೂಲಕ ವೈಯಕ್ತಿಕವಾಗಿ ಮಾನಹಾನಿ ಮಾಡಿ ಪ್ರಾಣ ಬೆದರಿಕೆ ಹಾಕಿರುವ ಕುರಿತಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್​​ನಲ್ಲಿರುವ ಶಾಮನೂರು ಶಿವಶಂಕರಪ್ಪನವರ ನಿವಾಸದ ಕಚೇರಿಗೆ ದಿನನಿತ್ಯ ಬರುವ ಪತ್ರಗಳನ್ನು ಪರಿಶೀಲನೆ ನಡೆಸುವ ವೇಳೆ ಮಾ.18ರಂದು ಸಿಎಂ ಹಾಗೂ ಡಿಸಿಎಂ ಬಗ್ಗೆ ವೈಯಕ್ತಿಕ ಮಾನಹಾನಿ ಮಾಡುವ ಕೆಟ್ಟ ಶಬ್ದಗಳನ್ನು ಬಳಸಿ ಪ್ರಾಣ ಬೆದರಿಕೆ ಹಾಕಿರುವ ಪತ್ರ ದೊರೆತಿದೆ. ಈ ವಿಚಾರವನ್ನು ಶಾಸಕರು ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಅವರ ಗಮನಕ್ಕೆ ತಂದಿದ್ದಾರೆ. ಆ ಬಳಿಕ ಎಸ್​ಪಿ ಅವರ ಸಲಹೆಯಂತೆ ದೂರು ನೀಡಲಾಗಿದೆ. ಪತ್ರದಲ್ಲಿ ವೈಯಕ್ತಿಕ ಚಾರಿತ್ರಕ್ಕೆ ಧಕ್ಕೆ ಬರುವ ರೀತಿ ಪದಗಳನ್ನು ಬಳಸಲಾಗಿದೆ. ಅಲ್ಲದೇ ಬೆದರಿಕೆ ಸಹ ಹಾಕಲಾಗಿದೆ. ಈ ಪತ್ರ ಬರೆದವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Continue Reading

Politics

ಈಶ್ವರಪ್ಪ ಬೆಂಬಲಕ್ಕೆ ನಿಂತ ರೇಣುಕಾಚಾರ್ಯ

Published

on

ದಾವಣಗೆರೆ.ಮಾ.೨೧; ಬಿಜೆಪಿಯ ವರಿಷ್ಠರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ನಿರಾಕರಿಸಿದ್ದರು. ಈಶರಪ್ಪ ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಅವರ ಪುತ್ರ ಕಾಂತೇಶ್ ಗೆ ಈ ಬಾರಿ ಟಿಕೆಟ್ ನೀಡಬೇಕಿತ್ತು ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.
ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಭಿಕಾ ದೇವಿ ದರ್ಶನ ಪಡೆದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈಶ್ವರಪ್ಪ ಪುತ್ರನಿಗೆ
ಯಾಕೆ ನಿರಾಕರಿಸಲಾಯಿತು ಎಂಬುದು
ಗೊತ್ತಿಲ್ಲ. ಪಕ್ಷದ ವರಿಷ್ಠರು ಈ ಕ್ರಮ ತೆಗೆದುಕೊಂಡಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲಾ ಬದ್ಧ. ಆದರೆ, ಈ ವಿಚಾರದಲ್ಲಿ ಈಶ್ವರಪ್ಪ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಬಗ್ಗೆ ಆರೋಪ ಮಾಡುತ್ತಿರುವ ಕುರಿತಂತೆ ಪ್ರತಿಕ್ರಿಯೆ ನೀಡುವಷ್ಟು ನಾನುದೊಡ್ಡವನಲ್ಲ. ಈಶ್ವರಪ್ಪರ ಕುಟುಂಬಕ್ಕೆ ಟಿಕೆಟ್ ನೀಡಿದ್ದರೆ ತಪ್ಪೇನಾಗುತಿತ್ತು ಎಂಬುದಷ್ಟೇ ನನ್ನ ಭಾವನೆ ಎಂದಿದ್ದಾರೆ.

“ಬಿಜೆಪಿಗೆ ದ್ರೊಹ ಬಗೆಯಲ್ಲ”

ಯಾವ ದೇವಸ್ಥಾನಕ್ಕಾದರೂ ಬರಲಿ, ಮಠಗಳಿಗಾದರೂ ಬರಲಿ. ಆಣೆ ಮಾಡಲು ಸಿದ್ಧನಿದ್ದೇನೆ. ಬೇರೆಯೊಬ್ಬರ ಜೊತೆ ಹೊಂದಾಣಿಕೆ ಮಾಡಿಕೊಂಡು ಬಿಜೆಪಿ ಪಕ್ಷಕ್ಕೆ ದ್ರೋಹ ಬಗೆಯುವ ಕೆಲಸ ಮಾಡುವುದಿಲ್ಲ
ಎಂದು ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ ಸವಾಲು ಹಾಕಿದ್ದಾರೆ.ಬಿಜೆಪಿ ಪಕ್ಷಕ್ಕಾಗಿ ಹಗಲಿರುಳು ಕೆಲಸ ಮಾಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಬೇಕು. ರಾಜ್ಯದ 28 ಕ್ಷೇತ್ರಗಳಲ್ಲಿಯೂ ಗೆಲ್ಲಬೇಕು.
ದಾವಣಗೆರೆಯಲ್ಲಿಯೂ ಬಿಜೆಪಿ ಗೆಲ್ಲಿಸಬೇಕೆಂಬ ಅಪೇಕ್ಷೆ ನಮ್ಮದು ಎಂದು ಹೇಳಿದರು.
ಹಣಕ್ಕೋಸ್ಕರ ರೇಣುಕಾಚಾರ್ಯ ಸೇರಿದಂತೆ ಇತರರು ಭಿನ್ನಮತೀಯ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ. ಇದರ ಅವಶ್ಯಕತೆಯೂ ಇಲ್ಲ. ಬಿಜೆಪಿ ಪಕ್ಷವು ನಮಗೆ ತಾಯಿ ಸಮಾನ. ವದಂತಿಗಳುಹಾಗೂ ಊಹಾಪೋಹಗಳಿಗೆ ಯಾರೂ ಕಿವಿಗೊಡಬೇಡಿ. ದೇವರು ನಮಗೆ ಆರ್ಥಿಕವಾಗಿ ಶಕ್ತಿ ನೀಡಿದ್ದು, ಇಂಥ ಆಸೆ ನಮ್ಮಲ್ಲಿರುವ ಯಾರಿಗೂ ಇಲ್ಲ. ದುಡ್ಡಿಗಾಗಿ ಇಂಥ ಕೆಲಸಕ್ಕೂ ನಾವು ಕೈ ಹಾಕುವ ಅವಶ್ಯಕತೆ ಇಲ್ಲ ಎಂದು
ಹೇಳಿದರು.

Continue Reading

Politics

ಕರ್ನಾಟಕ‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಚಾಮರಾಜನಗರ ಜಿಲ್ಲಾ ಅಧ್ಯಕ್ಷರಾಗಿ‌ ಯಳಂದೂರು ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಹೆಚ್.ವಿ. ಚಂದ್ರ ರವರು ನೇಮಕವಾಗಿದ್ದಾರೆ

Published

on

Continue Reading

Trending

error: Content is protected !!